ಬಿಎಸ್‌ಎನ್‌ಎಲ್‌ನಿಂದ ಹೊಸ ಪ್ಲ್ಯಾನ್‌!..ಥಂಡಾ ಹೊಡೆದ ಜಿಯೋ, ಏರ್‌ಟೆಲ್‌!

|

ಸರ್ಕಾರಿ ಸ್ವಾಮ್ಯದ ಬಿಎಸ್‌ಎನ್‌ಎಲ್‌ (BSNL) ಟೆಲಿಕಾಂ ಖಾಸಗಿ ಟೆಲಿಕಾಂಗಳಿಗೆ ಪೈಪೋಟಿ ನೀಡುವಂತಹ ಆಕರ್ಷಕ ಬ್ರಾಡ್‌ಬ್ಯಾಂಡ್‌ ಪ್ಲ್ಯಾನ್‌ಗಳನ್ನು ಪರಿಚಯಿಸಿದೆ. ಬಿಎಸ್‌ಎನ್‌ಎಲ್‌ ಟೆಲಿಕಾಂ ಅಗ್ಗದ ಬೆಲೆಯಿಂದ ದುಬಾರಿ ಬೆಲೆಯ ವರೆಗೂ ಹಲವು ಭಿನ್ನ ಬ್ರಾಡ್‌ಬ್ಯಾಂಡ್‌ ಯೋಜನೆಗಳ ಆಯ್ಕೆ ಹೊಂದಿದೆ. ಆದರೆ ಬಿಎಸ್‌ಎನ್‌ಎಲ್‌ ಸಂಸ್ಥೆಯು ತನ್ನ ಬ್ರಾಡ್‌ಬ್ಯಾಂಡ್‌ ಪ್ಲ್ಯಾನ್‌ಗಳ ಲಿಸ್ಟ್‌ಗೆ ಈಗ ಮತ್ತೊಂದು ಎಂಟ್ರಿ ಲೆವೆಲ್‌ ಬ್ರಾಡ್‌ಬ್ಯಾಂಡ್‌ ಯೋಜನೆಯನ್ನು ಸೇರ್ಪಡೆ ಮಾಡಿದೆ.

ಬಿಎಸ್‌ಎನ್‌ಎಲ್‌ ಸಂಸ್ಥೆ

ಹೌದು, ಬಿಎಸ್‌ಎನ್‌ಎಲ್‌ ಸಂಸ್ಥೆಯು ಈಗ ಹೊಸದಾಗಿ 5,399ರೂ. ಬ್ರಾಡ್‌ಬ್ಯಾಂಡ್‌ ಯೋಜನೆ ಪರಿಚಯಿಸಿದ್ದು, ಇದೊಂದು ವಾರ್ಷಿಕ ವ್ಯಾಲಿಡಿಟಿ ಅವಧಿಯ ಬ್ರಾಡ್‌ಬ್ಯಾಂಡ್‌ ಯೋಜನೆ ಆಗಿದೆ. ಈ ಬ್ರಾಡ್‌ಬ್ಯಾಂಡ್ ಪ್ಲ್ಯಾನ್ ಚಂದಾದಾರರಿಗೆ 50Mbps ಯೋಜನೆಯನ್ನು ನೀಡಲು ಪ್ರಾರಂಭಿಸಿದೆ ಎಂದು ವರದಿಯಿಂದ ತಿಳಿದು ಬಂದಿದೆ. ಇದರೊಂದಿಗೆ ಇತರೆ ಹೆಚ್ಚುವರಿ ಪ್ರಯೋಜನಗಳನ್ನು ಈ ಯೋಜನೆ ಒದಗಿಸಲಿದೆ. ಹಾಗಾದರೇ ಬಿಎಸ್‌ಎನ್‌ಎಲ್‌ 5,399ರೂ. ಬ್ರಾಡ್‌ಬ್ಯಾಂಡ್‌ ಯೋಜನೆ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಬಿಎಸ್‌ಎನ್‌ಎಲ್‌ 5,399ರೂ. ಬ್ರಾಡ್‌ಬ್ಯಾಂಡ್‌ ಪ್ಲ್ಯಾನ್‌ ಪ್ರಯೋಜನಗಳು

ಬಿಎಸ್‌ಎನ್‌ಎಲ್‌ 5,399ರೂ. ಬ್ರಾಡ್‌ಬ್ಯಾಂಡ್‌ ಪ್ಲ್ಯಾನ್‌ ಪ್ರಯೋಜನಗಳು

ವರದಿಯ ಪ್ರಕಾರ, ಬಿಎಸ್‌ಎನ್‌ಎಲ್‌ ಟೆಲಿಕಾಂನ ನೂತನ 5,399ರೂ. ಬ್ರಾಡ್‌ಬ್ಯಾಂಡ್‌ ಪ್ಲ್ಯಾನ್‌ 50Mbps ವೇಗವನ್ನು ನೀಡುತ್ತದೆ. ಈ ಯೋಜನೆಯು ಡೇಟಾ ಮಿತಿ (FUP) ಪ್ರಕಾರ ಒಟ್ಟು 3300GB ಡೇಟಾ ಪ್ರಯೋಜನ ಒದಗಿಸಲಿದೆ. ಅಂದಹಾಗೆ ಈ ಯೋಜನೆಯು ವಾರ್ಷಿಕ ಅವಧಿಯ ಯೋಜನೆ ಆಗಿದ್ದು, ಒಟ್ಟು 365 ದಿನಗಳ ವ್ಯಾಲಿಡಿಟಿ ಒಳಗೊಂಡಿದೆ. ಇದರ ಹೊರತಾಗಿ ಈ ಯೋಜನೆಯು OTT ಚಂದಾದಾರಿಕೆಗಳು ಮತ್ತು ಇತರ ಪ್ರಯೋಜನಗಳಂತಹ ಯಾವುದೇ ಇತರ ಪ್ರಯೋಜನಗಳನ್ನು ಒಳಗೊಂಡಿಲ್ಲ.

ಯೋಜನೆಗಳಲ್ಲಿ

ಬಿಎಸ್‌ಎನ್‌ಎಲ್‌ (BSNL) ಟೆಲಿಕಾಂ ಪರಿಚಯಿಸಿರುವ ಈ 5,399ರೂ. ಬ್ರಾಡ್‌ಬ್ಯಾಂಡ್‌ ಪ್ಲ್ಯಾನ್‌ ತನ್ನ ಗ್ರಾಹಕರಿಗೆ ನೀಡುತ್ತಿರುವ ಅತ್ಯಂತ ಕೈಗೆಟುಕುವ ವಾರ್ಷಿಕ ಬ್ರಾಡ್‌ಬ್ಯಾಂಡ್ ಯೋಜನೆಗಳಲ್ಲಿ ಇದು ಒಂದಾಗಿದೆ. ಈ ಯೋಜನೆಯನ್ನು ಮಾಸಿಕ ಶುಲ್ಕಕ್ಕೆ ಲೆಕ್ಕಾಚಾರ ಮಾಡಿದರೆ, ತಿಂಗಳಿಗೆ 450 ರೂ. ವೆಚ್ಚ ಆಗುತ್ತದೆ.

ಬಿಎಸ್‌ಎನ್‌ಎಲ್‌ 499ರೂ. ಫೈಬರ್ ಬೇಸಿಕ್ ಪ್ಲ್ಯಾನ್ ಪ್ರಯೋಜನ

ಬಿಎಸ್‌ಎನ್‌ಎಲ್‌ 499ರೂ. ಫೈಬರ್ ಬೇಸಿಕ್ ಪ್ಲ್ಯಾನ್ ಪ್ರಯೋಜನ

ಬಿಎಸ್ಎನ್ಎಲ್ 499ರೂ. ಬ್ರಾಡ್‌ಬ್ಯಾಂಡ್‌ ಯೋಜನೆಯು 40 Mbps ಇಂಟರ್ನೆಟ್ ವೇಗವನ್ನು 3.3TB FUP ಡೇಟಾದೊಂದಿಗೆ ಅನಿಯಮಿತ ವಾಯಿಸ್‌ ಕರೆ ಸೌಲಭ್ಯ ಪಡೆದಿದೆ. ನಿಗದಿತ FUP ಡೇಟಾ ಬಳಕೆಯ ಮಿತಿ ಮುಗಿದ ಬಳಿಕ, ಡೇಟಾ ವೇಗವು 4 Mbps ಗೆ ಇಳಿಕೆಯಾಗುತ್ತದೆ. ಇದ್ರಲ್ಲಿ, ಬಳಕೆದಾರರು ಮೊದಲ ತಿಂಗಳ ಬಾಡಿಗೆಯಲ್ಲಿ 500ರೂ. ವರೆಗಿನ 90% ರಿಯಾಯಿತಿಯನ್ನು ಸಹ ಪಡೆಯುತ್ತಾರೆ.

ಬಿಎಸ್‌ಎನ್‌ಎಲ್‌ 799ರೂ. ಫೈಬರ್ ವ್ಯಾಲ್ಯೂ ಪ್ಲ್ಯಾನ್ ಪ್ರಯೋಜನಗಳು

ಬಿಎಸ್‌ಎನ್‌ಎಲ್‌ 799ರೂ. ಫೈಬರ್ ವ್ಯಾಲ್ಯೂ ಪ್ಲ್ಯಾನ್ ಪ್ರಯೋಜನಗಳು

ಬಿಎಸ್‌ಎನ್‌ಎಲ್ ‘ಫೈಬರ್ ವ್ಯಾಲ್ಯೂ' ಯೋಜನೆ ಶುಲ್ಕವು ಗಾಗಿ ತಿಂಗಳಿಗೆ 799 ರೂ. ಆಗಿದೆ. ಬಳಕೆದಾರರು ಅದೇ 3.3 TB (3,300 GB) ಮಾಸಿಕ ಡೇಟಾದವರೆಗೆ 100 Mbps ವೇಗದಲ್ಲಿ ಬ್ರೌಸ್ ಮಾಡಲು ಅನುವು ಮಾಡಿಕೊಡುವ ಯೋಜನೆ ಇದಾಗಿದೆ. ಫೈಬರ್ ಬೇಸಿಕ್ ಯೋಜನೆಯಂತೆಯೇ, ಆಪರೇಟರ್ 3.3 TB ಡೇಟಾ ಮಿತಿಯನ್ನು ತಲುಪಿದ ನಂತರ ವೇಗವನ್ನು 2 Mbps ಗೆ ಇಳಿಕೆ ಮಾಡಲಾಗುತ್ತದೆ.

ಬಿಎಸ್‌ಎನ್‌ಎಲ್‌ 999ರೂ. ಫೈಬರ್ ಪ್ರೀಮಿಯಂ ಪ್ಲ್ಯಾನ್ ಪ್ರಯೋಜನಗಳು

ಬಿಎಸ್‌ಎನ್‌ಎಲ್‌ 999ರೂ. ಫೈಬರ್ ಪ್ರೀಮಿಯಂ ಪ್ಲ್ಯಾನ್ ಪ್ರಯೋಜನಗಳು

ಬಿಎಸ್‌ಎನ್‌ಎಲ್ ‘ಫೈಬರ್ ಪ್ರೀಮಿಯಂ' ಯೋಜನೆ ತಿಂಗಳ ಶುಲ್ಕ 999 ರೂ. ಆಗಿದೆ. ಫೈಬರ್ ಪ್ರೀಮಿಯಂ ಬ್ರಾಡ್‌ಬ್ಯಾಂಡ್ ಯೋಜನೆ 2 TB (2000 GB) ಡೇಟಾ ಮತ್ತು 200 ಎಮ್‌ಬಿಪಿಎಸ್ ಡೌನ್‌ಲೋಡ್ ಮತ್ತು ಅಪ್‌ಲೋಡ್ ವೇಗವನ್ನು ಹೊಂದಿದೆ. ಎಫ್‌ಯುಪಿ ಡೇಟಾವನ್ನು ಸೇವಿಸಿದ ನಂತರ ವೇಗವು 2 Mbps ಗೆ ಇಳಿಯುತ್ತದೆ. ಬಹುಮುಖ್ಯವಾಗಿ, ಡಿಸ್ನಿ + ಹಾಟ್‌ಸ್ಟಾರ್ ಪ್ರೀಮಿಯಂ ಚಂದಾದಾರಿಕೆಯನ್ನು ಸ್ವೀಕರಿಸುವ ಬಳಕೆದಾರರೊಂದಿಗೆ ಆಪರೇಟರ್ ಓವರ್-ದಿ-ಟಾಪ್ (ಒಟಿಟಿ) ಪ್ರಯೋಜನವನ್ನು ನೀಡುತ್ತದೆ.

Best Mobiles in India

English summary
BSNL is now giving an annual 50 Mbps fiber annual plan to consumers, but this plan is not visible on the website of company.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X