ಬ್ಲೂ ಬೋಲ್ಡ್ N2 ಸ್ಮಾರ್ಟ್‌ಫೋನ್ ಬಿಡುಗಡೆ! ಏನೆಲ್ಲಾ ಫೀಚರ್ಸ್ ಲಭ್ಯ!
ಟೆಕ್ ಮಾರುಕಟ್ಟೆಯಲ್ಲಿ ವೈವಿಧ್ಯಮಯ ಸ್ಮಾರ್ಟ್‌ಫೋನ್‌ಗಳು ಸದ್ದು ಮಾಡುತ್ತಿವೆ. ಇವುಗಳಲ್ಲಿ ಕೆಲವು ಕಂಪೆನಿಗಳ ಸ್ಮಾರ್ಟ್‌ಫೋನ್‌ಗಳು ತಮ್ಮ ಆಕರ್ಷಕ ವಿನ್ಯಾಸದ ಕಾರಣಕ್ಕೆ ಸಾಕಷ್ಟು ಗಮನಸೆಳೆಯುತ್ತವೆ. ಇದರಲ್ಲಿ ಬ್ಲೂ ಬೋಲ್ಡ್ ಕಂಪೆನಿಯ ಸ್ಮಾರ್ಟ್‌ಫೋನ್‌ಗಳು ಕೂಡ ಸೇರಿವೆ. ಬ್ಲೂ ಬೋಲ್ಡ್ ಕಂಪೆನಿ ತನ್ನ ಆಕರ್ಷಕ ಸ್ಮಾರ್ಟ್‌ಫೋನ್‌ಗಳಿಂದ ಗುರುತಿಸಿಕೊಂಡಿದೆ. ಸದ್ಯ ಇದೀಗ ತನ್ನ ಹೊಸ ಬ್ಲೂ ಬೋಲ್ಡ್ N2 ಸ್ಮಾರ್ಟ್‌ಫೋನ್ ಲಾಂಚ್ ಮಾಡಿದೆ. ಈ ಸ್ಮಾರ್ಟ್‌ಫೋನ್ ಮೀಡಿಯಾ ಟೆಕ್ ಡೈಮೆನ್ಸಿಟಿ 810 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ.

ಹೌದು, ಬ್ಲೂ ಬೋಲ್ಡ್ ಕಂಪೆನಿ ಹೊಸ ಬ್ಲೂ ಬೋಲ್ಡ್ N2 ಸ್ಮಾರ್ಟ್‌ಫೋನ್ ಲಾಂಚ್ ಮಾಡಿದೆ. ಇದು 6.6 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಅಮೋಲೆಡ್ ಡಿಸ್‌ಪ್ಲೇಯನ್ನು ಒಳಗೊಂಡಿದೆ. ಈ ಸ್ಮಾರ್ಟ್‌ಫೋನ್ ಕ್ವಾಡ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಒಳಗೊಂಡಿದೆ. ಜೊತೆಗೆ 8GB RAM ಮತ್ತು 256GB ಇಂಟರ್ ಸ್ಟೋರೇಜ್ ಅನ್ನು ಪಡೆದುಕೊಂಡಿದೆ. ಹಾಗೆಯೇ ಈ ಸ್ಮಾರ್ಟ್‌ಫೋನ್ 4,200mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್ ವಿಶೇಷತೆ ಏನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ
ಬ್ಲೂ ಬೋಲ್ಡ್ N2 ಸ್ಮಾರ್ಟ್‌ಫೋನ್ 6.6 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಅಮೋಲೆಡ್ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 1,080x2,340 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಈ ಡಿಸ್‌ಪ್ಲೇ 393ppi ಪಿಕ್ಸೆಲ್ ಸಾಂದ್ರತೆಯನ್ನು ಒಳಗೊಂಡಿದೆ. ಇದು ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 5 ಪ್ರೊಟೆಕ್ಷನ್ ಅನ್ನು ಒಳಗೊಂಡಿದೆ.

ಪ್ರೊಸೆಸರ್ ಯಾವುದು?
ಬ್ಲೂ ಬೋಲ್ಡ್ N2 ಸ್ಮಾರ್ಟ್‌ಫೋನ್ ಆಕ್ಟಾ-ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 810 SoC ಪ್ರೊಸೆಸರ್ ಬಲವನ್ನು ಪಡೆದುಕೊಂಡಿದೆ. ಇದು ಆಂಡ್ರಾಯ್ಡ್ 11 ಔಟ್-ಆಫ್-ದಿ-ಬಾಕ್ಸ್‌ನಲ್ಲಿ ಕಾರ್ಯನಿರ್ವಹಿಸುತ್ತದೆ. ಹಾಗೆಯೇ 8GB RAM ಮತ್ತು 256GB ಇಂಟರ್ ಸ್ಟೋರೇಜ್ ಅನ್ನು ಒಳಗೊಂಡಿದೆ. ಇದು ಮೆಮೊರಿ ಕಾರ್ಡ್ ಅನ್ನು ಬೆಂಬಲಿಸುವುದರ ಬಗ್ಗೆ ಯಾವುದೇ ಮಾಹಿತಿ ಲಭ್ಯವಿಲ್ಲ.

ಕ್ಯಾಮೆರಾ ಸೆಟ್‌ಅಪ್ ಎಷ್ಟು?
ಬ್ಲೂ ಬೋಲ್ಡ್ N2 ಸ್ಮಾರ್ಟ್‌ಫೋನ್ ಕ್ವಾಡ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸಾರ್, ಮೂರನೇ ಕ್ಯಾಮೆರಾ 5 ಮೆಗಾಪಿಕ್ಸೆಲ್ ವೈಡ್-ಆಂಗಲ್ ಲೆನ್ಸ್ ಮತ್ತು ನಾಲ್ಕನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಶೂಟರ್ ಅನ್ನು ಹೊಂದಿದೆ. ಇದಲ್ಲದೆ 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸರ್‌ನೊಂದಿಗೆ ಡ್ಯುಯಲ್ ಸೆಲ್ಫಿ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ.

ಬ್ಯಾಟರಿ ಮತ್ತು ಇತರೆ
ಬ್ಲೂ ಬೋಲ್ಡ್ N2 ಸ್ಮಾರ್ಟ್‌ಫೋನ್ 4,200mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 30W MAX ಕ್ವಿಕ್ ಚಾರ್ಜ್ ಬೆಂಬಲವನ್ನು ಒಳಗೊಂಡಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, ಬ್ಲೂಟೂತ್ v5.1, ಮತ್ತು Wi-Fi ಅನ್ನು ಬೆಂಬಲಿಸುತ್ತದೆ. ಇದು ಚಾರ್ಜಿಂಗ್‌ಗಾಗಿ ಯುಎಸ್‌ಬಿ ಟೈಪ್-ಸಿ ಪೋರ್ಟ್ ಅನ್ನು ಸಹ ಪಡೆಯುತ್ತದೆ. ಇದಲ್ಲದೆ ಇನ್-ಡಿಸ್ಪ್ಲೇ ಫಿಂಗರ್‌ಪ್ರಿಂಟ್ ಸ್ಕ್ಯಾನರ್ ಮತ್ತು AI ಫೇಸ್ ಐಡಿಯನ್ನು ಒಳಗೊಂಡಿದೆ.

ಬೆಲೆ ಮತ್ತು ಲಭ್ಯತೆ
ಸದ್ಯ ಯುಎಸ್‌ನಲ್ಲಿ ಬಿಡುಗಡೆಯಾಗಿರುವ ಈ ಸ್ಮಾರ್ಟ್‌ಫೋನ್ ಏಕೈಕ 8GB + 256GB ಸ್ಟೋರೇಜ್ ರೂಪಾಂತರದ ಆಯ್ಕೆಗೆ $249 (ಅಂದಾಜು 19,800ರೂ) ಬೆಲೆ ಹೊಂದಿದೆ. ಪ್ರಸ್ತುತ ಯುಎಸ್‌ನಲ್ಲಿ ಅಮೆಜಾನ್ ಮೂಲಕ ಲಭ್ಯವಿದೆ. ಇದು ಸೈಪ್ರಸ್ ಟೀಲ್ ಬಣ್ಣದ ಆಯ್ಕೆಯಲ್ಲಿ ಲಭ್ಯವಾಗಲಿದೆ. ಇನ್ನು ಈ ಫೋನ್ ಭಾರತ ಸೇರಿದಂತೆ ಇತರ ಮಾರುಕಟ್ಟೆಗಳಲ್ಲಿ ಯಾವಾಗ ಬಿಡುಗಡೆಯಾಗಲಿದೆ ಎಂಬುದರ ಬಗ್ಗೆ ಯಾವುದೇ ಮಾಹಿತಿಯನ್ನು ಬಹಿರಂಗಪಡಿಸಿಲ್ಲ.


Click it and Unblock the Notifications








