Just In
Don't Miss
- News
ಬೆಂಗಳೂರಿಗೆ ಮೋದಿ: 3 ದಿನ ಈ ರಸ್ತೆಗಳಲ್ಲಿ ಸಂಚಾರಕ್ಕೆ ನಿಷೇಧ, ಯಾವುದೆಲ್ಲಾ ತಿಳಿಯಿರಿ
- Sports
Ranji Trophy: ಪಂಜಾಬ್ ವಿರುದ್ಧ ಗೆದ್ದ ಸೌರಾಷ್ಟ್ರ: ಸೆಮಿಫೈನಲ್ನಲ್ಲಿ ಕರ್ನಾಟಕ-ಸೌರಾಷ್ಟ್ರ ಮುಖಾಮುಖಿ
- Finance
ಅದಾನಿ ಸ್ಟಾಕ್ ಕುಸಿತ: 'ನಿಯಂತ್ರಕರು ಅವರ ಕೆಲಸ ಮಾಡುತ್ತಾರೆ', ಎಂದ ವಿತ್ತ ಸಚಿವೆ
- Automobiles
ಬೆಲೆ ಏರಿಕೆ ಪಡೆದುಕೊಂಡ ಬಹುಬೇಡಿಕೆಯ ಟೊಯೊಟಾ ಹೈರೈಡರ್ ಎಸ್ಯುವಿ
- Movies
ಹಣೆಯ ಮೇಲೆ ಗಾಯ! ಗಾಯಕಿ ವಾಣಿ ಜಯರಾಂ ಸಾವಿನ ಬಗ್ಗೆ ಅನುಮಾನ
- Lifestyle
ನವಣೆ ಬಳಿಸಿದರೆ ಕ್ಯಾನ್ಸರ್ನಿಂದ ಫೈಲ್ಸ್ವರೆಗೆ ಕಾಯಿಲೆ ತಡೆಗಟ್ಟಬಹುದು,ಗೊತ್ತಾ?
- Education
KVS Recruitment 2022 : ಕೇಂದ್ರೀಯ ವಿದ್ಯಾಲಯ ಸಂಗತನ್ ದಲ್ಲಿ 13404 ಹುದ್ದೆಗಳ ನೇಮಕಾತಿ
- Travel
ಯಾವುದೇ ಚಿಂತೆ ಇಲ್ಲದೆ ಸುಖಕರ ಪ್ರಯಾಣ ಅನುಭವಿಸಲು ಇಲ್ಲಿದೆ ಸಲಹೆಗಳು
ಸದ್ದಿಲ್ಲದೆ ಮೂರು ಹೊಸ ಪ್ಲ್ಯಾನ್ ಪರಿಚಯಿಸಿದ BSNL; ಬೆದರಿದ ಜಿಯೋ, ಏರ್‌ಟೆಲ್!
ದೇಶದ ಟೆಲಿಕಾಂ ವಲಯದಲ್ಲಿ ಸರ್ಕಾರಿ ಸ್ವಾಮ್ಯದ ಬಿಎಸ್‌ಎನ್‌ಎಲ್ ಟೆಲಿಕಾಂ ಖಾಸಗಿ ಟೆಲಿಕಾಂಗಳಿಗೆ ನೇರ ಪೈಪೋಟಿ ನೀಡುವಂತಹ ಯೋಜನೆಗಳನ್ನು ಪರಿಚಯಿಸುತ್ತಾ ಮುನ್ನಡೆದಿದೆ. ಕೆಲವೊಂದು ಯೋಜನೆಗಳಲ್ಲಿ ಹೆಚ್ಚುವರಿ ಪ್ರಯೋಜನ ಲಭ್ಯ ಮಾಡಿದೆ. ಇದೀಗ ಮತ್ತೆ ಮೂರು ನೂತನ ಯೋಜನೆಗಳನ್ನು ಪರಿಚಯಿದ್ದು, ಖಾಸಗಿ ಟೆಲಿಕಾಂಗಳನ್ನು ದಂಗುಬಡಿಸಿದೆ. ಬಿಎಸ್‌ಎನ್‌ಎಲ್ ಟೆಲಿಕಾಂನ ಹೊಸ ಯೋಜನೆಗಳು ಆಕರ್ಷಕ ಪ್ರಯೋಜನ ಪಡೆದಿವೆ.

ಹೌದು, ಬಿಎಸ್‌ಎನ್‌ಎಲ್ ಸಂಸ್ಥೆಯು ಹೊಸದಾಗಿ ಮೂರು ಪ್ರಿಪೇಯ್ಡ್ ಯೋಜನೆಗಳನ್ನು ಯೋಜನೆಗಳನ್ನು ಲಾಂಚ್ ಮಾಡಿದೆ. ಅವುಗಳು ಕ್ರಮವಾಗಿ ಬಿಎಸ್‌ಎನ್‌ಎಲ್ 99ರೂ, ಬಿಎಸ್‌ಎನ್‌ಎಲ್ 118ರೂ ಮತ್ತು ಬಿಎಸ್‌ಎನ್‌ಎಲ್ 319ರೂ. ಬೆಲೆಯನ್ನು ಹೊಂದಿವೆ. ಈ ಮೂರು ಪ್ರಿಪೇಯ್ಡ್ ಯೋಜನೆಗಳು ದೇಶಾದ್ಯಂತ ಟೆಲಿಕಾಂನ ಗ್ರಾಹಕರಿಗೆ ಲಭ್ಯವಾಗಲಿದೆ. ಇನ್ನು ಇತ್ತೀಚಿಗಷ್ಟೆ ಬಿಎಸ್‌ಎನ್‌ಎಲ್ 228ರೂ. ಮತ್ತು 239ರೂ. ಬೆಲೆಯ ಯೋಜನೆಗಳನ್ನು ಪರಿಚಯಿಸಿತ್ತು. ಪ್ರಯೋಜನಗಳ ಬಗ್ಗೆ ಹಾಗೂ ಬಿಎಸ್‌ಎನ್ ಟೆಲಿಕಾಂನ ಇತರೆ ಕೆಲವು ಜನಪ್ರಿಯ ಪ್ರಿಪೇಯ್ಡ್ ಯೋಜನೆಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಬಿಎಸ್‌ಎನ್‌ಎಲ್‌ನ 99ರೂ. ಪ್ರಿಪೇಯ್ಡ್ ಯೋಜನೆ
ಬಿಎಸ್‌ಎನ್‌ಎಲ್ ಟೆಲಿಕಾಂನ ಈ ಹೊಸ 99ರೂ. ಪ್ರಿಪೇಯ್ಡ್ ಯೋಜನೆಯು ಗ್ರಾಹಕರಿಗೆ 18 ದಿನಗಳವರೆಗೆ ಉಚಿತ PRBT ಯೊಂದಿಗೆ ಅನಿಯಮಿತ ಧ್ವನಿ ಕರೆಯನ್ನು ನೀಡುತ್ತದೆ. ಇದರೊಂದಿಗೆ ಯಾವುದೇ ಡೇಟಾ ಅಥವಾ SMS ಪ್ರಯೋಜನಗಳಿಲ್ಲ.

ಬಿಎಸ್‌ಎನ್‌ಎಲ್‌ನ 118ರೂ. ಪ್ರಿಪೇಯ್ಡ್ ಯೋಜನೆ
ಬಿಎಸ್‌ಎನ್‌ಎಲ್ ಟೆಲಿಕಾಂನ 118ರೂ ಯೋಜನೆಯು 20 ದಿನಗಳ ಮಾನ್ಯತೆಯೊಂದಿಗೆ ಬರುತ್ತದೆ ಮತ್ತು ಅನಿಯಮಿತ ಧ್ವನಿ ಕರೆಯೊಂದಿಗೆ 0.5GB ದೈನಂದಿನ ಡೇಟಾವನ್ನು ನೀಡುತ್ತದೆ. ದೈನಂದಿನ ಡೇಟಾ ಬಳಕೆಯ ನಂತರ ಇಂಟರ್ನೆಟ್ ವೇಗವು 40 Kbps ಗೆ ಕಡಿಮೆಯಾಗುತ್ತದೆ. ಈ ಯೋಜನೆಯೊಂದಿಗೆ ಬಳಕೆದಾರರು SMS ಪ್ರಯೋಜನಗಳನ್ನು ಪಡೆಯುವುದಿಲ್ಲ, ಆದರೆ ಅವರು ಉಚಿತ PRBT ಚಂದಾದಾರಿಕೆಯನ್ನು ಪಡೆಯುತ್ತಾರೆ.

ಬಿಎಸ್‌ಎನ್‌ಎಲ್‌ನ 319ರೂ. ಪ್ರಿಪೇಯ್ಡ್ ಯೋಜನೆ
ಬಿಎಸ್‌ಎನ್‌ಎಲ್ ಟೆಲಿಕಾಂನ ಈ ಪ್ರಿಪೇಯ್ಡ್ ಯೋಜನೆಯು ಬಳಕೆದಾರರಿಗೆ ಒಟ್ಟು 300 SMS ಮತ್ತು 65 ದಿನಗಳವರೆಗೆ ಅನಿಯಮಿತ ಧ್ವನಿ ಕರೆಯೊಂದಿಗೆ 10GB ಲುಂಪ್ಸಮ್ ಡೇಟಾವನ್ನು ನೀಡುತ್ತದೆ. ಇದು ನಿಮಗೆ ಹೆಚ್ಚಿನ ಡೇಟಾ ಮತ್ತು SMS ಅಗತ್ಯತೆಗಳನ್ನು ಹೊಂದಿಲ್ಲದಿದ್ದರೆ ನೀವು ರೀಚಾರ್ಜ್ ಮಾಡಬಹುದಾದ ಪ್ರಿಪೇಯ್ಡ್ ಯೋಜನೆಯಾಗಿದೆ, ಆದರೆ ನಿಮಗೆ ಕನಿಷ್ಠ ಮಧ್ಯಮ ಅವಧಿಯ ಮಾನ್ಯತೆಯ ಅಗತ್ಯವಿದೆ.

ಬಿಎಸ್‌ಎನ್‌ಎಲ್ 2999ರೂ. ಪ್ರೀಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು
ಬಿಎಸ್‌ಎನ್‌ಎಲ್ ಟೆಲಿಕಾಂನ 2999ರೂ. ಪ್ರೀಪೇಯ್ಡ್ ಯೋಜನೆ ದೀರ್ಘಾವಧಿಯ ಪ್ಲ್ಯಾನ್ ಆಗಿದ್ದು, ಪ್ರತಿದಿನ 3GB ಡೇಟಾ ಸೌಲಭ್ಯ ದೊರೆಯುತ್ತದೆ. ಇದರೊಂದಿಗೆ ಪ್ರತಿದಿನ 100 ಎಸ್‌ಎಮ್‌ಎಸ್ ಹಾಗೂ ಅನಿಯಮಿತ ವಾಯಿಸ್ ಕರೆಯ ಸೌಲಭ್ಯಗಳು ಲಭ್ಯವಾಗುತ್ತವೆ. ಇನ್ನು ಈ ಯೋಜನೆಯು ಒಟ್ಟು 365 ದಿನಗಳ ವ್ಯಾಲಿಡಿಟಿ ಅವಧಿಯನ್ನು ಹೊಂದಿದ್ದು, ಹೆಚ್ಚುವರಿಯಾಗಿ 90 ದಿನಗಳ ವ್ಯಾಲಿಡಿಟಿ ಸಹ ಲಭ್ಯವಾಗಲಿದೆ. ಒಟ್ಟಾರೇ 455 ದಿನಗಳ ವ್ಯಾಲಿಡಿಟಿ ದೊರೆಯಲಿದೆ.

ಬಿಎಸ್‌ಎನ್‌ಎಲ್ 2399ರೂ. ಪ್ರೀಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು
ಬಿಎಸ್‌ಎನ್‌ಎಲ್ ಟೆಲಿಕಾಂನ 2399ರೂ. ಯೋಜನೆಯು ವಾರ್ಷಿಕ ಅವಧಿಯ ಪ್ಲ್ಯಾನ್ ಆಗಿದೆ. ಈ ಅವಧಿಯಲ್ಲಿ ಪ್ರತಿದಿನ 3 GB ಡೇಟಾ ಪ್ರಯೋಜನ ಲಭ್ಯ ಆಗಲಿದೆ. ಜೊತೆಗೆ ಪ್ರತಿದಿನ 100 ಎಸ್‌ಎಮ್‌ಎಸ್ ಸೌಲಭ್ಯ ಸಹ ಸಿಗಲಿದೆ. ಇದರೊಂದಿಗೆ ಅನಿಯಮಿತ ವಾಯಿಸ್ ಕರೆಗಳ ಸೌಲಭ್ಯವು ದೊರೆಯಲಿದೆ. ಹಾಗೆಯೇ ಮುಂಬೈ ಮತ್ತು ದೆಹಲಿ ಎಮ್‌ಟಿಎನ್‌ಎಲ್ ಬಳಕೆದಾರರಗೆ ಅನಿಯಮಿತ ಸಾಂಗ್ ಚೇಂಜ್ ಹಾಗೂ EROS ಚಂದಾದಾರಿಕೆ ಸಹ ಲಭ್ಯ ಆಗಲಿದೆ.

ಬಿಎಸ್‌ಎನ್‌ಎಲ್ 599ರೂ. ಪ್ರೀಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು
ಬಿಎಸ್‌ಎನ್‌ಎಲ್ ಟೆಲಿಕಾಂನ 599ರೂ. ಪ್ರೀಪೇಯ್ಡ್ ಯೋಜನೆಯಲ್ಲಿ ಪ್ರತಿದಿನ 5 GB ಡೇಟಾ ಸೌಲಭ್ಯ ದೊರೆಯುತ್ತದೆ. ಇದರೊಂದಿಗೆ ಪ್ರತಿದಿನ 100 ಎಸ್‌ಎಮ್‌ಎಸ್ ಹಾಗೂ ಅನಿಯಮಿತ ವಾಯಿಸ್ ಕರೆಯ ಸೌಲಭ್ಯಗಳು ಲಭ್ಯವಾಗುತ್ತವೆ. ಇನ್ನು ಈ ಯೋಜನೆಯು ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿಯನ್ನು ಹೊಂದಿದೆ. ಒಟ್ಟು ಪೂರ್ಣ ಅವಧಿಯ ವ್ಯಾಲಿಡಿಟಿಯಲ್ಲಿ ಒಟ್ಟು 450 GB ಡೇಟಾ ಪ್ರಯೋಜನ ದೊರೆಯುತ್ತದೆ. ಹೆಚ್ಚುವರಿಯಾಗಿ ಜಿಂಗ್ ಸೇವೆ ಲಭ್ಯವಾಗಲಿದೆ.

ಬಿಎಸ್‌ಎನ್‌ಎಲ್ 499 ರೂ. ಪ್ಲ್ಯಾನ್ ಪ್ರಯೋಜನಗಳು
ಬಿಎಸ್‌ಎನ್‌ಎಲ್‌ನ ಈ SVT 499 ರೂ. ಪ್ಲ್ಯಾನ್ ದೀರ್ಘಾವಧಿಯ ಯೋಜನೆ ಆಗಿದ್ದು, ಒಟ್ಟು 90 ದಿನಗಳ ವ್ಯಾಲಿಡಿಟಿಯನ್ನು ಒಳಗೊಂಡಿದೆ. ಈ ಅವಧಿಯಲ್ಲಿ ಪ್ರತಿದಿನ 2 GB ಡೇಟಾ ಪ್ರಯೋಜನ ಲಭ್ಯವಿದ್ದು, ಒಟ್ಟು ಪೂರ್ಣ ಅವಧಿಗೆ 180 GB ಡೇಟಾ ಸಿಗಲಿದೆ. ಇದರೊಂದಿಗೆ ಅನಿಯಮಿತ ವಾಯಿಸ್ ಕರೆಗಳ ಸೌಲಭ್ಯ ಸಹ ದೊರೆಯಲಿದೆ. ಹಾಗೆಯೇ ಡೈಲಿ 100 ಎಸ್‌ಎಮ್‌ಎಸ್ ಸಹ ಸಿಗುತ್ತದೆ. ಹೆಚ್ಚುವರಿಯಾಗಿ ಬಿಎಸ್‌ಎನ್‌ಎಲ್ ಟ್ಯೂನ್ ಮತ್ತು Zing ಪ್ರಯೋಜನ ಲಭ್ಯ.

ಬಿಎಸ್‌ಎನ್‌ಎಲ್ STV 447ರೂ. ಯೋಜನೆ ಪ್ರಯೋಜನಗಳು
ಬಿಎಸ್‌ಎನ್‌ಎಲ್ STV 447 ರೂ. ಯೋಜನೆ 100GB ಹೈ ಸ್ಪೀಡ್ ಡೇಟಾವನ್ನು ನೀಡುತ್ತದೆ. 100GB ಡೇಟಾದ ನಿಗದಿತ ಮಿತಿಯನ್ನು ಮೀರಿ, ಬಳಕೆದಾರರು 80 Kbps ವೇಗದಲ್ಲಿ ಇಂಟರ್ನೆಟ್ ಅನ್ನು ಪ್ರವೇಶಿಸಬಹುದು. ಯೋಜನೆಯು 60 ಕ್ಯಾಲೆಂಡರ್ ದಿನಗಳ ಮಾನ್ಯತೆಯ ಅವಧಿಯೊಂದಿಗೆ ಬರುತ್ತದೆ

ಬಿಎಸ್‌ಎನ್‌ಎಲ್ ಪ್ರಿಪೇಯ್ಡ್ ಮುಖ್ಯ ಬ್ಯಾಲೆನ್ಸ್ ಚೆಕ್ ಮಾಡಲು:
ಬಿಎಸ್‌ಎನ್‌ಎಲ್ ಸಂಖ್ಯೆಯಿಂದ ಮುಖ್ಯ ಬ್ಯಾಲೆನ್ಸ್ ಅನ್ನು ಪರಿಶೀಲಿಸಲು, ನೀವು *123# ಅನ್ನು ಡಯಲ್ ಮಾಡಿದರೆ ಸಾಕು. USSD ಕೋಡ್ ಸ್ವಯಂಚಾಲಿತವಾಗಿ ಮಾಹಿತಿ ಕಾಣಿಸುತ್ತದೆ. ಹಾಗೆಯೇ ನೀವು *112# ಅನ್ನು ಸಹ ಡಯಲ್ ಮಾಡಬಹುದು. ಇನ್ನು ಎಸ್‌ಎಂಎಸ್ ಕಳುಹಿಸುವ ಮೂಲಕ ಬಿಎಸ್‌ಎನ್‌ಎಲ್ ಬ್ಯಾಲೆನ್ಸ್ ಪರಿಶೀಲಿಸುವ ಮಾಡುವ ಆಯ್ಕೆ ಅನ್ನು ಕಂಪನಿ ನೀಡಿದೆ. ಅದಕ್ಕಾಗಿ ಬಳಕೆದಾರರು ‘BAL' ಅನ್ನು 123 ಗೆ ಎಸ್‌ಎಮ್‌ಎಸ್ ಕಳುಹಿಸಬಹುದು. ಇದಲ್ಲದೆ, ಬಳಕೆದಾರರು ಗೂಗಲ್ ಪ್ಲೇ ಸ್ಟೋರ್ ಅಥವಾ ಆಪಲ್ ಆಪ್ ಸ್ಟೋರ್‌ನಿಂದ ಅಪ್ಲಿಕೇಶನ್ ಅನ್ನು ಡೌನ್‌ಲೋಡ್ ಮಾಡಬಹುದು ಮತ್ತು OTP ಬಳಸಿಕೊಂಡು ಅಪ್ಲಿಕೇಶನ್‌ಗೆ ಲಾಗ್ ಇನ್ ಮಾಡಬಹುದು. ಬಳಿಕ ಅಪ್ಲಿಕೇಶನ್‌ನಿಂದ ಮುಖ್ಯ ಬ್ಯಾಲೆನ್ಸ್ ಅನ್ನು ಸುಲಭವಾಗಿ ಪರಿಶೀಲಿಸಬಹುದು.
-
54,999
-
36,599
-
39,999
-
38,990
-
1,29,900
-
79,990
-
38,900
-
18,999
-
19,300
-
69,999
-
79,900
-
1,09,999
-
1,19,900
-
21,999
-
1,29,900
-
12,999
-
44,999
-
15,999
-
7,332
-
17,091
-
29,999
-
7,999
-
8,999
-
45,835
-
77,935
-
48,030
-
29,616
-
57,999
-
12,670
-
79,470