ಹೆಚ್ಚು ಇಂಟರ್ನೆಟ್‌ ಬಳಸದ ಬಿಎಸ್‌ಎನ್‌ಎಲ್‌ ಗ್ರಾಹಕರಿಗೆ ಈ ಪ್ಲ್ಯಾನ್ ಸೂಪರ್!

|

ದೇಶದ ಟೆಲಿಕಾಂ ವಲಯದಲ್ಲಿ ಪೈಪೋಟಿ ಇದ್ದು, ಸರ್ಕಾರಿ ಸ್ವಾಮ್ಯದ ಬಿಎಸ್‌ಎನ್ಎಲ್ ಟೆಲಿಕಾಂ ಖಾಸಗಿ ಟೆಲಿಕಾಂ ಸಂಸ್ಥೆಗಳಿಗೆ ನೇರ ಟಾಂಗ್ ನೀಡುತ್ತಾ ಸಾಗಿದೆ. ಸಂಸ್ಥೆಯು ಈಗಾಗಲೇ ಹಲವು ಆಕರ್ಷಕ ಪ್ರೀಪೇಡೆ ಪ್ಲ್ಯಾನ್‌ಗಳನ್ನು ಪರಿಚಯಿಸಿ ಗ್ರಾಹಕರಿಂದ ಸೈ ಅನಿಸಿಕೊಂಡಿದೆ. ಅವುಗಳಲ್ಲಿ ಕೆಲವು ಪ್ರೀಪೇಯ್ಡ್‌ ಯೋಜನೆಗಳು ಅಧಿಕ ಡೇಟಾ ಪ್ರಯೋಜನ ಪಡೆದಿದ್ದರೇ ಮತ್ತೆ ಕೆಲವು ಯೋಜನೆಗಳು ಹೆಚ್ಚಿನ ವ್ಯಾಲಿಡಿಟಿ ಸೌಲಭ್ಯವನ್ನು ಪಡೆದುಕೊಂಡಿವೆ.

ವ್ಯಾಲಿಡಿಟಿ

ಹೌದು, ಬಿಎಸ್ಎನ್ಎಲ್ ಟೆಲಿಕಾಂ ಸಂಸ್ಥೆಯು ಅಲ್ಪಾವಧಿಯ ಯೋಜನೆಗಳ ಜೊತೆಗೆ ದೀರ್ಘಾವಧಿಯ ಪ್ರೀಪೇಡ್‌ ಪ್ಲ್ಯಾನ್‌ಗಳ ಆಯ್ಕೆಯನ್ನು ನೀಡಿದೆ. ಆ ಪೈಕಿ ದೈನಂದಿನ ಡೇಟಾ ಹಾಗೂ ಬಿಗ್ ವ್ಯಾಲಿಡಿಟಿ ಅವಧಿಯ ಯೋಜನೆಗಳ ಆಯ್ಕೆಗಳ ಪಟ್ಟಿಯನ್ನು ಹೊಂದಿದೆ. ಹೆಚ್ಚಿನ ಇಂಟರ್ನೆಟ್ ಬಳಸುವ ಗ್ರಾಹಕರಿಗೆ ದೈನಂದಿನ ಅಧಿಕ ಡೇಟಾ ಪ್ಲ್ಯಾನ್‌ಗಳು ಗಮನ ಸೆಳೆಯುತ್ತವೆ. ಅದೇ ರೀತಿ ಇಂಟರ್ನೆಟ್ ಬಳಕೆ ಕಡಿಮೆ ಮಾಡುವ ಗ್ರಾಹಕರು ಮುಖ್ಯವಾಗಿ ಅಧಿಕ ವ್ಯಾಲಿಡಿಟಿ ಸೌಲಭ್ಯದ ಯೋಜನೆಗಳತ್ತ ಆಕರ್ಷಿತರಾಗುತ್ತಾರೆ. ಹಾಗಾದರೇ ಹೆಚ್ಚು ಇಂಟರ್ನೆಟ್‌ ಬಳಸದ ಬಿಎಸ್‌ಎನ್‌ಎಲ್‌ ಗ್ರಾಹಕರಿಗೆ ಉತ್ತಮ ಅನಿಸುವ ಪ್ಲ್ಯಾನ್‌ ಬಗ್ಗೆ ಮುಂದೆ ತಿಳಿಯೋಣ.

ಬಿಎಸ್‌ಎನ್‌ಎಲ್‌ 699ರೂ. ಪ್ಲ್ಯಾನ್

ಬಿಎಸ್‌ಎನ್‌ಎಲ್‌ 699ರೂ. ಪ್ಲ್ಯಾನ್

ಭಾರತ್ ಸಂಚಾರ್ ನಿಗಮ್ ಲಿಮಿಟೆಡ್‌ನ 699 ರೂ.ಗಳ ಪ್ರಿಪೇಯ್ಡ್ ಯೋಜನೆ ಬಳಕೆದಾರರಿಗೆ ಅನಿಯಮಿತ ವಾಯಿಸ್ ಕರೆ ಮತ್ತು ದಿನಕ್ಕೆ 100 ಎಸ್‌ಎಂಎಸ್ ನೀಡುತ್ತದೆ. ಈ ಯೋಜನೆಯು 180 ದಿನಗಳು ಅಥವಾ ಆರು ತಿಂಗಳುಗಳವರೆಗೆ ವ್ಯಾಲಿಡಿಟಿ ಪ್ರಯೋಜನ ಪಡೆದಿದೆ. ಅಂದರೆ ಇದು ದೀರ್ಘಾವಧಿಯ ಚಂದಾದಾರಿಕೆಯ ಯೋಜನೆಯಾಗಿದೆ. ಈ ಯೋಜನೆಯೊಂದಿಗೆ ಬಳಕೆದಾರರು ಪ್ರತಿದಿನ 180 ದಿನಗಳವರೆಗೆ 500MB ಅಥವಾ 0.5GB (FUP) ಡೇಟಾವನ್ನು ಪಡೆಯುತ್ತಾರೆ. ಇದರರ್ಥ ಈ ಯೋಜನೆ ರವಾನಿಸುವ ಒಟ್ಟು ಡೇಟಾ 90GB ಆಗಿದೆ. ಹಾಗೆಯೇ ಬಿಎಸ್‌ಎನ್‌ಎಲ್‌ನ ಇತರೆ ದೀರ್ಘಾವಧಿಯ ಯೋಜನೆಗಳ ಬಗ್ಗೆ ಮುಂದೆ ನೋಡೋಣ ಬನ್ನಿರಿ.

ಬಿಎಸ್‌ಎನ್‌ಎಲ್‌ 1,212ರೂ.ಪ್ಲ್ಯಾನ್

ಬಿಎಸ್‌ಎನ್‌ಎಲ್‌ 1,212ರೂ.ಪ್ಲ್ಯಾನ್

ಬಿಎಸ್‌ಎನ್‌ಎಲ್‌ 1,212ರೂ. ಡೇಟಾ ಎಸ್‌ಟಿವಿ ಡೇಟಾ ಯೋಜನೆಯು ಒಟ್ಟು 365 ದಿನಗಳ ವ್ಯಾಲಿಡಿಟಿ ಅವಧಿಯನ್ನು ಹೊಂದಿದೆ. ಈ ಪ್ಲ್ಯಾನಿನಲ್ಲಿ ಪೂರ್ಣ ವ್ಯಾಲಿಡಿಟಿ ಅವಧಿಗೆ ಒಟ್ಟು 500GB ಡೇಟಾ ಪ್ರಯೋಜನೆ ದೊರೆಯುತ್ತದೆ. ಈ ಯೋಜನೆಯಲ್ಲಿ ಗ್ರಾಹಕರಿಗೆ ಯಾವುದೇ ವಾಯಿಸ್‌ ಕರೆ ಹಾಗೂ ಎಸ್‌ಎಮ್‌ಎಸ್‌ ಸೌಲಭ್ಯಗಳು ದೊರೆಯುವುದಿಲ್ಲ. ಇದೊಂದು ಡೇಟಾ ಪ್ಲ್ಯಾನ್ ಆಗಿದೆ.

ಬಿಎಸ್‌ಎನ್‌ಎಲ್‌ 1,999ರೂ. ಪ್ಲ್ಯಾನ್ ಪ್ರಯೋಜನಗಳು

ಬಿಎಸ್‌ಎನ್‌ಎಲ್‌ 1,999ರೂ. ಪ್ಲ್ಯಾನ್ ಪ್ರಯೋಜನಗಳು

ಬಿಎಸ್‌ಎನ್‌ಎಲ್‌ನ 1,999ರೂ. ಪ್ಲ್ಯಾನ್ ಇದೀಗ ಆಫರ್‌ನಲ್ಲಿ ಲಭ್ಯ ಇದೆ. ಈ ಪ್ಲ್ಯಾನಿನಲ್ಲಿ ಭಾರತದ ಯಾವುದೇ ನೆಟ್‌ವರ್ಕ್‌ಗೆ ಅನಿಯಮಿತ ವಾಯಿಸ್ ಕರೆಗಳು, ಪ್ರತಿದಿನ 3GB ಡೇಟಾ ಸೌಲಭ್ಯ ಸಹ ದೊರೆಯಲಿದೆ. ಇದರೊಂದಿಗೆ ಪ್ರತಿದಿನ 100 ಎಸ್‌ಎಂಎಸ್ ಜೊತೆಗೆ ಬಿಎಸ್ಎನ್ಎಲ್ ಟ್ಯೂನ್ಸ್ ಮತ್ತು ಬಿಎಸ್ಎನ್ಎಲ್ ಟಿವಿ ಚಂದಾದಾರಿಕೆಯು ಸಹ ಉಚಿತವಾಗಿ ಲಭ್ಯವಾಗಲಿವೆ. ಕೊಡುಗೆಯಲ್ಲಿ ಒಟ್ಟು 386 ದಿನಗಳ ವ್ಯಾಲಿಡಿಟಿ ಸಿಗಲಿದೆ.

ಬಿಎಸ್‌ಎನ್‌ಎಲ್‌ 2399ರೂ. ಪ್ಲ್ಯಾನ್ ಪ್ರಯೋಜನಗಳು

ಬಿಎಸ್‌ಎನ್‌ಎಲ್‌ 2399ರೂ. ಪ್ಲ್ಯಾನ್ ಪ್ರಯೋಜನಗಳು

ಬಿಎಸ್‌ಎನ್‌ಎಲ್‌ನ ಈ ಪ್ಲ್ಯಾನ್ ಸದ್ಯ ಕೊಡುಗೆಯಲ್ಲಿ ಒಟ್ಟು 437 ದಿನಗಳ ವ್ಯಾಲಿಡಿಟಿ ಅವಧಿಯನ್ನು ಒಳಗೊಂಡಿದ್ದು, ಈ ಅವಧಿಯಲ್ಲಿ ಪ್ರತಿದಿನ ಉಚಿತ ವಾಯಿಸ್‌ ಕರೆಗಳ ಪ್ರಯೋಜನವನ್ನು ಒದಗಿಸಲಿದೆ. ಇದರೊಂದಿಗೆ ಪ್ರತಿದಿನ 100 ಎಸ್‌ಎಮ್‌ಎಸ್‌ಗಳ ಸೌಲಭ್ಯ ದೊರೆಯಲಿದ್ದು, 60 ದಿನಗಳಿಗೆ ಬಿಎಸ್‌ಎನ್‌ಎಲ್‌ ಟ್ಯೂನ್‌ ಸೌಲಭ್ಯವು ಸಿಗಲಿದೆ. ಹಾಗೆಯೇ ಪ್ರತಿದಿನ 3GB ಡೇಟಾ ಸೌಲಭ್ಯ ಸಹ ದೊರೆಯಲಿದೆ.

Best Mobiles in India

English summary
BSNL’s Rs 699 prepaid plan makes for a perfect case for the users who need a prepaid subscription for long-term but don’t need a lot of data.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X