BSNLನಿಂದ 249ರೂ. ರೀಚಾರ್ಜ್ ಪ್ಲ್ಯಾನ್‌ ಲಾಂಚ್; ಬೆದರಿದ ಖಾಸಗಿ ಟೆಲಿಕಾಂಗಳು!

|

ಸರ್ಕಾರಿ ಸ್ವಾಮ್ಯದ ಬಿಎಸ್‌ಎನ್‌ಎಲ್‌ ಖಾಸಗಿ ಟೆಲಿಕಾಂಗಳಿಗೆ ಟಾಂಗ್ ನೀಡುವಂತಹ ಹಲವು ಆಕರ್ಷಕ ಯೋಜನೆಗಳನ್ನು ಪರಿಚಯಿಸಿದೆ. ಅವುಗಳಲ್ಲಿ ಬಿಎಸ್‌ಎನ್‌ಎಲ್‌ ಬಹುತೇಕ ಪ್ರೀಪೇಯ್ಡ್‌ ಯೋಜನೆಗಳು ಅಧಿಕ ವ್ಯಾಲಿಡಿಟಿ ಹಾಗೂ ಡೇಟಾ ಪ್ರಯೋಜನಗಳ ಸೌಲಭ್ಯಗಳನ್ನು ಪಡೆದಿವೆ. ಅದೇ ಹಾದಿಯಲ್ಲಿ ಮುನ್ನಡೆದಿರುವ ಬಿಎಸ್‌ಎನ್‌ಎಲ್‌ ಇದೀಗ ಮತ್ತೊಂದು ಹೊಸ ಪ್ರೀಪೇಯ್ಡ್ ಪ್ಲ್ಯಾನ್ ಪರಿಚಯಿದ್ದು, ಖಾಸಗಿ ಟೆಲಿಕಾಂಗಳು ದಂಗಾಗುವಂತಾಗಿದೆ.

ಬಿಎಸ್‌ಎನ್‌ಎಲ್

ಹೌದು, ಬಿಎಸ್‌ಎನ್‌ಎಲ್ ಟೆಲಿಕಾಂ ನೂತನವಾಗಿ 249ರೂ.ಗಳ ಫಸ್ಟ್‌ ರೀಚಾರ್ಜ್ ಕೂಪನ್‌(FRC) ಅನ್ನು ಪರಿಚಯಿಸಿದೆ. ಬಿಎಸ್‌ಎನ್‌ಎಲ್‌ನ ಈ ಫಸ್ಟ್‌ ರೀಚಾರ್ಜ್ ಕೂಪನ್ ಆಕರ್ಷಕ ವ್ಯಾಲಿಡಿಟಿ ಅವಧಿ ಸೇರಿದಂತೆ ಪ್ರತಿದಿನ ಡೇಟಾ ಹಾಗೂ ವಾಯಿಸ್‌ ಕರೆಗಳ ಪ್ರಯೋಜನಗಳನ್ನು ಹೊಂದಿದೆ. ಅಗ್ಗದ ಬೆಲೆಯಲ್ಲಿ ಆಕರ್ಷಕ ಪ್ರಯೋಜನಗಳನ್ನು ಒಳಗೊಂಡಿರುವ ಈ ನೂತನ ರೀಚಾರ್ಜ್ ಯೋಜನೆಯು ಸೀಮಿತ ಅವಧಿಗೆ ಲಭ್ಯತೆ ಹೊಂದಿದೆ. ಹಾಗಾದರೇ ಬಿಎಸ್‌ಎನ್‌ಎಲ್‌ನ ಈ ಹೊಸ ಯೋಜನೆಯ ಪ್ರಯೋಜನೆಗಳೆನು ಎಂಬುದನ್ನು ಮುಂದೆ ನೋಡೋಣ ಬನ್ನಿರಿ.

ಬಿಎಸ್‌ಎನ್‌ಎಲ್‌ 249ರೂ.ಗಳ FRC ಪ್ಲ್ಯಾನ್

ಬಿಎಸ್‌ಎನ್‌ಎಲ್‌ 249ರೂ.ಗಳ FRC ಪ್ಲ್ಯಾನ್

ಬಿಎಸ್‌ಎನ್‌ಎಲ್‌ ಹೊಸ ಫಸ್ಟ್‌ ರೀಚಾರ್ಜ್ ಕೂಪನ್ ಯೋಜನೆಯಲ್ಲಿ ಪ್ರತಿದಿನ 2GB ಡೇಟಾ ಪ್ರಯೋಜನ ದೊರೆಯಲಿದೆ. ಇದರೊಂದಿಗೆ ಪ್ರತಿದಿನ 100 ಎಸ್‌ಎಮ್‌ಎಸ್‌ ಸಿಗಲಿವೆ ಹಾಗೂ ಯಾವುದೇ ನೆಟವರ್ಕ್‌ಗೆ ಅನಿಯಮಿತ ವಾಯಿಸ್‌ ಕರೆಯ ಸೌಲಭ್ಯವು ಸಹ ಲಭ್ಯವಾಗುತ್ತವೆ. ಇನ್ನು ಈ ಯೋಜನೆಯು ಒಟ್ಟು 60 ದಿನಗಳ ವ್ಯಾಲಿಡಿಟಿ ಅವಧಿಯನ್ನು ಹೊಂದಿದೆ. ಹಾಗೆಯೇ ಬಿಎಸ್‌ಎನ್‌ಎಲ್ ವಾರ್ಷಿಕ ವ್ಯಾಲಿಡಿಟಿಯ ಯೋಜನೆಗಳನ್ನು ಹೊಂದಿದೆ. ಅವುಗಳ ಬಗ್ಗೆ ತಿಳಿಯಲು ಮುಂದೆ ಸ್ಕ್ರಾಲ್ ಮಾಡಿ.

ಬಿಎಸ್‌ಎನ್‌ಎಲ್‌ 693ರೂ.ಪ್ಲ್ಯಾನ್

ಬಿಎಸ್‌ಎನ್‌ಎಲ್‌ 693ರೂ.ಪ್ಲ್ಯಾನ್

ಹಾಗೆಯೇ ಬಿಎಸ್‌ಎನ್‌ಎಲ್‌ 693ರೂ. ಡೇಟಾ ಎಸ್‌ಟಿವಿ ಯೋಜನೆಯು ಒಟ್ಟು 365 ದಿನಗಳ ವ್ಯಾಲಿಡಿಟಿ ಅವಧಿಯನ್ನು ಹೊಂದಿದೆ. ಈ ಪ್ಲ್ಯಾನಿನಲ್ಲಿ ಪೂರ್ಣ ವ್ಯಾಲಿಡಿಟಿ ಅವಧಿಗೆ ಒಟ್ಟು 300GB ಡೇಟಾ ಸೌಲಭ್ಯ ಲಭ್ಯವಾಗಲಿದೆ. ಇದು ಡೇಟಾ ಪ್ರೀಪೇಯ್ಡ್ ಯೋಜನೆ ಆಗಿರುವುದರಿಂದ ಯಾವುದೇ ವಾಯಿಸ್‌ ಕರೆ ಹಾಗೂ ಎಸ್‌ಎಮ್‌ಎಸ್‌ ಸೌಲಭ್ಯಗಳು ದೊರೆಯುವುದಿಲ್ಲ.

ಬಿಎಸ್‌ಎನ್‌ಎಲ್‌ 1,212ರೂ.ಪ್ಲ್ಯಾನ್

ಬಿಎಸ್‌ಎನ್‌ಎಲ್‌ 1,212ರೂ.ಪ್ಲ್ಯಾನ್

ಬಿಎಸ್‌ಎನ್‌ಎಲ್‌ 1,212ರೂ. ಡೇಟಾ ಎಸ್‌ಟಿವಿ ಡೇಟಾ ಯೋಜನೆಯು ಒಟ್ಟು 365 ದಿನಗಳ ವ್ಯಾಲಿಡಿಟಿ ಅವಧಿಯನ್ನು ಹೊಂದಿದೆ. ಈ ಪ್ಲ್ಯಾನಿನಲ್ಲಿ ಪೂರ್ಣ ವ್ಯಾಲಿಡಿಟಿ ಅವಧಿಗೆ ಒಟ್ಟು 500GB ಡೇಟಾ ಪ್ರಯೋಜನೆ ದೊರೆಯುತ್ತದೆ. ಈ ಯೋಜನೆಯಲ್ಲಿ ಗ್ರಾಹಕರಿಗೆ ಯಾವುದೇ ವಾಯಿಸ್‌ ಕರೆ ಹಾಗೂ ಎಸ್‌ಎಮ್‌ಎಸ್‌ ಸೌಲಭ್ಯಗಳು ದೊರೆಯುವುದಿಲ್ಲ. ಇದೊಂದು ಡೇಟಾ ಪ್ಲ್ಯಾನ್ ಆಗಿದೆ.

ಬಿಎಸ್‌ಎನ್‌ಎಲ್‌ 2,399ರೂ. ಪ್ಲ್ಯಾನ್

ಬಿಎಸ್‌ಎನ್‌ಎಲ್‌ 2,399ರೂ. ಪ್ಲ್ಯಾನ್

ಬಿಎಸ್‌ಎನ್‌ಎಲ್‌ನ ಈ ಪ್ಲ್ಯಾನ್ ಒಟ್ಟು 600 ದಿನಗಳ ವ್ಯಾಲಿಡಿಟಿ ಅವಧಿಯನ್ನು ಒಳಗೊಂಡಿದ್ದು, ಈ ಅವಧಿಯಲ್ಲಿ ಪ್ರತಿದಿನ 250 FUP ನಿಮಿಷಗಳ ಮಿತಿಯಲ್ಲಿ ಉಚಿತ ವಾಯಿಸ್‌ ಕರೆಗಳ ಪ್ರಯೋಜನವನ್ನು ಒದಗಿಸಲಿದೆ. ಇದರೊಂದಿಗೆ ಪ್ರತಿದಿನ 100 ಎಸ್‌ಎಮ್‌ಎಸ್‌ಗಳ ಸೌಲಭ್ಯ ದೊರೆಯಲಿದ್ದು, 60 ದಿನಗಳಿಗೆ ಬಿಎಸ್‌ಎನ್‌ಎಲ್‌ ಟ್ಯೂನ್‌ ಸೌಲಭ್ಯವು ಸಿಗಲಿದೆ. ಆದರೆ ಯಾವುದೇ ಡೇಟಾ ಪ್ರಯೋಜನ ಲಭ್ಯ ಇರುವುದಿಲ್ಲ. ಡೇಟಾ ಅಗತ್ಯ ಇರದ ಹಾಗೂ ವಾಯಿಸ್ ಕರೆ ಮತ್ತು ಹೆಚ್ಚಿನ ವ್ಯಾಲಿಡಿಟಿ ಬಯಸುವ ಗ್ರಾಹಕರಿಗೆ ಈ ಪ್ಲ್ಯಾನ್ ಉತ್ತಮ ಆಯ್ಕೆ ಆಗಿದೆ.

Most Read Articles
Best Mobiles in India

English summary
Bharat Sanchar Nigam Limited (BSNL) has just launched a new first recharge coupon (FRC) of Rs 249.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X