ರಗಡ್ ಲುಕ್‌ನಲ್ಲಿ ಇರುವ ಈ Motorola Edge ಫೋನ್ ಬೆಲೆಯಲ್ಲಿ ಬೊಂಬಾಟ್ ಇಳಿಕೆ!
ದಿಗ್ಗಜ ಇ ಕಾಮರ್ಸ್ ಫ್ಲಿಪ್‌ಕಾರ್ಟ್ ದೀಪಾವಳಿ ಹಬ್ಬದ ಪ್ರಯುಕ್ತ ಮೊಬೈಲ್‌ಗಳಿಗೆ ವಿಶೇಷ ಡಿಸ್ಕೌಂಟ್ ಲಭ್ಯ ಮಾಡಿದೆ. ಆ ಪೈಕಿ ಮೊಟೊರೊಲಾ ಸಂಸ್ಥೆಯು ಮೊಟೊರೊಲಾ ಎಡ್ಜ್ 50 ನಿಯೋ (Motorola Edge 50 Neo) ಮೊಬೈಲ್ ಬೊಂಬಾಟ್ ರಿಯಾಯಿತಿ ಬೆಲೆಯಲ್ಲಿ ಪಡೆದುಕೊಂಡಿದೆ. ಅಂದಹಾಗೆ ಈ ಫೋನ್ 8GB RAM + 256GB ಹಾಗೂ 12GB RAM + 256GB ಸ್ಟೋರೇಜ್‌ನ ವೇರಿಯಂಟ್ ಆಯ್ಕೆ ಪಡೆದಿದ್ದು, 50 ಮೆಗಾ ಪಿಕ್ಸೆಲ್ ಪ್ರಾಥಮಿಕ ಕ್ಯಾಮೆರಾ ರಚನೆ ಅನ್ನು ಪಡೆದುಕೊಂಡಿದೆ.
ಹೌದು, ಫ್ಲಿಪ್‌ಕಾರ್ಟ್ ಇ ಕಾಮರ್ಸ್ ಶುರು ಮಾಡಿರುವ ದೀಪಾವಳಿ ಸೇಲ್‌ನಲ್ಲಿ ಮೊಟೊರೊಲಾ ಎಡ್ಜ್ 50 ನಿಯೋ (Motorola Edge 50 Neo) ಫೋನ್ ಶೇ. 20% ರಷ್ಟು ನೇರ ಡಿಸ್ಕೌಂಟ್ ದರಲ್ಲಿ ಕಾಣಿಸಿಕೊಂಡಿದೆ. ಈ ಮೊಬೈಲ್‌ನ 8GB RAM + 256GB ಸ್ಟೋರೇಜ್ ವೇರಿಯಂಟ್ ಆಫರ್‌ನಲ್ಲಿ 23,999ರೂ. ಗಳ ಬೆಲೆಯಲ್ಲಿ ಕಾಣಿಸಿಕೊಂಡಿದೆ. ಅಲ್ಲದೇ ಹೆಚ್ಚುವರಿಯಾಗಿ ಕೆಲವು ಆಯ್ದ ಬ್ಯಾಂಕ್‌ಗಳಿಂದ ರಿಯಾಯಿತಿ ಸಹ ಪಡೆಯಬಹುದಾಗಿದೆ.

ಅಂದಹಾಗೆ ಮೊಟೊರೊಲಾ ಎಡ್ಜ್ 50 ನಿಯೋ ಮೊಬೈಲ್ 5000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಸೌಲಭ್ಯವನ್ನು ಒಳಗೊಂಡಿದೆ. ಇದರ ಜೊತೆಗೆ ಈ ಮೊಬೈಲ್ ಮೀಡಿಯಾ ಟೆಕ್ ಡೈಮೆನ್ಸಿಟಿ 7300 SoC ಪ್ರೊಸೆಸರ್ ಪವರ್‌ನಲ್ಲಿ ಕೆಲಸ ಮಾಡಲಿದೆ. ಹಾಗಾದರೇ ಮೊಟೊರೊಲಾ ಎಡ್ಜ್ 50 ನಿಯೋ ಫೋನಿನ ಇತರೆ ಫೀಚರ್ಸ್ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.
ಮೊಟೊರೊಲಾ ಎಡ್ಜ್ 50 ನಿಯೋ - ಫೀಚರ್ಸ್ ಮಾಹಿತಿ
ಮೊಟೊರೊಲಾ ಎಡ್ಜ್ 50 ನಿಯೋ ಫೋನ್ 6.7 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇ ಹೊಂದಿದ್ದು, ಈ ಡಿಸ್‌ಪ್ಲೇಯು 1200 x 2780 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಪೋರ್ಟ್ ಮಾಡಲಿದೆ. ಇದಲ್ಲದೆ ಡಿಸ್‌ಪ್ಲೇ 144 ಟ್ರೂ ಕಲರ್ ಡಿಸ್‌ಪ್ಲೇ ಸೌಲಭ್ಯ ಪಡೆದಿದ್ದು, ಇದರ ಜೊತೆಗೆ ಡಿಸ್‌ಪ್ಲೇ 2500 ನಿಟ್ಸ್ ಬ್ರೈಟ್‌ನೆಸ್ ಸಪೋರ್ಟ್ ನೀಡಲಿದೆ. ಇದರ ಜೊತೆಗೆ 3D ಕರ್ವ್ ಡಿಸ್‌ಪ್ಲೇ ರಚನೆ ಅನ್ನು ಹೊಂದಿದೆ.
ಮೊಟೊರೊಲಾ ಎಡ್ಜ್ 50 ನಿಯೋ (Motorola Edge 50 Neo) ಫೋನ್ ಮೀಡಿಯಾ ಟೆಕ್ ಡೈಮೆನ್ಸಿಟಿ 7300 SoC ಪ್ರೊಸೆಸರ್ ಸಾಮರ್ಥ್ಯದಲ್ಲಿ ಕೆಲಸ ಮಾಡಲಿರುವ ಸಾಧ್ಯತೆಗಳು ಇದ್ದು, ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 14 ಓಎಸ್ ಬೆಂಬಲ ಪಡೆದಿದೆ. ಇದರೊಂದಿಗೆ 12 GB RAM + 256 GB ಸ್ಟೋರೇಜ್‌ನ ವೇರಿಯಂಟ್ ಆಯ್ಕೆ ಸಹ ಪಡೆದುಕೊಂಡಿದೆ.
ಮೊಟೊರೊಲಾ ಎಡ್ಜ್ 50 ನಿಯೋ ಫೋನ್ ತ್ರಿವಳಿ ರಿಯರ್ ಕ್ಯಾಮೆರಾ ಸೆಟ್‌ಅಪ್ ಪಡೆದಿದ್ದು, ಇದರ ಮುಖ್ಯ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದಲ್ಲಿ ಇದೆ. ದ್ವಿತೀಯ ಹಾಗೂ ಮೂರನೇ ಕ್ಯಾಮೆರಾಗಳು ಕ್ರಮವಾಗಿ 13 ಮೆಗಾ ಪಿಕ್ಸೆಲ್ ಸೆನ್ಸಾರ್ ಹಾಗೂ 10 ಮೆಗಾ ಪಿಕ್ಸೆಲ್ ಸೆನ್ಸಾರ್ ಬಲದಲ್ಲಿ ಇವೆ. ಅಲ್ಲದೇ ಮುಂಭಾಗದಲ್ಲಿ 32 ಮೆಗಾ ಪಿಕ್ಸೆಲ್ ಸೆನ್ಸಾರ್‌ನ ಸೆಲ್ಫಿ ಕ್ಯಾಮೆರಾ ಪಡೆದಿರುವ ಸಾಧ್ಯತೆಗಳು ಇವೆ.
ಮೊಟೊರೊಲಾ ಎಡ್ಜ್ 50 ನಿಯೋ ಫೋನ್ 5000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಪಡೆದಿದ್ದು, ಇದಕ್ಕೆ ಪೂರಕವಾಗಿ 68 W ಫಾಸ್ಟ್ ಟರ್ಬೋ ಚಾರ್ಜಿಂಗ್ ಸೌಲಭ್ಯ ಹೊಂದಿದೆ. ಹಾಗೆಯೇ 15W ವೈರ್‌ಲೆಸ್ ಮತ್ತು 5W ರಿವರ್ಸ್ ವೈರ್‌ಲೆಸ್ ಚಾರ್ಜಿಂಗ್ ಆಯ್ಕೆಗಳು ಇವೆ. ಇನ್ನು ಕನೆಕ್ಟಿವಿಟಿ ಸೌಲಭ್ಯಗಳಲ್ಲಿ 4G, 5G, VoLTE, Vo5G, ಬ್ಲೂಟೂತ್ v5.3, ವೈಫೈ, NFC, USB-C v3.2 ಆಯ್ಕೆಗಳು ಇವೆ.


Click it and Unblock the Notifications








