Home
ಸುದ್ದಿಜಾಲ

ವಿವೋ T2x 5G ಫೋನ್‌ ಬೆಲೆಯಲ್ಲಿ ಇಳಿಕೆ; ಆಫರ್‌ ಬೆಲೆ ತಿಳಿದ್ರೆ ವಾವ್‌ ಅಂತೀರಾ!

ಆಕರ್ಷಕ ಕೊಡುಗೆಗಳನ್ನು ಘೋಷಿಸುವ ಮೂಲಕ ಫ್ಲಿಪ್‌ಕಾರ್ಟ್‌ ಇ ಕಾಮರ್ಸ್‌ ಪ್ಲಾಟ್‌ಫಾರ್ಮ್‌ ಆನ್‌ಲೈನ್‌ ಶಾಪಿಂಗ್‌ ಪ್ರಿಯ ಗ್ರಾಹಕರನ್ನು ಸೆಳದಿದೆ. ಈ ಪ್ಲಾಟ್‌ಫಾರ್ಮ್ ಎಲ್ಲ ವಸ್ತುಗಳಿಗೂ ಒಂದಿಲ್ಲೊಂದು ರಿಯಾಯಿತಿ ಲಭ್ಯ ಮಾಡಿರುತ್ತದೆ. ಇನ್ನು ಮುಖ್ಯವಾಗಿ ಸ್ಮಾರ್ಟ್‌ಫೋನ್‌ಗಳಿಗೂ ಕೂಡಾ ಬೊಂಬಾಟ್‌ ಡಿಸ್ಕೌಂಟ್‌ ಕೊಡುಗೆಗಳನ್ನು ನೀಡುವ ಮೂಲಕ ಗ್ರಾಹಕರನ್ನು ಆಕರ್ಷಿಸುತ್ತದೆ. ಇದೀಗ ವಿವೋ (vivo) ಮೊಬೈಲ್‌ ಸಂಸ್ಥೆಯ ವಿವೋ T2x 5G ಮೊಬೈಲ್‌ ಫ್ಲಿಪ್‌ಕಾರ್ಟ್‌ ತಾಣದಲ್ಲಿ ಸಖತ್ ರಿಯಾಯಿತಿ ಬೆಲೆಯಲ್ಲಿ ಕಾಣಿಸಿಕೊಂಡಿದ್ದು, ಗ್ರಾಹಕರು OMG ಎನ್ನುವಂತೆ ಮಾಡಿದೆ.

ಹೌದು, ಇ ಕಾಮರ್ಸ್‌ ದೊಡ್ಡಣ್ಣ ಎನಿಸಿರುವ ಫ್ಲಿಪ್‌ಕಾರ್ಟ್‌ ವೆಬ್‌ಸೈಟ್‌ನಲ್ಲಿ ವಿವೋ T2x 5G ಮೊಬೈಲ್‌ ಶೇ. 21% ರಷ್ಟು ರಿಯಾಯಿತಿ ಬೆಲೆಯಲ್ಲಿ ಖರೀದಿಗೆ ಲಭ್ಯ ಇದೆ. ಈ ಮೊಬೈಲ್‌ 6 GB RAM + 128 GB ವೇರಿಯಂಟ್‌ ಫೋನ್‌ ಅನ್ನು 14,999 ರೂ. ಗಳ ಡಿಸ್ಕೌಂಟ್‌ ಬೆಲೆಯಲ್ಲಿ ಖರೀದಿ ಮಾಡಲು ಅವಕಾಶ ಇದೆ. ಇದಲ್ಲದೇ ಈ ಮೊಬೈಲ್‌ಗೆ ಕೆಲವು ಆಯ್ದ ಬ್ಯಾಂಕ್‌ ಆಫರ್‌ ಸಹ ಲಭ್ಯ ದೊರೆಯುತ್ತವೆ.

ವಿವೋ T2x 5G ಫೋನ್‌ ಬೆಲೆಯಲ್ಲಿ ಇಳಿಕೆ; ಆಫರ್‌ ಬೆಲೆ ತಿಳಿದ್ರೆ ವಾವ್‌ ಅಂತೀರಾ!

ವಿವೋ T2x 5G ಮೊಬೈಲ್‌ನ ಮೊದಲ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದಲ್ಲಿ ಇದ್ದು, ಇದರೊಂದಿಗೆ 5,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಸೌಲಭ್ಯ ಪಡೆದಿದೆ. ಹಾಗೆಯೇ ಇದು ಮೀಡಿಯಾ ಟೆಕ್ ಡೈಮೆನ್ಸಿಟಿ 6020 SoC ಪ್ರೊಸೆಸರ್‌ ಸಾಮರ್ಥ್ಯದಲ್ಲಿ ಕಾರ್ಯ ನಿರ್ವಹಿಸಲಿದೆ. ಹಾಗಾದರೇ ವಿವೋ T2x 5G ಮೊಬೈಲ್‌ನ ಇತರೆ ಫೀಚರ್ಸ್‌ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ವಿವೋ T2x 5G - ಫೀಚರ್ಸ್‌ ಮಾಹಿತಿ

ವಿವೋ T2x 5G ಮೊಬೈಲ್‌ 6.58 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇ ಅನ್ನು ಹೊಂದಿದೆ. ಹಾಗೆಯೇ ಈ ಫೋನ್‌ ಮೀಡಿಯಾ ಟೆಕ್ ಡೈಮೆನ್ಸಿಟಿ 6020 SoC ಪ್ರೊಸೆಸರ್‌ ಪವರ್‌ ನಲ್ಲಿ ಕಾರ್ಯ ನಿರ್ವಹಿಸಲಿದ್ದು, ಆಂಡ್ರಾಯ್ಡ್‌ 13 ಓಎಸ್‌ ಸಪೋರ್ಟ್‌ ಕೂಡಾ ಪಡೆದಿದೆ.

ವಿವೋ T2x 5G ಮೊಬೈಲ್‌ 8 GB RAM ಮತ್ತು 128 GB ಆಂತರೀಕ ಸ್ಟೋರೇಜ್‌ ಅನ್ನು ಒಳಗೊಂಡಿದೆ. ಇದಲ್ಲದೆ ( SD ) ಮೆಮೊರಿ ಕಾರ್ಡ್‌ ಮೂಲಕ 1 TB ವರೆಗೆ ಬಾಹ್ಯ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸುವುದಕ್ಕೆ ಅವಕಾಶವನ್ನು ಒದಗಿಸಲಾಗಿದೆ. ಇದರ ಜೊತೆಗೆ ಈ ಮೊಬೈಲ್‌ RAM 3.0 ಫೀಚರ್ಸ್‌ ಅನ್ನು ಕೂಡ ಪಡೆದಿದೆ.

ವಿವೋ T2x 5G ಮೊಬೈಲ್‌ ಡ್ಯುಯಲ್ ರಿಯರ್‌ ಕ್ಯಾಮೆರಾ ರಚನೆ ಅನ್ನು ಪಡೆದುಕೊಂಡಿದ್ದು, ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸಾರ್‌ ಅನ್ನು ಪಡೆದಿದೆ. ಇದಲ್ಲದೆ 8 ಮೆಗಾ ಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ.

ವಿವೋ T2x 5G ಮೊಬೈಲ್‌ 5,000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಅನ್ನು ಹೊಂದಿದ್ದು, 18W ಫಾಸ್ಟ್‌ ಚಾರ್ಜಿಂಗ್‌ ಅನ್ನು ಸಪೋರ್ಟ್‌ ಮಾಡಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್‌ ಸೌಲಭ್ಯ, ಬ್ಲೂಟೂತ್‌ ಆಯ್ಕೆ, ವೈಫೈ ಸೌಲಭ್ಯ, ಯುಎಸ್‌ಬಿ ಸಿ ಪೋರ್ಟ್‌ ಆಯ್ಕೆಗಳನ್ನು ಕೂಡಾ ಒಳಗೊಂಡಿದೆ.

ಭಾರತೀಯ ಮೊಬೈಲ್‌ ಮಾರುಕಟ್ಟೆಯಲ್ಲಿ ವಿವೋ T2x 5G ಫೋನ್‌ 4 GB + 128 GB, 6 GB + 128 GB ಹಾಗೂ 8 GB + 128 GB ವೇರಿಯಂಟ್‌ ಆಯ್ಕೆಗಳಲ್ಲಿ ಖರೀದಿಗೆ ಲಭ್ಯ ಇದೆ. ಇನ್ನು ಈ ಫೋನ್‌ ಬ್ಲ್ಯಾಕ್‌, ಬ್ಲೂ ಹಾಗೂ ಗೋಲ್ಡ್‌ ಕಲರ್ ಆಯ್ಕೆಯಲ್ಲಿ ಖರೀದಿಗೆ ಲಭ್ಯ.

Best Mobiles in India

English summary
Biggest Price Drop on vivo T2x 5G Phone on Flipkart website. check out Offer Price and more details.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+