Home
ಸುದ್ದಿಜಾಲ

ಸ್ಯಾಮ್‌ಸಂಗ್‌ನ ಈ 5G ಫೋನ್‌ ಈಗ ಅಗ್ಗದ ಬೆಲೆಗೆ ಲಭ್ಯ!..ಸಖತ್‌ ಡಿಸ್ಕೌಂಟ್‌!

ಜನಪ್ರಿಯ ಸ್ಯಾಮ್‌ಸಂಗ್‌ ಸಂಸ್ಥೆಯ ಬಜೆಟ್‌ ದರದ ಸ್ಯಾಮ್‌ಸಂಗ್‌ ಗ್ಯಾಲಕ್ಸಿ M14 5G ಸ್ಮಾರ್ಟ್‌ಫೋನ್‌ ಈಗಾಗಲೇ ಮಾರುಕಟ್ಟೆಯಲ್ಲಿ ಗಮನ ಸೆಳೆದಿದೆ. ಈ ಸ್ಮಾರ್ಟ್‌ಫೋನ್‌ ಇದೀಗ ಇ ಕಾಮರ್ಸ್‌ ದೈತ್ಯ ಪ್ಲಾಟ್‌ಫಾರ್ಮ್‌ ಅಮೆಜಾನ್‌ ನಲ್ಲಿ ಭರ್ಜರಿ ಡಿಸ್ಕೌಂಟ್‌ ಪ್ರೈಸ್‌ ಟ್ಯಾಗ್‌ನಲ್ಲಿ ಕಾಣಿಸಿಕೊಂಡಿದ್ದು, ಬಜೆಟ್‌ ದರದಲ್ಲಿ 5G ಫೋನ್‌ ಖರೀದಿಸುವ ಗ್ರಾಹಕರಿಗೆ ಖುಷಿ ನೀಡಿದೆ.

ಹೌದು, ಸ್ಯಾಮ್‌ಸಂಗ್‌ ಗ್ಯಾಲಕ್ಸಿ M14 5G ಮೊಬೈಲ್‌ ಅಮೆಜಾನ್ ಇ ಕಾಮರ್ಸ್‌ ತಾಣದಲ್ಲಿ ಈಗ 17% ರಷ್ಟು ಡಿಸ್ಕೌಂಟ್‌ ಬೆಲೆಯಲ್ಲಿ ಕಾಣಿಸಿಕೊಂಡಿದೆ. ಹೀಗಾಗಿ 17,990ರೂ. ಬೆಲೆಯಲ್ಲಿದ್ದ 4GB RAM + 128 GB ಸ್ಟೋರೇಜ್ ವೇರಿಯಂಟ್‌ ಫೋನ್‌ ಈಗ 14,990ರೂ.ಗಳ ಬೆಲೆಯಲ್ಲಿ ಖರೀದಿಸಬಹುದಾಗಿದೆ. ಹಾಗೆಯೇ ಹೆಚ್ಚುವರಿಯಾಗಿ ಬ್ಯಾಂಕ್ ಕೊಡುಗೆ ಹಾಗೂ ನೋ ಕಾಸ್ಟ್‌ ಇಎಮ್‌ಐ ಆಫರ್‌ ಸಹ ಪಡೆದುಕೊಳ್ಳಬಹುದಾಗಿದೆ.

ಸ್ಯಾಮ್‌ಸಂಗ್‌ನ ಈ 5G ಫೋನ್‌ ಈಗ ಅಗ್ಗದ ಬೆಲೆಗೆ ಲಭ್ಯ!..ಸಖತ್‌ ಡಿಸ್ಕೌಂಟ್‌!

ಇನ್ನು ಗ್ಯಾಲಕ್ಸಿ M14 5G ಮೊಬೈಲ್‌ ಎಕ್ಸಿನೋಸ್‌ 1330 ಆಕ್ಟಾ ಕೋರ್ SoC ಪ್ರೊಸೆಸರ್ ನಲ್ಲಿ ಕಾರ್ಯನಿರ್ವಹಿಸಲಿದ್ದು, 6000 mAh ಬ್ಯಾಟರಿ ಬ್ಯಾಕ್‌ಅಪ್‌ ಪವರ್‌ ಅನ್ನು ಪಡೆದಿದೆ. ಅಲ್ಲದೇ ಈ ಫೋನ್‌ ಬ್ಲೂ, ಡಾರ್ಕ್ ಬ್ಲೂ ಮತ್ತು ಸಿಲ್ವರ್ ಬಣ್ಣಗಳ ಆಯ್ಕೆ ಒಳಗೊಂಡಿದೆ. ಹಾಗಾದರೆ ಸ್ಯಾಮ್‌ಸಂಗ್‌ ಗ್ಯಾಲಕ್ಸಿ M14 5G ಸ್ಮಾರ್ಟ್‌ಫೋನ್‌ ಇತರೆ ಫೀಚರ್ಸ್‌ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಸ್ಯಾಮ್‌ಸಂಗ್‌ ಗ್ಯಾಲಕ್ಸಿ M14 5G ಡಿಸ್‌ಪ್ಲೇ ವಿನ್ಯಾಸ ಹೇಗಿದೆ : ಸ್ಯಾಮ್‌ಸಂಗ್‌ ಗ್ಯಾಲಕ್ಸಿ M14 5G ಸ್ಮಾರ್ಟ್‌ಫೋನ್‌ 6.6 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇ ಅನ್ನು ಪಡೆದಿದೆ. ಈ ಡಿಸ್‌ಪ್ಲೇ 2408 x 1080 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಒಳಗೊಂಡಿದೆ. ಇದು 90Hz ರಿಫ್ರೆಶ್ ರೇಟ್‌ ಅನ್ನು ಬೆಂಬಲಿಸಲಿದ್ದು, ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 5 ಲೇಯರ್ ಪ್ರೊಟೆಕ್ಷನ್‌ ಅನ್ನು ಪಡೆದಿದೆ.

ಸ್ಯಾಮ್‌ಸಂಗ್‌ ಗ್ಯಾಲಕ್ಸಿ M14 5G ಪ್ರೊಸೆಸರ್‌ ಸಾಮರ್ಥ್ಯ : ಸ್ಯಾಮ್‌ಸಂಗ್‌ ಗ್ಯಾಲಕ್ಸಿ M14 5G ಸ್ಮಾರ್ಟ್‌ಫೋನ್‌ ಎಕ್ಸಿನೋಸ್‌ 1330 ಆಕ್ಟಾ ಕೋರ್ SoC ಪ್ರೊಸೆಸರ್‌ ಪವರ್‌ ಅನ್ನು ಹೊಂದಿದೆ. ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್‌ 13 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಇದಕ್ಕೆ ಪೂರಕವಾಗಿ ಮಾಲಿ G68 GPU ಸಪೊರ್ಟ್‌ ಅನ್ನು ಪಡೆದಿದ್ದು, 6GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಆಯ್ಕೆ ಒಳಗೊಂಡಿದೆ.

ಸ್ಯಾಮ್‌ಸಂಗ್‌ ಗ್ಯಾಲಕ್ಸಿ M14 5G ಕ್ಯಾಮೆರಾ ಸೆನ್ಸಾರ್ ಬಲ : ಸ್ಯಾಮ್‌ಸಂಗ್‌ ಗ್ಯಾಲಕ್ಸಿ M14 5G ಸ್ಮಾರ್ಟ್‌ಫೋನ್‌ ತ್ರಿವಳಿ ರಿಯರ್‌ ಕ್ಯಾಮೆರಾ ರಚನೆಯನ್ನು ಪಡೆದುಕೊಂಡಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಅನ್ನು ಹೊಂದಿದೆ. ಸೆಕೆಂಡರಿ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಡೆಪ್ತ್‌ ಸೆನ್ಸಾರ್‌ ಮತ್ತು ತೃತೀಯ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಮ್ಯಾಕ್ರೋ ಲೆನ್ಸ್‌ ಅನ್ನು ಒಳಗೊಂಡಿದೆ. ಅಲ್ಲದೇ ಮುಂಭಾಗದಲ್ಲಿ 13 ಮೆಗಾ ಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಸಹ ಪಡೆದಿದೆ.

ಸ್ಯಾಮ್‌ಸಂಗ್‌ ಗ್ಯಾಲಕ್ಸಿ M14 5G ಬ್ಯಾಟರಿ ಮತ್ತು ಇತರೆ ಸೌಲಭ್ಯಗಳು : ಸ್ಯಾಮ್‌ಸಂಗ್‌ ಗ್ಯಾಲಕ್ಸಿ M14 5G ಸ್ಮಾರ್ಟ್‌ಫೋನ್ 6000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಅನ್ನು ಒಳಗೊಂಡಿದ್ದು, ಇದರೊಂದಿಗೆ 25W ಸಾಮರ್ಥ್ಯದ ಫಾಸ್ಟ್‌ ಚಾರ್ಜಿಂಗ್ ಸಪೋರ್ಟ್‌ ಒಳಗೊಂಡಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G, ವೈಫೈ, ಬ್ಲೂಟೂತ್‌ 5.2, NFC ಮತ್ತು GPS ಹಾಗೂ USB ಟೈಪ್-C ಪೋರ್ಟ್‌ ಅನ್ನು ಪಡೆದಿದೆ.

Best Mobiles in India

English summary
Big discount on Samsung Galaxy M14 5G phone. Check offer price, specifications and more details here.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+