Home
ಸುದ್ದಿಜಾಲ

ಬಜೆಟ್‌ ದರದ ಈ ಮೊಬೈಲ್‌ ಬೆಲೆಯಲ್ಲಿ ಆಕರ್ಷಕ ಇಳಿಕೆ! ಗ್ರಾಹಕರಿಗೆ ಖುಷಿ!

ಫ್ಲಿಪ್‌ಕಾರ್ಟ್‌ ಇ-ಕಾಮರ್ಸ್‌ ತಾಣದಲ್ಲಿ ಮೊಬೈಲ್‌ಗಳಿಗೆ ಕೊಡುಗೆ ಇದ್ದೆ ಇರುತ್ತದೆ. ಸದ್ಯ ರಿಯಲ್‌ಮಿ P1 (realme P1 5G) ಮೊಬೈಲ್‌ ಅತ್ಯುತ್ತಮ ಡಿಸ್ಕೌಂಟ್‌ ಬೆಲೆಯಲ್ಲಿ ಭರ್ಜರಿ ಇಳಿಕೆ ಕಂಡಿದೆ. ಅಲ್ಲದೇ ಈ ಫೋನ್‌ ಖರೀದಿಸುವ ಗ್ರಾಹಕರು ಬ್ಯಾಂಕ್‌ ಆಫರ್‌ ಮೂಲಕ ಮತ್ತಷ್ಟು ಡಿಸ್ಕೌಂಟ್‌ ಪಡೆಯಬಹುದು. ಈ ಫೋನ್‌ 50 ಮೆಗಾಪಿಕ್ಸೆಲ್‌ ಸೆನ್ಸಾರ್‌ ಕ್ಯಾಮೆರಾ ಪಡೆದಿದ್ದು, 5000mAh ಸಾಮರ್ಥ್ಯದ ಬ್ಯಾಟರಿ ಪಡೆದಿದೆ. ಬನ್ನಿ, ಈ ಫೋನಿನ ಹೊಸ ಬೆಲೆ ಮತ್ತು ಆಫರ್‌ಗಳನ್ನು ತಿಳಿಯೋಣ.

ಹೌದು, ದಿಗ್ಗಜ ಇ-ಕಾಮರ್ಸ್‌ ಫ್ಲಿಪ್‌ಕಾರ್ಟ್‌ ತಾಣದಲ್ಲಿ ರಿಯಲ್‌ಮಿ P1 5G (realme P1 5G) ಫೋನ್‌ ಶೇ. 28% ರಷ್ಟು ನೇರ ರಿಯಾಯಿತಿ ಪಡೆದಿದೆ. ಈ ಫೋನಿನ 6GB RAM + 128GB ಸ್ಟೋರೇಜ್‌ ವೇರಿಯಂಟ್‌ ಅನ್ನು ಖರೀದಿದಾರರು 14,999 ರೂ. ಗಳ ಆಫರ್‌ ದರದಲ್ಲಿ ಖರೀದಿ ಮಾಡಲು ಅವಕಾಶ ಇದೆ. ಅಲ್ಲದೇ ಹೆಚ್ಚುವರಿಯಾಗಿ ಆಯ್ದ ಬ್ಯಾಂಕ್‌ಗಳ ಡಿಸ್ಕೌಂಟ್‌ ಪಡೆದುಕೊಂಡರೆ, ಮತ್ತಷ್ಟು ರಿಯಾಯಿತಿ ಪಡೆಯಬಹುದು.

ಬಜೆಟ್‌ ದರದ ಈ ಮೊಬೈಲ್‌ ಬೆಲೆಯಲ್ಲಿ ಆಕರ್ಷಕ ಇಳಿಕೆ! ಗ್ರಾಹಕರಿಗೆ ಖುಷಿ!

ಅಲ್ಲದೇ ರಿಯಲ್‌ಮಿ P1 5G ಮೊಬೈಲ್‌ ಡ್ಯುಯಲ್‌ ಕ್ಯಾಮೆರಾ ರಚನೆ ಪಡೆದಿದ್ದು, 50 ಮೆಗಾಪಿಕ್ಸಲ್‌ ಫ್ರಾಥಮಿಕ ಕ್ಯಾಮೆರಾ ರಚನೆ ಸಹ ಒಳಗೊಂಡಿದೆ. ಹಾಗೆಯೇ ಇದು 5,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕಪ್‌ ಸೌಲಭ್ಯ ಪಡೆದಿದೆ. ಇನ್ನುಳಿದಂತೆ ರಿಯಲ್‌ಮಿ P1 ಸ್ಮಾರ್ಟ್‌ಫೋನ್‌ ಇತರೆ ಯಾವೆಲ್ಲಾ ಫೀಚರ್ಸ್‌ಗಳನ್ನು ಒಳಗೊಂಡಿದೆ ಎಂಬುದನ್ನು ತಿಳಿಯಲು ಮುಂದೆ ಓದಿ.

ರಿಯಲ್‌ಮಿ P1 5G ಫೀಚರ್ಸ್‌ ಹೀಗಿವೆ

ಡಿಸ್ಪ್ಲೇ ವಿವರ

ರಿಯಲ್‌ಮಿ P1 ಮೊಬೈಲ್ 6.67 ಇಂಚಿನ ಅಮೋಲೆಡ್‌ ಪೂರ್ಣ ಹೆಚ್‌ಡಿ ಪ್ಲಸ್ ಡಿಸ್ಪ್ಲೇ ಹೊಂದಿದೆ. ಇದು 120 Hz ರಿಫ್ರೆಶ್ ದರದ ಬೆಂಬಲ ಪಡೆದಿದೆ. ಹಾಗೆಯೇ ಇದು 2,000 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್‌ ಹೊಂದಿದೆ.

ಪ್ರೊಸೆಸರ್‌ ಸಾಮರ್ಥ್ಯ

ರಿಯಲ್‌ಮಿ P1 ಫೋನ್ ಮೀಡಿಯಾ ಟೆಕ್ ಡೈಮೆನ್ಸಿಟಿ 7050 ಪ್ರೊಸೆಸರ್‌ನಲ್ಲಿ ಕೆಲಸ ನಿರ್ವಹಿಸಲಿದೆ. ಈ ಫೋನ್ 8GB RAM ಮತ್ತು 256GB ಆಂತರಿಕ ಸ್ಟೋರೇಜ್ ಆಯ್ಕೆ ಪಡೆದಿದೆ.

ಕ್ಯಾಮೆರಾ ಸೆಟಪ್

ರಿಯಲ್‌ಮಿ P1 ಸ್ಮಾರ್ಟ್‌ಫೋನ್ ಆಪ್ಟಿಕಲ್ ಇಮೇಜ್ ಸ್ಟೆಬಿಲೈಸೇಶನ್ ಜೊತೆಗೆ 50 ಮೆಗಾಪಿಕ್ಸೆಲ್ ಪ್ರಾಥಮಿಕ ಕ್ಯಾಮೆರಾ ಹೊಂದಿದೆ. ಮತ್ತು 2 ಮೆಗಾಪಿಕ್ಸೆಲ್ ತೃತೀಯ ಸೆನ್ಸರ್‌ ನೊಂದಿಗೆ 8 ಮೆಗಾಪಿಕ್ಸೆಲ್ ಅಲ್ಟ್ರಾವೈಡ್ ಸೆನ್ಸರ್‌ ಈ ಫೋನ್‌ನಲ್ಲಿದೆ.

ಬ್ಯಾಟರಿ ಮತ್ತು ಚಾರ್ಜಿಂಗ್

ರಿಯಲ್‌ಮಿ P1 ಫೋನ್ 5000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಈ ಬ್ಯಾಟರಿಯನ್ನು ಚಾರ್ಜ್‌ ಮಾಡಲು, 45W ವೇಗದ ಚಾರ್ಜಿಂಗ್ ಸೌಲಭ್ಯ ಒದಗಿಸಲಾಗಿದೆ.

ರಿಯಲ್‌ಮಿ P1 ಪ್ರೊ ಫೀಚರ್ಸ್‌ ಹೀಗಿವೆ

ರಿಯಲ್‌ಮಿ P1 ಪ್ರೊ ಮೊಬೈಲ್‌ 6.67 ಇಂಚಿನ ಅಮೋಲೆಡ್‌ ಕರ್ವ್‌ ಡಿಸ್‌ಪ್ಲೇ ಹೊಂದಿದ್ದು, ಇದು 120 Hz ರಿಫ್ರೆಶ್ ರೇಟ್‌ ಆಯ್ಕೆ ಪಡೆದಿದ್ದು, ಸ್ನಾಪ್‌ಡ್ರಾಗನ್ 6 ಜನ್ 1 ಪ್ರೊಸೆಸರ್‌ ಬಲ ಪಡೆದಿದೆ. ಹಾಗೆಯೇ 12 GB RAM ಮತ್ತು 256 GB ಸ್ಟೋರೇಜ್‌ ಆಯ್ಕೆಯಲ್ಲಿ ಲಭ್ಯ ಇದ್ದು, ಆಂಡ್ರಾಯ್ಡ್‌ 14 ಆಧಾರಿತ ರಿಯಲ್‌ಮಿ UI 5 ಅನ್ನು ರನ್‌ ಮಾಡಲಿದೆ.

ಇದರ ಜೊತೆಗೆ ರಿಯಲ್‌ಮಿ P1 ಪ್ರೊ ಫೋನ್ 50 ಮೆಗಾಪಿಕ್ಸೆಲ್ OIS ಸಕ್ರಿಯಗೊಳಿಸಿದ ಪ್ರಾಥಮಿಕ ಸೆನ್ಸರ್‌ ಜೊತೆಗೆ 8 ಮೆಗಾಪಿಕ್ಸೆಲ್ ಮತ್ತು 2 ಮೆಗಾಪಿಕ್ಸೆಲ್ ಸೆಕೆಂಡರಿ ಮತ್ತು ತೃತೀಯ ಸೆನ್ಸರ್‌ ಅನ್ನು ಈ ಫೋನ್‌ ಪಡೆದಿದೆ. ಅಲ್ಲದೆ ಈ ಫೋನ್ ಸಹ 45W ವೇಗದ ಚಾರ್ಜಿಂಗ್ ಬೆಂಬಲದೊಂದಿಗೆ 5,000mAh ಸಾಮರ್ಥ್ಯದ ಬ್ಯಾಟರಿಯಲ್ಲಿ ಹೊಂದಿದೆ.

Best Mobiles in India

English summary
Biggest price cut on realme P1 5G on flipkart website. check out offers, specifications and more.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+