Just In
- 35 min ago
ಇಯರ್ಫೋನ್ ಖರೀದಿಸುವವರಿಗೆ ಅಮೆಜಾನ್ನಲ್ಲಿ ಸಿಗಲಿದೆ ಬಿಗ್ ಡಿಸ್ಕೌಂಟ್!
- 2 hrs ago
ವಾಟ್ಸಾಪ್, ಟೆಲಿಗ್ರಾಮ್ನಂತಹ ಆಪ್ಗಳ ನಿಯಂತ್ರಣಕ್ಕೆ ಸರ್ಕಾರದಿಂದ ಹೊಸ ಪ್ಲಾನ್!
- 3 hrs ago
ಇಂದು ಇನ್ಫಿನಿಕ್ಸ್ ಹಾಟ್ 12 ಪ್ರೊ ಫಸ್ಟ್ ಸೇಲ್; ಡಿಸ್ಕೌಂಟ್ ಎಷ್ಟು ಗೊತ್ತಾ?
- 5 hrs ago
ವಿ ಟೆಲಿಕಾಂನ ಬೆಸ್ಟ್ ರೀಚಾರ್ಜ್ ಪ್ಲ್ಯಾನ್‌ಗಳ ಕಂಪ್ಲೀಟ್ ಮಾಹಿತಿ ಇಲ್ಲಿದೆ!
Don't Miss
- Automobiles
ಫೋರ್ಡ್ ಇಂಡಿಯಾದ ಸನಂದ್ ಕಾರ್ಖಾನೆ ಟಾಟಾ ಮೋಟಾರ್ಸ್ ತೆಕ್ಕೆಗೆ: 726 ಕೋಟಿ ರೂ.ಗೆ ಖರೀದಿ
- Movies
ಮುಂದುವರೆದ ದಚ್ಚು- ಅಪ್ಪು ಫ್ಯಾನ್ಸ್ ಪರ ವಿರೋಧ ಚರ್ಚೆ: ಮತ್ತೊಂದು ವಿಡಿಯೋ ವೈರಲ್!
- News
ಕುಮಾರಸ್ವಾಮಿ ವೆಸ್ಟ್ಎಂಡ್ ಹೋಟೆಲ್ನಲ್ಲಿ ಕುಳಿತು ಅಧಿಕಾರ ಕಳೆದುಕೊಂಡರು: ಸಿದ್ದರಾಮಯ್ಯ
- Sports
ಅಕ್ಷರ್, ಬಿಷ್ಣೋಯ್, ಕುಲ್ದೀಪ್ ಆರ್ಭಟ!: ಟಿ20 ಕ್ರಿಕೆಟ್ನಲ್ಲಿ ಐತಿಹಾಸಿಕ ಸಾಧನೆ ಮಾಡಿದ ಸ್ಪಿನ್ನರ್ಗಳು!
- Lifestyle
ಉಪರಾಷ್ಟ್ರಪತಿಯಾಗಿ ಜಗದೀಪ್ ಧನಕರ್: ಇವರಿಗೆ ಸಿಗುವ ಸಂಬಳ, ಭತ್ಯೆ ಸೌಲಭ್ಯಗಳೇನು?
- Finance
Q1 ವರದಿ: ಭಾರತ್ ಪೆಟ್ರೋಲಿಯಂಗೆ 6,148 ಕೋಟಿ ರು ನಷ್ಟ
- Travel
ಭಾರತದಲ್ಲಿರುವ ಕೆಲವು ಸ್ಥಳಗಳು ಅಸ್ತಮಾ ರೋಗಿಗಳಿಗೆ ಸಲ್ಪ ಮಟ್ಟದಲ್ಲಿ ಅಪಾಯಕಾರಿಯಾಗಬಹುದು!
- Education
CSB Recruitment 2022 : 66 ಸೈಂಟಿಸ್ಟ್-ಬಿ ಹುದ್ದೆಗಳಿಗೆ ಅರ್ಜಿ ಆಹ್ವಾನ
ಬಿಎಸ್‌ಎನ್‌ಎಲ್‌ನಿಂದ ಮತ್ತೊಂದು ಪ್ಲ್ಯಾನ್; ಕಕ್ಕಾಬಿಕ್ಕಿಯಾದ ಜಿಯೋ, ಏರ್‌ಟೆಲ್!
ದೇಶದ ಟೆಲಿಕಾಂ ಕ್ಷೇತ್ರದಲ್ಲಿ ಸರ್ಕಾರಿ ಸ್ವಾಮ್ಯದ ಬಿಎಸ್‌ಎನ್‌ಎಲ್ ಟೆಲಿಕಾಂ ರಿಲಯನ್ಸ್ ಜಿಯೋ, ಭಾರ್ತಿ ಏರ್‌ಟೆಲ್ ಹಾಗೂ ವಿ ಟೆಲಿಕಾಂಗಳಿಗೆ ಪ್ರಬಲ ಪೈಪೋಟಿ ನೀಡುವಂತಹ ಪ್ರೀಪೇಯ್ಡ್ ಪ್ಲ್ಯಾನ್‌ಗಳನ್ನು ಪರಿಚಯಿಸುತ್ತಾ ಮುನ್ನಡೆದಿದೆ. ಆ ಪೈಕಿ ಕೆಲವೊಂದು ಯೋಜನೆಗಳಲ್ಲಿ ಹೆಚ್ಚುವರಿ ಪ್ರಯೋಜನ ಲಭ್ಯ ಮಾಡಿದೆ. ಬಿಎಸ್‌ಎನ್‌ಎಲ್ ಇದೀಗ ಮತ್ತೆ ಹೊಸದಾಗಿ ಪ್ರೀಪೇಯ್ಡ್ ಯೋಜನೆಯೊಂದನ್ನು ಪರಿಚಯಿದ್ದು, ಖಾಸಗಿ ಟೆಲಿಕಾಂಗಳನ್ನು ದಂಗಾಗುವಂತೆ ಮಾಡಿದೆ.

ಹೌದು, ಬಿಎಸ್‌ಎನ್‌ಎಲ್ ಟೆಲಿಕಾಂ ನೂತನವಾಗಿ 2022 ರೂ. ಪ್ರೀಪೇಯ್ಡ್ ಯೋಜನೆಯನ್ನು ಪರಿಚಯಿಸಿದ್ದು, ಈ ಯೋಜನೆ ದೀರ್ಘ ವ್ಯಾಲಿಡಿಟಿ ಹಾಗೂ ಡೇಟಾ ಪ್ರಯೋಜನಗಳೊಂದಿಗೆ ಆಕರ್ಷಕ ಎನಿಸಿದೆ. ಹಾಗೆಯೇ ಈ ಯೋಜನೆಯು ಉಚಿತ ವಾಯಿಸ್ ಕರೆಯ ಸೌಲಭ್ಯ ಹಾಗೂ ಎಸ್‌ಎಮ್‌ಎಸ್ ಪ್ರಯೋಜನ ಸಹ ಈ ಯೋಜನೆಯಲ್ಲಿ ದೊರೆಯುತ್ತದೆ.

ಬಿಎಸ್‌ಎನ್‌ಎಲ್ ಆಜಾದಿ ಕಾ ಅಮೃತ ಮಹೋತ್ಸವ್‌ಗಾಗಿ ಈ ಆಫರ್ ಅನ್ನು ಬಿಡುಗಡೆ ಮಾಡಲಾಗಿದೆ. ಇನ್ನು ಈ ಕೊಡುಗೆಯು ಆಗಸ್ಟ್ 31, 2022 ರವರೆಗೆ ಇರುತ್ತದೆ. ಹೀಗಾಗಿ ಈ ಯೋಜನೆಯ ಪ್ರಯೋಜನವನ್ನು ಪಡೆಯಲು ಬಯಸಿದರೆ, ಈ ತಿಂಗಳೊಳಗೆ (ಆಗಸ್ಟ್ 31, 2022) ರೀಚಾರ್ಜ್ ಮಾಡಿಸಬಹುದು. ಹಾಗಾದರೇ ಬಿಎಸ್‌ಎನ್‌ಎಲ್‌ನ 2022 ರೂ. ಪ್ರೀಪೇಯ್ಡ್ ಯೋಜನೆಯ ಪ್ರಯೋಜನಗಳೆನು? ಇತರೆ ಜನಪ್ರಿಯ ಪ್ಲ್ಯಾನ್‌ಗಳ ಬಗ್ಗೆ ಈ ಲೇಖನದಲ್ಲಿ ತಿಳಿಯೋಣ ಬನ್ನಿರಿ.

ಬಿಎಸ್‌ಎನ್‌ಎಲ್ 2022 ರೂ. ಪ್ರಿಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು
ಬಿಎಸ್‌ಎನ್‌ಎಲ್ ಸಂಸ್ಥೆಯ ಹೊಸ 2022 ರೂ. ಪ್ರಿಪೇಯ್ಡ್ ಯೋಜನೆಯು ತಿಂಗಳಿಗೆ 75GB ಡೇಟಾವನ್ನು ನೀಡುತ್ತದೆ. ಈ ಯೋಜನೆಯೊಂದಿಗೆ ಬಳಕೆದಾರರು ಅನಿಯಮಿತ ವಾಯಿಸ್ ಕರೆ ಮತ್ತು ಪ್ರತಿದಿನ 100 ಎಸ್‌ಎಮ್‌ಎಸ್ ಸೌಲಭ್ಯವನ್ನು ಪಡೆದಿದೆ. ಇದರೊಂದಿಗೆ 300 ದಿನಗಳ ದೀರ್ಘ ವ್ಯಾಲಿಡಿಟಿ ಪ್ರಯೋಜನ ಹೊಂದಿದೆ. ತಿಂಗಳಿಗೆ 75GB ಡೇಟಾ ಬಳಕೆ ಮಾಡಿದ ಬಳಿಕ ಇಂಟರ್ನೆಟ್ ವೇಗವು 40 Kbps ಗೆ ಕಡಿಮೆಯಾಗುತ್ತದೆ. ಅಲ್ಲದೆ, ಡೇಟಾವು ಮೊದಲ 60 ದಿನಗಳವರೆಗೆ ಮಾತ್ರ ಬರುತ್ತದೆ ಎಂಬುದನ್ನು ಗಮನಿಸಿ.

ಬಿಎಸ್‌ಎನ್‌ಎಲ್ 299ರೂ. ಪ್ರಿಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು
ಬಿಎಸ್‌ಎನ್‌ಎಲ್ ಟೆಲಿಕಾಂನ 299ರೂ. ಪ್ಲ್ಯಾನ್ ಅಲ್ಪಾವಧಿಯ ಯೋಜನೆ ಆಗಿದ್ದು, ಒಟ್ಟು 30 ದಿನಗಳ ವ್ಯಾಲಿಡಿಟಿಯನ್ನು ಒಳಗೊಂಡಿದೆ. ಪ್ರತಿದಿನ 3 GB ಡೇಟಾ ಸೌಲಭ್ಯ ದೊರೆಯುತ್ತದೆ. ಇದರೊಂದಿಗೆ ಪ್ರತಿದಿನ 100 ಎಸ್‌ಎಮ್‌ಎಸ್ ಹಾಗೂ ಅನಿಯಮಿತ ವಾಯಿಸ್ ಕರೆಯ ಸೌಲಭ್ಯಗಳು ಲಭ್ಯವಾಗುತ್ತವೆ. ನಿಗದಿತ ಡೇಟಾ ಮುಗಿದ ಬಳಿಕ ಇಂಟರ್ನೆಟ್ ವೇಗವು 80 Kbps ಗೆ ಕಡಿಮೆಯಾಗುತ್ತದೆ.

ಬಿಎಸ್‌ಎನ್‌ಎಲ್ 599ರೂ. ಪ್ರೀಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು
ಬಿಎಸ್‌ಎನ್‌ಎಲ್ ಟೆಲಿಕಾಂನ 599ರೂ. ಪ್ರೀಪೇಯ್ಡ್ ಯೋಜನೆಯಲ್ಲಿ ಪ್ರತಿದಿನ 5 GB ಡೇಟಾ ಸೌಲಭ್ಯ ದೊರೆಯುತ್ತದೆ. ಇದರೊಂದಿಗೆ ಪ್ರತಿದಿನ 100 ಎಸ್‌ಎಮ್‌ಎಸ್ ಹಾಗೂ ಅನಿಯಮಿತ ವಾಯಿಸ್ ಕರೆಯ ಸೌಲಭ್ಯಗಳು ಲಭ್ಯವಾಗುತ್ತವೆ. ಇನ್ನು ಈ ಯೋಜನೆಯು ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿಯನ್ನು ಹೊಂದಿದೆ. ಒಟ್ಟು ಪೂರ್ಣ ಅವಧಿಯ ವ್ಯಾಲಿಡಿಟಿಯಲ್ಲಿ ಒಟ್ಟು 450 GB ಡೇಟಾ ಪ್ರಯೋಜನ ದೊರೆಯುತ್ತದೆ. ಹೆಚ್ಚುವರಿಯಾಗಿ ಜಿಂಗ್ ಸೇವೆ ಲಭ್ಯವಾಗಲಿದೆ.

ಬಿಎಸ್‌ಎನ್‌ಎಲ್ 499ರೂ. ಪ್ಲ್ಯಾನ್ ಪ್ರಯೋಜನಗಳು
ಬಿಎಸ್‌ಎನ್‌ಎಲ್‌ನ ಈ SVT 499 ರೂ. ಪ್ಲ್ಯಾನ್ ದೀರ್ಘಾವಧಿಯ ಯೋಜನೆ ಆಗಿದ್ದು, ಒಟ್ಟು 90 ದಿನಗಳ ವ್ಯಾಲಿಡಿಟಿಯನ್ನು ಒಳಗೊಂಡಿದೆ. ಈ ಅವಧಿಯಲ್ಲಿ ಪ್ರತಿದಿನ 2 GB ಡೇಟಾ ಪ್ರಯೋಜನ ಲಭ್ಯವಿದ್ದು, ಒಟ್ಟು ಪೂರ್ಣ ಅವಧಿಗೆ 180 GB ಡೇಟಾ ಸಿಗಲಿದೆ. ಇದರೊಂದಿಗೆ ಅನಿಯಮಿತ ವಾಯಿಸ್ ಕರೆಗಳ ಸೌಲಭ್ಯ ಸಹ ದೊರೆಯಲಿದೆ. ಹಾಗೆಯೇ ಡೈಲಿ 100 ಎಸ್‌ಎಮ್‌ಎಸ್ ಸಹ ಸಿಗುತ್ತದೆ. ಹೆಚ್ಚುವರಿಯಾಗಿ ಬಿಎಸ್‌ಎನ್‌ಎಲ್ ಟ್ಯೂನ್ ಮತ್ತು Zing ಪ್ರಯೋಜನ ಲಭ್ಯ.

ಬಿಎಸ್‌ಎನ್‌ಎಲ್ 2399ರೂ. ಪ್ರೀಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು
ಬಿಎಸ್‌ಎನ್‌ಎಲ್ 2399ರೂ. ಯೋಜನೆಯು ವಾರ್ಷಿಕ ಅವಧಿಯ ಪ್ಲ್ಯಾನ್ ಆಗಿದೆ. ಈ ಯೋಜನೆಯು ಇದೀಗ ಹೆಚ್ಚುವರಿಯಾಗಿ 60 ದಿನಗಳ ವ್ಯಾಲಿಡಿಟಿಯನ್ನು ಪಡೆದಿದೆ. ಹೀಗಾಗಿ ಒಟ್ಟು 425 ದಿನಗಳ ವ್ಯಾಲಿಡಿಟಿ ಸಿಗಲಿದೆ. ಈ ಅವಧಿಯಲ್ಲಿ ಪ್ರತಿದಿನ 3GB ಡೇಟಾ ಪ್ರಯೋಜನ ಲಭ್ಯ ಆಗಲಿದೆ. ಜೊತೆಗೆ ಪ್ರತಿದಿನ 100 ಎಸ್‌ಎಮ್‌ಎಸ್ ಸೌಲಭ್ಯ ಸಹ ಸಿಗಲಿದೆ. ಇದರೊಂದಿಗೆ ಅನಿಯಮಿತ ವಾಯಿಸ್ ಕರೆಗಳ ಸೌಲಭ್ಯವು ದೊರೆಯಲಿದೆ.

ಬಿಎಸ್‌ಎನ್‌ಎಲ್ 347ರೂ. ಯೋಜನೆಯ ಪ್ರಯೋಜನಗಳು
ಬಿಎಸ್‌ಎನ್‌ಎಲ್ ಟೆಲಿಕಾಂನ 347ರೂ. ಯೋಜನೆಯು 56 ದಿನಗಳ ವ್ಯಾಲಿಡಿಟಿ ಪ್ರಯೋಜನ ಪಡೆದಿದೆ. ಈ ಯೋಜನೆಯು 2 GB ದೈನಂದಿನ ಡೇಟಾ, 100 ಎಸ್‌ಎಮ್‌ಎಸ್ ಸೌಲಭ್ಯ ಪಡೆದಿದೆ. ಇದರೊಂದಿಗೆ ಅನಿಯಮಿತ ವಾಯಿಸ್ ಕರೆಯ ಪ್ರಯೋಜನ ಸಹ ಒಳಗೊಂಡಿದೆ. ನಿಗದಿತ ಡೇಟಾ ಮುಗಿದ ಬಳಿಕ ಇಂಟರ್ನೆಟ್ ವೇಗವು 80 Kbps ಇಳಿಯಲಿದೆ.

ಬಿಎಸ್‌ಎನ್‌ಎಲ್ 184ರೂ. ಯೋಜನೆಯ ಪ್ರಯೋಜನಗಳು
ಬಿಎಸ್‌ಎನ್‌ಎಲ್ ಟೆಲಿಕಾಂನ 184ರೂ. ಯೋಜನೆಯು 28 ದಿನಗಳ ವ್ಯಾಲಿಡಿಟಿ ಪ್ರಯೋಜನ ಪಡೆದಿದೆ. ಈ ಯೋಜನೆಯು 1GB ದೈನಂದಿನ ಡೇಟಾ, 100 ಎಸ್‌ಎಮ್‌ಎಸ್ ಸೌಲಭ್ಯ ಪಡೆದಿದೆ. ಇದರೊಂದಿಗೆ ಅನಿಯಮಿತ ವಾಯಿಸ್ ಕರೆಯ ಪ್ರಯೋಜನ ಸಹ ಒಳಗೊಂಡಿದೆ. ನಿಗದಿತ ಡೇಟಾ ಮುಗಿದ ಬಳಿಕ ಇಂಟರ್ನೆಟ್ ವೇಗವು 80 Kbps ಇಳಿಯಲಿದೆ. ಹಾಗೆಯೇ Lystn ಪಾಡ್‌ಕ್ಯಾಸ್ಟ್‌ನ ಹೆಚ್ಚುವರಿ ಸಿಗಲಿದೆ.

ಬಿಎಸ್‌ಎನ್‌ಎಲ್ 185ರೂ. ಯೋಜನೆಯ ಪ್ರಯೋಜನಗಳು
ಬಿಎಸ್‌ಎನ್‌ಎಲ್ ಟೆಲಿಕಾಂನ 185ರೂ. ಯೋಜನೆಯು ಸಹ 28 ದಿನಗಳ ವ್ಯಾಲಿಡಿಟಿ ಪ್ರಯೋಜನ ಪಡೆದಿದೆ. ಈ ಯೋಜನೆಯು 1GB ದೈನಂದಿನ ಡೇಟಾ, 100 ಎಸ್‌ಎಮ್‌ಎಸ್ ಸೌಲಭ್ಯ ಪಡೆದಿದೆ. ಇದರೊಂದಿಗೆ ಅನಿಯಮಿತ ವಾಯಿಸ್ ಕರೆಯ ಪ್ರಯೋಜನ ಸಹ ಒಳಗೊಂಡಿದೆ. ನಿಗದಿತ ಡೇಟಾ ಮುಗಿದ ಬಳಿಕ ಇಂಟರ್ನೆಟ್ ವೇಗವು 80 Kbps ಇಳಿಯಲಿದೆ. ಹಾಗೆಯೇ ಗ್ರಾಹಕರು M/S ಆನ್‌ಮೊಬೈಲ್ ಗ್ಲೋಬಲ್ ಲಿಮಿಟೆಡ್ ಮತ್ತು ಬಿಎಸ್‌ಎನ್‌ಎಲ್ ಟ್ಯೂನ್ಸ್‌ನಿಂದ ಪ್ರೋಗ್ರೆಸ್ಸಿವ್ ವೆಬ್ APP (PWA) ನಲ್ಲಿ ಸವಾಲುಗಳ ಅರೆನಾ ಮೊಬೈಲ್ ಗೇಮಿಂಗ್ ಸೇವೆಯನ್ನು ಪಡೆಯುತ್ತಾರೆ.
-
54,999
-
36,599
-
39,999
-
38,990
-
1,29,900
-
79,990
-
38,900
-
18,999
-
19,300
-
69,999
-
44,999
-
15,999
-
20,449
-
7,332
-
18,990
-
31,999
-
54,999
-
17,091
-
17,091
-
13,999
-
31,830
-
31,499
-
26,265
-
24,960
-
21,839
-
15,999
-
11,570
-
11,700
-
7,070
-
7,086