BSNL ಟೆಲಿಕಾಂನಿಂದ ಅಗ್ಗದ ಬೆಲೆಯಲ್ಲಿ ಮತ್ತೊಂದು ಹೊಸ ಪ್ರಿಪೇಯ್ಡ್‌ ಪ್ಲಾನ್‌ ಲಾಂಚ್‌!

|

ಖಾಸಗಿ ಟೆಲಿಕಾಂಗಳ ಆರ್ಭಟದ ನಡುವೆಯೂ ಸರ್ಕಾರಿ ಸ್ವಾಮ್ಯದ ಟೆಲಿಕಾಂ ಬಿಎಸ್‌ಎನ್‌ಎಲ್‌ ತನ್ನ ಸ್ಥಾನವನ್ನು ಉಳಿಸಿಕೊಂಡಿದೆ. ಖಾಸಗಿ ಟೆಲಿಕಾಂಗಳಿಗೆ ಸೆಡ್ಡು ಹೊಡೆಯುವ ಹಲವು ಪ್ರಿಪೇಯ್ಡ್‌ ಪ್ಲಾನ್‌ಗಳನ್ನು ಪರಿಚಯಿಸುವ ಮೂಲಕ ಗ್ರಾಹಕರ ಗಮನ ಸೆಳೆದಿದೆ. ಅಗ್ಗದ ಬೆಲೆಯಲ್ಲಿ ಅಧಿಕ ವ್ಯಾಲಿಡಿಟಿ ನೀಡುವ ಪ್ಲಾನ್‌ಗಳನ್ನು ನೀಡುತ್ತಾ ಬಂದಿದೆ. ಸದ್ಯ ಇದೀಗ ಬಿಎಸ್‌ಎನ್‌ಎಲ್‌ 94ರೂ. ಬೆಲೆಯಲ್ಲಿ ವಿಶೇಷ ಟ್ಯಾರಿಫ್ ವೋಚರ್ (STV) ಪ್ರಕಟಿಸಿದೆ.

ಬಿಎಸ್‌ಎನ್‌ಎಲ್‌

ಹೌದು, ಸರ್ಕಾರಿ ಸ್ವಾಮ್ಯದ ಬಿಎಸ್‌ಎನ್‌ಎಲ್‌ 94ರೂ.ಗಳ ವಿಶೇಷ ಟ್ಯಾರಿಫ್ ವೋಚರ್ (STV) ಪ್ರಕಟಿಸಿದೆ. ಇದು 3GB ಉಚಿತ ಡೇಟಾ, ಎಲ್ಲಾ ನೆಟ್‌ವರ್ಕ್‌ಗಳಿಗೆ 100 ಉಚಿತ ದೇಶೀಯ ನಿಮಿಷಗಳು ಮತ್ತು ಮುಂಬೈ ಮತ್ತು ದೆಹಲಿಯಲ್ಲಿ ರಾಷ್ಟ್ರೀಯ ರೋಮಿಂಗ್‌ ಪ್ರಯೋಜನವನ್ನು ನೀಡಲಿದೆ. ಅಲ್ಲದೆ ಈ ಪ್ಲಾನ್‌ 75 ದಿನಗಳ ಮಾನ್ಯತೆಯ ಅವಧಿಯನ್ನು ಪಡೆದುಕೊಂಡಿದೆ. ಹಾಗಾದ್ರೆ ಬಿಎಸ್‌ಎನ್‌ಎಲ್‌ ಪರಿಚಯಿಸಿರುವ ಹೊಸ ಪ್ಲಾನ್‌ ವಿಶೇಷತೆ ಏನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ಬಿಎಸ್‌ಎನ್‌ಎಲ್‌

ಬಿಎಸ್‌ಎನ್‌ಎಲ್‌ ಟೆಲಿಕಾಂನ 94ರೂ.ಗಳ ವಿಶೇಷ ಟ್ಯಾರಿಫ್ ವೋಚರ್ 75ದಿನಗಳ ವ್ಯಾಲಿಡಿಟಿ ಪಡೆದಿದೆ. ಇದು 3GB ಉಚಿತ ಡೇಟಾ, ಎಲ್ಲಾ ನೆಟ್‌ವರ್ಕ್‌ಗಳಿಗೆ 100 ಉಚಿತ ದೇಶೀಯ ನಿಮಿಷಗಳು ಮತ್ತು ಮುಂಬೈ ಮತ್ತು ದೆಹಲಿಯಲ್ಲಿ ರಾಷ್ಟ್ರೀಯ ರೋಮಿಂಗ್‌ ಪ್ರಯೋಜನವನ್ನು ನೀಡಲಿದೆ. ಜೊತೆಗೆ ಬಳಕೆದಾರರು 60 ದಿನಗಳವರೆಗೆ BSNL ಡೀಫಾಲ್ಟ್ ಟ್ಯೂನ್‌ಗಳನ್ನು ಸಹ ಪಡೆಯಬಹುದಾಗಿದೆ. ಅಲ್ಲದೆ ಹೆಚ್ಚುವರಿಯಾಗಿ, ಉಚಿತ ನಿಮಿಷಗಳು ಮುಗಿದ ನಂತರ ಬಳಕೆದಾರರು ಪ್ರತಿ ನಿಮಿಷಕ್ಕೆ 30 ಪೈಸೆ ಪಾವತಿಸಬೇಕಾಗುತ್ತದೆ.

BSNL

ಇನ್ನು BSNL ಈಗಾಗಲೇ 88ರೂ, 198ರೂ, 209ರೂ ಬೆಲೆಯ STV ಪ್ಲಾನ್‌ಗಳನ್ನು ನೀಡುತ್ತಾ ಬಂದಿದೆ. ಇದರಲ್ಲಿ 88ರೂ.ಗಳ ವಾಯ್ಸ್ ವೋಚರ್ 90 ದಿನಗಳ ವ್ಯಾಲಿಡಿಟಿ ನೀಡಲಿದೆ. 198ರೂ ಮತ್ತು 209ರೂ. ಪ್ಲಾನ್‌ಗಳು ಕ್ರಮವಾಗಿ 50 ದಿನಗಳು ಮತ್ತು 90 ದಿನಗಳ ವ್ಯಾಲಿಡಿಟಿಯೊಂದಿಗೆ ಬರುತ್ತವೆ. ಇನ್ನು 198ರೂ STV ದೈನಂದಿನ 2GB ಡೇಟಾ ಪ್ರಯೋಜನವನ್ನು ನೀಡಲಿದೆ. ನಂತರ ವೇಗವು 40 kbps ಗೆ ಕಡಿಮೆಯಾಗುತ್ತದೆ.

ಬಿಎಸ್‌ಎನ್‌ಎಲ್‌

ಇನ್ನು ಬಿಎಸ್‌ಎನ್‌ಎಲ್‌ 97ರೂ. ರೀಚಾರ್ಜ್ ಪ್ಲಾನ್‌ ದೈನಂದಿನ 2GB ಡೇಟಾವನ್ನು ನೀಡಲಿದೆ. ಇದರಲ್ಲಿ ಲೋಕಧುನ್ ವಿಷಯಕ್ಕೆ ಪ್ರವೇಶವನ್ನು ನೀಡಲಿದೆ. ಅಲ್ಲದೆ ಈ ಪ್ಲಾನ್‌ ನಿಮಗೆ 18 ದಿನಗಳ ಮಾನ್ಯತೆಯನ್ನು ನೀಡಲಿದೆ. ಹಾಗೆಯೇ 99ರೂ. ಪ್ರಿಪೇಯ್ಡ್ ಪ್ಲಾನ್‌ ಅನಿಯಮಿತ ಧ್ವನಿ ಕರೆಗಳು, 99 ಎಸ್‌ಎಂಎಸ್‌ಗಳು ಮತ್ತು ರಿಂಗ್‌ಟೋನ್‌ಗಳನ್ನು 22 ದಿನಗಳ ಮಾನ್ಯತೆಯೊಂದಿಗೆ ನೀಡುತ್ತದೆ. ಹಾಗೆಯೇ 75ರೂ. ಪ್ಲಾನ್‌ 2GB ಡೇಟಾ, 100 ನಿಮಿಷಗಳ ಧ್ವನಿ ಕರೆಗಳು, 50 ದಿನಗಳ ಮಾನ್ಯತೆಗೆ ಉಚಿತ ರಿಂಗ್‌ಟೋನ್‌ಗಳನ್ನು ನೀಡುತ್ತದೆ.

ಬಿಎಸ್‌ಎನ್‌ಎಲ್‌ 599ರೂ. ಪ್ರೀಪೇಯ್ಡ್‌ ಪ್ಲ್ಯಾನ್

ಬಿಎಸ್‌ಎನ್‌ಎಲ್‌ 599ರೂ. ಪ್ರೀಪೇಯ್ಡ್‌ ಪ್ಲ್ಯಾನ್

ಬಿಎಸ್‌ಎನ್‌ಎಲ್‌ 599ರೂ. ಪ್ರೀಪೇಯ್ಡ್‌ ಯೋಜನೆಯಲ್ಲಿ ಪ್ರತಿದಿನ 5GB ಡೇಟಾ ಸೌಲಭ್ಯ ದೊರೆಯುತ್ತದೆ. ಇದರೊಂದಿಗೆ ಪ್ರತಿದಿನ 100 ಎಸ್‌ಎಮ್‌ಎಸ್‌ ಹಾಗೂ ಅನಿಯಮಿತ ವಾಯಿಸ್ ಕರೆಯ ಸೌಲಭ್ಯಗಳು ಲಭ್ಯವಾಗುತ್ತವೆ. ಇನ್ನು ಈ ಯೋಜನೆಯು ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿಯನ್ನು ಹೊಂದಿದೆ. ಒಟ್ಟು ಪೂರ್ಣ ಅವಧಿಯ ವ್ಯಾಲಿಡಿಟಿಯಲ್ಲಿ ಒಟ್ಟು 450 GB ಡೇಟಾ ಪ್ರಯೋಜನ ದೊರೆಯುತ್ತದೆ. ಹೆಚ್ಚುವರಿಯಾಗಿ ಜಿಂಗ್ ಸೇವೆ ಲಭ್ಯವಾಗಲಿದೆ.

ಬಿಎಸ್‌ಎನ್‌ಎಲ್‌ 499ರೂ. ಪ್ರಿಪೇಯ್ಡ್‌ ಪ್ಲ್ಯಾನ್

ಬಿಎಸ್‌ಎನ್‌ಎಲ್‌ 499ರೂ. ಪ್ರಿಪೇಯ್ಡ್‌ ಪ್ಲ್ಯಾನ್

ಬಿಎಸ್‌ಎನ್‌ಎಲ್‌ನ ಈ SVT 499ರೂ. ಪ್ಲ್ಯಾನ್ ದೀರ್ಘಾವಧಿಯ ಯೋಜನೆ ಆಗಿದ್ದು, ಒಟ್ಟು 90 ದಿನಗಳ ವ್ಯಾಲಿಡಿಟಿಯನ್ನು ಒಳಗೊಂಡಿದೆ. ಈ ಅವಧಿಯಲ್ಲಿ ಪ್ರತಿದಿನ 2GB ಡೇಟಾ ಪ್ರಯೋಜನ ಲಭ್ಯವಿದ್ದು, ಒಟ್ಟು ಪೂರ್ಣ ಅವಧಿಗೆ 180GB ಡೇಟಾ ಸಿಗಲಿದೆ. ಇದರೊಂದಿಗೆ ಅನಿಯಮಿತ ವಾಯಿಸ್ ಕರೆಗಳ ಸೌಲಭ್ಯ ಸಹ ದೊರೆಯಲಿದೆ. ಹಾಗೆಯೇ ಡೈಲಿ 100 ಎಸ್‌ಎಮ್‌ಎಸ್‌ ಸಹ ಸಿಗುತ್ತದೆ. ಹೆಚ್ಚುವರಿಯಾಗಿ ಬಿಎಸ್‌ಎನ್‌ಎಲ್‌ ಟ್ಯೂನ್ ಮತ್ತು Zing ಪ್ರಯೋಜನ ಲಭ್ಯ.

ಬಿಎಸ್‌ಎನ್‌ಎಲ್‌ 666ರೂ. ಪ್ರೀಪೇಯ್ಡ್‌ ಪ್ಲ್ಯಾನ್

ಬಿಎಸ್‌ಎನ್‌ಎಲ್‌ 666ರೂ. ಪ್ರೀಪೇಯ್ಡ್‌ ಪ್ಲ್ಯಾನ್

ಬಿಎಸ್‌ಎನ್‌ಎಲ್‌ ಈ ಯೋಜನೆಯಲ್ಲಿ ಪ್ರತಿದಿನ 2GB ಡೇಟಾ ಸೌಲಭ್ಯ ದೊರೆಯುತ್ತದೆ. ಇದರೊಂದಿಗೆ ಪ್ರತಿದಿನ 100 ಎಸ್‌ಎಮ್‌ಎಸ್‌ ಹಾಗೂ ಪ್ರತಿದಿನ ಅನಿಯಮಿತ ವಾಯಿಸ್‌ ಕರೆಯ ಸೌಲಭ್ಯಗಳು ಲಭ್ಯವಾಗುತ್ತವೆ. ಇನ್ನು ಈ ಯೋಜನೆಯು ಒಟ್ಟು 120 ದಿನಗಳ ವ್ಯಾಲಿಡಿಟಿ ಅವಧಿಯನ್ನು ಹೊಂದಿದೆ. ಒಟ್ಟು ಪೂರ್ಣ ಅವಧಿಯ ವ್ಯಾಲಿಡಿಟಿಯಲ್ಲಿ ಒಟ್ಟು 240GB ಡೇಟಾ ಪ್ರಯೋಜನ ದೊರೆಯುತ್ತದೆ.

Best Mobiles in India

English summary
BSNL launches a new Rs 94 Special Tariff Voucher (STV) with 3GB of free data.to know more visit to kannada.gizbot.com

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X