ಒಪ್ಪೋದ ಈ 5000mAh ಬ್ಯಾಟರಿ ಫೋನ್ ಬೆಲೆಯಲ್ಲಿ ಸಖತ್ ಇಳಿಕೆ!
ದೇಶಿಯ ಮಾರುಕಟ್ಟೆಯಲ್ಲಿ ಒಪ್ಪೊ ಮೊಬೈಲ್ ಸಂಸ್ಥೆಯು ಭಿನ್ನ ಮಾದರಿಯ ಸ್ಮಾರ್ಟ್‌ಫೋನ್ ಪರಿಚಯಿಸಿ ಈಗಾಗಲೇ ಭದ್ರಸ್ಥಾನ ಪಡೆದುಕೊಂಡಿದೆ. ಆ ಪೈಕಿ ಸಂಸ್ಥೆಯ ಇತ್ತೀಚಿಗಿನ ಮೊಬೈಲ್‌ಗಳಲ್ಲಿ ಒಂದಾದ ಒಪ್ಪೋ A59 5G ಸ್ಮಾರ್ಟ್‌ಫೋನ್ ಫ್ಲಿಪ್‌ಕಾರ್ಟ್ ವೆಬ್‌ಸೈಟ್‌ನಲ್ಲಿ ಬೊಂಬಾಟ್ ರಿಯಾಯಿತಿ ಬೆಲೆಯಲ್ಲಿ ಕಾಣಿಸಿಕೊಂಡಿದೆ.
ಹೌದು, ಅಮೆಜಾನ್ ತಾಣದಲ್ಲಿ ಒಪ್ಪೋ A59 5G ಮೊಬೈಲ್ ಶೇ. 22% ರಷ್ಟು ಡಿಸ್ಕೌಂಟ್ ಪಡೆದಿದೆ. ಈ ಫೋನಿನ 4 GB RAM + 128 GB ಸ್ಟೋರೇಜ್ ವೇರಿಯಂಟ್ ಆಫರ್‌ನಲ್ಲಿ 13,999ರೂ. ಗಳ ದರದಲ್ಲಿ ಖರೀದಿಗೆ ಲಭ್ಯ ಇದೆ. ಇದರೊಂದಿಗೆ ಹೆಚ್ಚುವರಿಯಾಗಿ ಆಯ್ದ ಬ್ಯಾಂಕ್‌ಗಳಿಂದ ಇತರೆ ಡಿಸ್ಕೌಂಟ್ ಸಹ ಲಭ್ಯ.

ಹಾಗೆಯೇ ಈ ಮೊಬೈಲ್ ಮೀಡಿಯಾಟೆಕ್ ಡೈಮೆನ್ಸಿಟಿ 6020SoC ಪ್ರೊಸೆಸರ್ ಅನ್ನು ಒಳಗೊಂಡಿದ್ದು, 5,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಅನ್ನು ಹೊಂದಿದೆ. ಇದರೊಂದಿಗೆ ಈ ಫೋನಿನ ಮುಖ್ಯ ಕ್ಯಾಮೆರಾ 13 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯ ಪಡೆದಿದೆ. ಹಾಗಾದರೇ ಒಪ್ಪೋ A59 5G ಸ್ಮಾರ್ಟ್‌ಫೋನಿನ ಇತರೆ ಫೀಚರ್ಸ್ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.
ಒಪ್ಪೋ A59 5G ಫೋನಿನ ಫೀಚರ್ಸ್
ಒಪ್ಪೋ A59 5G ಮೊಬೈಲ್ 6.56 ಇಂಚಿನ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇ ಅನ್ನು ಪಡೆದಿದ್ದು, ಈ ಡಿಸ್‌ಪ್ಲೇ ಡ್ಯೂಡ್ರಾಪ್ ನಾಚ್ ಅನ್ನು ಪಡೆದುಕೊಂಡಿದೆ. ಅಲ್ಲದೇ ಇದರ ಡಿಸ್‌ಪ್ಲೇ 1612 x 720 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಇದಲ್ಲದೆ ಡಿಸ್‌ಪ್ಲೇ 90Hz ರಿಫ್ರೆಶ್ ರೇಟ್ ಬೆಂಬಲ ಹಾಗೂ 720 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್ ಲೆವೆಲ್ ಅನ್ನು ನೀಡಲಿದೆ. ಇನ್ನು ಈ ಡಿಸ್‌ಪ್ಲೇ 96% NTSC ಹೈ ಕಲರ್ ಗ್ಯಾಮಟ್‌ನೊಂದಿಗೆ ಪಡೆದಿದೆ.
ಈ ಮೊಬೈಲ್ ಮೀಡಿಯಾಟೆಕ್ ಡೈಮೆನ್ಸಿಟಿ 6020SoC ಪ್ರೊಸೆಸರ್ ಪವರ್ ಅನ್ನ ಉ ಹೊಂದಿದೆ. ಇದು ColorOS 13.1 ಆಂಡ್ರಾಯ್ಡ್ 13 ಸಪೋರ್ಟ್ ಜೊತೆಗೆ ಕೆಲಸ ನಿರ್ವಹಿಸಲಿದೆ. ಇದಕ್ಕೆ ಪೂರಕವಾಗಿ ಮಾಲಿ-G57 MC2 GPU ಸಪೋರ್ಟ್ ಹೊಂದಿದೆ. ಹಾಗೆಯೇ 6GB RAM ಮತ್ತು 128GB ಆಂತರೀಕ ಸ್ಟೋರೇಜ್ ಸಾಮರ್ಥ್ಯವನ್ನು ಪಡೆದುಕೊಂಡಿದೆ.
ಒಪ್ಪೋ ಸಂಸ್ಥೆಯ ಈ A59 5G ಮೊಬೈಲ್ ಡ್ಯುಯಲ್ ರಿಯರ್ ಕ್ಯಾಮೆರಾ ರಚನೆ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 13 ಮೆಗಾಪಿಕ್ಸೆಲ್ ಸೆನ್ಸಾರ್, ದ್ವಿತೀಯ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಬೊಕೆ ಲೆನ್ಸ್ ಅನ್ನು ಒಳಗೊಂಡಿದೆ. ಇದಲ್ಲದೆ 8 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಸಹ ಒಳಗೊಂಡಿದೆ.
ಒಪ್ಪೋ A59 5G ಮೊಬೈಲ್ 5,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಅನ್ನು ಪಡೆದಿದ್ದು, ಇದು 33W SUPERVOOC ಫ್ಲ್ಯಾಷ್ ಚಾರ್ಜಿಂಗ್ ಸಪೋರ್ಟ್ ಅನ್ನು ಪಡೆದುಕೊಂಡಿದೆ. ಇದರಿಂದ ಸ್ಮಾರ್ಟ್‌ಫೋನ್ ಅನ್ನು ಕೇವಲ 30 ನಿಮಿಷಗಳಲ್ಲಿ 52% ಚಾರ್ಜ್ ಮಾಡಬಹುದು ಎಂದು ಕಂಪೆನಿ ಹೇಳಿದೆ. ಇದಲ್ಲದೆ ಫೋನ್ ಯುಎಸ್‌ಬಿ ಟೈಪ್-ಸಿ ಚಾರ್ಜಿಂಗ್ ಪೋರ್ಟ್ ಮತ್ತು 3.5 ಎಂಎಂ ಹೆಡ್‌ಫೋನ್ ಜ್ಯಾಕ್ ಸೌಲಭ್ಯ ಪಡೆದಿದೆ.
ಒಪ್ಪೋ A59 5G ಮೊಬೈಲ್ 4GB RAM ಮತ್ತು 128GB ಸ್ಟೋರೇಜ್ ಹಾಗೂ 6GB+128GB RAM ಸ್ಟೋರೇಜ್ ಆಯ್ಕೆ ಪಡೆದುಕೊಂಡಿದೆ. ಇನ್ನು ಈ ಫೋನ್ ಅನ್ನು ಗ್ರಾಹಕರು ಸಿಲ್ಕ್ ಗೋಲ್ಡ್ ಮತ್ತು ಸ್ಟಾರ್ರಿ ಬ್ಲ್ಯಾಕ್ ಕಲರ್ ಆಯ್ಕೆಗಳಲ್ಲಿ ಖರೀದಿಸಬಹುದಾಗಿದೆ.


Click it and Unblock the Notifications








