ನೀವು ಬೇಡ ಅಂದ್ರೂ ಈ ಆಫರ್ ಲಭ್ಯ!..ಈ ರೆಡ್ಮಿ ಫೋನ್ ಬೆಲೆಯಲ್ಲಿ ಭಾರೀ ಡಿಸ್ಕೌಂಟ್!
ಪ್ರಮುಖ ಆನ್‌ಲೈನ್ ಶಾಪಿಂಗ್ ಪ್ಲಾಟ್‌ಫಾರ್ಮ್ ಆಗಿ ಗುರುತಿಸಿಕೊಂಡಿರುವ ಫ್ಲಿಪ್‌ಕಾರ್ಟ್ ಎಲ್ಲ ವಿಭಾಗದ ಉತ್ಪನ್ನಗಳಿಗೆ ಡಿಸ್ಕೌಂಟ್ ನೀಡುತ್ತದೆ. ಅದರಲ್ಲಿಯೂ ಮುಖ್ಯವಾಗಿ ಮೊಬೈಲ್‌ಗಳಿಗೆ ಒಂದಿಲ್ಲೊಂದು ವಿಶೇಷ ರಿಯಾಯಿತಿ ನೀಡಿ ಗಮನ ಸೆಳೆಯುತ್ತದೆ. ಹೀಗೆ ಸದ್ಯ ಫ್ಲಿಪ್‌ಕಾರ್ಟ್ ತಾಣದಲ್ಲಿ ಶಿಯೋಮಿ ಸಂಸ್ಥೆಯ ರೆಡ್ಮಿ 12 (REDMI 12) ಮೊಬೈಲ್ ಆಕರ್ಷಕ ರಿಯಾಯಿತಿ ಪಡೆದಿದ್ದು, ಎಂಟ್ರಿ ಲೆವೆಲ್ ವಿಭಾಗದಲ್ಲಿ ಹೊಸ ಫೋನ್ ಖರೀದಿಸುವವರ ಗ್ರಾಹಕರು ಕಣ್ಣರಳಿಸಿ ನೋಡುವಂತೆ ಮಾಡಿದೆ.
ಹೌದು, ಫ್ಲಿಪ್‌ಕಾರ್ಟ್ ತಾಣದಲ್ಲಿ ಇದೀಗ ರೆಡ್ಮಿ 12 (REDMI 12) ಫೋನ್ ಶೇ. 50% ರಷ್ಟು ನೇರ ಡಿಸ್ಕೌಂಟ್ ಬೆಲೆಯಲ್ಲಿ ಕಾಣಿಸಿಕೊಂಡಿದೆ. ಈ ಮೊಬೈಲ್‌ನ 6GB RAM + 128 GB ಸ್ಟೋರೇಜ್ ವೇರಿಯಂಟ್ ಆಫರ್‌ನಲ್ಲಿ 7,999ರೂ. ಗಳ ಪ್ರೈಸ್‌ಟ್ಯಾಗ್‌ನಲ್ಲಿ ಖರೀದಿಗೆ ಲಭ್ಯ ಇದೆ. ಅಲ್ಲದೇ ಹೆಚ್ಚುವರಿಯಾಗಿ ಕೆಲವು ಆಯ್ದ ಬ್ಯಾಂಕ್‌ಗಳಿಂದ ಡಿಸ್ಕೌಂಟ್ ಸಹ ಪಡೆಯಲು ಅವಕಾಶ ಇದೆ

ಹಾಗೆಯೇ ಶಿಯೋಮಿಯ ರೆಡ್ಮಿ 12 ಫೋನ್ 5,000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಸೌಲಭ್ಯ ಪಡೆದಿದೆ. ಅಲ್ಲದೇ 4GB + 128 GB, 6GB + 128 GB ಹಾಗೂ 8GB + 256 GB ಸ್ಟೋರೇಜ್ ವೇರಿಯಂಟ್ ಆಯ್ಕೆಗಳನ್ನು ಪಡೆದಿದೆ. ಇನ್ನುಳಿದಂತೆ ರೆಡ್ಮಿ 12 ಫೋನ್ ಇತರೆ ಫೀಚರ್ಸ್‌ಗಳ ಬಗ್ಗೆ ತಿಳಿಯಲು ಮುಂದೆ ಓದಿರಿ.
ರೆಡ್ಮಿ 12 ಮೊಬೈಲ್ - ಫೀಚರ್ಸ್
ರೆಡ್ಮಿ 12 ಫೋನ್ 6.79 ಇಂಚಿನ FHD ಡಿಸ್‌ಪ್ಲೇ ಪಡೆದಿದ್ದು, 90 Hz ನ ರಿಫ್ರೆಶ್ ರೇಟ್ ಸೌಲಭ್ಯವನ್ನು ಸಹ ಒಳಗೊಂಡಿದೆ. ಇದರ ಜೊತೆಗೆ 1080 X 2400 ಪಿಕ್ಸೆಲ್‌ನ ಸ್ಕ್ರೀನ್ ರೆಸಲ್ಯೂಶನ್ ಹಾಗೂ 240Hz ಟಚ್ ಮಾದರಿ ರೇಟ್ ಆಯ್ಕೆ ಯಾವುದೇ ವಿಡಿಯೋ ವೀಕ್ಷಣೆ ಹಾಗೂ ಗೇಮಿಂಗ್ ಸಂದರ್ಭದಲ್ಲಿ ಬಳಕೆದಾರರಿಗೆ ಉತ್ತಮ ಅನುಭವ ನೀಡಲಿದೆ.
ರೆಡ್ಮಿ 12 ಫೋನ್ ಉತ್ತಮ ಕಾರ್ಯಕ್ಷಮತೆಗಾಗಿ ಸ್ನಾಪ್‌ಡ್ರಾಗನ್ 4 ಜನ್ 2 ಚಿಪ್‌ಸೆಟ್ ಪ್ರೊಸೆಸರ್ ಪವರ್‌ನಲ್ಲಿ ಕೆಲಸ ನಿರ್ವಹಿಸಲಿದೆ. ಅದಕ್ಕೆ ಪೂರಕವಾಗಿ ಆಂಡ್ರಾಯ್ಡ್ 13 ಓಎಸ್ ಸಪೋರ್ಟ್ ಸಹ ಪಡೆದಿದೆ. ಹಾಗೆಯೇ ಈ ಫೋನ್ ಮೂರು ಸ್ಟೋರೇಜ್ ವೇರಿಯಂಟ್ ಆಯ್ಕೆ ಪಡೆದಿದ್ದು, ಅವು ಕ್ರಮವಾಗಿ 4GB + 128GB, 6GB + 128GB ಹಾಗೂ 8GB + 256GB ಆಗಿವೆ. ಅಲ್ಲದೇ 8GB RAM ನೊಂದಿಗೆ 8 GB ವರ್ಚುವಲ್ RAM ಆಯ್ಕೆ ಸಹ ಇದೆ.
ರೆಡ್ಮಿ 12 ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಪಡೆದಿದ್ದು, ಮುಖ್ಯ ಕ್ಯಾಮೆರಾವು 50 ಮೆಗಾ ಪಿಕ್ಸೆಲ್ ಪ್ರೈಮರಿ ಶೂಟರ್ ಹೊಂದಿದೆ. ಸೆಕೆಂಡರಿ ಕ್ಯಾಮೆರಾವು 2 ಮೆಗಾ ಪಿಕ್ಸೆಲ್ ಡೆಪ್ತ್ ಸೆನ್ಸಾರ್ ಆಯ್ಕೆ ಪಡೆದಿದೆ. ಇದರ ಜೊತೆಗೆ ಸೆಲ್ಫಿ ಮತ್ತು ವಿಡಿಯೋ ಕರೆಗಳಿಗಾಗಿ ಈ ಮೊಬೈಲ್ ಮುಂಭಾಗದಲ್ಲಿ 8 ಮೆಗಾ ಪಿಕ್ಸೆಲ್ ಕ್ಯಾಮೆರಾವನ್ನು ಸಹ ಪಡೆದುಕೊಂಡಿದೆ.
ರೆಡ್ಮಿ 12 ಫೋನ್ 5,000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಆಯ್ಕೆ ಅನ್ನು ಪಡೆದುಕೊಂಡಿದ್ದು, ಇದಕ್ಕೆ ಪೂರಕವಾಗಿ 18W ಫಾಸ್ಟ್ ಚಾರ್ಜಿಂಗ್ ಸಪೋರ್ಟ್ ಅನ್ನು ಪಡೆದಿದೆ. ಇದರ ಜೊತೆಗೆ ಈ ಫೋನ್ ಆಂಡ್ರಾಯ್ಡ್ 13 ಅನ್ನು ಸಾಮರ್ಥ್ಯದಲ್ಲಿ ಕೆಲಸ ಮಾಡಲಿದ್ದು, IP53 ರೇಟಿಂಗ್ ಪಡೆದುಕೊಂಡಿದ್ದು, ಧೂಳು ನಿರೋಧಕವಾಗಿದೆ. ಇನ್ನು ಗ್ರಾಹಕರು ಈ ಫೋನ್ ಅನ್ನು ಸಿಲ್ವರ್, ಬ್ಲ್ಯಾಕ್ ಹಾಗೂ ಬ್ಲೂ ಕಲರ್ ಆಯ್ಕೆಗಳಲ್ಲಿ ಖರೀದಿಗೆ ಲಭ್ಯ.


Click it and Unblock the Notifications