ಈ ಸ್ಮಾರ್ಟ್‌ಫೋನ್ ಬೆಲೆಯಲ್ಲಿ ಭಾರೀ ಇಳಿಕೆ!.. ಖರೀದಿಸಬೇಕೆ ಅಥವಾ ಬೇಡವೇ?
ಜನಪ್ರಿಯ ಶಿಯೋಮಿ ಮೊಬೈಲ್ ಸಂಸ್ಥೆಯು ರೆಡ್ಮಿ ಸರಣಿಯಲ್ಲಿ ಹಲವು ಮೊಬೈಲ್‌ಗಳನ್ನು ಪರಿಚಯಿಸಿ ಸೈ ಎನಿಸಿಕೊಂಡಿದೆ. ಅಂದಹಾಗೆ ಬಹುತೇಕ ರೆಡ್ಮಿ ಮೊಬೈಲ್‌ಗಳು ಬಜೆಟ್ ಬೆಲೆಯಲ್ಲಿ ಕಾಣಿಸಿಕೊಂಡಿವೆ. ಆ ಪೈಕಿ ರೆಡ್ಮಿ 10 ಪವರ್ ಸ್ಮಾರ್ಟ್‌ಫೋನ್ ಕೂಡಾ ಒಂದಾಗಿದ್ದು, ಇದೀಗ ಈ ಫೋನ್ ಬೆಲೆಯಲ್ಲಿ ಬಿಗ್ ಡಿಸ್ಕೌಂಟ್ ಬೆಲೆಯಲ್ಲಿ ಕಾಣಿಸಿದೆ. ಆದರೆ ಖರೀದಿಗೆ ಸೂಕ್ತವೇ?
ಹೌದು, ಇ ಕಾಮರ್ಸ್ ದೈತ್ಯ ಪ್ಲಾಟ್‌ಫಾರ್ಮ್ ಎನಿಸಿರುವ ಅಮೆಜಾನ್‌ನಲ್ಲಿ ರೆಡ್ಮಿ 10 ಪವರ್ ಫೋನ್ ಶೇ. 41% ರಷ್ಟು ರಿಯಾಯಿತಿ ಪಡೆದಿದೆ. ಈ ಫೋನ್ 8GB RAM + 128GB ವೇರಿಯಂಟ್ ಬೆಲೆಯು 18,999ರೂ. ಆಗಿದ್ದು, ಆದರೆ ಈಗ ಆಫರ್‌ನಲ್ಲಿ 11,248ರೂ. ಗಳ ಪ್ರೈಸ್‌ಟ್ಯಾಗ್‌ನಲ್ಲಿ ಖರೀದಿ ಮಾಡಬಹುದಾಗಿದೆ. ಹಾಗೆಯೇ ಗ್ರಾಹಕರಿಗೆ ಎಕ್ಸ್‌ಚೇಂಜ್ ಆಫರ್ ಹಾಗೂ ಆಯ್ದ ಕೆಲವು ಬ್ಯಾಂಕ್‌ಗಳಿಂದ ಕೊಡುಗೆ ಸಹ ದೊರೆಯುತ್ತವೆ.

ಅಂದಹಾಗೆ ಈ ಫೋನ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 680 SoC ಪ್ರೊಸೆಸರ್ ಪವರ್ ಹೊಂದಿದ್ದು, ಡ್ಯುಯಲ್ ಕ್ಯಾಮೆರಾ ರಚನೆಯನ್ನು ಒಳಗೊಂಡಿದೆ. ಪ್ರಾಥಮಿಕ ಕ್ಯಾಮೆರಾವು 50 ಮೆಗಾ ಪಿಕ್ಸಲ್ ಸೆನ್ಸಾರ್ ಸಾಮರ್ಥ್ಯ ಆಗಿದ್ದು, ಸೆಲ್ಫಿ ಕ್ಯಾಮೆರಾವು 5 ಎಂಪಿ ಸೆನ್ಸಾರ್ ಸಾಮರ್ಥ್ಯದಲ್ಲಿ ಇದೆ. ಹಾಗಾದರೇ ರೆಡ್ಮಿ 10 ಪವರ್ ಫೋನಿನ ಇತರೆ ಫೀಚರ್ಸ್ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.
ರೆಡ್ಮಿ 10 ಪವರ್ ಡಿಸ್‌ಪ್ಲೇ ವಿನ್ಯಾಸ ಹೀಗಿದೆ
ರೆಡ್ಮಿ 10 ಪವರ್ ಮೊಬೈಲ್ 6.7 ಇಂಚಿನ HD+ IPS LCD ಡಿಸ್‌ಪ್ಲೇ ಅನ್ನು ಪಡೆದುಕೊಂಡಿದೆ. ಇನ್ನು ಈ ಡಿಸ್‌ಪ್ಲೇ 20.6:9 ರಚನೆಯ ಅನುಪಾತವನ್ನು ಒಳಗೊಂಡಿದೆ. ಇದು 400 ನಿಟ್ಸ್ ಬ್ರೈಟ್‌ನೆಸ್ ಅನ್ನು ಹೊಂದಿದ್ದು, ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 3 ಪ್ರೊಟೆಕ್ಷನ್ ಪಡೆದುಕೊಂಡಿದೆ.
ರೆಡ್ಮಿ 10 ಪವರ್ ಪ್ರೊಸೆಸರ್ ಪವರ್ ಎಷ್ಟು
ರೆಡ್ಮಿ 10 ಪವರ್ ಮೊಬೈಲ್ ಆಕ್ಟಾ ಕೋರ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 680 SoC ಪ್ರೊಸೆಸರ್ ಪವರ್ ಅನ್ನು ಒಳಗೊಂಡಿದ್ದು, ಅದಕ್ಕೆ ಪೂರಕವಾಗಿ ಆಂಡ್ರಾಯ್ಡ್ 11 ಓಎಸ್ ನಲ್ಲಿ MIUI 13 ಸಪೋರ್ಟ್ ನೊಂದಿಗೆ ಕೆಲಸ ಮಾಡಲಿದೆ. ಹಾಗೆಯೇ 8 GB RAM ಮತ್ತು 128 GB ಆಂತರೀಕ ಸ್ಟೋರೇಜ್ ಸಾಮರ್ಥ್ಯ ಕೂಡಾ ಪಡೆದುಕೊಂಡಿದೆ.
ರೆಡ್ಮಿ 10 ಪವರ್ ಕ್ಯಾಮೆರಾ ಸೆನ್ಸಾರ್ ಮಾಹಿತಿ
ರೆಡ್ಮಿ 10 ಪವರ್ ಮೊಬೈಲ್ ಡ್ಯುಯೆಲ್ ರಿಯರ್ ಕ್ಯಾಮೆರಾ ರಚನೆ ಅನ್ನು ಪಡೆದಿದೆ. ಇದರಲ್ಲಿ ಪ್ರಾಥಮಿಕ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸಾರ್ f/1.8 ಅಪರ್ಚರ್ ಲೆನ್ಸ್ ಮತ್ತು ಎರಡನೇ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಪೋರ್ಟ್ರೇಟ್ ಸೆನ್ಸಾರ್ ಜೊತೆಗೆ f/2.4 ಅಪರ್ಚರ್ ಲೆನ್ಸ್ ಅನ್ನು ಪಡೆದುಕೊಂಡಿದೆ. ಹಾಗೆಯೇ 5 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ಅನ್ನು ಇದು ಹೊಂದಿದೆ.
ರೆಡ್ಮಿ 10 ಪವರ್ ಬ್ಯಾಟರಿ ಮತ್ತು ಇತರೆ ಆಯ್ಕೆಗಳು
ರೆಡ್ಮಿ 10 ಪವರ್ ಮೊಬೈಲ್ 6,000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಟರಿ ಅನ್ನು ಒಳಗೊಂಡಿದ್ದು, ಇದಕ್ಕೆ ಪೂರಕವಾಗಿ 18W ಫಾಸ್ಟ್ ಚಾರ್ಜಿಂಗ್ ಅನ್ನು ಸಪೋರ್ಟ್ ಮಾಡುತ್ತದೆ. ಹಾಗೆಯೇ ಕನೆಕ್ಟಿವಿಟಿ ಸೌಲಭ್ಯಗಳಲ್ಲಿ 4G LTE, Wi-Fi, ಬ್ಲೂಟೂತ್ v5, GPS/ A-GPS, USB ಟೈಪ್-C, ಮತ್ತು 3.5mm ಹೆಡ್‌ಫೋನ್ ಜ್ಯಾಕ್ ಪಡೆದುಕೊಂಡಿದೆ. ಇನ್ನು ಈ ಫೋನ್ ರಿಯರ್ ಫಿಂಗರ್ ಪ್ರಿಂಟ್ ಸೆನ್ಸಾರ್ ಅನ್ನು ಹೊಂದಿದೆ.


Click it and Unblock the Notifications








