ಸ್ಯಾಮ್‌ಸಂಗ್ ಗ್ಯಾಲಕ್ಸಿ F22 ಸ್ಮಾರ್ಟ್‌ಫೋನ್ ಈಗ ಭರ್ಜರಿ ಡಿಸ್ಕೌಂಟ್‌ನಲ್ಲಿ ಲಭ್ಯ!
ಜನಪ್ರಿಯ ಸ್ಯಾಮ್‌ಸಂಗ್ ಕಂಪನಿಯು ಬಜೆಟ್ ದರದಲ್ಲಿ ಹಲವು ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿ ಗ್ರಾಹಕರನ್ನು ಆಕರ್ಷಿಸಿದೆ. ಮುಖ್ಯವಾಗಿ ಗ್ಯಾಲಕ್ಸಿ M, ಗ್ಯಾಲಕ್ಸಿ F ಮತ್ತು ಗ್ಯಾಲಕ್ಸಿ A ಸರಣಿಯಲ್ಲಿ ಅತ್ಯುತ್ತಮ ಫೀಚರ್ಸ್‌ಗಳ ಫೋನ್ ಲಾಂಚ್ ಮಾಡಿದೆ. ಆ ಪೈಕಿ F ಸರಣಿಯ ಫೋನ್‌ಗಳಲ್ಲಿ ಇತ್ತೀಚಿಗಷ್ಟೆ ಬಿಡುಗಡೆ ಮಾಡಿರುವ ಗ್ಯಾಲಕ್ಸಿ F22 ಸ್ಮಾರ್ಟ್‌ಫೋನ್ ಈಗ ಭರ್ಜರಿ ಡಿಸ್ಕೌಂಟ್ ಬೆಲೆಯಲ್ಲಿ ಲಭ್ಯವಿದೆ.

ಹೌದು, ಸ್ಯಾಮ್‌ಸಂಗ್ ಸಂಸ್ಥೆಯ ಗ್ಯಾಲಕ್ಸಿ F22 ಸ್ಮಾರ್ಟ್‌ಫೋನ್ ಈಗ ಭಾರೀ ರಿಯಾಯಿತಿ ಪಡೆದಿದೆ. ಈ ಫೋನ್ 4 GB RAM + 128 GB ಸ್ಟೋರೇಜ್ ವೇರಿಯಂಟ್ ಮತ್ತು 6 GB RAM + 128 GB ವೇರಿಯಂಟ್ ಆಯ್ಕೆ ಹೊಂದಿದ್ದು, ಈ ಎರಡು ವೇರಿಯಂಟ್‌ಗಳಲ್ಲಿಯೂ 2,000ರೂ, ಡಿಸ್ಕೌಂಟ್ ತಿಳಿಸಿದೆ. ಹೀಗಾಗಿ ಆರಂಭಿಕ ವೇರಿಯಂಟ್ ಈಗ 12,999ರೂ.ಗಳಿಗೆ ಸಿಗಲಿದೆ. ಈ ಕೊಡುಗೆಯು ಸ್ಯಾಮ್‌ಸಂಗ್ ಕಂಪನಿಯ ಅಧಿಕೃತ ವೆಬ್‌ಸೈಟ್‌ನಲ್ಲಿ ಕಾಣಿಸಿಕೊಂಡಿದೆ. ಹಾಗಾದರೇ ಗ್ಯಾಲಕ್ಸಿ F22 ಸ್ಮಾರ್ಟ್‌ಫೋನ್ ಫೀಚರ್ಸ್‌ಗಳು ಹೇಗಿವೆ ಮತ್ತು ಕೊಡುಗೆಯ ಬೆಲೆ ಎಷ್ಟು ಎಂಬುದನ್ನು ಮುಂದೆ ತಿಳಿಯೋಣ ಬನ್ನಿರಿ.

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ
ಸ್ಯಾಮ್‌ಸಂಗ್ ಗ್ಯಾಲಕ್ಸಿ F22 ಸ್ಮಾರ್ಟ್‌ಫೋನ್ 700 x 1,600 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.4 ಇಂಚಿನ ಹೆಚ್‌ಡಿ + ಡಿಸ್‌ಪ್ಲೇಯನ್ನು ಹೊಂದಿದೆ. ಸ್ಯಾಮೋಲ್ಡ್ ಇನ್ಫಿನಿಟಿ-ಯು ಡಿಸ್‌ಪ್ಲೇ ಆಗಿದ್ದು, 90Hz ರಿಫ್ರೆಶ್ ರೇಟ್ ಅನ್ನು ಪಡೆದುಕೊಂಡಿದೆ.

ಪ್ರೊಸೆಸರ್ ಬಲ ಯಾವುದು
ಸ್ಯಾಮ್‌ಸಂಗ್ ಗ್ಯಾಲಕ್ಸಿ F22 ಸ್ಮಾರ್ಟ್‌ಫೋನ್ ಮೀಡಿಯಾ ಟೆಕ್ ಹಿಲಿಯೊ G80 SoC ಪ್ರೊಸೆಸರ್ ಬಲವನ್ನು ಪಡೆದುಕೊಂಡಿದೆ. ಇದು ಆಂಡ್ರಾಯ್ಡ್ 11 ಆಧಾರಿತ ಒನ್ ಯುಐ 3.1 ನಲ್ಲಿ ಕಾರ್ಯನಿರ್ವಹಿಸುತ್ತದೆ. ಹಾಗೆಯೇ 4GB RAM + 128GB ಸ್ಟೋರೇಜ್, 6GB RAM ಮತ್ತು 128GB ಇಂಟರ್ ಸ್ಟೋರೇಜ್ ಅನ್ನು ಹೊಂದಿದೆ. ಇದಲ್ಲದೆ ಮೈಕ್ರೊ ಎಸ್‌ಡಿ ಕಾರ್ಡ್ ಸ್ಲಾಟ್ ಮೂಲಕ 1TB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಿಬಹುದಾಗಿದೆ.

ಕ್ಯಾಮೆರಾ ಸೆನ್ಸಾರ್ ವಿಶೇಷ
ಸ್ಯಾಮ್‌ಸಂಗ್ ಗ್ಯಾಲಕ್ಸಿ F22 ಸ್ಮಾರ್ಟ್‌ಫೋನ್ ಕ್ವಾಡ್ ರಿಯರ್ ಕ್ಯಾಮೆರಾ ಸೆಟಅಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾ ಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 8 ಮೆಗಾ ಪಿಕ್ಸೆಲ್ ಅಲ್ಟ್ರಾ ವೈಡ್ ಕ್ಯಾಮೆರಾ, ಮೂರನೇ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಮ್ಯಾಕ್ರೋ ಲೆನ್ಸ್ ಮತ್ತು ನಾಲ್ಕನೇ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಡೆಪ್ತ್ ಸೆನ್ಸಾರ್ ಅನ್ನು ಒಳಗೊಂಡಿದೆ. ಇದಲ್ಲದೆ 13 ಮೆಗಾ ಪಿಕ್ಸೆಲ್ ಸೆನ್ಸಾರ್ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.

ಬ್ಯಾಟರಿ ಮತ್ತು ಇತರೆ ಸೌಲಭ್ಯಗಳು
ಸ್ಯಾಮ್‌ಸಂಗ್ ಗ್ಯಾಲಕ್ಸಿ F22 ಸ್ಮಾರ್ಟ್‌ಫೋನ್ 6,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 25W ಫಾಸ್ಟ್ ಚಾರ್ಜಿಂಗ್ ಬೆಂಬಲಿಸಲಿದೆ. ಆದಾಗ್ಯೂ, ಸ್ಯಾಮ್‌ಸಂಗ್ ಬಾಕ್ಸ್ ಒಳಗೆ 15W ಚಾರ್ಜರ್ ಅನ್ನು ಬಂಡಲ್ ಮಾಡುತ್ತದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 4ಜಿ ಎಲ್ ಟಿಇ, ಬ್ಲೂಟೂತ್ ವಿ 5, ಎನ್ಎಫ್‌ಸಿ ಯನ್ನು ಹೊಂದಿದೆ. ಜೊತೆಗೆ ಸೈಡ್-ಮೌಂಟೆಡ್ ಫಿಂಗರ್ಪ್ರಿಂಟ್ ಸೆನ್ಸರ್ ಮತ್ತು ಫೇಸ್ ಅನ್ಲಾಕ್ ಬೆಂಬಲವಿದೆ.

ಬೆಲೆ ಎಷ್ಟು ಮತ್ತು ಲಭ್ಯತೆ
ಸ್ಯಾಮ್‌ಸಂಗ್ ಗ್ಯಾಲಕ್ಸಿ F22 ಸ್ಮಾರ್ಟ್‌ಫೋನ್ ಭಾರತದಲ್ಲಿ 4 GB RAM + 64 GB ಶೇಖರಣಾ ಮಾದರಿಗೆ 12,999ರೂ. ಬೆಲೆಯನ್ನು ಹೊಂದಿದೆ. ಇದಲ್ಲದೆ 6 GB RAM+ 128 GB ಸಂಗ್ರಹ ಸಂರಚನೆಗೆ 14,999 ರೂ. ಬೆಲೆಯನ್ನು ಪಡೆದುಕೊಂಡಿದೆ. ಇದು ಡೆನಿಮ್ ಬ್ಲೂ ಮತ್ತು ಡೆನಿಮ್ ಬ್ಲ್ಯಾಕ್ ಎರಡು ಬಣ್ಣ ಆಯ್ಕೆಗಳಲ್ಲಿ ಲಭ್ಯವಿದೆ. ಸ್ಯಾಮ್‌ಸಂಗ್ ಕಂಪನಿಯ ಅಧಿಕೃತ ವೆಬ್‌ಸೈಟ್‌ನಲ್ಲಿ ಖರೀದಿಗೆ ಲಭ್ಯ.
ಗ್ಯಾಲಕ್ಸಿ F12 ಫೀಚರ್ಸ್
ಡಿಸ್‌ಪ್ಲೇ ರಚನೆ ಸ್ಯಾಮ್‌ಸಂಗ್ ಗ್ಯಾಲಕ್ಸಿ F12 ಸ್ಮಾರ್ಟ್‌ಫೋನ್ 720x1,600 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.5 ಇಂಚಿನ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ 20:9 ರಚನೆಯ ಅನುಪಾತವನ್ನು ಹೊಂದಿದ್ದು, ಇದು TFT ಇನ್ಫಿನಿಟಿ-ವಿ-ಡಿಸ್‌ಪ್ಲೇ ಹೊಂದಿದೆ. ಡಿಸ್‌ಪ್ಲೇ ರೀಫ್ರೇಶ್ ರೇಟ್ 90Hz ಆಗಿದೆ. ಕ್ವಾಲ್ಕಮ್ ಸ್ನ್ಯಾಪ್‌ಡ್ರಾಗನ್ 450 ಪ್ರೊಸೆಸರ್ ಅನ್ನು ಹೊಂದಿದ್ದು, ಆಂಡ್ರಾಯ್ಡ್ 11 ಓಎಸ್ ಬೆಂಬಲದೊಂದಿಗೆ ಕಾರ್ಯ ನಿರ್ವಹಿಸಲಿದೆ. ಹಾಗೆಯೇ 4GB RAM + 64GB ಮತ್ತು 4GB RAM + 128GB ಸ್ಟೋರೇಜ್ ವೇರಿಯೆಂಟ್ ಆಯ್ಕೆಗಳನ್ನು ಹೊಂದಿದೆ.


Click it and Unblock the Notifications








