Home
ಸುದ್ದಿಜಾಲ

108ಎಂಪಿ ಕ್ಯಾಮೆರಾ ಇರುವ ಈ 5G ಫೋನ್‌ ಬೆಲೆಯಲ್ಲಿ ಸಖತ್ ಇಳಿಕೆ!

ಫ್ಲಿಪ್‌ಕಾರ್ಟ್‌ ಜನಪ್ರಿಯ ಇ ಕಾಮರ್ಸ್‌ ತಾಣವಾಗಿ ಕಾಣಿಸಿಕೊಂಡಿದೆ. ಈ ಪ್ಲಾಟ್‌ಫಾರ್ಮ್ ಒಂದಿಲ್ಲೊಂದು ಕೊಡುಗೆ ಮೂಲಕ ಗ್ರಾಹಕರನ್ನು ಸೆಳೆಯುತ್ತ ಮುನ್ನಡೆದಿದ್ದು, ಸದ್ಯ ಇನ್ಫಿನಿಕ್ಸ್‌ ಸಂಸ್ಥೆಯ ಇನ್ಫಿನಿಕ್ಸ್‌ ಜಿರೋ 30 5G ಸ್ಮಾರ್ಟ್‌ಫೋನಿಗೆ ಬಲು ಆಕರ್ಷಕ ರಿಯಾಯಿತಿ ತಿಳಿಸಿದೆ.

ಹೌದು, ಫ್ಲಿಪ್‌ಕಾರ್ಟ್‌ ಇ ಕಾಮರ್ಸ್‌ ತಾಣದಲ್ಲಿ ಇನ್ಫಿನಿಕ್ಸ್‌ ಜಿರೋ 30 5G ಮೊಬೈಲ್‌ ಶೇ. 20% ರಷ್ಟು ನೇರ ಡಿಸ್ಕೌಂಟ್‌ ಪಡೆದಿದೆ. ಈ ಫೋನಿನ 12 GB RAM + 256 GB ಸ್ಟೋರೇಜ್‌ ವೇರಿಯಂಟ್‌ 23,999ರೂ. ಗಳ ರಿಯಾಯಿತಿ ದರದಲ್ಲಿ ಖರೀದಿಗೆ ಲಭ್ಯ ಇದೆ. ಇದರೊಂದಿಗೆ ಬ್ಯಾಂಕ್‌ ಕೊಡುಗೆಗಳು ಸೇರಿದಂತೆ ಇತರೆ ಡಿಸ್ಕೌಂಟ್‌ ಸಹ ಲಭ್ಯ ಆಗಲಿವೆ.

108ಎಂಪಿ ಕ್ಯಾಮೆರಾ ಇರುವ ಈ 5G ಫೋನ್‌ ಬೆಲೆಯಲ್ಲಿ ಸಖತ್ ಇಳಿಕೆ!

ಅಂದಹಾಗೆ ಇನ್ಫಿನಿಕ್ಸ್‌ ಜಿರೋ 30 5G ಮೊಬೈಲ್‌ ಮೀಡಿಯಾ ಟೆಕ್ ಡೈಮೆನ್ಸಿಟಿ 8020 SoC ಪ್ರೊಸೆಸರ್‌ ಸಾಮರ್ಥ್ಯ ಒಳಗೊಂಡಿದ್ದು, 5000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಸಪೋರ್ಟ್‌ ಹೊಂದಿದೆ. ಇನ್ನು ಇದರ ಪ್ರಾಥಮಿಕ ಕ್ಯಾಮೆರಾವು 50 ಮೆಗಾ ಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದಲ್ಲಿ ಇದೆ. ಹಾಗಾದರೆ ಇನ್ಫಿನಿಕ್ಸ್‌ ಜಿರೋ 30 5G ಫೋನ್ ಇತರೆ ಫೀಚರ್ಸ್‌ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಆಕರ್ಷಕ ಕರ್ವ್ಡ್‌ ಡಿಸ್‌ಪ್ಲೇ ಸೌಲಭ್ಯ

ಇನ್ಫಿನಿಕ್ಸ್‌ ಜಿರೋ 30 5G ಫೋನ್‌ 6.78 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇ ಅನ್ನು ಪಡೆದಿದ್ದು, ಈ ಡಿಸ್‌ಪ್ಲೇ 2,400 x 1,080 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಪಡೆದಿದೆ. ಇದರ ಡಿಸ್‌ಪ್ಲೇ 60 ಡಿಗ್ರಿ ಕರ್ವ್ಡ್ ಅಮೋಲೆಡ್‌ ಡಿಸ್‌ಪ್ಲೇ ಆಗಿದ್ದು, 144Hz ರಿಫ್ರೆಶ್ ರೇಟ್‌ ಸಪೋರ್ಟ್ ಮಾಡಲಿದೆ. ಇದಲ್ಲದೆ ಡಿಸ್‌ಪ್ಲೇ 950 ನೀಟ್ಸ್‌ ಗರಿಷ್ಠ ಬ್ರೈಟ್‌ನೆಸ್‌ ಪಡೆದಿದ್ದು, 360Hz ಟಚ್ ಸ್ಯಾಂಪ್ಲಿಂಗ್ ರೇಟ್‌ ಹೊಂದಿದೆ.

108ಎಂಪಿ ಕ್ಯಾಮೆರಾ ಇರುವ ಈ 5G ಫೋನ್‌ ಬೆಲೆಯಲ್ಲಿ ಸಖತ್ ಇಳಿಕೆ!

ಯಾವ ಪ್ರೊಸೆಸರ್‌ ಸೌಲಭ್ಯ ಇದೆ

ಇನ್ಫಿನಿಕ್ಸ್‌ ಸಂಸ್ಥೆಯ ಈ ಸ್ಮಾರ್ಟ್‌ಫೋನ್‌ ಆಕ್ಟಾ ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 8020 SoC ಪ್ರೊಸೆಸರ್‌ ಪವರ್‌ನಲ್ಲಿ ಕಾರ್ಯ ನಿರ್ವಹಿಸಲಿದ್ದು, ಇದಕ್ಕೆ ಅನುಗುಣವಾಗಿ ಆಂಡ್ರಾಯ್ಡ್‌ 13 ಆಧಾರಿತ XOS 13 ಬೆಂಬಲ ಪಡೆದುಕೊಂಡಿದೆ. ಹಾಗೆಯೇ 12GB RAM ಮತ್ತು 256GB ಆಂತರೀಕ ಸ್ಟೋರೇಜ್‌ ಸೌಲಭ್ಯ ಸಹ ಹೊಂದಿದೆ. ಹಾಗೆಯೇ Memfusion RAM ಫೀಚರ್ಸ್‌ ಮೂಲಕ ಆನ್‌ಬೋರ್ಡ್ ಮೆಮೊರಿಯನ್ನು 21GB ವರೆಗೆ ವಿಸ್ತರಿಸುವ ಅವಕಾಶ ಇದೆ.

108ಎಂಪಿ ಕ್ಯಾಮೆರಾ ಇರುವ ಈ 5G ಫೋನ್‌ ಬೆಲೆಯಲ್ಲಿ ಸಖತ್ ಇಳಿಕೆ!

ಕ್ಯಾಮೆರಾ ಸೆನ್ಸಾರ್‌ ಸೌಲಭ್ಯ

ಇನ್ಫಿನಿಕ್ಸ್‌ ಜಿರೋ 30 5G ಫೋನ್‌ ಮೂರು ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಪಡೆದುಕೊಂಡಿದ್ದು, ಇದರಲ್ಲಿ ಮುಖ್ಯ ಕ್ಯಾಮೆರಾ 108 ಮೆಗಾ ಪಿಕ್ಸೆಲ್ ಸೆನ್ಸಾರ್‌ ನಲ್ಲಿದೆ. ದ್ವಿತೀಯ ಕ್ಯಾಮೆರಾ 13 ಮೆಗಾ ಪಿಕ್ಸೆಲ್ ಅಲ್ಟ್ರಾ-ವೈಡ್ ಶೂಟರ್ ಮತ್ತು ತೃತೀಯ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್‌ ಅನ್ನು ಒಳಗೊಂಡಿದೆ. ಮುಂಭಾಗದಲ್ಲಿ 50 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮರಾ ಹೊಂದಿದ್ದು, ಡ್ಯುಯಲ್ LED ಫ್ಲ್ಯಾಶ್ ಸೌಲಭ್ಯ ಇದೆ.

ಬ್ಯಾಟರಿ ಬ್ಯಾಕ್‌ಅಪ್‌ ಹಾಗೂ ಇತರೆ ಸೌಲಭ್ಯಗಳು

ಈ ಫೋನ್ 5,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಅನ್ನು ಒಳಗೊಂಡಿದ್ದು, ಇದರ ಜತೆಗೆ 68W ಫಾಸ್ಟ್‌ ಚಾರ್ಜಿಂಗ್‌ ಅನ್ನು ಸಪೋರ್ಟ್‌ ಮಾಡುತ್ತದೆ. ಇದರಿಂದ ಫೋನ್‌ ಅನ್ನು ಕೇವಲ 30 ನಿಮಿಷಗಳಲ್ಲಿ ಶೂನ್ಯದಿಂದ 80% ವರೆಗೆ ಚಾರ್ಜಿಂಗ್‌ ಪಡೆದುಕೊಳ್ಳಲಿದೆ. ಇನ್ನು ಕನೆಕ್ಟಿವಿಟಿ ಸೌಲಭ್ಯಗಳಲ್ಲಿ 5G, NFC, GPS, USB ಟೈಪ್-C ಪೋರ್ಟ್, ಬ್ಲೂಟೂತ್ 5.3, ಮತ್ತು Wi-Fi 6 ಅನ್ನು ಕಾಣಬಹುದಾಗಿದೆ.

Best Mobiles in India

English summary
Biggest Price Drop on Infinix Zero 30 5G on flipkart website. offer price and more.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+