ಬಿಎಸ್‌ಎನ್‌ಎಲ್‌ನ ಈ ಎರಡು ಪ್ಲ್ಯಾನ್‌ಗಳಲ್ಲಿ ಈಗ ಬೆಸ್ಟ್‌ ಆಫರ್!

|

ಸರ್ಕಾರಿ ಸ್ವಾಮ್ಯದ ಬಿಎಸ್‌ಎನ್‌ಎಲ್‌ ಟೆಲಿಕಾಂ ಖಾಸಗಿ ಟೆಲಿಕಾಂಗಳಿಗೆ ಪೈಪೋಟಿ ನೀಡುವಂತಹ ಆಕರ್ಷಕ ಬ್ರಾಡ್‌ಬ್ಯಾಂಡ್‌ ಪ್ಲ್ಯಾನ್‌ಗಳನ್ನು ಪರಿಚಯಿಸಿ ಸೈ ಅನಿಸಿಕೊಂಡಿದೆ. ಬಿಎಸ್‌ಎನ್‌ಎಲ್‌ ಟೆಲಿಕಾಂ ಅಗ್ಗದ ಪ್ರೈಸ್‌ನಿಂದ ಹೈ ಎಂಡ್‌ ಪ್ರೈಸ್‌ನ ಬೆಲೆಯ ವರೆಗೂ ಹಲವು ಭಿನ್ನ ಭಾರತ್ ಫೈಬರ್ ಬ್ರಾಡ್‌ಬ್ಯಾಂಡ್‌ ಯೋಜನೆಗಳ ಆಯ್ಕೆಯನ್ನು ಗ್ರಾಹಕರಿಗೆ ನೀಡಿದೆ. ಆ ಪೈಕಿ ಬಿಎಸ್‌ಎನ್‌ಎಲ್‌ ತನ್ನ ಎರಡು ಜನಪ್ರಿಯ ಬ್ರಾಡ್‌ಬ್ಯಾಂಡ್‌ ಯೋಜನೆಗಳಲ್ಲಿ ಈಗ ಭರ್ಜರಿ ಕೊಡುಗೆಯನ್ನು ಘೋಷಿಸಿ ಗ್ರಾಹಕರನ್ನು ಸೆಳೆದಿದೆ.

ಸಂಸ್ಥೆಯು

ಹೌದು, ಬಿಎಸ್‌ಎನ್‌ಎಲ್‌ ಸಂಸ್ಥೆಯು ತನ್ನ 999ರೂ. ಮತ್ತು 1,499ರೂ. ಭಾರತ್ ಫೈಬರ್ ಯೋಜನೆಗಳಲ್ಲಿ ಯಾವುದೇ ಹೆಚ್ಚುವರಿ ಶುಲ್ಕ ವಿಲ್ಲದೇ ಡಿಸ್ನಿ ಪ್ಲಸ್‌ ಹಾಟ್‌ಸ್ಟಾರ್‌ ವಿಐಪಿ ಚಂದಾದಾರಿಕೆಯ ಪ್ರಯೋಜನ ನೀಡಿದೆ. ಇತರೆ ಖಾಸಗಿ ಟೆಲಿಕಾಂಗಳು ಅವರ ಬ್ರಾಡ್‌ಬ್ಯಾಂಡ್‌ ಯೋಜನೆಗಳಲ್ಲಿ ಓಟಿಟಿ ಪ್ರಯೋಜನ ಒದಗಿಸಿವೆ. ಆದರೆ ಅವುಗಳು ಡಿಸ್ನಿ ಪ್ಲಸ್‌ ಹಾಟ್‌ಸ್ಟಾರ್‌ ವಿಐಪಿ ಸೇವೆ ಒದಗಿಸಿಲ್ಲ. ಬಿಎಸ್‌ಎನ್‌ಎಲ್‌ ಟೆಲಿಕಾಂ ಈ ಸೇವೆ ಲಭ್ಯಮಾಡಿದ ಟೆಲಿಕಾಂ ಆಗಿ ಗುರುತಿಸಿಕೊಂಡಿದೆ. ಹಾಗಾದರೇ ಬಿಎಸ್‌ಎನ್‌ಎಲ್‌ನ 999ರೂ. ಮತ್ತು 1,499ರೂ. ಯೋಜನೆಗಳ ಪ್ರಯೋಜನಗಳೇನು ಹಾಗೂ ಇತರೆ ಯೋಜನೆಗಳ ಯಾವುವು ಎಂಬುದನ್ನು ಮುಂದೆ ತಿಳಿಯೋಣ ಬನ್ನಿರಿ.

ಬಿಎಸ್‌ಎನ್‌ಎಲ್‌ 999ರೂ. ಭಾರತ್ ಫೈಬರ್  ಪ್ಲ್ಯಾನ್

ಬಿಎಸ್‌ಎನ್‌ಎಲ್‌ 999ರೂ. ಭಾರತ್ ಫೈಬರ್ ಪ್ಲ್ಯಾನ್

ಬಿಎಸ್ಎನ್ಎಲ್ 999ರೂ. ಭಾರತ್ ಫೈಬರ್ ಪ್ಲ್ಯಾನ್ ಅನ್ನು ಫೈಬರ್ ಪ್ರೀಮಿಯಂ ಯೋಜನೆ ಎಂದು ಹೇಳಲಾಗಿದೆ. 3300GB ಅಥವಾ 3.3TB ವರೆಗೆ 100 Mbps ವೇಗದಲ್ಲಿ ಇಂಟರ್ನೆಟ್‌ ಸೌಲಭ್ಯ ನೀಡುತ್ತದೆ. ಡೇಟಾ ಮಿತಿ ಮುಗಿದ ಬಳಿಕ 2 Mbps ವೇಗದಲ್ಲಿ ಇಂಟರ್ನೆಟ್ ಮುಂದುವರೆಯುತ್ತದೆ. ಚಂದಾದಾರರಿಗೆ ಅನಿಯಮಿತ ಧ್ವನಿ ಕರೆ ಪ್ರಯೋಜನವನ್ನು ಸಹ ನೀಡುತ್ತದೆ. ಹಾಗೆಯೇ ಡಿಸ್ನಿ ಪ್ಲಸ್‌ ಹಾಟ್‌ಸ್ಟಾರ್‌ ವಿಐಪಿ ಚಂದಾದಾರಿಕೆಯ ಪ್ರಯೋಜನ ನೀಡಿದೆ.

ಬಿಎಸ್‌ಎನ್‌ಎಲ್‌ 1,499ರೂ. ಭಾರತ್ ಫೈಬರ್ ಪ್ಲ್ಯಾನ್

ಬಿಎಸ್‌ಎನ್‌ಎಲ್‌ 1,499ರೂ. ಭಾರತ್ ಫೈಬರ್ ಪ್ಲ್ಯಾನ್

ಬಿಎಸ್‌ಎನ್‌ಎಲ್ ಈ ಯೋಜನೆಯನ್ನು ಫೈಬರ್ ಅಲ್ಟ್ರಾ ಬ್ರಾಡ್‌ಬ್ಯಾಂಡ್ ಯೋಜನೆ ಎಂದು ಹೆಸರಿಸಲಾಗಿದೆ. ಈ ಯೋಜನೆಯ ತಿಂಗಳ ಶುಲ್ಕ 1,499ರೂ. ಆಗಿದೆ. ಈ ಯೋಜನೆಯು 300 ಎಮ್‌ಬಿಪಿಎಸ್ ವೇಗದೊಂದಿಗೆ ಬರುತ್ತದೆ. ಇದರೊಂದಿಗೆ ಹೆಚ್ಚುವರಿಯಾಗಿ ಡಿಸ್ನಿ ಪ್ಲಸ್‌ ಹಾಟ್‌ಸ್ಟಾರ್‌ ವಿಐಪಿ ಚಂದಾದಾರಿಕೆಯ ಪ್ರಯೋಜನ ನೀಡಿದೆ.

ಬಿಎಸ್‌ಎನ್‌ಎಲ್‌ 499ರೂ. ಭಾರತ್ ಫೈಬರ್ ಪ್ಲ್ಯಾನ್

ಬಿಎಸ್‌ಎನ್‌ಎಲ್‌ 499ರೂ. ಭಾರತ್ ಫೈಬರ್ ಪ್ಲ್ಯಾನ್

ಬಿಎಸ್‌ಎನ್‌ಎಲ್‌ ಹೊಸ 499ರೂ.ಗಳ ಭಾರತ ಫೈಬರ್‌ ಪ್ಲ್ಯಾನ್‌ ಒಂದು ಅಗ್ಗದ ಬ್ರಾಡ್‌ಬ್ಯಾಂಡ್‌ ಪ್ಲ್ಯಾನ್‌ ಆಗಿದೆ. 3.3TB ಡೇಟಾ ಬಳಕೆಯ ವರೆಗೂ 30 Mbps ವೇಗದಲ್ಲಿ ಇಂಟರ್ನೆಟ್ ಸೌಲಭ್ಯವು ಇರುತ್ತದೆ. ನಿಗದಿತ ಡೇಟಾ ಮಿತಿ ಮುಗಿದ ಬಳಿಕ 2 Mbps ವೇಗದಲ್ಲಿ ಇಂಟರ್ನೆಟ್ ಮುಂದುವರೆಯುತ್ತದೆ. ಇದರೊಂದಿಗೆ ಯಾವುದೇ ನೆಟ್‌ವರ್ಕ್‌ಗೆ ಅನಿಯಮಿತ ವಾಯಿಸ್‌ ಕರೆ ಪ್ರಯೋಜನ ಲಭ್ಯ.

ಬಿಎಸ್‌ಎನ್‌ಎಲ್‌ 799ರೂ. ಭಾರತ್ ಫೈಬರ್ ಪ್ಲ್ಯಾನ್

ಬಿಎಸ್‌ಎನ್‌ಎಲ್‌ 799ರೂ. ಭಾರತ್ ಫೈಬರ್ ಪ್ಲ್ಯಾನ್

ಬಿಎಸ್‌ಎನ್‌ಎಲ್ 799ರೂ. ಭಾರತ್ ಫೈಬರ್ ಪ್ಲ್ಯಾನ್ ಅನ್ನು ಫೈಬರ್ ವ್ಯಾಲ್ಯೂ ಎಂದು ಹೆಸರಿಸಲಾಗಿದೆ. ಈ ಪ್ಲ್ಯಾನ್ ತಿಂಗಳಿಗೆ 799ರೂ. ಆಗಿದ್ದು, 3300GB ಅಥವಾ 3.3TB ವರೆಗೆ 100 Mbps ವೇಗದಲ್ಲಿ ಇಂಟರ್ನೆಟ್‌ ಸೌಲಭ್ಯ ನೀಡುತ್ತದೆ. ಡೇಟಾ ಮಿತಿ ಮುಗಿದ ಬಳಿಕ 2 Mbps ವೇಗದಲ್ಲಿ ಇಂಟರ್ನೆಟ್ ಮುಂದುವರೆಯುತ್ತದೆ.

Best Mobiles in India

English summary
While private ISPs are offering Disney+ Hotstar VIP subscription, BSNL is providing Disney+ Hotstar Premium membership.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X