ಸ್ಟೈಲಿಶ್ ಲುಕ್ ಜೊತೆಗೆ ಅತ್ಯುತ್ತಮ ಕ್ಯಾಮೆರಾ ಇರುವ ಈ ಫೋನ್ ಬೆಲೆ ಇಳಿಕೆ!
ಇ ಕಾಮರ್ಸ್ ದೊಡ್ಡಣ್ಣ ಫ್ಲಿಪ್‌ಕಾರ್ಟ್ ಏನಾದರೊಂದು ಮಾರಾಟ ಮೇಳ ಆಯೋಜಿಸುವ ಮೂಲಕ ಮೊಬೈಲ್‌ಗಳಿಗೆ ಬೊಂಬಾಟ್ ಆಫರ್ ನೀಡುತ್ತ ಸಾಗಿದೆ. ಸದ್ಯ ಫ್ಲಿಪ್‌ಕಾರ್ಟ್ ತಾಣದಲ್ಲಿ ಆಯ್ದ ಕೆಲವು ಸ್ಮಾರ್ಟ್‌ಫೋನ್‌ಗಳು ಬೊಂಬಾಟ್ ರಿಯಾಯಿತಿ ಬೆಲೆಯಲ್ಲಿ ಖರೀದಿಗೆ ಲಭ್ಯ ಇವೆ. ಆ ಪೈಕಿ ನಥಿಂಗ್ ಕಂಪನಿಯ ನಥಿಂಗ್ ಫೋನ್ (2a) ಪ್ಲಸ್ (Nothing Phone (2a) Plus) ಆಕರ್ಷಕ ಡಿಸ್ಕೌಂಟ್ ಪ್ರೈಸ್‌ಟ್ಯಾಗ್‌ನಲ್ಲಿ ಕಾಣಿಸಿಕೊಂಡಿದೆ.
ಹೌದು, ಫ್ಲಿಪ್‌ಕಾರ್ಟ್ ತಾಣದಲ್ಲಿ ನಥಿಂಗ್ ಕಂಪನಿಯು ನಥಿಂಗ್ ಫೋನ್ (2a) ಪ್ಲಸ್ (Nothing Phone (2a) Plus) ಸ್ಮಾರ್ಟ್‌ಫೋನ್ ಶೇ. 10% ರಷ್ಟು ನೇರ ರಿಯಾಯಿತಿ ಪಡೆದುಕೊಂಡಿದೆ. ಈ ಫೋನಿನ 8 GB RAM + 256 GB ಸ್ಟೋರೇಜ್ ವೇರಿಯಂಟ್ 26,999ರೂ. ಗಳ ಬೆಲೆಯಲ್ಲಿ ಖರೀದಿಗೆ ಲಭ್ಯ ಇದೆ. ಹಾಗೆಯೇ 32 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಪಡೆದಿದೆ.

ಅಲ್ಲದೇ ನಥಿಂಗ್ ಫೋನ್ (2a) ಪ್ಲಸ್ ಮೊಬೈಲ್ 8GB RAM ಮತ್ತು 256GB ಹಾಗೂ 12GB RAM ಮತ್ತು 256GB ಸ್ಟೋರೇಜ್ ವೇರಿಯಂಟ್ ಆಯ್ಕೆಯಲ್ಲಿ ಖರೀದಿಗೆ ಲಭ್ಯ ಆಗಲಿದೆ. ಇದರೊಂದಿಗೆ ಈ ಸ್ಮಾರ್ಟ್‌ಫೋನ್ 5,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಅನ್ನು ಒಳಗೊಂಡಿದೆ. ಹಾಗಾದರೇ ನಥಿಂಗ್ ಫೋನ್ (2a) ಪ್ಲಸ್ ಫೋನಿನ ಇತರೆ ಫೀಚರ್ಸ್ ಬಗ್ಗೆ ಮುಂದೆ ನೋಡೋಣ ಬನ್ನಿರಿ.
ನಥಿಂಗ್ ಫೋನ್ (2a) ಪ್ಲಸ್ ಫೀಚರ್ಸ್ ಮಾಹಿತಿ
ನಥಿಂಗ್ ಫೋನ್ (2a) ಪ್ಲಸ್ ಫೋನ್ 6.67 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇ ಜೊತೆಗೆ ಈ ಡಿಸ್‌ಪ್ಲೇಯು 2412 x 1084 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಪಡೆದಿದೆ. ಇನ್ನು ಡಿಸ್‌ಪ್ಲೇ 120Hz ಹಾಗೂ 1300 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್ ಲೆವೆಲ್ ಅನ್ನು ಬೆಂಬಲಿಸುತ್ತದೆ. ಇದಲ್ಲದೆ ಡಿಸ್‌ಪ್ಲೇಯು ಗೊರಿಲ್ಲಾ ಗ್ಲಾಸ್ 5 ಸಪೋರ್ಟ್ ಪಡೆದಿದ್ದು, ಅಲ್ಲದೇ ಈ ಡಿಸ್‌ಪ್ಲೇಯು OLED ಸ್ಕ್ರೀನ್ ಹೊಂದಿದೆ.
ನಥಿಂಗ್ ಫೋನ್ (2a) ಪ್ಲಸ್ ಫೋನ್ ಮೀಡಿಯಾ ಟೆಕ್ ಡೈಮೆನ್ಸಿಟಿ 7350 ಪ್ರೊ SoC ಪ್ರೊಸೆಸರ್ ಸೌಲಭ್ಯದ ಪವರ್ ಅನ್ನು ಪಡೆದಿದ್ದು, ಆಂಡ್ರಾಯ್ಡ್ 14 ಓಎಸ್ ಸಪೋರ್ಟ್ ಜೊತೆಗೆ ಕಾರ್ಯ ನಿರ್ವಹಿಸಲಿದೆ. ಹಾಗೆಯೇ 8GB RAM ಮತ್ತು 256 GB ಹಾಗೂ 12GB RAM ಮತ್ತು 256 GB ಆಂತರೀಕ ಸ್ಟೋರೇಜ್ ಅಯ್ಕೆಯಲ್ಲಿ ಬರಲಿದೆ.
ನಥಿಂಗ್ ಫೋನ್ (2a) ಪ್ಲಸ್ ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ರಚನೆ ಅನ್ನು ಪಡೆದಿದ್ದು, ಇನ್ನು ಇದರ ಮುಖ್ಯ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸಾರ್ ಆಗಿದೆ. ದ್ವಿತೀಯ ಕ್ಯಾಮೆರಾ ಸಹ 50 ಮೆಗಾ ಪಿಕ್ಸೆಲ್ ಸೆನ್ಸಾರ್ ಒಳಗೊಂಡಿದೆ. ಮುಂಭಾಗದಲ್ಲಿ ಕೂಡಾ 50 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒದಗಿಸಲಾಗಿದೆ.
ನಥಿಂಗ್ ಫೋನ್ (2a) ಪ್ಲಸ್ ಫೋನ್ 5,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಅನ್ನು ಪಡೆದಿದ್ದು, ಇದು 50W ಸಾಮರ್ಥ್ಯದ ಫಾಸ್ಟ್ ಚಾರ್ಜಿಂಗ್ ಅನ್ನು ಸಪೋರ್ಟ್ ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಸೌಲಭ್ಯಗಳಲ್ಲಿ ಬ್ಲೂಟೂತ್, ವೈಫೈ, ಯುಎಸ್‌ಬಿ ಟೈಪ್ ಸಿ ಪೋರ್ಟ್, ಹೆಡ್‌ಫೋನ್ ಜ್ಯಾಕ್ ಅನ್ನು ಪಡೆದಿದೆ. ಈ ಫೋನ್ 8GB RAM ಮತ್ತು 256GB ವೇರಿಯಂಟ್
ಹಾಗೂ 12GB RAM ಮತ್ತು 256GB ವೇರಿಯಂಟ್ ಆಯ್ಕೆಗಳನ್ನು ಪಡೆದಿದೆ. ಅಲ್ಲದೇ ಇದು ಬ್ಲ್ಯಾಕ್ ಹಾಗೂ ಗ್ರೇ ಕಲರ್ ಆಯ್ಕೆಗಳಲ್ಲಿ ಖರೀದಿಗೆ ಸಿಗಲಿದೆ.


Click it and Unblock the Notifications








