Just In
- 47 min ago
2023ರಲ್ಲಿ ಸ್ಮಾರ್ಟ್ಫೋನ್ ಖರೀದಿಸುವ ಮುನ್ನ ನೀವು ಗಮನಿಸಲೇಬೇಕಾದ ವಿಚಾರಗಳು!
- 1 hr ago
Ooredoo ಸಂಸ್ಥೆಯಿಂದ ಮೈಕ್ರೋಸಾಫ್ಟ್ ಟೀಮ್ಸ್ ಫೋನ್ ಬಗ್ಗೆ ಘೋಷಣೆ; ಯಾರಿಗೆ ಉಪಯೋಗ!?
- 2 hrs ago
ಇನ್ಸ್ಟಾಗ್ರಾಮ್ನಲ್ಲಿ ನೂತನ ಸೌಲಭ್ಯ!; ಟೀನೇಜರ್ಸ್ಗೆ ಸಖತ್ ಅನುಕೂಲ!
- 2 hrs ago
ಇನ್ಫಿನಿಕ್ಸ್ ನೋಟ್ 12i ಲಾಂಚ್ ಡೇಟ್ ಬಹಿರಂಗ! ಫೀಚರ್ಸ್ ಹೇಗಿದೆ?
Don't Miss
- Movies
ದರ್ಶನ್ ಫಾರ್ಮ್ಹೌಸ್ ಮೇಲೆ ಅರಣಾಧಿಕಾರಿಗಳ ರೇಡ್: ವಜ್ಯ ಜೀವಗಳು ವಶ
- News
ಪ್ರಧಾನಿ ಮೋದಿ ಸಾಕ್ಷ್ಯಚಿತ್ರ ಹಂಚಿಕೆ ಟ್ವೀಟ್ಗಳಿಗೆ ಕೇಂದ್ರದ ನಿರ್ಬಂಧ
- Finance
NRI PAN Card: ಎನ್ಆರ್ಐ ಪ್ಯಾನ್ ಕಾರ್ಡ್ಗೆ ಆನ್ಲೈನ್ ಅರ್ಜಿ ಸಲ್ಲಿಸುವುದು ಹೇಗೆ?
- Automobiles
ಬಹುಬೇಡಿಕೆಯ ಹೋಂಡಾ ಆಕ್ಟಿವಾ ಸ್ಕೂಟರ್ ಮೇಲೆ ಭರ್ಜರಿ ಆಫರ್
- Sports
IND Vs NZ 2nd ODI: ಭಾರತದ ಬೌಲಿಂಗ್ ದಾಳಿಗೆ ತತ್ತರಿಸಿದ ಕಿವೀಸ್ ಪಡೆ: 108 ರನ್ಗಳಿಗೆ ಆಲೌಟ್
- Lifestyle
ದೇಹದಲ್ಲಿ ಮೆಗ್ನೇಸಿಯಂ ಕಡಿಮೆಯಾದ್ರೆ ಹೃದ್ರೋಗ ಖಚಿತ..! ಈ ಹತ್ತು ಆಹಾರಗಳು ನಿಮ್ಮ ಡಯಟ್ನಲ್ಲಿರಲಿ..
- Education
KVS Recruitment 2022 : ಕೇಂದ್ರೀಯ ವಿದ್ಯಾಲಯ ಸಂಗತನ್ ದಲ್ಲಿ 13404 ಹುದ್ದೆಗಳ ನೇಮಕಾತಿ
- Travel
ಯಾವುದೇ ಚಿಂತೆ ಇಲ್ಲದೆ ಸುಖಕರ ಪ್ರಯಾಣ ಅನುಭವಿಸಲು ಇಲ್ಲಿದೆ ಸಲಹೆಗಳು
ಬಿಎಸ್‌ಎನ್‌ಎಲ್ ಗ್ರಾಹಕರಿಗೆ ದಿಢೀರ್ ಬಿಗ್ ಶಾಕ್!..ಈ ಪ್ರಯೋಜನ ಇನ್ನು ಸಿಗಲ್ಲ!
ಭಾರತ್ ಸಂಚಾರ್ ನಿಗಮ್ ಲಿಮಿಟೆಡ್ (BSNL) ಕೆಲವೊಂದು ಅತ್ಯುತ್ತಮ ಪ್ರಯೋಜನಗಳ ಪ್ರಿಪೇಯ್ಡ್ ಯೋಜನೆಗಳ ಆಯ್ಕೆ ಹೊಂದಿದೆ. ಆ ಪೈಕಿ ಬಿಎಸ್‌ಎನ್‌ಎಲ್ ಟೆಲಿಕಾಂನ 499ರೂ. ಪ್ರಿಪೇಯ್ಡ್ ಯೋಜನೆಯು ಅಧಿಕ ಡೇಟಾ ಹಾಗೂ ವ್ಯಾಲಿಡಿಟಿ ಪ್ರಯೋಜನಗಳಿಂದ ಗ್ರಾಹಕರನ್ನು ಆಕರ್ಷಸಿದೆ. ಆದರೆ, ಇದೀಗ ಬಿಎಸ್‌ಎನ್‌ಎಲ್ ಟೆಲಿಕಾಂ ಈ ಯೋಜನೆಯಲ್ಲಿ ಭಾರೀ ಬದಲಾವಣೆ ಮಾಡಿದ್ದು, ಗ್ರಾಹಕರಿಗೆ ಬಿಗ್ ಶಾಕ್ ಎನಿಸಿದೆ.

ಹೌದು, ಬಿಎಸ್‌ಎನ್‌ಎಲ್ (BSNL) ಟೆಲಿಕಾಂ ತನ್ನ 499ರೂ. ಪ್ರೀಪೇಯ್ಡ್ ಪ್ಲ್ಯಾನಿನಲ್ಲಿ ಪರಿಷ್ಕರಣೆ ಮಾಡಿದ್ದು, ಕೆಲವು ಪ್ರಯೋಜನಗಳನ್ನು ಕಡಿತ ಮಾಡಿದೆ. ಅದಾಗ್ಯೂ, ಈ ಯೋಜನೆಯಲ್ಲಿನ ಡೇಟಾ ಪ್ರಯೋಜನದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ಹಾಗೆಯೇ ಅನಿಯಮಿತ ವಾಯಿಸ್ ಕರೆಯ ಸೌಲಭ್ಯ ಹಾಗೂ ಎಸ್‌ಎಮ್‌ಎಸ್ ಪ್ರಯೋಜನ ಸಹ ದೊರೆಯಲಿದೆ. ಹಾಗಾದರೆ ಬಿಎಸ್‌ಎನ್‌ಎಲ್ ಟೆಲಿಕಾಂನ 499ರೂ. ಪ್ರೀಪೇಯ್ಡ್ ಪ್ಲ್ಯಾನಿನ ನೂತನ ಪ್ರಯೋಜನಗಳೆನು ಹಾಗೂ ಇತರೆ ಜನಪ್ರಿಯ ಯೋಜನೆಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಬಿಎಸ್‌ಎನ್‌ಎಲ್ 499ರೂ. ಪ್ರೀಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು
ಬಿಎಸ್‌ಎನ್‌ಎಲ್ ಟೆಲಿಕಾಂನ 499ರೂ. ಪ್ರಿಪೇಯ್ಡ್ ಪ್ಲ್ಯಾನ್ ಪರಿಷ್ಕರಣೆ ಬಳಿಕ ಈಗ 80 ದಿನಗಳ ವ್ಯಾಲಿಡಿಟಿ ಪ್ರಯೋಜನ ಪಡೆದಿದೆ. ಇದರೊಂದಿಗೆ ಪ್ರತಿದಿನ 2GB ದೈನಂದಿನ ಡೇಟಾ, ಅನಿಯಮಿತ ವಾಯಿಸ್ ಕರೆಯ ಸೌಲಭ್ಯ ಲಭ್ಯವಾಗಲಿದೆ. ಹಾಗೆಯೇ ಈ ಯೋಜನೆಯಲ್ಲಿ ಪ್ರತಿದಿನ 100 ಎಸ್‌ಎಮ್‌ಎಸ್ ಪ್ರಯೋಜನ ಸಿಗಲಿದ್ದು, ಇದರೊಂದಿಗೆ PRBT, Zing ಮತ್ತು ಎರೋಸ್ ನವ್ ಪ್ರಯೋಜನಗಳು ಸಹ ದೊರೆಯುತ್ತವೆ.

ಬಿಎಸ್‌ಎನ್‌ಎಲ್ 499ರೂ. ಪ್ಲ್ಯಾನ್- ಹಳೆಯ ಪ್ರಯೋಜನಗಳ ಮಾಹಿತಿ
ಈ ಯೋಜನೆ ಪರಿಷ್ಕರಣೆ ಆಗುವ ಮುನ್ನ ಒಟ್ಟು 90 ದಿನಗಳ ವ್ಯಾಲಿಡಿಟಿ ಪ್ರಯೋಜನ ಇದರೊಂದಿಗೆ ಉಳಿದಂತೆ ಪ್ರತಿದಿನ 2GB ದೈನಂದಿನ ಡೇಟಾ, ಅನಿಯಮಿತ ವಾಯಿಸ್ ಕರೆಯ ಸೌಲಭ್ಯ ಲಭ್ಯವಿತ್ತು. ಹಾಗೆಯೇ ಈ ಯೋಜನೆಯಲ್ಲಿ ಪ್ರತಿದಿನ 100 ಎಸ್‌ಎಮ್‌ಎಸ್ ಪ್ರಯೋಜನ ಪಡೆದಿತ್ತು, ಇದರೊಂದಿಗೆ PRBT, Zing ಮತ್ತು ಎರೋಸ್ ನವ್ ಪ್ರಯೋಜನಗಳು ಸಹ ಒಳಗೊಂಡಿತ್ತು.

ಬಿಎಸ್‌ಎನ್‌ಎಲ್ 599ರೂ. ಪ್ರೀಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು
ಬಿಎಸ್‌ಎನ್‌ಎಲ್ ಟೆಲಿಕಾಂನ 599ರೂ. ಪ್ರೀಪೇಯ್ಡ್ ಯೋಜನೆಯಲ್ಲಿ ಪ್ರತಿದಿನ 5 GB ಡೇಟಾ ಸೌಲಭ್ಯ ದೊರೆಯುತ್ತದೆ. ಇದರೊಂದಿಗೆ ಪ್ರತಿದಿನ 100 ಎಸ್‌ಎಮ್‌ಎಸ್ ಹಾಗೂ ಅನಿಯಮಿತ ವಾಯಿಸ್ ಕರೆಯ ಸೌಲಭ್ಯಗಳು ಲಭ್ಯವಾಗುತ್ತವೆ. ಇನ್ನು ಈ ಯೋಜನೆಯು ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿಯನ್ನು ಹೊಂದಿದೆ. ಒಟ್ಟು ಪೂರ್ಣ ಅವಧಿಯ ವ್ಯಾಲಿಡಿಟಿಯಲ್ಲಿ ಒಟ್ಟು 450 GB ಡೇಟಾ ಪ್ರಯೋಜನ ದೊರೆಯುತ್ತದೆ. ಹೆಚ್ಚುವರಿಯಾಗಿ ಜಿಂಗ್ ಸೇವೆ ಲಭ್ಯವಾಗಲಿದೆ.

ಬಿಎಸ್‌ಎನ್‌ಎಲ್ 499ರೂ. ಪ್ರೀಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು
ಬಿಎಸ್‌ಎನ್‌ಎಲ್‌ನ ಈ SVT 499 ರೂ. ಪ್ಲ್ಯಾನ್ ದೀರ್ಘಾವಧಿಯ ಯೋಜನೆ ಆಗಿದ್ದು, ಒಟ್ಟು 90 ದಿನಗಳ ವ್ಯಾಲಿಡಿಟಿಯನ್ನು ಒಳಗೊಂಡಿದೆ. ಈ ಅವಧಿಯಲ್ಲಿ ಪ್ರತಿದಿನ 2 GB ಡೇಟಾ ಪ್ರಯೋಜನ ಲಭ್ಯವಿದ್ದು, ಒಟ್ಟು ಪೂರ್ಣ ಅವಧಿಗೆ 180 GB ಡೇಟಾ ಸಿಗಲಿದೆ. ಇದರೊಂದಿಗೆ ಅನಿಯಮಿತ ವಾಯಿಸ್ ಕರೆಗಳ ಸೌಲಭ್ಯ ಸಹ ದೊರೆಯಲಿದೆ. ಹಾಗೆಯೇ ಡೈಲಿ 100 ಎಸ್‌ಎಮ್‌ಎಸ್ ಸಹ ಸಿಗುತ್ತದೆ. ಹೆಚ್ಚುವರಿಯಾಗಿ ಬಿಎಸ್‌ಎನ್‌ಎಲ್ ಟ್ಯೂನ್ ಮತ್ತು Zing ಪ್ರಯೋಜನ ಲಭ್ಯ.

ಬಿಎಸ್‌ಎನ್‌ಎಲ್ 347ರೂ. ಯೋಜನೆಯ ಪ್ರಯೋಜನಗಳು
ಬಿಎಸ್‌ಎನ್‌ಎಲ್ ಟೆಲಿಕಾಂನ 347ರೂ. ಯೋಜನೆಯು 56 ದಿನಗಳ ವ್ಯಾಲಿಡಿಟಿ ಪ್ರಯೋಜನ ಪಡೆದಿದೆ. ಈ ಯೋಜನೆಯು 2 GB ದೈನಂದಿನ ಡೇಟಾ, 100 ಎಸ್‌ಎಮ್‌ಎಸ್ ಸೌಲಭ್ಯ ಪಡೆದಿದೆ. ಇದರೊಂದಿಗೆ ಅನಿಯಮಿತ ವಾಯಿಸ್ ಕರೆಯ ಪ್ರಯೋಜನ ಸಹ ಒಳಗೊಂಡಿದೆ.
-
54,999
-
36,599
-
39,999
-
38,990
-
1,29,900
-
79,990
-
38,900
-
18,999
-
19,300
-
69,999
-
79,900
-
1,09,999
-
1,19,900
-
21,999
-
1,29,900
-
12,999
-
44,999
-
15,999
-
7,332
-
17,091
-
29,999
-
7,999
-
8,999
-
45,835
-
77,935
-
48,030
-
29,616
-
57,999
-
12,670
-
79,470