ವಿವೋ ಫೋನ್ ಖರೀದಿಸ್ತೀರಾ?..ಈ ಫೋನ್‌ಗಳು 20,000ರೂ. ಒಳಗೆ ಲಭ್ಯ!
ಭಾರತೀಯ ಮೊಬೈಲ್ ಮಾರುಕಟ್ಟೆಯಲ್ಲಿ ವಿವೋ (Vivo) ಸಂಸ್ಥೆಯು ಕೆಲವು ಭಿನ್ನ ಮಾದರಿಯ ಸ್ಮಾರ್ಟ್‌ಫೋನ್‌ಗಳ ಮೂಲಕ ಗಮನ ಸೆಳೆದಿದೆ. ವಿವೋ ಬಜೆಟ್ ಬೆಲೆಯ ಫೋನ್‌ಗಳ ಜೊತೆಗೆ ಮೀಡ್‌ರೇಂಜ್ ಹಾಗೂ ಹೈ ಎಂಡ್ ದರದ ಫೋನ್‌ಗಳ ಲಿಸ್ಟ್ ಅನ್ನು ಗ್ರಾಹಕರ ನೀಡಿದೆ. ಆದ್ರೆ, ಬಜೆಟ್ ಪ್ರೈಸ್ ಟ್ಯಾಗ್‌ನಲ್ಲಿನ ವಿವೋದ ಕೆಲವು ಸ್ಮಾರ್ಟ್‌ಫೋನ್‌ಗಳು ಮಾರುಕಟ್ಟೆಯಲ್ಲಿ ಹೆಚ್ಚಿನ ಆಕರ್ಷಕಯಲ್ಲಿ ಕಾಣಿಸಿಕೊಂಡಿವೆ.
ಹೌದು, ವಿವೋ ಸಂಸ್ಥೆಯು V ಸರಣಿಯ, Y ಸರಣಿಯ ಹಾಗೂ T ಸರಣಿಯಗಳಲ್ಲಿ ಫೋನ್‌ಗಳನ್ನು ಪರಿಚಯಿಸಿದೆ. ಇವುಗಳಲ್ಲಿ ವಿವೋ Y ಸರಣಿಯ ಬಹುತೇಕ ಸ್ಮಾರ್ಟ್‌ಫೋನ್‌ಗಳು ಸುಮಾರು ಬಜೆಟ್ ದರ ಹೊಂದಿದ್ದು, ಹಾಗೆಯೇ ಕ್ಯಾಮೆರಾ, ಪ್ರೊಸೆಸರ್, ಬ್ಯಾಟರಿ ಆಯ್ಕೆಗಳಿಂದಲೂ ಗಮನ ಸೆಳೆದಿವೆ. ಹಾಗಾದರೆ ಈ ಲೇಖನದಲ್ಲಿ ಸುಮಾರು 20,000ರೂ. ಒಳಗೆ ಲಭ್ಯ ಇರುವ ವಿವೋ ಫೋನ್‌ಗಳ ಬಗ್ಗೆ ತಿಳಿಯೋಣ ಬನ್ನಿರಿ.

ವಿವೋ T1 ಸ್ಮಾರ್ಟ್‌ಫೋನ್ : ಈ ಫೋನ್ 1,080 x 2,400 ಪಿಕ್ಸೆಲ್ ರೆಸಲ್ಯೂಶನ್ ಒಳಗೊಂಡ 6.67 ಇಂಚಿನ ಫುಲ್ ಹೆಚ್‌ಡಿ+ ಡಿಸ್‌ಪ್ಲೇ ಹೊಂದಿದೆ. ಇದು ಆಕ್ಟಾ-ಕೋರ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 778G SoC ಪ್ರೊಸೆಸರ್ ಹೊಂದಿದ್ದು, 6GB RAM ಮತ್ತು 128GB ಇಂಟರ್ ಸ್ಟೋರೇಜ್ ಅನ್ನು ಹೊಂದಿದೆ. ಈ ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದ್ದು, ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್ ಪಡೆದಿದೆ. ಜೊತೆಗೆ 5,000mAh ಬ್ಯಾಟರಿಯನ್ನು ಹೊಂದಿದ್ದು, 44W ಫಾಸ್ಟ್ ಚಾರ್ಜಿಂಗ್ ಬೆಂಬಲಿಸಲಿದೆ. ಬೆಲೆಯು 16,990ರೂ. ಆಗಿದೆ.

ವಿವೋ Y56 5G ಸ್ಮಾರ್ಟ್‌ಫೋನ್ : ಈ ಸ್ಮಾರ್ಟ್‌ಫೋನ್ 6.58 ಇಂಚಿನ FHD+ ಡಿಸ್‌ಪ್ಲೇ ಹೊಂದಿದ್ದು, 2408 × 1080 ಪಿಕ್ಸೆಲ್ ರೆಸಲ್ಯೂಶನ್ ಪಡೆದುಕೊಂಡಿದೆ. ಇದು ಮೀಡಿಯಾಟೆಕ್ ಡೈಮೆನ್ಸಿಟಿ 700 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದ್ದು, ಆಂಡ್ರಾಯ್ಡ್ 13 ಓಎಸ್ ಪಡೆದಿದೆ. ಹಾಗೆಯೇ ಡ್ಯುಯಲ್ ಕ್ಯಾಮೆರಾ ರಚನೆ ಹೊಂದಿದ್ದು, ಇದರಲ್ಲಿ 50ಎಂಪಿ ಪ್ರಾಥಮಿಕ ಕ್ಯಾಮೆರಾ ಪಡೆದಿದೆ. ಅಲ್ಲದೇ ಇದು 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಅಧಿಕೃತ ವಿವೋ ವೆಬ್‌ಸೈಟ್‌ನಲ್ಲಿ ಈ ಫೋನ್ ಬೆಲೆಯು (8GB) 19,999ರೂ. ಆಗಿದೆ.
ವಿವೋ T1x ಸ್ಮಾರ್ಟ್‌ಫೋನ್ : ಈ ಫೋನ್ 1,080x2,408 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.58 ಇಂಚಿನ ಫುಲ್ ಹೆಚ್‌ಡಿ+ ಡಿಸ್‌ಪ್ಲೇ ಹೊಂದಿದೆ. ಇದು ಆಕ್ಟಾ-ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 900 SoC ಪ್ರೊಸೆಸರ್ ಹೊಂದಿದ್ದು, 6GB RAM ಮತ್ತು 128GB ಇಂಟರ್ ಸ್ಟೋರೇಜ್ ಅನ್ನು ಹೊಂದಿದೆ. ಈ ಫೋನ್ ಡ್ಯುಯೆಲ್ ರಿಯರ್ ಕ್ಯಾಮೆರಾ ಹೊಂದಿದ್ದು, ಮುಖ್ಯ ಕ್ಯಾಮೆರಾ 64 ಮೆಗಾ ಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಇದಲ್ಲದೆ 8 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾ ಕೂಡ ಹೊಂದಿದೆ. ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದರ ಬೆಲೆಯು 14,999ರೂ. ಆಗಿದೆ.

ವಿವೋ Y22 ಸ್ಮಾರ್ಟ್‌ಫೋನ್ : ಈ ಫೋನ್ 6.55 ಇಂಚಿನ ಫುಲ್ ಹೆಚ್‌ಡಿ ಪ್ಲಸ್ LCD ಡಿಸ್‌ಪ್ಲೇ ಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ 720 x 1612 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯ ವನ್ನು ಪಡೆದುಕೊಂಡಿದೆ. ಇದು ಮೀಡಿಯಾ ಟೆಕ್ ಹಿಲಿಯೋ G70 ಪ್ರೊಸೆಸರ್ ಬಲವನ್ನು ಪಡೆದುಕೊಂಡಿದೆ. ಹಾಗೆಯೇ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸಾರ್ ಅನ್ನು ಹೊಂದಿದ್ದು, 5,000 mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 18W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ


Click it and Unblock the Notifications








