Just In
Don't Miss
- News
ತಮಟೆ ಸದ್ದಿಗೆ ಮಾಜಿ ಶಾಸಕ ವೈಎಸ್ ವಿ ದತ್ತ ಸಖತ್ ಸ್ಟೆಪ್ಸ್
- Movies
ಭಾರತೀಯ ಪಾಸ್ಪೋರ್ಟ್ ಗೆ ಅರ್ಜಿ ಸಲ್ಲಿಸಿ ಬೇಸರ ಹೊರಹಾಕಿದ ಅಕ್ಷಯ್ ಕುಮಾರ್
- Finance
ತಿಂಗಳಲ್ಲಿ ಮೊದಲ ಬಾರಿಗೆ ಪೆಟ್ರೋಲ್ ಬೆಲೆಯಲ್ಲಿ ಇಳಿಕೆ
- Automobiles
ಗ್ರಾಹಕರ ಬೇಡಿಕೆಯೆಂತೆ 6, 7, 8 ಸೀಟರ್ ಸೌಲಭ್ಯದೊಂದಿಗೆ ಬರಲಿದೆ ಕಿಯಾ ಕಾರ್ನಿವಾಲ್
- Sports
ಭಾರತ vs ವಿಂಡೀಸ್: ಟೀಮ್ ಇಂಡಿಯಾದ ಮೇಲೆ ಗುಡುಗಿದ ಯುವರಾಜ!
- Education
ರೆಪ್ಕೊ ಬ್ಯಾಂಕ್ ನಲ್ಲಿ 15 ಹುದ್ದೆಗಳ ನೇಮಕಾತಿ
- Lifestyle
ರುದ್ರಾಕ್ಷಿ ಮಾಲೆ ಧರಿಸುವವರು ಗಮನಿಸಲೇಬೇಕಾದ ಅಂಶಗಳಿವು
- Travel
ಹಿಮಾಚಲ ಪ್ರದೇಶದ ಈ ಜಲಪಾತಗಳು ನಿಮ್ಮನ್ನು ಬೇರೊಂದು ರಮ್ಯಲೋಕಕ್ಕೆ ಕೊಂಡೊಯ್ಯುವುದು ಖಂಡಿತ
21ನೇ ವಯಸ್ಸಿಗೆ ಕೋಟ್ಯಾಧೀಶ್ವರ; ಸ್ವಂತ ಮನೆ, ಬಿಎಂಡಬ್ಲೂ ಒಡೆಯನಾದ ಬಡ ಯುವಕನ ಯಶೋಗಾಥೆ!!
ಹತ್ತನೇ ವಯಸ್ಸಿನಲ್ಲಿ ಆತನಿಗೆ ಉಡುಗೊರೆಯಾಗಿ ಸಿಕ್ಕಿದ್ದು ಒಂದು ಕಂಪ್ಯೂಟರ್ ಮಾತ್ರ. ಅಲ್ಲಿಂದ ಆತ ಯಾವತ್ತೂ ಸಹ ಜೀವನವನ್ನು ಹಿಂತಿರುಗಿ ನೋಡಲೇ ಇಲ್ಲ. ಏಕೆಂದರೆ, ಆ ಕಂಪ್ಯೂಟರ್ ಜೊತೆಗಿನ ಅವನ ಒಡನಾಟ ಮತ್ತು ಆತನ ಕಠಿಣ ಪರಿಶ್ರಮ ಇಂದು ಆತನನ್ನು ಕೋಟ್ಯಾಧಿಪತಿಯನ್ನಾಗಿಸಿದೆ. ಆತನ 21ನೇ ವಯಸ್ಸಿನ ವೇಳೆಗೆ ವಾರ್ಷಿಕ ಎರಡು ಕೋಟಿ ರೂಪಾಯಿ ಆದಾಯ ಹೊಂದಿರುವ ಕಂಪೆನಿಯ ಮಾಲಿಕನನ್ನಾಗಿಸಿದೆ ಎಂದರೆ ನೀವು ನಂಬಲೇಬೇಕು.!
ಹೌದು, ಇದು ಕೇರಳ ರಾಜ್ಯದ ಕಣ್ಣೂರಿನ ಹುಡುಗ ಜಾವೇದ್ ಎಂಬ ಯುವಕನ ಯಶಸ್ವಿ ಯುವಕನ ಕಥೆ. ಈ ಉದ್ಯಮಶೀಲ ಯುವಕನ ಯಶೋಗಾಥೆ ಎಲ್ಲರಿಗೂ ಸ್ಪೂರ್ತಿಯ ಚಿಲುಮೆ. ಎಳೆಯ ವಯಸ್ಸಿನಲ್ಲಿಯೇ ಕಠಿಣ ಪರಿಶ್ರಮ ಮತ್ತು ಸಾಮರ್ಥ್ಯದಿಂದ ಅದ್ಬುತ ಯಶಸ್ಸನ್ನು ಸಾಧಿಸಿರುವ ಈತ ಈಗ ಯುವಕರ ಆಶಾಕಿರಣ ಎಂದರೆ ತಪ್ಪಾಗಲಾರದು.! ಏಕೆಂದರೆ, ಈಗ ತನ್ನ 21ನೇ ವಯಸ್ಸಿನ ವೇಳೆಗೆ ಹತ್ತಾರು ಜನರಿಗೆ ಉದ್ಯೋಗ ನೀಡಿರುವ ಈಗ ವಿಶ್ವದಾಧ್ಯಂತ ಗ್ರಾಹಕರನ್ನು ಹೊಂದಿದ್ದಾನೆ.
ಇ-ಕಾಮರ್ಸ್, ವೆಬ್‌ಡಿಸೈನ್ ಮತ್ತು ಮೊಬೈಲ್ ಅಪ್ಲಿಕೇಷನ್ ಅಭಿವೃದ್ದಿಪಡಿಸುವ "ಟಿಎಂಎನ್ ಆನ್‌ಲೈನ್ ಸೊಲ್ಯೂಷನ್'' ಎಂಬ ತನ್ನದೇ ಸ್ವಂತ ಕಂಪೆನಿಯನ್ನು ಹುಟ್ಟಿಹಾಕಿಕೊಂಡಿರುವ ಜಾವೇದ್ ಈಗ ಎಲ್ಲರಿಗೂ ಚಿರಪರಿಚಿತನಾಗಿದ್ದಾನೆ, ಹಾಗಾದರೆ, ಕಣ್ಣೂರಿನ ಹುಡುಗ ಜಾವೇದ್ ಬಾಲ್ಯ ಜೀವನ ಹೇಗಿತ್ತು? ಕಂಪ್ಯೂಟರ್ ಪ್ರಪಂಚದಲ್ಲಿ ಜಾವೇದ್ ಕೋಟಿ ಕೋಟಿ ಹಣವನ್ನು ಗಳೀಸಲು ಸಾಧ್ಯವಾಗಿದ್ದು ಹೇಗೆ? ಕಂಪ್ಯೂಟರ್ ಜೊತೆಗಿನ ಜಾವೆದ್‌ನ ಒಡನಾಟ ಮತ್ತು ಆತನ ಕಠಿಣ ಪರಿಶ್ರಮ ಹೇಗಿತ್ತು ಎಂಬ ಕುತೋಹಲ ಮಾಹಿತಿಯನ್ನು ಮುಂದೆ ತಿಳಿಯಿರಿ.

ಕಂಪ್ಯೂಟರ್ ಮತ್ತು ಇಂಟರ್‌ನೆಟ್!!
ಈಗ ಯಶಸ್ವಿ ಉದ್ಯಮಿಯಾಗಿರುವ ಜಾವೇದ್ ಅವರ ಮೂಲ ಹೆಸರು ಮೊಹಮ್ಮದ್ ಜಾವೇದ್ ಟಿ ಎನ್ ಎಂದಾಗಿತ್ತು. ಹತ್ತನೇ ವಯಸ್ಸಿನಲ್ಲಿ ಜಾವೇದ್ ಹುಟ್ಟುಹಬ್ಬಕ್ಕೆ ಅವರ ತಂದೆ ಕಂಪ್ಯೂಟರ್ ಮತ್ತುನ ಇಂಟರ್‌ನೆಟ್ ಅನ್ನು ಉಡುಗೊರೆಯಾಗಿ ನೀಡಿದ್ದರು. ಇದು ಜಾವೇದ್‌ಗೆ ಬಹಳ ಕುತೋಹಲ ಮೂಡಿಸಿತ್ತು. ನಂತರದ ದಿನಗಳಲ್ಲಿ ಜಾವೇದ್‌ನ ಕಂಪ್ಯೂಟರ್ ಮೇಲಿನ ಕುತೋಹಲ ಅವನನ್ನು ಕಂಪ್ಯೂಟರ್ ಲೋಕಕ್ಕೆ ಇಳಿಸಿಬಿಟ್ಟಿತ್ತು.

ಗೂಗಲ್ ಕೊಟ್ಟಿದ್ದು ಲಕ್ಕಿ ನೇಮ್!!
ಅಪ್ಪ ಏನೋ ಕಂಪ್ಯೂಟರ್ ಕೊಡಿಸಿದರು. ಆದರೆ, ಆ ಹಂತದಲ್ಲಿ ಜಾವೇದ್ ಬಳಿಯಲ್ಲಿ ಐಡಿ ಇರಲಿಲ್ಲ. ಹಾಗಾಗಿ, ಜಾವೇದ್ ಹೆಸರಿನಲ್ಲಿ ಐಡಿ ಕ್ರಿಯೇಟ್ ಮಾಡಲು ಮುಂದಾಗಿದ್ದರೆ, ಆ ಹೆಸರಿನಲ್ಲಿ ಐಡಿ ಲಭ್ಯವಿರಲಿಲ್ಲ. ಇದರ ಬದಲಾಗಿ ಟಿಎನ್‌ಎಮ್ ಜಾವೇದ್ ಎಂಬ ಹೆಸರಿನಲ್ಲಿ ಐಡಿ ಸೃಷ್ಟಿಸುವಂತೆ ಗೂಗಲ್‌ನಿಂದ ಸಲಹೆ ಬಂತು. ಆ ಹೆಸರು ಜಾವೇದ್ ಅವರಿಗೆ ಲಕ್ಕಿ ಹೆಸರಾಗಿಯೂ ಕ್ಲಿಕ್ ಆಯಿತು. ಗೂಗಲ್‌ನ ಸದ್ಬಳಕೆಯಿಂದ ಕೋಟಿ, ಕೋಟಿ ಹಣಗಳಿಸುವಂತೆ ಸಹ ಮಾಡಿತು.

ವೆಬ್‌ಸೈಟ್ ಸೃಷ್ಟಿಸುವುದು ಹೇಗೆ?
ಬಾಲಕ ಜಾವೇದ್ ಕಂಪ್ಯೂಟರ್ ಜೊತೆಗೆ ಸಮಯ ಕಳೆಯುವ ವೇಳೆ ಆತನಿಗೆ ಯಾವಾಗಲೂ ತಲೆಯಲ್ಲಿ ಪ್ರಶ್ನೆಗಳು ತುಂಬಿರುತ್ತಿದ್ದವಂತೆ.! ವೆಬ್‌ಸೈಟ್ ಸೃಷ್ಟಿಸುವುದು ಹೇಗೆ?, ಅವು ಹೇಗೆ ಕಾರ್ಯನಿರ್ವಹಿಸುತ್ತವೆ? ಇದನ್ನೆಲ್ಲಾ ಮಾಡುವವರು ಯಾರು? ಹೀಗೆ ಪ್ರತಿಯೊಂದನ್ನು ತಿಳಿದುಕೊಳ್ಳುವುದರಲ್ಲಿ ನನಗೆ ಕುತೋಹಲವಿತ್ತು. ಒಂದರ್ಥದಲ್ಲಿ ಆ ಸಮಯದಲ್ಲಿ ನಾನು ಕಂಪ್ಯೂಟರ್ ವ್ಯಸನಿಯಾಗಿದ್ದೆ, ಆದರೆ ಒಳ್ಳೆಯ ಉದ್ದೇಶಕ್ಕಾಗಿ ಎಂದು ಜಾವೇದ್ ಅವರು ನೆನಪಿಸಿಕೊಳ್ಳುತ್ತಾರೆ.

10 ನೇ ತರಗತಿಯಲ್ಲಿ ವೆಬ್‌ಸೈಟ್ ತಯಾರಿಸಿದ!!
ಕಂಪ್ಯೂಟರ್ ಜಗತ್ತಿನ ಬಗ್ಗೆ ಜಾವೇದ್‌ಗೆ ತಿಳಿದುಕೊಳ್ಳುವ ಹಂಬಲದಿಂದ ಆ ಕಂಪ್ಯೂಟರ್ ಬಗ್ಗೆ ಹೆಚ್ಚೆಚ್ಚು ತಿಳಿಯಲು ಆರಂಭಿಸಿದ. ಬ್ಲಾಗಿಂಗ್ ಮತ್ತು ವೆಬ್‌ಡಿಸೈನಿಂಗ್ ವಿಷಯಗಳ ಬಗ್ಗೆ ಆನ್‌ಲೈನ್ ಮೂಲಕವೇ ಹೆಚ್ಚು ತಿಳಿದುಕೊಳ್ಳುತ್ತಿದ್ದನಂತೆ. ತನ್ನ ಹತ್ತನೇ ತರಗತಿ ವೇಳೆಗೆ ಹಲವು ಬ್ಲಾಗ್‌ಗಳನ್ನು ಸೃಷ್ಟಿಸಿದ್ದ ಜಾವೇದ್, ನಂತರ ತನ್ನ ಸಹಪಾಠಿ ಸಿರಾಜ್ ಜೊತೆ ಸೇರಿ ಜೆಸ್ರಿ.ಟಿಕೆ ಎಂಬ ವೆಬ್‌ಸೈಟ್ ಕ್ರಿಯೇಟ್ ಮಾಡಿದ್ದರಂತೆ. ಡೊಮೈನ್ ಖರೀದಿಸಲು ಹಣವಲ್ಲದೇ ಉಚಿತ ಡೊಮೈನ್ ಮೂಲಕ ವೆಬ್‌ಸೈಟ್ ಸೃಷ್ಟಿಮಾಡಿದ್ದರಂತೆ.!

"ಟಿಎಂಎನ್ ಆನ್‌ಲೈನ್ ಸೊಲ್ಯೂಷನ್''
ಕಂಪ್ಯೂಟರ್ ಆಸಕ್ತಿಯ ಜೊತೆಗೆ ಅಧ್ಯಯನಕ್ಕೆ ಯಾವುದೇ ತೊಂದರೆಯಾಗದಂತೆ ನೋಡಿಕೊಂಡ ಜಾವೇದ್, ವೆಬ್‌ಸೈಟ್ ಅಭಿವೃದ್ದಿಗೆ ಸಾಕಷ್ಟು ಅವಕಾಶಗಳಿರುವುದನ್ನು ಅಂದೇ ಕಂಡುಕೊಂಡಿದ್ದ. ಆಗಲೇ ತನ್ನ ಮೊಟ್ಟ ಮೊದಲ "ಟಿಎಂಎನ್ ಆನ್‌ಲೈನ್ ಸೊಲ್ಯೂಷನ್'' ಎಂಬ ಡೊಮೈನ್ ನೇಮ್ ಅನ್ನು ನೊಂದಾಯಿಸಿದ. ಅಂದು ಜಾವೇದ್ ನೊಂದಾಯಿಸಿದ ಈ ಡೊಮೈನ್ ನೇಮ್ ಈಗಲೂ ವರ್ಚುವಲ್ ಕಂಪೆನಿಯಾಗಿ ಬೆಳದುನಿಂತಿದೆ. ಆಗಲೇ ಹೇಳಿದಂತೆ ಜಾವೇದ್‌ಗೆ ಇದು ಗೂಗಲ್ ಲಕ್ಕಿ ನೇಮ್.!!

ಸಾವಿರ ರೂಪಾಯಿಗೆ ವೆಬ್‌ಸೈಟ್ ಆಫರ್!!
ಡೊಮೈನ್ ನೇಮ್ ಖರೀದಿಸಿ ಕಂಪೆನಿಯನ್ನು ಕಟ್ಟಿದ ಜಾವೇದ್, ಸಾವಿರ ರೂಪಾಯಿಗೆ ವೆಬ್‌ಸೈಟ್ ಆಫರ್ ಅನ್ನು ಫೇಸ್‌ಬುಕ್‌ನಲ್ಲಿ ಪ್ರಕಟಿಸಿದ. ಆದರೆ, ಹೆಚ್ಚಿನ ತಾಂತ್ರಿಕ ಕೌಶಲ್ಯಗಳಿಲ್ಲದೆ ಅವರ ಕೆಲಸ ವಿಫಲವಾಗಿತ್ತು. ಆದರೆ, ಛಲಬಿಡದ ಜಾವೇದ್ ಕೆಲ ವೆಬ್‌ಸೈಟ್ ಡಿಸೈನ್ ಕಂಪೆನಿಗಳಿಗೆ ಭೇಟಿ ನೀಡಿ ಅಲ್ಲಿ ಹೆಚ್ಚಿನದನ್ನು ತಿಳಿದುಕೊಂಡ. ನಂತರ ಶಿಕ್ಷಕಿಯೋರ್ವರು ಕೇಳಿದಂತೆ ಮೊದಲ ವೆಬ್‌ಸೈಟ್ ತಯಾರಿಸಿ ನೀಡಿ 2500 ರೂ.ಹಣಗಳಿಸಿ ತನ್ನ ತಾಯಿಯ ಕೈಗಿಟ್ಟನಂತೆ ಜಾವೇದ್.!


ಕಂಪೆನಿ ಬಂಡವಾಳಕ್ಕೂ ಕಷ್ಟವಿತ್ತು!!
ಜಾವೇದ್ ಇತ್ತ ವೆಬ್‌ಡಿಸೈನಿಂಗ್ ಕಲಿಯುತ್ತದ್ದ ವೇಳೆಯೇ ಅವನಿಗೆ ಮತ್ತೊಂದು ಕಷ್ಟ ಎದುರಾಗಿತ್ತು. ದುಬೈನಲ್ಲಿ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿದ್ದ ಜಾವೇದ್ ತಂದೆ ಉದ್ಯೋಗ ತೊತರೆದು ವಾಪಸ್ ಆಗಿದ್ದರು. ಇದರಿಂದ ಜಾವೇದ್ ಅವರ ಮನೆಯ ಪರಿಸ್ಥಿತಿ ಬಹಳ ಕಷ್ಟವಾಗಿತ್ತು. ಈ ಸಮಯದಲ್ಲಿ ಜಾವೇದ್ ಅವರ ತಂದೆಗೆ 1 ಲಕ್ಷ ಹಣ ನೀಡಿದರೆ ಕಂಪೆನಿ ಶುರುಮಾಡುವುದಾಗಿ ಕೇಳಿಕೊಂಡನು. ಕಂಪ್ಯೂಟರ್ ಬಗ್ಗೆ ಜಾವೇದ್‌ಗೆ ಇದ್ದ ಆಸಕ್ತಿ ನೋಡಿ ಆ ಕಷ್ಟದಲ್ಲಿಯೇ ಅವರ ತಂದೆ 1 ಲಕ್ಷ ಹಣವನ್ನು ಹೊಂದಿಸಿ ನೀಡಿದ್ದರಂತೆ.

ಚಿನ್ನದ ಬಳೆಗಳನ್ನು ಇಟ್ಟು ಕಚೇರಿ ನಿರ್ವಹಣೆ
1 ಲಕ್ಷ ಹಣ ಹೂಡಿ ಕಂಪೆನಿ ತೆರೆದಿದ್ದ ಜಾವೇದ್‌ನ ಮೊದಲ ದಿನಗಳು ಬಹಳ ಕಷ್ಟದ ದಿನಗಳಾಗಿದ್ದವು. ಆ ಸಮಯದಲ್ಲಿ ಓದು ಮತ್ತು ಕೆಲಸ ಎರಡರಲ್ಲಿಯೂ ಜೀವನದ ಜಂಜಾಟದಲ್ಲಿ ಜಾವೇದ್ ಇದ್ದರು. ಆಫಿಸ್ ಬಾಡಿಗೆ ನಿಡುವಷ್ಟು ಸಹ ಆದಾಯವಿರಲಿಲ್ಲ. ಮನೆ ಪರಿಸ್ಥಿತಿ ಸಹ ಹದಗೆಟ್ಟಿತ್ತು. ಯಾವುದೇ ಪ್ರಾಜೆಕ್ಟ್ ಸಹ ಜಾವೇದ್ ಕೈ ಸೇರಿರಲಿಲ್ಲ. ಇಂತಹ ಸಮಯದಲ್ಲಿ ಜಾವೇದ್ ಧೃತಿಗೆಟ್ಟಿದ್ದರಂತೆ. ತಮ್ಮ ತಾಯಿಯ ಚಿನ್ನದ ಬಳೆಗಳನ್ನು ಇಟ್ಟು ಕಚೇರಿಯನ್ನು ನಿರ್ವಹಣೆ ಮಾಡಿದ್ದರಂತೆ.

ಇಂದು ಸ್ವಂತ ಮನೆ, ಐಶಾರಾಮಿ ಕಾರು!!
ಹಗಲು, ರಾತ್ರಿ ಎನ್ನದೇ ಸಿಕ್ಕಿದ ಕೆಲ ಗ್ರಾಹಕರ ಜೊತೆ ವ್ಯವಹರಿಸಿದ ಜಾವೇದ್ ನಂತರ ಕೇರಳದಲ್ಲಿ 10 ಸಣ್ಣ ಪ್ರಮಾಣದ ಕೆಲಸ ಪಡೆದರಂತೆ. ಆ ಸಮಯದಲ್ಲಿ ಆದಾಯಕ್ಕಿಂತ ಕೆಲಸದಲ್ಲಿ ವೈವಿಧ್ಯ ಮುಖ್ಯ ಎಂಬುದನ್ನು ಅರಿತ ಜಾವೇದ್ ಅವರು ಗ್ರಾಹಕರ ನಂಬಿಕೆಯನ್ನು ಉಳಿಸಿಕೊಂಡಿದ್ದಾರೆ. ನಂತರ ಯಶಸ್ವಿ ವೆಬ್‌ಡಿಸೈನ್ ಉದ್ಯಮಿಯಾಗಿ ಜಾವೇದ್ ಬೆಳೆದು ನಿಂತಿದ್ದಾರೆ. ಬಾಡಿಗೆ ಮನೆಯಲ್ಲಿಯೇ ಬೆಳೆದ ಜಾವೇದ್ ತನ್ನ ಆಸೆಯಂತೆ 19ನೇ ವಯಸ್ಸಿನಲ್ಲಿಯೇ ಸ್ವಂತ ಮನೆಯನ್ನು ಕಟ್ಟಿದ್ದಾರೆ. ಬಿಎಂಡಬ್ಲೂ ಕಾರನ್ನು ಸಹ ಖರೀದಿಸಿದ್ದಾರೆ.!

ನೀರಲ್ಲಿ ಮೊಬೈಲ್ ಬಿದ್ರೇ ಏನ್ ಮಾಡ್ತಿರಿ..? ಈ ತಂತ್ರಗಳನ್ನು ಅನುಸರಿಸಿ..!
ಭಾರತದಲ್ಲಿ ಮೊಬೈಲ್‌ಗಳು ನೀರಿನಲ್ಲಿ ಬೀಳುವುದು ಸರ್ವೇ ಸಾಮಾನ್ಯ. ಎಷ್ಟೋ ಜನ ನೀರಲ್ಲಿ ಮೊಬೈಲ್ ಕೆಡವಿ ಅದನ್ನು ಮೂಲೆಗೆ ತಳ್ಳಿದ್ದಾರೆ. ಮೊಬೈಲ್ ಎಲೆಕ್ಟ್ರಾನಿಕ್ ಸಾಧನವಾಗಿರುವುದರಿಂದ ನೀರು ಬಿದ್ದ ತಕ್ಷಣ ಮೊಬೈಲ್ ಒಳಗಿನ ಹಾರ್ಡ್‌ವೇರ್‌ನಲ್ಲಿ ಶಾರ್ಟ್ ಸರ್ಕ್ಯೂಟ್ ಆಗುವ ಸಾಧ್ಯತೆಯೇ ಹೆಚ್ಚು. ಬಹಳಷ್ಟು ಮೊಬೈಲ್‌ಗಳು ಇನ್ನು ವಾಟರ್‌ಪ್ರೂಪ್ ತಂತ್ರಜ್ಞಾನವನ್ನು ಹೊಂದಿಲ್ಲ.
ಭಾರತದಲ್ಲಿ ಹೋಳಿ ಆಚರಣೆಯಲ್ಲಂತೂ ಹಾಳಾದ ಮೊಬೈಲ್‌ಗಳಿಗೆ ಲೆಕ್ಕವಿಲ್ಲ, ಕೃಷಿ ಮಾಡುವಾಗ ಕಾಲುವೆಗೆಳಲ್ಲಿ ಬಿದ್ದು ಮೂಲೆ ಸೇರಿದ ಅದೆಷ್ಟೋ ಮೊಬೈಲ್‌ಗಳು ನಮಗೆ ನೋಡಲು ಕಾಣಸಿಗುತ್ತವೆ. ಆದ್ದರಿಂದ ಮೊಬೈಲ್ ನೀರಿನಲ್ಲಿ ಬಿದ್ದಾಗ ಒಂದಿಷ್ಟು ಎಚ್ಚರಿಕೆ ಅಂಶಗಳನ್ನು ಅನುಸರಿಸಿದರೆ ನಿಮ್ಮ ಮೊಬೈಲ್ ನಿಮಗೆ ಜೀವಂತವಾಗಿ ಸಿಗುತ್ತದೆ. ಆದರೆ, ಮೊಬೈಲ್ ನೀರಿಗೆ ಬಿದ್ದಾಗ ಮಾಡಬಾರದಿರುವ ಅನೇಕ ಅಂಶಗಳನ್ನು ನಾವು ಇಲ್ಲಿ ಪಟ್ಟಿ ಮಾಡಿದ್ದೇವೆ. ನೀವು ಆ ಹಂತಗಳನ್ನು ಅನುಸರಿಸಿದರೆ, ನಿಮ್ಮ ಮೊಬೈಲ್ ಕೋಮಾದಿಂದ ಎದ್ದೇಳುವುದೇ ಇಲ್ಲ. ಆ ಅಂಶಗಳನ್ನು ನೀವೇ ನೋಡಿ..

ಕಂಪನಿಗೆ ನೀರಿನಲ್ಲಿ ಸ್ಮಾರ್ಟ್‌ಫೋನ್ ಬಿದ್ದಿರುವ ಬಗ್ಗೆ ಸುಳ್ಳು ಹೇಳಬೇಡಿ
ಸ್ಮಾರ್ಟ್‌ಫೋನ್‌ಗೆ ವಾರಂಟಿ ಇರುತ್ತದೆ. ಆದರೆ, ನಿಮ್ಮ ಕಂಪನಿ ಆಕಸ್ಮಿಕ ಘಟನೆಗಳಿಂದ ವಾರಂಟಿ ಸೇರಿಸದೆ ಹೋದರೆ ವಾರಂಟಿ ಸಿಗುವುದಿಲ್ಲ. ಅದಕ್ಕಾಗಿ ನಿಮ್ಮ ಒಪ್ಪಂದದ ಎಲ್ಲ ಷರತ್ತುಗಳನ್ನು ಓದಿದ್ದೀರಿ ಎಂದು ಖಚಿತಪಡಿಸಿಕೊಳ್ಳಿ. ಮರುಪಾವತಿ ಪಡೆಯಲು ಕೆಲವೊಮ್ಮೆ ಕೆಲವು ಷರತ್ತುಗಳನ್ನು ನೀವು ಅನುಸರಿಸಬೇಕಾಗುತ್ತದೆ. ಅದಲ್ಲದೇ ಇಮ್ಮರ್ಷನ್ ಘಟನೆಯನ್ನು ನಿರಾಕರಿಸಬೇಡಿ. ಏಕೆಂದರೆ ಸ್ಮಾರ್ಟ್‌ಫೋನ್‌ಗಳು ಇಮ್ಮರ್ಷನ್ ಸೆನ್ಸಾರ್ ಹೊಂದಿದ್ದು, ಅವು ದ್ರವಗಳೊಂದಿಗೆ ಸಂಪರ್ಕಕ್ಕೆ ಬಂದಾಗ ಬಣ್ಣ ಬದಲಾಯಿಸುತ್ತವೆ.

ಕೂದಲಿನ ಡ್ರೈಯರ್‌ನಿಂದ ಫೋನ್ ಒಣಗಿಸಬೇಡಿ
ಕೂದಲಿನ ಡ್ರೈಯರ್ ಉಷ್ಣಾಂಶ ತುಂಬಾ ಬಿಸಿಯಾಗಿರುತ್ತದೆ. ಇದರಿಂದ ಸ್ಮಾರ್ಟ್‌ಫೋನ್‌ನಲ್ಲಿರುವ ದುರ್ಬಲ ಅಥವಾ ಮೆದು ಎಲೆಕ್ಟ್ರಾನಿಕ್ ಘಟಕಗಳಿಗೆ ಹಾನಿಯಾಗುತ್ತದೆ. ಅಲ್ಲದೆ, ನಿಮ್ಮ ಸ್ಮಾರ್ಟ್‌ಫೋನ್‌ನ್ನು ಬಿಸಿ ಒವನ್ ಅಥವಾ ರೇಡಿಯೇಟರ್‌ನಲ್ಲಿ ಇಡಬೇಡಿ.

ಚಾರ್ಜರ್, ಯುಎಸ್‌ಬಿ, ಹೆಡ್‌ಫೋನ್ ಪ್ಲಗ್ ಮಾಡಬೇಡಿ
ಸ್ಮಾರ್ಟ್‌ಫೋನ್ ನೀರಿನಿಂದ ಹಾನಿಗೊಳಗಾದಾಗ ಮೊಬೈಲ್‌ನನ್ನು ಚಾರ್ಜ್‌ಗೆ ಹಾಕಬೇಡಿ. ಏಕೆಂದರೆ ಅದು ಶಾರ್ಟ್ ಸರ್ಕ್ಯೂಟ್‌ಗೆ ಕಾರಣವಾಗುತ್ತದೆ. ಮತ್ತು ಮೊಬೈಲ್‌ನ್ನು ಇನ್ನಷ್ಟು ಹಾನಿಗೊಳಿಸುತ್ತದೆ. ಇದಲ್ಲದೇ ಯುಎಸ್‌ಬಿ, ಹೆಡ್‌ಪೋನ್ ಸಹ ಕನೆಕ್ಟ್ ಮಾಡಬೇಡಿ. ಇದರಿಂದ ನೀರಿನ ಹನಿಗಳು ಇನ್ನು ಒಳಹೋಗುವ ಸಂಭವವೇ ಹೆಚ್ಚು.

ತಕ್ಷಣ ಸ್ವಿಚ್ ಆಫ್ ಮಾಡಿ
ಸ್ಮಾರ್ಟ್‌ಫೋನ್ ನೀರಿನಲ್ಲಿ ಬಿದ್ದ ತಕ್ಷಣ ಸ್ವಿಚ್ ಆಫ್ ಮಾಡುವುದು ಉತ್ತಮ ಆಯ್ಕೆ. ನೀರಿನಲ್ಲಿ ಬಿದ್ದ ಸ್ಮಾರ್ಟ್‌ಫೋನ್‌ನ್ನು ತಕ್ಷಣ ಬಳಸುವುದು ಅಪಾಯಕಾರಿ. ಅದಲ್ಲದೇ ಇದು ನಿಮ್ಮ ಸ್ಮಾರ್ಟ್‌ಫೋನ್ ಅಥವಾ ಮೊಬೈಲ್‌ಗೆ ಇನ್ನಷ್ಟು ಹಾನಿ ಮಾಡಿ, ನಿಮ್ಮ ಸ್ಮಾರ್ಟ್‌ಫೋನ್ ಕಾರ್ಯನಿರ್ವಹಣೆಯನ್ನು ನಿಲ್ಲಿಸಬಹುದು.

ಅಲುಗಾಡಿಸಿ ಮತ್ತು ಒಣಗಿಸಿ
ಸ್ವಿಚ್ ಆಫ್ ಮಾಡಿದ ನಂತರ ಒಣ ಬಟ್ಟೆ ತೆಗೆದುಕೊಂಡು ಸಂಪೂರ್ಣವಾಗಿ ಒರೆಸಿ. ನಂತರ, ಸಾಧ್ಯವಾದಷ್ಟು ಹೆಚ್ಚು ತೇವಾಂಶ ಹೀರಿಕೊಳ್ಳುವ ಕಾಗದದ ಉತ್ಪನ್ನಗಳಲ್ಲಿ ಅಥವಾ ಟವೆಲ್‌ನಲ್ಲಿ ಸ್ಮಾರ್ಟ್‌ಫೋನ್ ಕಟ್ಟಿ ಇಡಿ. ಹೆಡ್‌ಫೋನ್, ಕೇಬಲ್‌ಗಳನ್ನು ಅನ್‌ಪ್ಲಗ್ ಮಾಡಿ ಮತ್ತು SIM ಕಾರ್ಡ್, ಮೆಮೊರಿ ಕಾರ್ಡ್‌ಗಳನ್ನು ತೆಗೆದುಹಾಕಿ. ನಂತರ, ಸ್ಮಾರ್ಟ್‌ಫೋನ್ ಅಲುಗಾಡಿಸಿ ಇದರಿಂದ ಒಳ ಇರುವ ನೀರು ಹೊರಬರಲು ಸಹಾಯವಾಗುತ್ತದೆ.

ಸ್ಮಾರ್ಟ್‌ಫೋನ್‌ನ್ನು ಅಕ್ಕಿಯಲ್ಲಿ ಇಡಿ
ತೇವಾಂಶ ಹೀರಿಕೊಳ್ಳುವ ಸಲುವಾಗಿ ಅಕ್ಕಿ ಚೀಲದಲ್ಲಿ ಅಥವಾ ಗಾಳಿ ಬೀಸುವ ಪೆಟ್ಟಿಗೆಯಲ್ಲಿ ಮೊಬೈಲ್ ಇಡುವುದು ಉತ್ತಮ ಪರಿಹಾರ. ಇದರಿಂದ ಬೇಗ ನಿಮ್ಮ ಫೋನ್ ಮೊದಲಿನಂತೆ ಆಗುತ್ತದೆ. ಅಕ್ಕಿ ಪರ್ಯಾಯ ಪರಿಹಾರವಾಗುತ್ತದೆ, ಏಕೆಂದರೆ ಧಾನ್ಯಗಳು ತೇವಾಂಶ ಹೀರಿಕೊಳ್ಳುತ್ತವೆ. ಆದರೂ, ಅಕ್ಕಿಯಲ್ಲಿರುವ ಧೂಳು ಮೊಬೈಲ್ ಸೇರದಂತೆ ನೋಡಿಕೊಳ್ಳಿ. ಕನಿಷ್ಠ 24 ರಿಂದ 48 ಗಂಟೆ ಅಕ್ಕಿಯಲ್ಲಿಯೇ ಮೊಬೈಲ್ ಇದ್ದರೆ ಒಳಿತು.

ಸೂರ್ಯನ ಬೆಳಕಿನಲ್ಲಿಯೂ ಸ್ಮಾರ್ಟ್‌ಫೋನ್‌ನ್ನು ಒಣಗಲು ಇಡಬಹುದು
ಸ್ಮಾರ್ಟ್‌ಫೋನ್ ಒಣಗಿಸಲು ಬ್ಯಾಕ್ ಪ್ಯಾನೆಲ್ ತೆಗೆದು ನೇರವಾಗಿ ಸೂರ್ಯನ ಬೆಳಕಿನಲ್ಲಿ ಇರಿಸಬಹುದು. ಈ ಪ್ರಯತ್ನ ಹ್ಯಾಂಡ್‌ಸೆಟ್‌ನ್ನು ಸಂಪೂರ್ಣವಾಗಿ ಒಣಗಿಸಲು ಸಹಾಯ ಮಾಡುತ್ತದೆ.

ಶೀಘ್ರದಲ್ಲಿಯೇ ಎಲ್ಲಾ ಡೇಟಾ ಬ್ಯಾಕ್ ಅಪ್ ಮಾಡಿ
ಇಮ್ಮರ್ಶನ್ನಲ್ಲಿ ದ್ರವ ಅಥವಾ ನೀರು ಹೋದರೆ ಸ್ಮಾರ್ಟ್‌ಫೋನ್‌ಗಳಿಗೆ ಹಾನಿಯುಂಟಾಗುತ್ತದೆ. ಆದರೆ, ಕೆಲವು ಅದೃಷ್ಟವಶಾತ್ ಸಂದರ್ಭಗಳಲ್ಲಿ ಸಾಧನವು ಸಾಮಾನ್ಯ ಸ್ಥಿತಿಗೆ ಮರಳುತ್ತದೆ ಮತ್ತು ಶಕ್ತಿ ಹೆಚ್ಚಿಸುತ್ತದೆ. ಆದ್ದರಿಂದ ಆ ಸಂದರ್ಭದಲ್ಲಿ ನೀವು ಮಾಡಬೇಕಾದ ಮೊದಲ ಕೆಲಸ ಡೇಟಾ ಬ್ಯಾಕ್ ಅಪ್ ಮಾಡಿಕೊಳ್ಳುವುದು. ಏಕೆಂದರೆ ಯಾವಾಗ ಸ್ಮಾರ್ಟ್‌ಫೋನ್ ಕೈಕೊಡುತ್ತೋ ಗೊತ್ತಿಲ್ಲ.
ಭಾರತದ ಶ್ರೀಮಂತ ವ್ಯಕ್ತಿ ಮುಖೇಶ್ ಅಂಬಾನಿ ಬಗ್ಗೆ ಜೀರ್ಣಿಸಿಕೊಳ್ಳಲು ಸಾಧ್ಯವಾಗದ ಸತ್ಯ ಸಂಗತಿಗಳಿವು!!
ಈಗ 'ಡಿಎಲ್' ಪಡೆಯವುದು ಎಷ್ಟು ಸುಲಭ ಗೊತ್ತಾ?..ಆನ್‌ಲೈನ್‌ಲ್ಲಿಯೇ ಅರ್ಜಿ..ಆನ್‌ಲೈನಿನಲ್ಲಿಯೇ ಪರೀಕ್ಷೆ!!
-
29,999
-
14,999
-
28,999
-
34,999
-
1,09,894
-
15,999
-
36,990
-
79,999
-
71,990
-
49,999
-
14,999
-
9,999
-
64,900
-
34,999
-
15,999
-
25,999
-
46,354
-
19,999
-
17,999
-
9,999
-
18,200
-
18,270
-
22,300
-
33,530
-
14,030
-
6,990
-
20,340
-
12,790
-
7,090
-
17,090