Home
ಸುದ್ದಿಜಾಲ

BSNLನಿಂದ ಎರಡು ಹೊಸ ಪ್ಲ್ಯಾನ್ ಬಿಡುಗಡೆ!..ಜಿಯೋ, ಏರ್‌ಟೆಲ್‌ ಕಂಗಾಲ!

ದೇಶದ ಟೆಲಿಕಾಂ ವಲಯದಲ್ಲಿ ಸರ್ಕಾರಿ ಸ್ವಾಮ್ಯದ ಬಿಎಸ್‌ಎನ್‌ಎಲ್‌ ಟೆಲಿಕಾಂ ಖಾಸಗಿ ಟೆಲಿಕಾಂಗಳಿಗೆ ನೇರ ಪೈಪೋಟಿ ನೀಡುವಂತಹ ಯೋಜನೆಗಳನ್ನು ಪರಿಚಯಿಸುತ್ತಾ ಮುನ್ನಡೆದಿದೆ. ಕೆಲವೊಂದು ಯೋಜನೆಗಳಲ್ಲಿ ಹೆಚ್ಚುವರಿ ಪ್ರಯೋಜನ ಲಭ್ಯ ಮಾಡಿದೆ. ಇದೀಗ ಮತ್ತೆ ಎರಡು ಹೊಸ ಪ್ರೀಪೇಯ್ಡ್‌ ಪ್ಲ್ಯಾನ್‌ ಪರಿಚಯಿದ್ದು, ಖಾಸಗಿ ಟೆಲಿಕಾಂಗಳು ಹುಬ್ಬೇರಿಸುವಂತೆ ಮಾಡಿದೆ. ಬಿಎಸ್‌ಎನ್‌ಎಲ್‌ ಟೆಲಿಕಾಂನ ಹೊಸ ಯೋಜನೆಗಳು ಆಕರ್ಷಕ ಪ್ರಯೋಜನ ಪಡೆದಿವೆ.

ಬೆಲೆಯನ್ನು

ಹೌದು, ಬಿಎಸ್‌ಎನ್‌ಎಲ್‌ ಸಂಸ್ಥೆಯು ಹೊಸದಾಗಿ ಎರಡು ಪ್ರಿಪೇಯ್ಡ್ ಯೋಜನೆಗಳನ್ನು ಯೋಜನೆಗಳನ್ನು ಬಿಡುಗಡೆ ಮಾಡಿದೆ. ಅವುಗಳು ಕ್ರಮವಾಗಿ 269ರೂ. ಮತ್ತು 769ರೂ. ಬೆಲೆಯನ್ನು ಹೊಂದಿವೆ. ಅಧಿಕ ಡೇಟಾ ಬಳಕೆ ಮಾಡುವ ಗ್ರಾಹಕರಿಗೆ ಈ ಎರಡೂ ಪ್ರಿಪೇಯ್ಡ್‌ ಯೋಜನೆಗಳು ಆಕರ್ಷಕ ಎನಿಸುತ್ತವೆ. ಅಂದಹಾಗೇ ಈ ಎರಡು ಪ್ಲ್ಯಾನ್‌ಗಳು ಎಲ್ಲ ಟೆಲಿಕಾಂ ವ್ಯಾಪ್ತಿಯ ಗ್ರಾಹಕರಿಗೂ ಲಭ್ಯವಾಗಲಿದೆ. ಹಾಗಾದರೇ ಬಿಎಸ್‌ಎನ್‌ಎಲ್‌ ಸಂಸ್ಥೆಯ ಈ ಎರಡು ಹೊಸ ಪ್ಲ್ಯಾನ್‌ಗಳ ಪ್ರಯೋಜನಗಳ ಬಗ್ಗೆ ಹಾಗೂ ಬಿಎಸ್‌ಎನ್‌ ಟೆಲಿಕಾಂನ ಇತರೆ ಕೆಲವು ಜನಪ್ರಿಯ ಪ್ರಿಪೇಯ್ಡ್‌ ಯೋಜನೆಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಬಿಎಸ್‌ಎನ್‌ಎಲ್‌ 269ರೂ. ಪ್ರಿಪೇಯ್ಡ್‌ ಪ್ಲ್ಯಾನ್ ಪ್ರಯೋಜನಗಳು

ಬಿಎಸ್‌ಎನ್‌ಎಲ್‌ 269ರೂ. ಪ್ರಿಪೇಯ್ಡ್‌ ಪ್ಲ್ಯಾನ್ ಪ್ರಯೋಜನಗಳು

ಬಿಎಸ್‌ಎನ್‌ಎಲ್ ಟೆಲಿಕಾಂನ 269ರೂ. ಪ್ಲ್ಯಾನ್ ಅಲ್ಪಾವಧಿಯ ಯೋಜನೆ ಆಗಿದ್ದು, ಒಟ್ಟು 30 ದಿನಗಳ ವ್ಯಾಲಿಡಿಟಿಯನ್ನು ಒಳಗೊಂಡಿದೆ. ಪ್ರತಿದಿನ 2 GB ಡೇಟಾ ಸೌಲಭ್ಯ ದೊರೆಯುತ್ತದೆ. ಇದರೊಂದಿಗೆ ಪ್ರತಿದಿನ 100 ಎಸ್‌ಎಮ್‌ಎಸ್‌ ಹಾಗೂ ಅನಿಯಮಿತ ವಾಯಿಸ್ ಕರೆಯ ಸೌಲಭ್ಯಗಳು ಲಭ್ಯವಾಗುತ್ತವೆ. ಹೆಚ್ಚುವರಿಯಾಗಿ ಎರೋಸ್ ನೌ ಎಂಟರ್‌ಟೈನ್‌ಮೆಂಟ್, ಲಿಸ್ಟ್ನ್ ಪಾಡ್‌ಕ್ಯಾಸ್ಟ್ ಸೇವೆಗಳು ಲಭ್ಯ.

ಬಿಎಸ್‌ಎನ್‌ಎಲ್‌ 769ರೂ. ಪ್ರಿಪೇಯ್ಡ್‌ ಪ್ಲ್ಯಾನ್ ಪ್ರಯೋಜನಗಳು

ಬಿಎಸ್‌ಎನ್‌ಎಲ್‌ 769ರೂ. ಪ್ರಿಪೇಯ್ಡ್‌ ಪ್ಲ್ಯಾನ್ ಪ್ರಯೋಜನಗಳು

ಬಿಎಸ್‌ಎನ್‌ಎಲ್ ಟೆಲಿಕಾಂನ 769ರೂ. ಪ್ಲ್ಯಾನ್, ಒಟ್ಟು 90 ದಿನಗಳ ವ್ಯಾಲಿಡಿಟಿಯನ್ನು ಒಳಗೊಂಡಿದೆ. ಪ್ರತಿದಿನ 2 GB ಡೇಟಾ ಸೌಲಭ್ಯ ದೊರೆಯುತ್ತದೆ. ಇದರೊಂದಿಗೆ ಪ್ರತಿದಿನ 100 ಎಸ್‌ಎಮ್‌ಎಸ್‌ ಹಾಗೂ ಅನಿಯಮಿತ ವಾಯಿಸ್ ಕರೆಯ ಸೌಲಭ್ಯಗಳು ಲಭ್ಯವಾಗುತ್ತವೆ. ಹೆಚ್ಚುವರಿಯಾಗಿ ಎರೋಸ್ ನೌ ಎಂಟರ್‌ಟೈನ್‌ಮೆಂಟ್, ಲಿಸ್ಟ್ನ್ ಪಾಡ್‌ಕ್ಯಾಸ್ಟ್ ಸೇವೆಗಳು ಲಭ್ಯ.

ಬಿಎಸ್‌ಎನ್‌ಎಲ್‌ 599ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಪ್ರಯೋಜನಗಳು

ಬಿಎಸ್‌ಎನ್‌ಎಲ್‌ 599ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಪ್ರಯೋಜನಗಳು

ಬಿಎಸ್‌ಎನ್‌ಎಲ್‌ ಟೆಲಿಕಾಂನ 599ರೂ. ಪ್ರೀಪೇಯ್ಡ್‌ ಯೋಜನೆಯಲ್ಲಿ ಪ್ರತಿದಿನ 5 GB ಡೇಟಾ ಸೌಲಭ್ಯ ದೊರೆಯುತ್ತದೆ. ಇದರೊಂದಿಗೆ ಪ್ರತಿದಿನ 100 ಎಸ್‌ಎಮ್‌ಎಸ್‌ ಹಾಗೂ ಅನಿಯಮಿತ ವಾಯಿಸ್ ಕರೆಯ ಸೌಲಭ್ಯಗಳು ಲಭ್ಯವಾಗುತ್ತವೆ. ಇನ್ನು ಈ ಯೋಜನೆಯು ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿಯನ್ನು ಹೊಂದಿದೆ. ಒಟ್ಟು ಪೂರ್ಣ ಅವಧಿಯ ವ್ಯಾಲಿಡಿಟಿಯಲ್ಲಿ ಒಟ್ಟು 450 GB ಡೇಟಾ ಪ್ರಯೋಜನ ದೊರೆಯುತ್ತದೆ.

ಬಿಎಸ್‌ಎನ್‌ಎಲ್‌ 2399ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಪ್ರಯೋಜನಗಳು

ಬಿಎಸ್‌ಎನ್‌ಎಲ್‌ 2399ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಪ್ರಯೋಜನಗಳು

ಬಿಎಸ್‌ಎನ್‌ಎಲ್‌ ಟೆಲಿಕಾಂನ 2399ರೂ. ಯೋಜನೆಯು ವಾರ್ಷಿಕ ಅವಧಿಯ ಪ್ಲ್ಯಾನ್ ಆಗಿದೆ. ಈ ಅವಧಿಯಲ್ಲಿ ಪ್ರತಿದಿನ 3 GB ಡೇಟಾ ಪ್ರಯೋಜನ ಲಭ್ಯ ಆಗಲಿದೆ. ಜೊತೆಗೆ ಪ್ರತಿದಿನ 100 ಎಸ್‌ಎಮ್‌ಎಸ್‌ ಸೌಲಭ್ಯ ಸಹ ಸಿಗಲಿದೆ. ಇದರೊಂದಿಗೆ ಅನಿಯಮಿತ ವಾಯಿಸ್‌ ಕರೆಗಳ ಸೌಲಭ್ಯವು ದೊರೆಯಲಿದೆ. ಹಾಗೆಯೇ ಮುಂಬೈ ಮತ್ತು ದೆಹಲಿ ಎಮ್‌ಟಿಎನ್‌ಎಲ್‌ ಬಳಕೆದಾರರಗೆ ಅನಿಯಮಿತ ಸಾಂಗ್ ಚೇಂಜ್ ಹಾಗೂ EROS ಚಂದಾದಾರಿಕೆ ಸಹ ಲಭ್ಯ ಆಗಲಿದೆ.

ಬಿಎಸ್‌ಎನ್‌ಎಲ್‌ 2999ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಪ್ರಯೋಜನಗಳು

ಬಿಎಸ್‌ಎನ್‌ಎಲ್‌ 2999ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಪ್ರಯೋಜನಗಳು

ಬಿಎಸ್‌ಎನ್‌ಎಲ್‌ ಟೆಲಿಕಾಂನ 2999ರೂ. ಪ್ರೀಪೇಯ್ಡ್‌ ಯೋಜನೆ ದೀರ್ಘಾವಧಿಯ ಪ್ಲ್ಯಾನ್ ಆಗಿದ್ದು, ಪ್ರತಿದಿನ 3GB ಡೇಟಾ ಸೌಲಭ್ಯ ದೊರೆಯುತ್ತದೆ. ಇದರೊಂದಿಗೆ ಪ್ರತಿದಿನ 100 ಎಸ್‌ಎಮ್‌ಎಸ್‌ ಹಾಗೂ ಅನಿಯಮಿತ ವಾಯಿಸ್ ಕರೆಯ ಸೌಲಭ್ಯಗಳು ಲಭ್ಯವಾಗುತ್ತವೆ. ಇನ್ನು ಈ ಯೋಜನೆಯು ಒಟ್ಟು 365 ದಿನಗಳ ವ್ಯಾಲಿಡಿಟಿ ಅವಧಿಯನ್ನು ಹೊಂದಿದ್ದು, ಹೆಚ್ಚುವರಿಯಾಗಿ 90 ದಿನಗಳ ವ್ಯಾಲಿಡಿಟಿ ಸಹ ಲಭ್ಯವಾಗಲಿದೆ.

Best Mobiles in India

English summary
BSNL Launches New Rs 269 and Rs 769 Recharge Plans: Details.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+