ಸದ್ಯದಲ್ಲೇ ಮಾರುಕಟ್ಟೆಗೆ ಎಂಟ್ರಿ ನೀಡಲಿವೆ ಈ ಟಾಪ್‌ ಸ್ಮಾರ್ಟ್‌ಫೋನ್‌ಗಳು!

|

ಇತ್ತೀಚಿನ ದಿನಗಳಲ್ಲಿ ಸ್ಮಾರ್ಟ್‌ಫೋನ್‌ ಪ್ರತಿಯೊಬ್ಬರಿಗೂ ಅಗತ್ಯ ಎನಿಸಿಬಿಟ್ಟಿದೆ. ಇದೇ ಕಾರಣಕ್ಕೆ ಭಾರತದ ಟೆಕ್‌ ವಲಯದಲ್ಲಿ ಸ್ಮಾರ್ಟ್‌ಫೋನ್‌ಗಳ ಮೇಲೆ ಡಿಮ್ಯಾಂಡ್ ಸಹ ಇಮ್ಮಡಿಯಾಗುತ್ತಿದೆ. ಇನ್ನು ಇತ್ತೀಚಿಗಷ್ಟೆ ಸಾಕಷ್ಟು ಹೊಸ ಸ್ಮಾರ್ಟ್‌ಫೋನ್‌ಗಳು ಎಂಟ್ರಿ ಕೊಟ್ಟಿದ್ದು, ಅವುಗಳಲ್ಲಿ ಕೆಲವು ಆಕರ್ಷಕ ಫೀಚರ್ಸ್‌ಗಳಿಂದ ಗ್ರಾಹಕರ ಗಮನ ಸೆಳೆದಿವೆ. ಅದೇ ರೀತಿ ಸದ್ಯದಲ್ಲೇ ಮಾರುಕಟ್ಟೆಗೆ ಇನ್ನಷ್ಟು ಪವರ್‌ಫುಲ್‌ ಸ್ಮಾರ್ಟ್‌ಫೋನ್‌ಗಳು ಎಂಟ್ರಿ ನೀಡಲು ಸಿದ್ಧತೆ ನಡೆಸಿವೆ.

ಸ್ಮಾರ್ಟ್‌ಫೋನ್‌

ಹೌದು, ಭಾರತೀಯ ಮಾರುಕಟ್ಟೆಯಲ್ಲಿ ಸ್ಯಾಮ್‌ಸಂಗ್, ಶಿಯೋಮಿ, ರೆಡ್ಮಿ, ರಿಯಲ್‌ ಮಿ, ಸಂಸ್ಥೆಗಳು ಹಲವು ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿವೆ. ಇದಲ್ಲದೆ ಸದ್ಯದಲ್ಲೇ ಕೆಲವು ಸ್ಮಾರ್ಟ್‌ಫೋನ್‌ಗಳು ಕೂಡ ಮಾರುಕಟ್ಟೆಗೆ ಪ್ರವೇಶ ಪಡೆಯಲಿವೆ. ಇವುಗಳಲ್ಲಿ ಬಹುತೇಕ ಎಲ್ಲವು ಮೀಡ್‌ರೇಂಜ್ ಮಾದರಿಯ ಸ್ಮಾರ್ಟ್‌ಫೋನ್‌ಗಳಾಗಿರಲಿದ್ದು, ಸದ್ಯ ಟ್ರೆಂಡಿಂಗ್‌ನಲ್ಲಿರುವ ತ್ರಿವಳಿ/ಕ್ವಾಡ್‌ ಕ್ಯಾಮೆರಾ ಆಯ್ಕೆ, ಪವರ್‌ಫುಲ್ ಪ್ರೊಸೆಸರ್, ಹೈ ಎಂಡ್ RAMನಂತಹ ಫೀಚರ್ಸ್‌ಗಳು ಇರಲಿವೆ ಎನ್ನುವ ಸೂಚನೆಗಳನ್ನು ಈಗಾಗಲೇ ಕೆಲವು ಲೀಕ್ ಮಾಹಿತಿಗಳು ತಿಳಿಯಪಡಿಸಿವೆ. ಹಾಗಾದರೇ ಸದ್ಯದಲ್ಲಿಯೇ ಮಾರುಕಟ್ಟೆಗೆ ಎಂಟ್ರಿ ಕೊಡಲಿರುವ ಟಾಪ್‌ ಸ್ಮಾರ್ಟ್‌ಫೋನ್‌ಗಳು ಯಾವುವು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಆಸುಸ್ ಜೆನ್‌ಫೋನ್ 8

ಆಸುಸ್ ಜೆನ್‌ಫೋನ್ 8

ಆಸುಸ್‌ ಜೆನ್‌ಫೋನ್ 8 ಸರಣಿಯು ಇದೇ ಮೇ 12 ರಂದು ಲಾಂಚ್‌ ಆಗಲಿದೆ ಎಂದು ಖಚಿತವಾಗಿದೆ. ಇನ್ನು ಈ ಸರಣಿಯಲ್ಲಿ ಆಸುಸ್‌ ಜೆನ್‌ಫೋನ್ 8 ಮಿನಿ, ಆಸುಸ್‌ ಜೆ‌ನ್‌ ಫೋನ್ 8 ಮತ್ತು ಜೆನ್‌ಫೋನ್ 8 ಪ್ರೊ ಸ್ಮಾರ್ಟ್‌ಫೋನ್‌ಗಳು ಬಿಡುಗಡೆ ಆಗಲಿವೆ. ಇನ್ನು ಈ ಮೂರು ಮಾದರಿಗಳು ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 888 5G SoC ಪ್ರೊಸೆಸರ್‌ ಅನ್ನು ಒಳಗೊಂಡಿರಲಿವೆ ಎಂದು ಹೇಳಲಾಗಿದೆ. ಲಭ್ಯ ಮಾಹಿತಿ ಪ್ರಕಾರ ಆಸುಸ್‌ ಜೆನ್‌ಫೋನ್ 8 ಮಿನಿ 5.9-ಇಂಚಿನ ಫುಲ್‌ಹೆಚ್‌ಡಿ + ಡಿಸ್‌ಪ್ಲೇಯನ್ನು ಹೊಂದಿರಲಿದೆ ಎನ್ನಲಾಗಿದೆ.

ಗೂಗಲ್ ಪಿಕ್ಸೆಲ್ 5A

ಗೂಗಲ್ ಪಿಕ್ಸೆಲ್ 5A

ಗೂಗಲ್ ಪಿಕ್ಸೆಲ್ 5A ಸ್ಮಾರ್ಟ್‌ಫೋನ್‌ ಅನ್ನು ಇದೇ ಮೇ 18 ರಂದು ಪ್ರಾರಂಭವಾಗಲಿರುವ ಐ / ಒ ಈವೆಂಟ್‌ನಲ್ಲಿ ಬಿಡುಗಡೆ ಮಾಡಲು ಗೂಗಲ್ ಸಜ್ಜಾಗಿದೆ. ಇನ್ನು ಈ ಸ್ಮಾರ್ಟ್‌ಫೋನ್‌ 6.2 ಇಂಚಿನ ಫುಲ್‌-ಹೆಚ್‌ಡಿ + ಒಎಲ್‌ಇಡಿ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 90Hz ರಿಫ್ರೆಶ್ ರೇಟ್‌ ಹೊಂದಿರಲಿದೆ. ಇದು ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 750 ಜಿ ಪ್ರೊಸೆಸರ್ ಹೊಂದಿದೆ ಎಂದು ಹೇಳಲಾಗಿದೆ. ಜೊತೆಗೆ 3840mAh ಸಾಮರ್ಥ್ಯದ ಬ್ಯಾಟರಿ ಹೊಂದಿದ್ದು, 20W ವೇಗದ ಚಾರ್ಜಿಂಗ್‌ಗೆ ಬೆಂಬಲವನ್ನು ನೀಡುತ್ತದೆ.

ಮೋಟೋ G 100

ಮೋಟೋ G 100

ಮೋಟೋ G 100 ಸ್ಮಾರ್ಟ್‌ಫೋನ್‌ ಈ ತಿಂಗಳಲ್ಲಿ ಭಾರತದಲ್ಲಿ ಬಿಡುಗಡೆಯಾಗುವ ನಿರೀಕ್ಷೆಯಿದೆ. ಈ ಸ್ಮಾರ್ಟ್‌ಫೋನ್‌ 6.7 ಇಂಚಿನ ಫುಲ್‌ಹೆಚ್‌ಡಿ + ಎಲ್‌ಸಿಡಿ ಡಿಸ್‌ಪ್ಲೇಯನ್ನು ಹೊಂದಿರುವ ಸಾದ್ಯತೆ ಇದೆ. ಇನ್ನು ಈ ಡಿಸ್‌ಪ್ಲೇ 90Hz ರಿಫ್ರೆಶ್ ರೇಟ್‌ ಹೊಂದಿದೆ. ಇದು ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 870 SoC ಪ್ರೊಸೆಸರ್‌ ಹೊಂದಿದ್ದು, ಆಂಡ್ರಾಯ್ಡ್‌ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 12GB RAM ಮತ್ತು 256GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಹೊಂದಿದೆ. ಜೊತೆಗೆ 5,000mAh ಸಾಮರ್ಥ್ಯದ ಬ್ಯಾರಿ ಪ್ಲಸ್‌ ಪಾಯಿಂಟ್‌ ಆಗಿದ್ದು, ಇದು 20W ಟರ್ಬೋ ಚಾರ್ಜಿಂಗ್‌ ಅನ್ನು ಬೆಂಬಲಿಸಲಿದೆ.

ರಿಯಲ್‌ಮಿ 8 ಪ್ರೊ 5G

ರಿಯಲ್‌ಮಿ 8 ಪ್ರೊ 5G

ರಿಯಲ್ಮೆ 8 ಪ್ರೊ 5G ಮಾದರಿಯು 5G-ಶಕ್ತಗೊಂಡ ಚಿಪ್‌ಸೆಟ್ ಹೊರತುಪಡಿಸಿ, 4G ಪ್ರತಿರೂಪವಾಗಿ ಒಂದೇ ರೀತಿಯ ವಿಶೇಷಣಗಳನ್ನು ಹೊಂದಿರಬಹುದು. ಇದು ಪಂಚ್-ಹೋಲ್ ಕಟೌಟ್, 60Hz / 90Hz ರಿಫ್ರೆಶ್ ದರ ಮತ್ತು 6.4-ಇಂಚಿನ FHD + AMOLED ಡಿಸ್ಪ್ಲೇಯೊಂದಿಗೆ ಬರಬಹುದು ಮತ್ತು 1,000 ನಿಟ್ಸ್ ಗರಿಷ್ಠ ಹೊಳಪನ್ನು ಹೊಂದಿರುತ್ತದೆ. ಇದನ್ನು 5 ಜಿ-ರೆಡಿ ಕ್ವಾಲ್ಕಾಮ್ ಅಥವಾ ಮೀಡಿಯಾ ಟೆಕ್ ಚಿಪ್‌ಸೆಟ್ ಮೂಲಕ ನಡೆಸಬಹುದಾಗಿದೆ. ಇದು ಹಿಂಭಾಗದಲ್ಲಿ ಕ್ವಾಡ್-ಕ್ಯಾಮೆರಾ ಸೆಟಪ್ ಹೊಂದಿರಬಹುದು, 108 ಎಂಪಿ ಪ್ರಾಥಮಿಕ ಕ್ಯಾಮೆರಾ, 8 ಎಂಪಿ ಅಲ್ಟ್ರಾವೈಡ್ ಕ್ಯಾಮೆರಾ, 2 ಎಂಪಿ ಮ್ಯಾಕ್ರೋ ಕ್ಯಾಮೆರಾ ಮತ್ತು 2 ಎಂಪಿ ಡೆಪ್ತ್ ಸೆನ್ಸಾರ್ ಹೊಂದಿರಬಹುದು.

ಪೊಕೊ M3 ಪ್ರೊ

ಪೊಕೊ M3 ಪ್ರೊ

ಪೊಕೊ M3 ಪ್ರೊ ಸ್ಮಾರ್ಟ್‌ಫೋನ್‌ ಈಗಾಗಲೇ ಭಾರತದಲ್ಲಿ ಬಿಐಎಸ್ ಪ್ರಮಾಣೀಕರಣವನ್ನು ಪಡೆದಿದೆ. ಇದು ಇದೇ ತಿಂಗಳು ಬಿಡುಗಡೆ ಆಗುವ ಸಾದ್ಯತೆ ಇದೆ. ಈ ಸ್ಮಾರ್ಟ್‌ಫೋನ್‌ 1100 ನಿಟ್ಸ್ ಬ್ರೈಟ್‌ನೆಸ್‌ ಮತ್ತು 90Hz ರಿಫ್ರೆಶ್ ರೇಟ್‌ ಅನ್ನು ಹೊಂದಿರುವ 6.5-ಇಂಚಿನ ಫುಲ್‌ ಹೆಚ್‌ಡಿ + LCD ಡಿಸ್‌ಪ್ಲೇಯನ್ನು ಹೊಂದಿದೆ. ಇದು ಮೀಡಿಯಾ ಟೆಕ್ ಡೈಮೆನ್ಸಿಟಿ 700SoC ಪ್ರೊಸೆಸರ್‌ ಅನ್ನು ಹೊಂದಿದ್ದು, ಆಂಡ್ರಾಯ್ಡ್ 11 ಆಧಾರಿತ MIUI 12 ನಲ್ಲಿ ಕಾರ್ಯನಿರ್ವಹಿಸಲಿದೆ. ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 18W ಫಾಸ್ಟ್ ಚಾರ್ಜಿಂಗ್ ಬೆಂಬಲಿಸಲಿದೆ.

Most Read Articles
Best Mobiles in India

English summary
Smartphones set to launch in May include Realme 8 Pro 5G, Asus Zenfone 8, Google Pixel 5a, Moto G100, POCO M3.to know more visit to kannada.gizbot.com

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X