ಪ್ರಿಪೇಯ್ಡ್‌ ಚಂದಾದಾರರಿಗೆ ಬಿಗ್‌ ಶಾಕ್‌ ಕೊಟ್ಟ ಬಿಎಸ್‌ಎನ್‌ಎಲ್‌!

|

ಕಳೆದ ಒಂದು ವಾರದ ಅವಧಿಯಿಂದ ಟೆಲಿಕಾಂ ವಲಯದಲ್ಲಿ ಸಾಕಷ್ಟು ಬದಲಾವಣೆಗಳು ನಡೆಯುತ್ತಿವೆ. ಖಾಸಗಿ ಟೆಲಿಕಾಂಗಳಾದ ಏರ್‌ಟೆಲ್‌, ವಿ ಟೆಲಿಕಾಂಗಳು ಪ್ರಿಪೇಯ್ಡ್‌ ಪ್ಲಾನ್‌ಗಳ ಬೆಲೆ ಹೆಚ್ಚಳ ಮಾಡುವ ಮೂಲಕ ಶಾಕ್‌ ನೀಡಿವೆ. ಇದೀಗ ಸರ್ಕಾರಿ ಸ್ವಾಮ್ಯದ ಬಿಎಸ್‌ಎನ್‌ಎಲ್‌ ಟೆಲಿಕಾಂ ಕೂಡ ತನ್ನ ಗ್ರಾಹಕರಿಗೆ ಬಿಗ್‌ ಶಾಕ್‌ ನೀಡಿದೆ. ಬಿಎಸ್‌ಎನ್‌ಎಲ್‌ ತನ್ನ ಗ್ರಾಹಕರಿಗೆ ನೀಡುತ್ತಿದ್ದ ಲೈಫ್‌ಟೈಂ ಪ್ರಿಪೇಯ್ಡ್‌ ಪ್ಲಾನ್‌ಗಳನ್ನು ಸ್ಥಗಿತಗೊಳಿಸುವುದಾಗಿ ಹೇಳಿದೆ.

ಬಿಎಸ್‌ಎನ್‌ಎಲ್‌

ಹೌದು, ಬಿಎಸ್‌ಎನ್‌ಎಲ್‌ ಟೆಲಿಕಾಂ ಲೈಫ್‌ಟೈಂ ಪ್ರಿಪೇಯ್ಡ್‌ ಪ್ಲಾನ್‌ಗಳನ್ನು ಸ್ಥಗಿತಗೊಳಿಸಿದೆ. ಈ ಮೂಲಕ BSNL ದೇಶಾದ್ಯಂತ ತನ್ನ ಎಲ್ಲಾ ಲೈಫ್‌ಟೈಂ ಪ್ರಿಪೇಯ್ಡ್ ಯೋಜನೆಗಳನ್ನು ಸ್ಥಗಿತಗೊಳಿಸಿದೆ. ಬಿಎಸ್‌ಎನ್‌ಎಲ್‌ ಈ ಪ್ಲಾನ್‌ಗಳ ಸ್ಥಗಿತಕ್ಕೆ ಕಾರಣ ಏನು ಅನ್ನೊದನ್ನ ತಿಳಿಸಿಲ್ಲ. ಆದರೆ ಈ ಯೋಜನೆಗಳ ಅಸ್ತಿತ್ವದಲ್ಲಿರುವ ಗ್ರಾಹಕರಿಗೆ ಇದಕ್ಕೆ ಪರಿಹಾರವನ್ನು ಕೂಡ ಸೂಚಿಸಿದೆ. ಅಂದರೆ ಲೈಪ್‌ಟೈಂ ಪ್ರಿಪೇಯ್ಡ್ ಗ್ರಾಹಕರನ್ನು 107ರೂ.ಗಳ ಪ್ರೀಮಿಯಂ ಪರ್ ಮಿನಿಟ್‌ ಪ್ಲಾನ್‌ಗಳ ಸ್ಥಳಾಂತರಿಸಲಾಗುವುದಾಗಿ ಹೇಳಿದೆ. ಹಾಗಾದ್ರೆ ಬಿಎಸ್‌ಎನ್‌ಎಲ್‌ ಲೈಫ್‌ಟೈಂ ಪ್ಲಾನ್‌ ಸ್ಥಗಿತದ ನಂತರ ಗ್ರಾಹಕರಿಗೆ ಸೂಕ್ತವಾಗುವ ಪ್ಲಾನ್‌ಗಳು ಯಾವುವು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಬಿಎಸ್‌ಎನ್‌ಎಲ್‌

ಬಿಎಸ್‌ಎನ್‌ಎಲ್‌ ಲೈಫ್‌ಟೈಂ ಪ್ರಿಪೇಯ್ಡ್‌ ಪ್ಲಾನ್‌ಗಳನ್ನು ಸ್ಥಗಿತ ಗೊಳಿಸಿ ಗ್ರಾಹಕರನ್ನು 107 ಪ್ರೀಮಿಯಂ ಪರ್‌ ಮಿನಿಟ್ ಪ್ಲಾನ್‌ಗೆ ಸ್ಥಳಾಂತರಿಸುತ್ತಿದೆ. ಲೈಪ್‌ಟೈಂ ನಿಂದ ಪ್ರಿಮಿಯಂ ಪ್ಲಾನ್‌ಗೆ ಬದಲಾದ ಚಂದಾದಾರರು ಯಾವುದೇ ಉಚಿತಗಳಿಗೆ ಪ್ರವೇಶವನ್ನು ಹೊಂದಿರುವುದಿಲ್ಲ. ಈ ವಲಸೆ ಡಿಸೆಂಬರ್ 1 ರಿಂದ ಪ್ರಾರಂಭವಾಗಲಿದೆ ಎಂದು BSNL ಹೇಳಿಕೊಂಡಿದೆ. ಇನ್ನು ಈ 107ರೂ.ಗಳ ಪ್ರಿಮಿಯಂ ಪ್ಲಾನ್‌ 90 ದಿನಗಳ ಮಾನ್ಯತೆಯ ಅವಧಿಯನ್ನು ನೀಡುತ್ತದೆ.

BSNL

ಇನ್ನು ನೀವು BSNL ಲೈಫ್‌ ಟೈಂ ಪ್ರಿಪೇಯ್ಡ್ ಪ್ಲಾನ್ ಗ್ರಾಹಕರಾಗಿದ್ದರೆ, 107 ಪ್ರೀಮಿಯಂ ಪರ್‌ ಮಿನಿಟ್‌ ಪ್ಲಾನ್‌ ಬಗ್ಗೆ ತಿಳಿದುಕೊಳ್ಳುವುದು ಉತ್ತಮ. 107ರೂ.ಗಳ ಪ್ರಿಮಿಯಂ ಪರ್‌ ಮಿನಿಟ್‌ ಪ್ಲಾನ್‌ ಒಟ್ಟು 90 ದಿನಗಳ ಮಾನ್ಯತೆಯನ್ನು ನೀಡುತ್ತದೆ. ಇದರಲ್ಲಿ ಚಂದಾದಾರರು ಅನ್‌ಲಿಮಿಟೆಡ್‌ ಇನ್‌ಕಮಿಂಗ್‌ ಕರೆ ಸೌಲಭ್ಯ ಪಡೆಯಲಿದ್ದಾರೆ. ಇನ್ನು 10GB ಡೇಟಾ ಸೌಲಭ್ಯ ದೊರೆಯಲಿದ್ದು, ಇದು 30 ದಿನಗಳವರೆಗೆ ಮಾತ್ರ ಲಭ್ಯವಿರಲಿದೆ. ಇದು ಪರ್‌ ಮಿನಿಟ್‌ ಪ್ಲಾನ್‌ ಅದರೂ BSNL ಒಟ್ಟು 100 ನಿಮಿಷಗಳ ಔಟ್‌ಗೋಯಿಂಗ್‌ ಕರೆಗಳನ್ನು ಒಟ್ಟುಗೂಡಿಸುತ್ತಿದೆ. ಆದರೆ ಅದನ್ನು 24 ದಿನಗಳವರೆಗೆ ಮಾತ್ರ ಪ್ರವೇಶಿಸಬಹುದಾಗಿದೆ.

BSNL

ಇದಲ್ಲದೆ ಈ ಪ್ಲಾನ್‌ ಮೂಲಕ BSNL ಗ್ರಾಹಕರು 60 ದಿನಗಳ ಅವಧಿಗೆ ಉಚಿತ BSNL ಡೀಫಾಲ್ಟ್ ಟ್ಯೂನ್‌ಗಳನ್ನು ಉಚಿತವಾಗಿ ಪಡೆಯಬಹುದು. ಈ ಯೋಜನೆಯೊಂದಿಗೆ ಇತರ ಸಂಬಂಧಿತ ಪ್ರಯೋಜನಗಳು 3GB ಉಚಿತ ಡೇಟಾವನ್ನು ಒಳಗೊಂಡಿರುತ್ತವೆ, ಅದು 84 ದಿನಗಳ ಅವಧಿಯವರೆಗೆ ಮಾನ್ಯವಾಗಿರುತ್ತದೆ. ಅಲ್ಲದೆ 100 ನಿಮಿಷಗಳ ಉಚಿತ ಧ್ವನಿ ಕರೆ ಯಾವುದೇ ನೆಟ್‌ವರ್ಕ್‌ಗೆ ಕರೆಗಳಿಗೆ ಮಾನ್ಯವಾಗಿರುತ್ತದೆ. ಆದಾಗ್ಯೂ, ವಲಸೆ ಬಂದ ಬಳಕೆದಾರರಿಗೆ ಈ ಉಚಿತ ಮತ್ತು ಪ್ರಯೋಜನಗಳನ್ನು ಪ್ರವೇಶಿಸಲು ಸಾಧ್ಯವಾಗುವುದಿಲ್ಲ ಅನ್ನೊದು ಗಮನಿಸಬೇಕಾದ ವಿಚಾರವಾಗಿದೆ.

BSNL

BSNL ಪ್ರಿಪೇಯ್ಡ್ ಯೋಜನೆಗಳಲ್ಲಿನ ಈ ಬದಲಾವಣೆ ಏರ್‌ಟೆಲ್‌ ಮತ್ತು ವೊಡಾಫೋನ್ ಐಡಿಯಾ ಟೆಲಿಕಾಂಗಳು ಪ್ರಿಪೇಯ್ಡ್‌ ಪ್ಲಾನ್‌ ಬೆಲೆ ಹೆಚ್ಚಿಸಿರುವ ಸಂದರ್ಭದಲ್ಲಿಯೇ ಬಂದಿದೆ. ಇಂತಹ ಸನ್ನಿವೇಶದಲ್ಲಿ ಬಿಎಸ್‌ಎನ್‌ಎಲ್‌ನ ಹಲವು ಪ್ಲಾನ್‌ಗಳು ಬೆಸ್ಟ್‌ ಎನಿಸಲಿವೆ. ಈ ಪೈಕಿ ಬಿಎಸ್‌ಎನ್‌ಎಲ್‌ 599ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಸಹ ಒಂದಾಗಿದೆ. ಅಧಿಕ ಡೇಟಾ ಬಯಸುವ ಚಂದಾದಾರರಿಗೆ ಈ ಯೋಜನೆಯು ಯೋಗ್ಯ ಎನಿಸಲಿದೆ. ಈ ಪ್ಲ್ಯಾನಿನಲ್ಲಿ ಚಂದಾದಾರರಿಗೆ ಪ್ರತಿದಿನ 5GB ಡೇಟಾ ಪ್ರಯೋಜನ ದೊರೆಯಲಿದೆ ಹಾಗೂ ಅಧಿಕ ವ್ಯಾಲಿಡಿಟಿಯ ಸೌಲಭ್ಯವು ಲಭ್ಯವಾಗಲಿದೆ.

ಬಿಎಸ್‌ಎನ್‌ಎಲ್‌

ಇದರೊಂದಿಗೆ ಬಿಎಸ್‌ಎನ್‌ಎಲ್‌ 499ರೂ. ಪ್ರಿಪೇಯ್ಡ್‌ ಪ್ಲ್ಯಾನ್ ದೀರ್ಘಾವಧಿಯ ಯೋಜನೆ ಆಗಿದ್ದು, ಒಟ್ಟು 90 ದಿನಗಳ ವ್ಯಾಲಿಡಿಟಿಯನ್ನು ಒಳಗೊಂಡಿದೆ. ಈ ಅವಧಿಯಲ್ಲಿ ಪ್ರತಿದಿನ 2GB ಡೇಟಾ ಪ್ರಯೋಜನ ಲಭ್ಯವಿದ್ದು, ಒಟ್ಟು ಪೂರ್ಣ ಅವಧಿಗೆ 180GB ಡೇಟಾ ಸಿಗಲಿದೆ. ಇದರೊಂದಿಗೆ ಅನಿಯಮಿತ ವಾಯಿಸ್ ಕರೆಗಳ ಸೌಲಭ್ಯ ಸಹ ದೊರೆಯಲಿದೆ. ಹಾಗೆಯೇ ಡೈಲಿ 100 ಎಸ್‌ಎಮ್‌ಎಸ್‌ ಸಹ ಸಿಗುತ್ತದೆ. ಹೆಚ್ಚುವರಿಯಾಗಿ ಬಿಎಸ್‌ಎನ್‌ಎಲ್‌ ಟ್ಯೂನ್ ಮತ್ತು Zing ಪ್ರಯೋಜನ ಲಭ್ಯ.

ಬಿಎಸ್‌ಎನ್‌ಎಲ್‌ 395ರೂ. ಪ್ರೀಪೇಯ್ಡ್‌ ಪ್ಲ್ಯಾನ್

ಬಿಎಸ್‌ಎನ್‌ಎಲ್‌ 395ರೂ. ಪ್ರೀಪೇಯ್ಡ್‌ ಪ್ಲ್ಯಾನ್

ಬಿಎಸ್‌ಎನ್‌ಎಲ್‌ ಈ ಯೋಜನೆಯಲ್ಲಿ ಪ್ರತಿದಿನ 2GB ಡೇಟಾ ಸೌಲಭ್ಯ ದೊರೆಯುತ್ತದೆ. ಇದರೊಂದಿಗೆ ಪ್ರತಿದಿನ 100 ಎಸ್‌ಎಮ್‌ಎಸ್‌ ಹಾಗೂ ಪ್ರತಿದಿನ ಅನಿಯಮಿತ ವಾಯಿಸ್‌ ಕರೆಯ ಸೌಲಭ್ಯಗಳು ಲಭ್ಯವಾಗುತ್ತವೆ. ಇನ್ನು ಈ ಯೋಜನೆಯು ಒಟ್ಟು 71 ದಿನಗಳ ವ್ಯಾಲಿಡಿಟಿ ಅವಧಿಯನ್ನು ಹೊಂದಿದೆ. ಒಟ್ಟು ಪೂರ್ಣ ಅವಧಿಯ ವ್ಯಾಲಿಡಿಟಿಯಲ್ಲಿ ಒಟ್ಟು 142GB ಡೇಟಾ ಪ್ರಯೋಜನ ದೊರೆಯುತ್ತದೆ.

ಬಿಎಸ್‌ಎನ್‌ಎಲ್‌ 666ರೂ. ಪ್ರೀಪೇಯ್ಡ್‌ ಪ್ಲ್ಯಾನ್

ಬಿಎಸ್‌ಎನ್‌ಎಲ್‌ 666ರೂ. ಪ್ರೀಪೇಯ್ಡ್‌ ಪ್ಲ್ಯಾನ್

ಬಿಎಸ್‌ಎನ್‌ಎಲ್‌ ಈ ಯೋಜನೆಯಲ್ಲಿ ಪ್ರತಿದಿನ 2GB ಡೇಟಾ ಸೌಲಭ್ಯ ದೊರೆಯುತ್ತದೆ. ಇದರೊಂದಿಗೆ ಪ್ರತಿದಿನ 100 ಎಸ್‌ಎಮ್‌ಎಸ್‌ ಹಾಗೂ ಪ್ರತಿದಿನ ಅನಿಯಮಿತ ವಾಯಿಸ್‌ ಕರೆಯ ಸೌಲಭ್ಯಗಳು ಲಭ್ಯವಾಗುತ್ತವೆ. ಇನ್ನು ಈ ಯೋಜನೆಯು ಒಟ್ಟು 120 ದಿನಗಳ ವ್ಯಾಲಿಡಿಟಿ ಅವಧಿಯನ್ನು ಹೊಂದಿದೆ. ಒಟ್ಟು ಪೂರ್ಣ ಅವಧಿಯ ವ್ಯಾಲಿಡಿಟಿಯಲ್ಲಿ ಒಟ್ಟು 240GB ಡೇಟಾ ಪ್ರಯೋಜನ ದೊರೆಯುತ್ತದೆ.

ಬಿಎಸ್‌ಎನ್‌ಎಲ್‌ 997ರೂ. ಪ್ರೀಪೇಯ್ಡ್‌ ಪ್ಲ್ಯಾನ್

ಬಿಎಸ್‌ಎನ್‌ಎಲ್‌ 997ರೂ. ಪ್ರೀಪೇಯ್ಡ್‌ ಪ್ಲ್ಯಾನ್

ಬಿಎಸ್‌ಎನ್‌ಎಲ್‌ ಈ ಯೋಜನೆಯಲ್ಲಿ ಪ್ರತಿದಿನ 3GB ಡೇಟಾ ಸೌಲಭ್ಯ ದೊರೆಯುತ್ತದೆ. ಇದರೊಂದಿಗೆ ಪ್ರತಿದಿನ 100 ಎಸ್‌ಎಮ್‌ಎಸ್‌ ಹಾಗೂ ಪ್ರತಿದಿನ ಅನಿಯಮಿತ ವಾಯಿಸ್‌ ಕರೆಯ ಸೌಲಭ್ಯಗಳು ಲಭ್ಯವಾಗುತ್ತವೆ. ಇನ್ನು ಈ ಯೋಜನೆಯು ಒಟ್ಟು 180 ದಿನಗಳ ವ್ಯಾಲಿಡಿಟಿ ಅವಧಿಯನ್ನು ಹೊಂದಿದೆ. ಒಟ್ಟು ಪೂರ್ಣ ಅವಧಿಯ ವ್ಯಾಲಿಡಿಟಿಯಲ್ಲಿ ಒಟ್ಟು 540GB ಡೇಟಾ ಪ್ರಯೋಜನ ದೊರೆಯುತ್ತದೆ.

ಬಿಎಸ್‌ಎನ್‌ಎಲ್‌ 2399ರೂ. ವಾರ್ಷಿಕ ಪ್ಲ್ಯಾನ್

ಬಿಎಸ್‌ಎನ್‌ಎಲ್‌ 2399ರೂ. ವಾರ್ಷಿಕ ಪ್ಲ್ಯಾನ್

ಬಿಎಸ್‌ಎನ್‌ಎಲ್‌ನ ಈ ಪ್ಲ್ಯಾನ್ ಒಟ್ಟು 600 ದಿನಗಳ ವ್ಯಾಲಿಡಿಟಿ ಅವಧಿಯನ್ನು ಒಳಗೊಂಡಿದ್ದು, ಈ ಅವಧಿಯಲ್ಲಿ ಪ್ರತಿದಿನ 250 FUP ನಿಮಿಷಗಳ ಮಿತಿಯಲ್ಲಿ ಉಚಿತ ವಾಯಿಸ್‌ ಕರೆಗಳ ಪ್ರಯೋಜನವನ್ನು ಒದಗಿಸಲಿದೆ. ಇದರೊಂದಿಗೆ ಪ್ರತಿದಿನ 100 ಎಸ್‌ಎಮ್‌ಎಸ್‌ಗಳ ಸೌಲಭ್ಯ ದೊರೆಯಲಿದ್ದು, 60 ದಿನಗಳಿಗೆ ಬಿಎಸ್‌ಎನ್‌ಎಲ್‌ ಟ್ಯೂನ್‌ ಸೌಲಭ್ಯವು ಸಿಗಲಿದೆ. ಆದರೆ ಯಾವುದೇ ಡೇಟಾ ಪ್ರಯೋಜನ ಲಭ್ಯ ಇರುವುದಿಲ್ಲ. ಡೇಟಾ ಅಗತ್ಯ ಇರದ ಹಾಗೂ ವಾಯಿಸ್ ಕರೆ ಮತ್ತು ಹೆಚ್ಚಿನ ವ್ಯಾಲಿಡಿಟಿ ಬಯಸುವ ಗ್ರಾಹಕರಿಗೆ ಈ ಪ್ಲ್ಯಾನ್ ಉತ್ತಮ ಆಯ್ಕೆ ಆಗಿದೆ.

Most Read Articles
Best Mobiles in India

English summary
BSNL has discontinued its lifetime prepaid plans across the country. Existing customers will now be migrated to a premium per minute plan.to know more visit to kannada.gizbot.com

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X