ನೀವು BSNL ಗ್ರಾಹಕರೇ?..ಹಾಗಿದ್ರೆ, ಈ ಬೊಂಬಾಟ್ ಪ್ಲ್ಯಾನ್‌ಗಳ ಬಗ್ಗೆ ನೋಡಿ!
ಭಾರತೀಯ ಟೆಲಿಕಾಂ ಕ್ಷೇತ್ರದಲ್ಲಿ ಸರ್ಕಾರಿ ಸ್ವಾಮ್ಯದ ಬಿಎಸ್‌ಎನ್‌ಎಲ್ ಟೆಲಿಕಾಂ ಖಾಸಗಿ ಟೆಲಿಕಾಂಗಳಿಗೆ ಸ್ಪರ್ಧೆ ಒಡ್ಡುತ್ತಾ ಮುನ್ನಡೆದಿದ್ದು, ಕೆಲವು ಆಕರ್ಷಕ ಪ್ಲ್ಯಾನ್‌ಗಳನ್ನು ಹೊಂದಿದೆ. ಆ ಪೈಕಿ ಬಿಎಸ್‌ಎನ್‌ಎಲ್ ಅಧಿಕ ಡೇಟಾ ಸೌಲಭ್ಯ ಯೋಜನೆಗಳು ಹಾಗೂ ಬಿಗ್ ವ್ಯಾಲಿಡಿಟಿ ಸೌಲಭ್ಯದ ರೀಚಾರ್ಜ್ ಯೋಜನೆಗಳ ಆಯ್ಕೆ ಕೂಡಾ ಗ್ರಾಹಕರಿಗೆ ನೀಡಿದೆ.
ಹೌದು, ಬಿಎಸ್‌ಎನ್‌ಎಲ್ ಸಂಸ್ಥೆಯು ಹಲವು ದೀರ್ಘಾವಧಿ ಪ್ರಿಪೇಯ್ಡ್ ಯೋಜನೆಗಳ ಲಿಸ್ಟ್ ಹೊಂದಿದೆ. ಅವುಗಳಲ್ಲಿ ಬಿಎಸ್‌ಎನ್‌ಎಲ್‌ನ 2399ರೂ. 2999ರೂ ಹಾಗೂ 1999ರೂ. ಬೆಲೆಯ ಪ್ರಿಪೇಯ್ಡ್ ಯೋಜನೆಗಳು ಬೊಂಬಾಟ್ ಎನಿಸಿದೆ. ಈ ಯೋಜನೆಗಳು ವಾರ್ಷಿಕ ವ್ಯಾಲಿಡಿಟಿ ಸೌಲಭ್ಯ ಪಡೆದಿದ್ದು, ಇದರ ಜೊತೆಗೆ ಅಧಿಕ ಡೇಟಾ ಪ್ರಯೋಜನ ಸಹ ಪಡೆದಿವೆ. ಹಾಗಾದರೆ ಈ ಯೋಜನೆಗಳ ಒಟ್ಟಾರೇ ಪ್ರಯೋಜನಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಬಿಎಸ್‌ಎನ್‌ಎಲ್ ಟೆಲಿಕಾಂನ 2399ರೂ. ಪ್ಲ್ಯಾನ್
ಬಿಎಸ್‌ಎನ್‌ಎಲ್ 2399ರೂ. ಪ್ರೀಪೇಯ್ಡ್ ಯೋಜನೆಯು ವಾರ್ಷಿಕ ವ್ಯಾಲಿಡಿಟಿ ಸೌಲಭ್ಯ ಪಡೆದಿದೆ. ಈ ಯೋಜನೆಯಲ್ಲಿ ಗ್ರಾಹಕರಿಗೆ ಪ್ರತಿದಿನ 2GB ಡೇಟಾ ಪ್ರಯೋಜನ ಸಿಗಲಿದ್ದು, ಇದರೊಂದಿಗೆ ನಿತ್ಯ 100 ಎಸ್‌ಎಮ್‌ಎಸ್ ಪ್ರಯೋಜನ ಕೂಡಾ ಲಭ್ಯ ಆಗಲಿದೆ. ಹಾಗೆಯೇ ಅನಿಯಮಿತ ವಾಯಿಸ್ ಕರೆಯ ಸೌಲಭ್ಯ ಸಹ ಗ್ರಾಹಕರಿಗೆ ದೊರೆಯುತ್ತದೆ.

ಇನ್ನುಳಿದಂತೆ ಬಿಎಸ್‌ಎನ್‌ಎಲ್ ಟೆಲಿಕಾಂನ ಈ ಯೋಜನೆಯಲ್ಲಿ ಗ್ರಾಹಕರಿಗೆ ಹೆಚ್ಚುವರಿಯಾಗಿ 30 ದಿನಗಳವರೆಗೆ ಉಚಿತ EROS Now ಸೌಲಭ್ಯ ಸಹ ದೊರೆಯುತ್ತದೆ. ಅಧಿಕ ವ್ಯಾಲಿಡಿಟಿ ಬಯಸುವ ಗ್ರಾಹಕರಿಗೆ ಈ ಯೋಜನೆ ಆಕರ್ಷಕ ಎನಿಸುತ್ತದೆ.
ಬಿಎಸ್‌ಎನ್‌ಎಲ್ ಟೆಲಿಕಾಂನ 2999ರೂ. ಪ್ಲ್ಯಾನ್
ಬಿಎಸ್‌ಎನ್‌ಎಲ್ 2999ರೂ. ಪ್ರೀಪೇಯ್ಡ್ ಯೋಜನೆಯು ವಾರ್ಷಿಕ ವ್ಯಾಲಿಡಿಟಿ ಪ್ಲ್ಯಾನ್ ಆಗಿದ್ದರೂ, ಇದು 395 ದಿನಗಳ ವ್ಯಾಲಿಡಿಟಿ ಸೌಲಭ್ಯ ಹೊಂದಿದೆ. ಈ ಯೋಜನೆಯಲ್ಲಿ ಗ್ರಾಹಕರಿಗೆ ಪ್ರತಿದಿನ 3 GB ಡೇಟಾ ಪ್ರಯೋಜನ ಸಿಗಲಿದ್ದು, ಇದರೊಂದಿಗೆ ನಿತ್ಯ 100 ಎಸ್‌ಎಮ್‌ಎಸ್ ಪ್ರಯೋಜನ ಕೂಡಾ ಲಭ್ಯ ಆಗಲಿದೆ. ಹಾಗೆಯೇ ಅನಿಯಮಿತ ವಾಯಿಸ್ ಕರೆಯ ಸೌಲಭ್ಯ ಸಹ ಗ್ರಾಹಕರಿಗೆ ದೊರೆಯುತ್ತದೆ.
ಬಿಎಸ್‌ಎನ್‌ಎಲ್ ಟೆಲಿಕಾಂನ 1999ರೂ. ಪ್ಲ್ಯಾನ್
ಬಿಎಸ್‌ಎನ್‌ಎಲ್ 1999ರೂ. ಪ್ರೀಪೇಯ್ಡ್ ಯೋಜನೆಯು ಕೂಡಾ ವಾರ್ಷಿಕ ವ್ಯಾಲಿಡಿಟಿ ಪ್ಲ್ಯಾನ್ ಆಗಿದ್ದು, ಇದು 365 ದಿನಗಳ ವ್ಯಾಲಿಡಿಟಿ ಸೌಲಭ್ಯ ಹೊಂದಿದೆ. ಈ ಯೋಜನೆಯಲ್ಲಿ ಗ್ರಾಹಕರಿಗೆ ಪೂರ್ಣ ವ್ಯಾಲಿಡಿಟಿ ಅವಧಿಗೆ ಒಟ್ಟು 600GB ಡೇಟಾ ಪ್ರಯೋಜನ ಲಭ್ಯ ಇದ್ದು, ಇದರೊಂದಿಗೆ ನಿತ್ಯ 100 ಎಸ್‌ಎಮ್‌ಎಸ್ ಪ್ರಯೋಜನ ಕೂಡಾ ಲಭ್ಯ ಆಗಲಿದೆ. ಹಾಗೆಯೇ ಅನಿಯಮಿತ ವಾಯಿಸ್ ಕರೆಯ ಸೌಲಭ್ಯ ಸಹ ಗ್ರಾಹಕರಿಗೆ ದೊರೆಯುತ್ತದೆ.
ಇತರೆ ಬಿಎಸ್‌ಎನ್‌ಎಲ್ ಯೋಜನೆಗಳ ಮಾಹಿತಿ
ಬಿಎಸ್‌ಎನ್‌ಎಲ್ 499ರೂ. ಪ್ಲ್ಯಾನ್ - ಬಿಎಸ್‌ಎನ್‌ಎಲ್‌ನ ಈ SVT 499 ರೂ. ಪ್ಲ್ಯಾನ್ ದೀರ್ಘಾವಧಿಯ ಯೋಜನೆ ಆಗಿದ್ದು, ಒಟ್ಟು 75 ದಿನಗಳ ವ್ಯಾಲಿಡಿಟಿಯನ್ನು ಒಳಗೊಂಡಿದೆ. ಈ ಅವಧಿಯಲ್ಲಿ ಪ್ರತಿದಿನ 1 GB ಡೇಟಾ ಸೌಲಭ್ಯ ಸಿಗಲಿದ್ದು, ಒಟ್ಟು ಪೂರ್ಣ ಅವಧಿಗೆ 75 GB ಡೇಟಾ ಲಭ್ಯ. ಇದರೊಂದಿಗೆ ಅನಿಯಮಿತ ವಾಯಿಸ್ ಕರೆಗಳ ಸೌಲಭ್ಯ ಸಹ ದೊರೆಯಲಿದೆ.
ಬಿಎಸ್‌ಎನ್‌ಎಲ್ 599ರೂ. ಪ್ಲ್ಯಾನ್ - ಬಿಎಸ್‌ಎನ್‌ಎಲ್ 599 ರೂ. ಪ್ರೀಪೇಯ್ಡ್ ಪ್ಲ್ಯಾನಿನಲ್ಲಿ ಪ್ರತಿದಿನ 3 GB ಡೇಟಾ ಸೌಲಭ್ಯ ಸಿಗಲಿದೆ. ಇದರೊಂದಿಗೆ ಪ್ರತಿದಿನ 100 ಎಸ್‌ಎಮ್‌ಎಸ್ ಹಾಗೂ ಅನಿಯಮಿತ ವಾಯಿಸ್ ಕರೆಯ ಸೌಲಭ್ಯಗಳು ಲಭ್ಯವಾಗುತ್ತವೆ. ಇನ್ನು ಈ ಯೋಜನೆಯು ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿಯನ್ನು ಹೊಂದಿದೆ. ಹೆಚ್ಚುವರಿಯಾಗಿ ಜಿಂಗ್ ಸೇವೆ ಸಹ ಲಭ್ಯವಾಗಲಿದೆ.


Click it and Unblock the Notifications








