Home
ಸುದ್ದಿಜಾಲ

ಹೊಸ ಐಫೋನ್‌ ಖರೀದಿಸುವ ಪ್ಲ್ಯಾನ್‌ ಇದ್ರೆ, ಈ ಆಫರ್‌ ಬೆಸ್ಟ್‌!

ದೈತ್ಯ ಇ ಕಾಮರ್ಸ್‌ ಪ್ಲಾಟ್‌ಫಾರ್ಮ್ ಆಗಿ ಗುರುತಿಸಿಕೊಂಡಿರುವ ಫ್ಲಿಪ್‌ಕಾರ್ಟ್‌ ಒಂದಿಲ್ಲೊಂದು ಆಫರ್‌ ಮೂಲಕ ಗ್ರಾಹಕರನ್ನು ಸೆಳೆಯುತ್ತ ಸಾಗಿದೆ. ಸದ್ಯ ಆಪಲ್‌ ಐಫೋನ್‌ಗಳಿಗೆ ಭರ್ಜರಿ ರಿಯಾಯಿತಿ ಲಭ್ಯ ಮಾಡಿದ್ದು, ಹೊಸ ಐಫೋನ್‌ ಖರೀದಿಸುವ ಗ್ರಾಹಕರಿಗೆ ಭಾರೀ ಖುಷಿ ನೀಡಿದೆ.

ಹೌದು, ಇ-ಕಾಮರ್ಸ್ ಪ್ಲಾಟ್‌ಫಾರ್ಮ್‌ ಫ್ಲಿಪ್‌ಕಾರ್ಟ್‌ ತಾಣದಲ್ಲಿ ಐಫೋನ್‌ 13 ಫೋನ್‌ 16% ರಷ್ಟು ರಿಯಾಯಿತಿ ಬೆಲೆಯಲ್ಲಿ ಖರೀದಿಗೆ ಲಭ್ಯ ಇದೆ. ಈ ಫೋನಿನ 128 GB ಸ್ಟೋರೇಜ್‌ ವೇರಿಯಂಟ್‌ ಬೆಲೆಯು 69,900ರೂ. ಆಗಿದ್ದು, ಫ್ಲಿಪ್‌ಕಾರ್ಟ್‌ ಆಫರ್‌ನಲ್ಲಿ ಗ್ರಾಹಕರು 58,499ರೂ. ಗಳಿಗೆ ಖರೀದಿ ಮಾಡಬಹುದಾಗಿದೆ.

ಹೊಸ ಐಫೋನ್‌ ಖರೀದಿಸುವ ಪ್ಲ್ಯಾನ್‌ ಇದ್ರೆ, ಈ ಆಫರ್‌ ಬೆಸ್ಟ್‌!

ಇನ್ನು ಐಫೋನ್‌ 13 ರೆಡ್‌, ಬ್ಲೂ, ಗ್ರೀನ್‌, ಮೀಡ್‌ನೈಟ್‌ ಬ್ಲ್ಯಾಕ್‌, ಪಿಂಕ್‌ ಹಾಗೂ ಸ್ಟಾರ್‌ಲೈಟ್‌ ಕಲರ್‌ ಆಯ್ಕೆಗಳನ್ನು ಪಡೆದಿದೆ. ಹಾಗೆಯೇ ಈ ಐಫೋನ್‌ 128GB, 256GB ಮತ್ತು 512GB ಸ್ಟೋರೇಜ್‌ ವೇರಿಯಂಟ್‌ ಆಯ್ಕೆಗಳನ್ನು ಪಡೆದುಕೊಂಡಿದೆ. ಇನ್ನುಳಿದಂತೆ ಐಫೋನ್‌ 13 ಇತರೆ ಫೀಚರ್ಸ್‌ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಐಫೋನ್ 13 ಪ್ರಮುಖ ಫೀಚರ್ಸ್‌ ಮಾಹಿತಿ : ಐಫೋನ್ 13 ಫೋನ್‌ 6.1 ಇಂಚಿನ ಡಿಸ್‌ಪ್ಲೇ ಅನ್ನು ಹೊಂದಿದ್ದು, ಜೊತೆಗೆ ಉತ್ತಮ ಪಿಕ್ಸಲ್ ರೆಸಲ್ಯೂಶನ್ ಪಡೆದುಕೊಂಡಿದೆ. ಇದರ ಜೊತೆಗೆ 1200 ನಿಟ್ಸ್‌ ಬ್ರೈಟ್ನೆಸ್‌ ಸಪೋರ್ಟ್‌ ಒಳಗೊಂಡಿದೆ. ಹಾಗೆಯೇ ಈ ಐಫೋನ್‌ A15 ಬಯೋನಿಕ್ ಸೋಕ್ ಕ್ವಾಡ್‌ ಕೋರ್ ಪ್ರೊಸೆಸರ್‌ ಸಾಮರ್ಥ್ಯವನ್ನು ಸಹ ಹೊಂದಿದ್ದು, 5G ಅನ್ನು ಸಪೋರ್ಟ್ ಮಾಡುತ್ತದೆ.

ಇನ್ನು ಐಫೋನ್ 13 ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ರಚನೆ ಅನ್ನು ಪಡೆದುಕೊಂಡಿದ್ದು, ಆ ಪೈಕಿ ಪ್ರಾಥಮಿಕ ಕ್ಯಾಮೆರಾ 12 ಮೆಗಾ ಪಿಕ್ಸೆಲ್ ಅಲ್ಟ್ರಾ ಸೆನ್ಸಾರ್ ಸಾಮರ್ಥ್ಯವನ್ನು ಹೊಂದಿದೆ. ಅದೇ ರೀತಿ ಸೆಕೆಂಡರಿ ಕ್ಯಾಮೆರಾ ಸಹ 12 ಮೆಗಾ ಪಿಕ್ಸಲ್ ವೈಲ್ಡ್‌ ಆಂಗಲ್ ಲೆನ್ಸ್‌ ಪಡೆದಿದೆ. ಯಾವುದೇ ಸಂದರ್ಭದಲ್ಲಿಯೂ ಅತ್ಯುತ್ತಮ ಫೋಟೊ ಸೆರೆಹಿಡಿಯಲು ಪೂರಕ ಸೌಲಭ್ಯ ಪಡೆದಿದೆ. ಅಲ್ಲದೇ ಸಿನಿಮ್ಯಾಟಿಕ್ ಮೋಡ್ ಆಯ್ಕೆ ಪಡೆದಿದೆ.

ಐಫೋನ್ 14 ಫೋನಿನ ಪ್ರಮುಖ ಫೀಚರ್ಸ್‌ ಮಾಹಿತಿ : ಈ ಐಫೋನ್‌ 6.1 ಇಂಚಿನ ಪೂರ್ಣ ಹೆಚ್‌ಡಿ+ ಡಿಸ್‌ಪ್ಲೇ ಅನ್ನು ಹೊಂದಿದ್ದು, 1200 nits ಬ್ರೈಟ್ನಸ್‌ ಬೆಂಬಲ ಅನ್ನು ಒಳಗೊಂಡಿದೆ. ಇದರ ಜೊತೆಗೆ ಇದು ಡ್ಯುಯಲ್ ಕ್ಯಾಮೆರಾ ರಚನೆಯನ್ನು ಪಡೆದಿದ್ದು, ಪ್ರಾಥಮಿಕ ಕ್ಯಾಮೆರಾವು 12 ಮೆಗಾ ಪಿಕ್ಸಲ್‌ ಸೆನ್ಸಾರ್‌ ಸಾಮರ್ಥ್ಯದಲ್ಲಿದೆ. ಇದರ ಜೊತೆಗೆ ಮುಂಭಾಗದಲ್ಲಿ 12 ಮೆಗಾ ಪಿಕ್ಸಲ್‌ನ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.

ಅಲ್ಲದೇ ಐಫೋನ್ 14 ಫೋನ್ ಮೂರು ಸ್ಟೋರೇಜ್‌ ಆಯ್ಕೆ ಪಡೆದಿದ್ದು, ಅವುಗಳು ಕ್ರಮವಾಗಿ, 128GB, 256GB ಮತ್ತು 512 GB ಸ್ಟೋರೇಜ್‌ ವೇರಿಯಂಟ್‌ ಆಯ್ಕೆಗಳು ಆಗಿವೆ. ಹಾಗೆಯೇ ಐಫೋನ್‌ 14 ಫೋನ್ 5G ಕನೆಕ್ಟಿವಿಟಿ ಸೌಲಭ್ಯ ಪಡೆದಿದ್ದು, ಇದು ಇ-ಸಿಮ್ ಆಯ್ಕೆಯ ಸಪೋರ್ಟ್‌ ಪಡೆದುಕೊಂಡಿದೆ.

ಐಫೋನ್ 14 ಪ್ಲಸ್‌ ಪ್ರಮುಖ ಫೀಚರ್ಸ್‌ ಮಾಹಿತಿ : ಐಫೋನ್ 14 ಪ್ಲಸ್‌ ಮೊಬೈಲ್‌ 6.7 ಇಂಚಿನ ಡಿಸ್‌ಪ್ಲೇ ಸಾಮರ್ಥ್ಯ ಅನ್ನು ಹೊಂದಿದ್ದು, ಜೊತೆಗೆ ಇದು OLED ಡಿಸ್‌ಪ್ಲೇ ಸಪೋರ್ಟ್ ಪಡೆದಿದೆ. ಡಿಸ್‌ಪ್ಲೇಯು 1200nits ಬ್ರೈಟ್ನಸ್‌ ಒಳಗೊಂಡಿದೆ. ಇನ್ನು ಈ ಫೋನ್ ಡ್ಯುಯಲ್ ಕ್ಯಾಮೆರಾ ರಚನೆಯನ್ನು ಒಳಗೊಂಡಿದ್ದು, ಮುಖ್ಯ ಕ್ಯಾಮೆರಾವು 12 ಮೆಗಾ ಪಿಕ್ಸಲ್‌ ಸೆನ್ಸಾರ್‌ ಸಾಮರ್ಥ್ಯದಲ್ಲಿದೆ.

ಅದೇ ರೀತಿ ಈ ಐಫೋನ್ ಮುಂಭಾಗದಲ್ಲಿ 12 ಮೆಗಾ ಪಿಕ್ಸಲ್‌ನ ಸೆಲ್ಫಿ ಕ್ಯಾಮೆರಾ ಅನ್ನು ಪಡೆದುಕೊಂಡಿದೆ. ಜೊತೆಗೆ ಇದು ಮೂರು ಸ್ಟೋರೇಜ್‌ ಮಾಡೆಲ್‌ಗಳ ಆಯ್ಕೆ ಹೊಂದಿದ್ದು, ಅವುಗಳು 128GB, 256GB ಮತ್ತು 512GB ಸ್ಟೋರೇಜ್‌ ಆಯ್ಕೆ ಆಗಿವೆ. ಅಲ್ಲದೇ ಈ ಫೋನ್ ದೀರ್ಘ ಬ್ಯಾಟರಿ ಸಾಮರ್ಥ್ಯವನ್ನು ಒಳಗೊಂಡಿದೆ.

Best Mobiles in India

English summary
Biggest Price Drop on iPhone 13 Amazon, check offer price, specifications and more details.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+