Vivo: 64 MP ಕ್ಯಾಮೆರಾ ಹೊಂದಿರುವ ಅತ್ಯುತ್ತಮ ವಿವೋ ಸ್ಮಾರ್ಟ್‌ಫೋನ್‌ಗಳಿವು! ಭಾರೀ ಬೇಡಿಕೆ
ವಿವೋದ ಫೋನ್‌ಗಳು (Vivo phones) ಸ್ಮಾರ್ಟ್‌ಫೋನ್ ಮಾರುಕಟ್ಟೆಯಲ್ಲಿ ಸುನಾಮಿಯನ್ನೇ ಎಬ್ಬಿಸುತ್ತಿವೆ ಎಂದರೆ ತಪ್ಪಾಗುವುದಿಲ್ಲ. ಅಷ್ಟರ ಮಟ್ಟಿಗೆ ಈ ಫೋನ್‌ಗಳಿಗೆ ಬೇಡಿಕೆ ಇದೆ. ಅದರಲ್ಲೂ ಈ ಫೋನ್‌ಗಳು ಉತ್ತಮ ಕ್ಯಾಮೆರಾ ಫೀಚರ್ಸ್ ಆಯ್ಕೆ ಪಡೆಯುವ ಮೂಲಕ ಇತರೆ ಫೋನ್‌ಗಳಿಗೆ ತೀವ್ರ ಪೈಪೋಟಿ ನೀಡುತ್ತಿದೆ.
ಹೌದು, ವಿವೋ ಸ್ಮಾರ್ಟ್‌ಫೋನ್‌ಗಳು ಭಿನ್ನ ಫೀಚರ್ಸ್ ನೊಂದಿಗೆ ಉತ್ತಮ ಕ್ಯಾಮೆರಾ ಇರುವ ಫೋನ್‌ಗಳೆಂದು ಜನಪ್ರಿಯತೆ ಪಡೆದುಕೊಂಡಿವೆ. ಈ ಕಾರಣಕ್ಕೆ ಭಾರತದಲ್ಲಿ ಇವುಗಳಿಗೆ ಬಹು ಬೇಡಿಕೆ ಇದೆ. ಈ ನಡುವೆ 64 ಮೆಗಾಪಿಕ್ಸೆಲ್ ಕ್ಯಾಮೆರಾ ಆಯ್ಕೆ ಇರುವ ಪ್ರಮುಖ ಹಾಗೂ ಹೆಚ್ಚಿನ ಬೇಡಿಕೆ ಇರುವ ಸ್ಮಾರ್ಟ್‌ಫೋನ್‌ಗಳ ಬಗ್ಗೆ ತಿಳಿಸಿಕೊಡಲಾಗಿದೆ ಓದಿರಿ.

ವಿವೋ T2 ಪ್ರೊ 5G: ಈ ಫೋನ್ (Vivo T2 Pro 5G) 23,999 ರೂ.ಗಳ ಬೆಲೆಯಲ್ಲಿ ಲಭ್ಯ ಇದ್ದು, ಡೈಮೆನ್ಸಿಟಿ 7200 ಪ್ರೊಸೆಸರ್ ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಜೊತೆಗೆ 8 GB RAM, 128 GB ಇಂಟರ್ ಸ್ಟೋರೇಜ್ ಆಯ್ಕೆ 4600 mAh ಬ್ಯಾಟರಿ ಜೊತೆಗೆ 66W ಫಾಸ್ಟ್ ಚಾರ್ಜಿಂಗ್ ಬೆಂಬಲ ಹಾಗೂ 64 MP + 2 MP ಡ್ಯುಯಲ್ ರಿಯರ್ ಕ್ಯಾಮೆರಾ ಮತ್ತು 16 MP ಸೆಲ್ಫಿ ಕ್ಯಾಮೆರಾ ಆಯ್ಕೆ ಪಡೆದಿದೆ.
ವಿವೋ Y200 5G: ಈ ಫೋನ್ (Vivo Y200 5G) ಅನ್ನು 21,999ರೂ.ಗಳ ಬೆಲೆಗೆ ಖರೀದಿ ಮಾಡಬಹುದಾಗಿದೆ. ಇದು ಸ್ನಾಪ್‌ಡ್ರಾಗನ್ 4 ಜನ್1 ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದ್ದು, 8 GB RAM, 128 GB ಇಂಟರ್ ಸ್ಟೋರೇಜ್ ಆಯ್ಕೆ ಪಡೆದಿದೆ. ಇದರೊಂದಿಗೆ 6.67 ಇಂಚಿನ 1080 x 2400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯ ಪಡೆದಿದ್ದು, 120 Hz ರಿಫ್ರಶ್ ರೇಟ್ ಆಯ್ಕೆ ಹಾಗೂ 64 MP + 2 MP ಡ್ಯುಯಲ್ ರಿಯರ್ ಕ್ಯಾಮೆರಾ ಮತ್ತು 16 MP ಸೆಲ್ಫಿ ಕ್ಯಾಮೆರಾದೊಂದಿಗೆ ಈ ಫೋನ್ ಲಭ್ಯ ಇದೆ.

ವಿವೋ T2 5G: ಈ ಫೋನ್ (Vivo T2 5G) 15,999 ರೂ.ಗಳ ಬೆಲೆಯಲ್ಲಿ ಲಭ್ಯ ಇದೆ. ಇದು ಸ್ನಾಪ್‌ಡ್ರಾಗನ್ 695 ಪ್ರೊಸೆಸರ್ ಬಲ ಪಡೆದಿದೆ. ಹಾಗೆಯೇ 6.38 ಇಂಚಿನ 1080 x 2400 ಪಿಕ್ಸೆಲ್ ಸಾಮರ್ಥ್ಯದ ಡಿಸ್‌ಪ್ಲೇ ಆಯ್ಕೆ ಪಡೆದಿದ್ದು, ಇದರ ಜೊತೆಗೆ 64 MP + 2 MP ಡ್ಯುಯಲ್ ರಿಯರ್ ಹಾಗೂ 16 MP ಸೆಲ್ಫಿ ಕ್ಯಾಮೆರಾ ಆಯ್ಕೆ ಹೊಂದಿದೆ. ಜೊತೆಗೆ 4500 mAh ಸಾಮರ್ಥ್ಯದ ಬ್ಯಾಟರಿ ಜೊತೆಗೆ 44W ಫಾಸ್ಟ್ ಚಾರ್ಜಿಂಗ್ ಅನ್ನು ಈ ಫೋನ್‌ನಲ್ಲಿ ಕಾಣಬಹುದಾಗಿದೆ.
ವಿವೋ V29e: ಈ ಫೋನ್ (Vivo V29e) 26,500 ರೂ.ಗಳ ಬೆಲೆಗೆ ಖರೀದಿ ಮಾಡಬಹುದಾಗಿದೆ. ಇದು ಸ್ನಾಪ್‌ಡ್ರಾಗನ್ 695 ಪ್ರೊಸೆಸರ್ ಬಲ ಪಡೆದ್ದು, 8 GB RAM, 128 GB ಇಂಟರ್ ಸ್ಟೋರೇಜ್‌ನಲ್ಲಿ ಲಭ್ಯ ಇದೆ. ಹಾಗೆಯೇ 6.78 ಇಂಚಿನ 1080 x 2400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯ ಪಡೆದಿದ್ದು, 120 Hz ರಿಫ್ರಶ್ ರೇಟ್‌ನೊಂದಿಗೆ ಪಂಚ್ ಹೋಲ್ ಡಿಸ್‌ಪ್ಲೇ ಹೊಂದಿದೆ. ಜೊತೆಗೆ 5000 mAh ಸಮರ್ಥ್ಯದ ಬ್ಯಾಟರಿ ಮತ್ತು 44W ಫಾಸ್ಟ್ ಚಾರ್ಜಿಂಗ್ ಬೆಂಬಲ ಪಡೆದಿದೆ.

ವಿವೋ V25 5G: ಈ ಫೋನ್ (Vivo V25 5G) ಅನ್ನು 21,790 ರೂ.ಗಳ ಬೆಲೆಗೆ ಖರೀದಿ ಮಾಡಬಹುದಾಗಿದೆ. ಈ ಫೋನ್ ಡೈಮೆನ್ಸಿಟಿ 900 ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದ್ದು, 8 GB RAM, 128 GB ಇಂಟರ್ ಸ್ಟೋರೇಜ್ ಆಯ್ಕೆ ಪಡೆದಿದೆ. ಇದರ ಜೊತೆಗೆ 4500 mAh ಬ್ಯಾಟರಿ ಹಾಗೂ 44W ಫಾಸ್ಟ್ ಚಾರ್ಜಿಂಗ್ ಬೆಂಬಲ ಪಡೆದಿದ್ದು, 6.44 ಇಂಚಿನ 1080 x 2408 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ ಡಿಸ್‌ಪ್ಲೇ ಆಯ್ಕೆ ಪಡೆದಿದೆ.


Click it and Unblock the Notifications








