ಬಿಎಸ್‌ಎನ್‌ಎಲ್‌ನಿಂದ ಹೊಸ ಪ್ಲ್ಯಾನ್ ಲಾಂಚ್; ದಂಗಾದ ಜಿಯೋ, ಏರ್‌ಟೆಲ್!
ಭಾರತೀಯ ಟೆಲಿಕಾಂ ವಲಯದಲ್ಲಿ ಸರ್ಕಾರಿ ಸ್ವಾಮ್ಯದ ಬಿಎಸ್‌ಎನ್‌ಎಲ್ ಟೆಲಿಕಾಂ ರಿಲಯನ್ಸ್ ಜಿಯೋ, ಭಾರ್ತಿ ಏರ್‌ಟೆಲ್ ಹಾಗೂ ವಿ ಟೆಲಿಕಾಂಗಳಿಗೆ ನೇರ ಪೈಪೋಟಿ ನೀಡುವಂತಹ ಯೋಜನೆಗಳನ್ನು ಪರಿಚಯಿಸುತ್ತಾ ಸಾಗಿದೆ. ಅವುಗಳಲ್ಲಿ ಕೆಲವೊಂದು ಪ್ಲ್ಯಾನ್‌ಗಳಲ್ಲಿ ಹೆಚ್ಚುವರಿ ಪ್ರಯೋಜನ ಲಭ್ಯ ಮಾಡಿದೆ. ಬಿಎಸ್‌ಎನ್‌ಎಲ್ ಇದೀಗ ಮತ್ತೆ ಎರಡು ನೂತನ ಯೋಜನೆಗಳನ್ನು ಪರಿಚಯಿದ್ದು, ಖಾಸಗಿ ಟೆಲಿಕಾಂಗಳನ್ನು ದಂಗಾಗುವಂತೆ ಮಾಡಿದೆ. ಬಿಎಸ್‌ಎನ್‌ಎಲ್ ಟೆಲಿಕಾಂನ ನೂತನ ಯೋಜನೆಗಳು ಆಕರ್ಷಕ ಪ್ರಯೋಜನ ಪಡೆದಿವೆ.

ಹೌದು, ಬಿಎಸ್‌ಎನ್‌ಎಲ್ ಸಂಸ್ಥೆಯು ಹೊಸದಾಗಿ ಎರಡು ಅಲ್ಪಾವಧಿಯ ಪ್ರಿಪೇಯ್ಡ್ ಯೋಜನೆಗಳನ್ನು ಘೋಷಣೆ ಮಾಡಿದೆ. ಅವುಗಳು ಕ್ರಮವಾಗಿ 228ರೂ. ಮತ್ತು 239ರೂ. ಬೆಲೆಯನ್ನು ಹೊಂದಿವೆ. ಈ ಎರಡೂ ಪ್ರಿಪೇಯ್ಡ್ ಯೋಜನೆಗಳು ದೇಶಾದ್ಯಂತ ಟೆಲಿಕಾಂನ ಗ್ರಾಹಕರಿಗೆ ಲಭ್ಯವಾಗಲಿದೆ. ಡೇಟಾ ಸೌಲಭ್ಯ, ಆಕರ್ಷಕ ವ್ಯಾಲಿಡಿಟಿ, ವಾಯಿಸ್ ಕರೆ ಸೌಲಭ್ಯಗಳನ್ನು ಈ ಯೋಜನೆಗಳು ಒಳಗೊಂಡಿವೆ.

ಇನ್ನು ಬಿಎಸ್‌ಎನ್‌ಎಲ್ ಟೆಲಿಕಾಂನ 228ರೂ ಮತ್ತು 239ರೂ. ಈ ಎರಡೂ ಹೊಸ ಯೋಜನೆಗಳು ಇದೆ ಜುಲೈ 1, 2022 ರಿಂದ ಜಾರಿಗೆ ಬರಲಿವೆ ಎಂದು ಹೇಳಲಾಗಿದೆ. ಹಾಗಾದರೇ ಬಿಎಸ್‌ಎನ್‌ಎಲ್ ಸಂಸ್ಥೆಯ 228 ರೂ ಮತ್ತು 239 ರೂ. ಯೋಜನೆಗಳ ಪ್ರಯೋಜನಗಳ ಬಗ್ಗೆ ಹಾಗೂ ಬಿಎಸ್‌ಎನ್ ಟೆಲಿಕಾಂನ ಇತರೆ ಕೆಲವು ಜನಪ್ರಿಯ ಪ್ರಿಪೇಯ್ಡ್ ಯೋಜನೆಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಬಿಎಸ್‌ಎನ್‌ಎಲ್ 228ರೂ. ಪ್ರಿಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು
ಬಿಎಸ್‌ಎನ್‌ಎಲ್ ಟೆಲಿಕಾಂನ 228 ರೂ. ಪ್ಲ್ಯಾನ್ ಅಲ್ಪಾವಧಿಯ ಯೋಜನೆ ಆಗಿದ್ದು, ಒಟ್ಟು 30 ದಿನಗಳ ವ್ಯಾಲಿಡಿಟಿಯನ್ನು ಒಳಗೊಂಡಿದೆ. ಪ್ರತಿದಿನ 2 GB ಡೇಟಾ ಸೌಲಭ್ಯ ದೊರೆಯುತ್ತದೆ. ಇದರೊಂದಿಗೆ ಪ್ರತಿದಿನ 100 ಎಸ್‌ಎಮ್‌ಎಸ್ ಹಾಗೂ ಅನಿಯಮಿತ ವಾಯಿಸ್ ಕರೆಯ ಸೌಲಭ್ಯಗಳು ಲಭ್ಯವಾಗುತ್ತವೆ. ನಿಗದಿತ ಡೇಟಾ ಮುಗಿದ ಬಳಿಕ ಇಂಟರ್ನೆಟ್ ವೇಗವು 80 Kbps ಗೆ ಕಡಿಮೆಯಾಗುತ್ತದೆ.

ಬಿಎಸ್‌ಎನ್‌ಎಲ್ 239ರೂ. ಪ್ರಿಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು
ಬಿಎಸ್‌ಎನ್‌ಎಲ್ ಟೆಲಿಕಾಂನ 239 ರೂ. ಪ್ಲ್ಯಾನ್ ಅಲ್ಪಾವಧಿಯ ಯೋಜನೆ ಆಗಿದ್ದು, ಒಟ್ಟು 30 ದಿನಗಳ ವ್ಯಾಲಿಡಿಟಿಯನ್ನು ಒಳಗೊಂಡಿದೆ. ಪ್ರತಿದಿನ 2 GB ಡೇಟಾ ಸೌಲಭ್ಯ ದೊರೆಯುತ್ತದೆ. ಇದರೊಂದಿಗೆ ಪ್ರತಿದಿನ 100 ಎಸ್‌ಎಮ್‌ಎಸ್ ಹಾಗೂ ಅನಿಯಮಿತ ವಾಯಿಸ್ ಕರೆಯ ಸೌಲಭ್ಯಗಳು ಲಭ್ಯವಾಗುತ್ತವೆ. ಇದರೊಂದಿಗೆ 10 ರೂ. ಮೌಲ್ಯದ ಟಾಕ್‌ಟೈಮ್ ದೊರೆಯುತ್ತದೆ (ಟಾಕ್‌ಟೈಮ್ ಮೌಲ್ಯವನ್ನು ಬಳಕೆದಾರರ ಮುಖ್ಯ ಖಾತೆಗೆ ಸೇರಿಸಲಾಗುತ್ತದೆ) ನಿಗದಿತ ಡೇಟಾ ಮುಗಿದ ಬಳಿಕ ಇಂಟರ್ನೆಟ್ ವೇಗವು 80 Kbps ಗೆ ಕಡಿಮೆಯಾಗುತ್ತದೆ.

ಬಿಎಸ್‌ಎನ್‌ಎಲ್ 299ರೂ. ಪ್ರಿಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು
ಬಿಎಸ್‌ಎನ್‌ಎಲ್ ಟೆಲಿಕಾಂನ 299ರೂ. ಪ್ಲ್ಯಾನ್ ಅಲ್ಪಾವಧಿಯ ಯೋಜನೆ ಆಗಿದ್ದು, ಒಟ್ಟು 30 ದಿನಗಳ ವ್ಯಾಲಿಡಿಟಿಯನ್ನು ಒಳಗೊಂಡಿದೆ. ಪ್ರತಿದಿನ 3 GB ಡೇಟಾ ಸೌಲಭ್ಯ ದೊರೆಯುತ್ತದೆ. ಇದರೊಂದಿಗೆ ಪ್ರತಿದಿನ 100 ಎಸ್‌ಎಮ್‌ಎಸ್ ಹಾಗೂ ಅನಿಯಮಿತ ವಾಯಿಸ್ ಕರೆಯ ಸೌಲಭ್ಯಗಳು ಲಭ್ಯವಾಗುತ್ತವೆ. ನಿಗದಿತ ಡೇಟಾ ಮುಗಿದ ಬಳಿಕ ಇಂಟರ್ನೆಟ್ ವೇಗವು 80 Kbps ಗೆ ಕಡಿಮೆಯಾಗುತ್ತದೆ.

ಬಿಎಸ್‌ಎನ್‌ಎಲ್ 599ರೂ. ಪ್ರೀಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು
ಬಿಎಸ್‌ಎನ್‌ಎಲ್ ಟೆಲಿಕಾಂನ 599ರೂ. ಪ್ರೀಪೇಯ್ಡ್ ಯೋಜನೆಯಲ್ಲಿ ಪ್ರತಿದಿನ 5 GB ಡೇಟಾ ಸೌಲಭ್ಯ ದೊರೆಯುತ್ತದೆ. ಇದರೊಂದಿಗೆ ಪ್ರತಿದಿನ 100 ಎಸ್‌ಎಮ್‌ಎಸ್ ಹಾಗೂ ಅನಿಯಮಿತ ವಾಯಿಸ್ ಕರೆಯ ಸೌಲಭ್ಯಗಳು ಲಭ್ಯವಾಗುತ್ತವೆ. ಇನ್ನು ಈ ಯೋಜನೆಯು ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿಯನ್ನು ಹೊಂದಿದೆ. ಒಟ್ಟು ಪೂರ್ಣ ಅವಧಿಯ ವ್ಯಾಲಿಡಿಟಿಯಲ್ಲಿ ಒಟ್ಟು 450 GB ಡೇಟಾ ಪ್ರಯೋಜನ ದೊರೆಯುತ್ತದೆ. ಹೆಚ್ಚುವರಿಯಾಗಿ ಜಿಂಗ್ ಸೇವೆ ಲಭ್ಯವಾಗಲಿದೆ.

ಬಿಎಸ್‌ಎನ್‌ಎಲ್ 499ರೂ. ಪ್ಲ್ಯಾನ್ ಪ್ರಯೋಜನಗಳು
ಬಿಎಸ್‌ಎನ್‌ಎಲ್‌ನ ಈ SVT 499 ರೂ. ಪ್ಲ್ಯಾನ್ ದೀರ್ಘಾವಧಿಯ ಯೋಜನೆ ಆಗಿದ್ದು, ಒಟ್ಟು 90 ದಿನಗಳ ವ್ಯಾಲಿಡಿಟಿಯನ್ನು ಒಳಗೊಂಡಿದೆ. ಈ ಅವಧಿಯಲ್ಲಿ ಪ್ರತಿದಿನ 2 GB ಡೇಟಾ ಪ್ರಯೋಜನ ಲಭ್ಯವಿದ್ದು, ಒಟ್ಟು ಪೂರ್ಣ ಅವಧಿಗೆ 180 GB ಡೇಟಾ ಸಿಗಲಿದೆ. ಇದರೊಂದಿಗೆ ಅನಿಯಮಿತ ವಾಯಿಸ್ ಕರೆಗಳ ಸೌಲಭ್ಯ ಸಹ ದೊರೆಯಲಿದೆ. ಹಾಗೆಯೇ ಡೈಲಿ 100 ಎಸ್‌ಎಮ್‌ಎಸ್ ಸಹ ಸಿಗುತ್ತದೆ. ಹೆಚ್ಚುವರಿಯಾಗಿ ಬಿಎಸ್‌ಎನ್‌ಎಲ್ ಟ್ಯೂನ್ ಮತ್ತು Zing ಪ್ರಯೋಜನ ಲಭ್ಯ.

ಬಿಎಸ್‌ಎನ್‌ಎಲ್ 485ರೂ. ಪ್ರೀಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು
ಬಿಎಸ್‌ಎನ್‌ಎಲ್ ಈ ಯೋಜನೆಯಲ್ಲಿ ಪ್ರತಿದಿನ 1.5 GB ಡೇಟಾ ಸೌಲಭ್ಯ ದೊರೆಯುತ್ತದೆ. ಇದರೊಂದಿಗೆ ಪ್ರತಿದಿನ 100 ಎಸ್‌ಎಮ್‌ಎಸ್ ಹಾಗೂ (FUP ಮಿತಿ ಇಲ್ಲ) ಅನಿಯಮಿತ ವಾಯಿಸ್ ಕರೆಯ ಸೌಲಭ್ಯಗಳು ಲಭ್ಯವಾಗುತ್ತವೆ. ಇನ್ನು ಈ ಯೋಜನೆಯು ಒಟ್ಟು 90 ದಿನಗಳ ವ್ಯಾಲಿಡಿಟಿ ಅವಧಿಯನ್ನು ಹೊಂದಿದೆ. ದಿನದ ನಿಗದಿತ ಡೇಟಾ ಮುಗಿದ ಬಳಿಕ 40 Kbps ವೇಗದಲ್ಲಿ ಇಂಟರ್ನೆಟ್ ಕೆಲಸ ಮಾಡಲಿದೆ.

ಬಿಎಸ್‌ಎನ್‌ಎಲ್ 2399ರೂ. ಪ್ರೀಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು
ಬಿಎಸ್‌ಎನ್‌ಎಲ್ 2399ರೂ. ಯೋಜನೆಯು ವಾರ್ಷಿಕ ಅವಧಿಯ ಪ್ಲ್ಯಾನ್ ಆಗಿದೆ. ಈ ಯೋಜನೆಯು ಇದೀಗ ಹೆಚ್ಚುವರಿಯಾಗಿ 60 ದಿನಗಳ ವ್ಯಾಲಿಡಿಟಿಯನ್ನು ಪಡೆದಿದೆ. ಹೀಗಾಗಿ ಒಟ್ಟು 425 ದಿನಗಳ ವ್ಯಾಲಿಡಿಟಿ ಸಿಗಲಿದೆ. ಈ ಅವಧಿಯಲ್ಲಿ ಪ್ರತಿದಿನ 3GB ಡೇಟಾ ಪ್ರಯೋಜನ ಲಭ್ಯ ಆಗಲಿದೆ. ಜೊತೆಗೆ ಪ್ರತಿದಿನ 100 ಎಸ್‌ಎಮ್‌ಎಸ್ ಸೌಲಭ್ಯ ಸಹ ಸಿಗಲಿದೆ. ಇದರೊಂದಿಗೆ ಅನಿಯಮಿತ ವಾಯಿಸ್ ಕರೆಗಳ ಸೌಲಭ್ಯವು ದೊರೆಯಲಿದೆ. ಹಾಗೆಯೇ ಮುಂಬೈ ಮತ್ತು ದೆಹಲಿ ಎಮ್‌ಟಿಎನ್‌ಎಲ್ ಬಳಕೆದಾರರಗೆ ಅನಿಯಮಿತ ಸಾಂಗ್ ಚೇಂಜ್ ಹಾಗೂ EROS ಚಂದಾದಾರಿಕೆ ಸಹ ಲಭ್ಯ ಆಗಲಿದೆ.

ಬಿಎಸ್‌ಎನ್‌ಎಲ್ 347ರೂ. ಯೋಜನೆಯ ಪ್ರಯೋಜನಗಳು
ಬಿಎಸ್‌ಎನ್‌ಎಲ್ ಟೆಲಿಕಾಂನ 347ರೂ. ಯೋಜನೆಯು 56 ದಿನಗಳ ವ್ಯಾಲಿಡಿಟಿ ಪ್ರಯೋಜನ ಪಡೆದಿದೆ. ಈ ಯೋಜನೆಯು 2GB ದೈನಂದಿನ ಡೇಟಾ, 100 ಎಸ್‌ಎಮ್‌ಎಸ್ ಸೌಲಭ್ಯ ಪಡೆದಿದೆ. ಇದರೊಂದಿಗೆ ಅನಿಯಮಿತ ವಾಯಿಸ್ ಕರೆಯ ಪ್ರಯೋಜನ ಸಹ ಒಳಗೊಂಡಿದೆ. ನಿಗದಿತ ಡೇಟಾ ಮುಗಿದ ಬಳಿಕ ಇಂಟರ್ನೆಟ್ ವೇಗವು 80 Kbps ಇಳಿಯಲಿದೆ. ಹಾಗೆಯೇ ಗ್ರಾಹಕರು M/S ಆನ್‌ಮೊಬೈಲ್ ಗ್ಲೋಬಲ್ ಲಿಮಿಟೆಡ್ ಮತ್ತು ಬಿಎಸ್‌ಎನ್‌ಎಲ್ ಟ್ಯೂನ್ಸ್‌ನಿಂದ ಪ್ರೋಗ್ರೆಸ್ಸಿವ್ ವೆಬ್ APP (PWA) ನಲ್ಲಿ ಸವಾಲುಗಳ ಅರೆನಾ ಮೊಬೈಲ್ ಗೇಮಿಂಗ್ ಸೇವೆಯನ್ನು ಪಡೆಯುತ್ತಾರೆ.


Click it and Unblock the Notifications








