ಬೋಟ್ ಸಂಸ್ಥೆಯಿಂದ ಅತ್ಯಾಕರ್ಷಕ ಸ್ಮಾರ್ಟ್‌ವಾಚ್ ಬಿಡುಗಡೆ!..10 ದಿನಗಳ ಬ್ಯಾಟರಿ ಬ್ಯಾಕ್‌ಅಪ್!
ಬೋಟ್ ಕಂಪೆನಿ ಮ್ಯೂಸಿಕ್ ಆಕ್ಸಿಸರೀಸ್ ಮಾತ್ರವಲ್ಲದೇ ಸ್ಮಾರ್ಟ್‌ವಾಚ್ ಮಾರುಕಟ್ಟೆಯಲ್ಲಿ ಕೂಡ ಸೈ ಎನಿಸಿಕೊಂಡಿದೆ. ಸದ್ಯ ಇದೀಗ ಭಾರತದಲ್ಲಿ ಹೊಸ ಬೋಟ್ ವೇವ್ ಫ್ಲೆಕ್ಸ್ ಕನೆಕ್ಟ್ ಸ್ಮಾರ್ಟ್‌ವಾಚ್ ಬಿಡುಗಡೆ ಮಾಡಿದೆ. ಈ ಸ್ಮಾರ್ಟ್‌ವಾಚ್ ಮೆಟಲ್ ಬಾಡಿ ಮತ್ತು ಸಿಲಿಕೋನ್ ಪಟ್ಟಿಗಳೊಂದಿಗೆ ಬರಲಿದೆ.
ಹೌದು, ಬೋಟ್ ಕಂಪೆನಿ ಹೊಸ ಬೋಟ್ ವೇವ್ ಫ್ಲೆಕ್ಸ್ ಕನೆಕ್ಟ್ ಸ್ಮಾರ್ಟ್‌ವಾಚ್ ಪರಿಚಯಿಸಿದೆ. ಈ ಸ್ಮಾರ್ಟ್‌ವಾಚ್ ಬ್ಲಡ್ ಆಕ್ಸಿಜನ್ ಟ್ರ್ಯಾಕರ್, IP68 ರೇಟಿಂಗ್, ಬ್ಲೂಟೂತ್ ಕಾಲಿಂಗ್ ಮತ್ತು 10 ದಿನಗಳ ಬ್ಯಾಟರಿ ಅವಧಿಯನ್ನು ನೀಡಲಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ವಾಚ್ ಯಾವೆಲ್ಲಾ ಫೀಚರ್ಸ್ ಅನ್ನು ಹೊಂದಿರಲಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಬೋಟ್ ವೇವ್ ಫ್ಲೆಕ್ಸ್ ಕನೆಕ್ಟ್ ಸ್ಮಾರ್ಟ್ ವಾಚ್ ಫೀಚರ್ಸ್ ಹೇಗಿದೆ?
ಬೋಟ್ ವೇವ್ ಫ್ಲೆಕ್ಸ್ ಕನೆಕ್ಟ್ ಸ್ಮಾರ್ಟ್‌ವಾಚ್ 1.83 ಇಂಚಿನ HD ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 240x280 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಇನ್ನು ಡಿಸ್‌ಪ್ಲೇ 550 ನಿಟ್ಸ್ ಬ್ರೈಟ್‌ನೆಸ್ ಅನ್ನು ನೀಡಲಿದೆ. ಇದಲ್ಲದೆ ಸ್ಮಾರ್ಟ್‌ವಾಚ್ 2.5D ಕರ್ವ್‌ನೊಂದಿಗೆ ಗರಿಗರಿಯಾದ ಚಿತ್ರದ ಗುಣಮಟ್ಟವನ್ನು ಹೊಂದಿದೆ.
ಇನ್ನು ಸ್ಮಾರ್ಟ್‌ವಾಚ್ ಬ್ಲೂಟೂತ್ ಕಾಲಿಂಗ್ ಫೀಚರ್ಸ್ ಅನ್ನು ಪರಿಚಯಿಸಿದೆ. ಇದರಿಂದ ಬಳಕೆದಾರರಿಗೆ ಒಳಬರುವ ಮತ್ತು ಹೊರಹೋಗುವ ಕರೆಗಳನ್ನು ನಿಯಂತ್ರಿಸಲಿದೆ. ಜೊತೆಗೆ ಸ್ಮಾರ್ಟ್‌ವಾಚ್‌ನಲ್ಲಿ 10 ಕಂಟ್ಯಾಕ್ಟ್‌ಗಳನ್ನು ಸೇವ್ ಮಾಡಲು ಅನುಮತಿಸಲಿದೆ. ಈ ಸ್ಮಾರ್ಟ್ ವಾಚ್ ಮೈಕ್ರೊಫೋನ್ ಮತ್ತು ಸ್ಪೀಕರ್‌ನೊಂದಿಗೆ ಬರಲಿದೆ.

ಬೋಟ್ ವೇವ್ ಫ್ಲೆಕ್ಸ್ ಕನೆಕ್ಟ್ ಸ್ಮಾರ್ಟ್‌ವಾಚ್ ಸ್ಲಿಪಿಂಗ್ ಮತ್ತು ಬ್ಲಡ್ ಆಕ್ಸಿಜನ್ ಮಾನಿಟರ್‌ನೊಂದಿಗೆ ಬರಲಿದೆ. ಈ ಸ್ಮಾರ್ಟ್‌ವಾಚ್ 100 ಕ್ಲೌಡ್ ವಾಚ್ ಫೇಸ್‌ಗಳನ್ನು ಹೊಂದಿದ್ದು, ವಾಟರ್ ಪ್ರೂಫ್‌ಗಾಗಿ IP68 ರೇಟಿಂಗ್ ಅನ್ನು ಒಳಗೊಂಡಿದೆ. ಇನ್ನು ಸ್ಮಾರ್ಟ್ ವಾಚ್ 240mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 10 ದಿನಗಳ ಬ್ಯಾಟರಿ ಅವಧಿಯನ್ನು ನೀಡಲಿದೆ. ಇದನ್ನು ಕೇವಲ 2 ಗಂಟೆಗಳಲ್ಲಿ ಸಂಪೂರ್ಣವಾಗಿ ಚಾರ್ಜ್ ಮಾಡಬಹುದು ಎಂದು ಕಂಪನಿ ಹೇಳಿಕೊಂಡಿದೆ.

ಬೋಟ್ ವೇವ್ ಫ್ಲೆಕ್ಸ್ ಕನೆಕ್ಟ್ ಸ್ಮಾರ್ಟ್ ವಾಚ್ ಬೆಲೆ ಮತ್ತು ಲಭ್ಯತೆ
ಭಾರತದಲ್ಲಿ ಬೋಟ್ ವೇವ್ ಫ್ಲೆಕ್ಸ್ ಕನೆಕ್ಟ್ ಸ್ಮಾರ್ಟ್ ವಾಚ್ 1,799ರೂ. ಬೆಲೆಯಲ್ಲಿ ಬಿಡುಗಡೆಯಾಗಿದೆ. ಈ ಸ್ಮಾರ್ಟ್‌ವಾಚ್ ಆಕ್ಟಿವ್ ಬ್ಲಾಕ್, ಚೆರ್ರಿ ಬ್ಲಾಸಮ್ ಮತ್ತು ಡೀಪ್ ಬ್ಲೂ ಬಣ್ಣದ ರೂಪಾಂತರಗಳಲ್ಲಿ ಲಭ್ಯವಾಗಲಿದೆ. ಇನ್ನು ಈ ಸ್ಮಾರ್ಟ್‌ವಾಚ್ ಈಗ ಫ್ಲಿಪ್‌ಕಾರ್ಟ್ ಮತ್ತು ಕಂಪನಿಯ ಅಧಿಕೃತ ಸ್ಮಾರ್ಟ್‌ವಾಚ್‌ನಲ್ಲಿ ಖರೀದಿಗೆ ಲಭ್ಯವಿದೆ.
ಇನ್ನು ಬೋಟ್ ಕಂಪೆನಿ ಕಳೆದ ವರ್ಷ ಭಾರತದಲ್ಲಿ ಹೊಸ ಬೋಟ್ ಸ್ಟಾರ್ಮ್ ಪ್ರೊ ಕಾಲ್ ಸ್ಮಾರ್ಟ್‌ವಾಚ್ ಲಾಂಚ್ ಮಾಡಿದೆ. ಇದು 100 ಕ್ಲೌಡ್-ಆಧಾರಿತ ವಾಚ್ ಫೇಸ್‌ಗಳಿಗೆ ಬೆಂಬಲವನ್ನು ನೀಡಲಿದೆ. ಇನ್ನು ಈ ಸ್ಮಾರ್ಟ್‌ವಾಚ್ ಫ್ಲೂಯಿಡ್ UI ಮತ್ತು ASAP ಚಾರ್ಜ್ ವೇಗದ ಚಾರ್ಜಿಂಗ್ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಇದು ದಿನವಿಡೀ ನಿಮ್ಮ ಆಕ್ಟಿವಿಟಿಗಳನ್ನು ಟ್ರ್ಯಾಕ್ ಮಾಡುವ 700 ಕ್ಕೂ ಹೆಚ್ಚು ಆಕ್ಟಿವ್ ಮೋಡ್‌ಗಳನ್ನು ಹೊಂದಿದೆ

ಈ ಸ್ಮಾರ್ಟ್ ವಾಚ್‌ನಲ್ಲಿನ ಆರೋಗ್ಯ-ಸಂಬಂಧಿತ ಫೀಚರ್ಸ್‌ಗಳಿಗೂ ಕೂಡ ಪ್ರಾಮುಖ್ಯತೆ ನೀಡಲಾಗಿದೆ. ಅದರಂತೆ ಈ ಸ್ಮಾರ್ಟ್‌ವಾಚ್ 24x7 ಹೃದಯ ಬಡಿತದ ಮೇಲ್ವಿಚಾರಣೆ, ನೈಜ-ಸಮಯದ SpO2 ಟ್ರ್ಯಾಕಿಂಗ್, ನಿದ್ರೆಯ ಮೇಲ್ವಿಚಾರಣೆಯನ್ನು ಮಾಡಲಿದೆ. ಇದಲ್ಲದೆ ಬೋಟ್ ಸ್ಟಾರ್ಮ್ ಪ್ರೊ ಕಾಲ್ ನಿಮ್ಮ ಆಕ್ಟಿವಿಟಿಗಳನ್ನು ಟ್ರ್ಯಾಕ್ ಮಾಡುವ 700+ ಆಕ್ಟಿವ್ ಮೋಡ್‌ಗಳನ್ನು ಹೊಂದಿದೆ. ಇನ್ನು ಈ ಸ್ಮಾರ್ಟ್‌ವಾಚ್ ಧೂಳು ಮತ್ತು ನೀರಿನ ಪ್ರತಿರೋಧಕ್ಕಾಗಿ IP68 ರೇಟ್ ಅನ್ನು ಹೊಂದಿದೆ.


Click it and Unblock the Notifications








