Home
ಸುದ್ದಿಜಾಲ

BSNLನಿಂದ ಗ್ರಾಹಕರಿಗೆ ಅಚ್ಚರಿಯ ಪ್ಲ್ಯಾನ್‌; ದಂಗಾದ ಖಾಸಗಿ ಟೆಲಿಕಾಂಗಳು!

ಸರ್ಕಾರಿ ಸ್ವಾಮ್ಯದ ಬಿಎಸ್‌ಎನ್‌ಎಲ್‌ ಟೆಲಿಕಾಂ ಖಾಸಗಿ ಟೆಲಿಕಾಂಗಳಿಗೆ ಸೆಡ್ಡು ಹೊಡೆಯುವ ಪ್ರಯತ್ನ ಮುಂದುವರಿಸಿದ್ದು, ಕೆಲವು ಅತ್ಯುತ್ತಮ ಪ್ರೀಪೇಯ್ಡ್‌ ಯೋಜನೆಗಳನ್ನು ಪರಿಚಯಿಸಿದೆ. ಬಿಎಸ್‌ಎನ್‌ಎಲ್‌ ಇದೀಗ ಮತ್ತೆ ತನ್ನ ಬಜೆಟ್‌ ದರದ ಪ್ರೀಪೇಯ್ಡ್‌ ಯೋಜನೆವೊಂದರಲ್ಲಿ, ಖಾಸಗಿ ಟೆಲಿಕಾಂಗಳು ದಂಗಾಗುವಂತಹ ಪ್ರಯೋಜನಗಳನ್ನು ನೀಡಿ ಅಚ್ಚರಿ ಮೂಡಿಸಿದೆ.

BSNLನಿಂದ ಗ್ರಾಹಕರಿಗೆ ಅಚ್ಚರಿಯ ಪ್ಲ್ಯಾನ್‌; ದಂಗಾದ ಖಾಸಗಿ ಟೆಲಿಕಾಂಗಳು!

ಹೌದು, ಬಿಎಸ್‌ಎನ್‌ಎಲ್‌ ಟೆಲಿಕಾಂ ಜನಪ್ರಿಯ ಪ್ಲ್ಯಾನ್‌ನಲ್ಲಿ ವಾರ್ಷಿಕ ವ್ಯಾಲಿಡಿಟಿಯ ಪ್ರಯೋಜನ ಪರಿಚಯಿಸಿದೆ. ಈ ಜನಪ್ರಿಯ ಯೋಜನೆಯು ಈಗ 365 ದಿನಗಳ ವ್ಯಾಲಿಡಿಟಿ ಒಳಗೊಂಡಿದ್ದರೂ, ಅದರ ಬೆಲೆ ಗ್ರಾಹಕ ಸ್ನೇಹಿ ಆಗಿರುವುದು ಪ್ರಮುಖ ಆಕರ್ಷಣೆ ಎನಿಸಿದೆ. ಅದುವೇ ಬಿಎಸ್‌ಎನ್‌ಎಲ್‌ 797ರೂ. ಪ್ರೀಪೇಯ್ಡ್‌ ಪ್ಲ್ಯಾನ್‌ ಆಗಿದ್ದು, ಈ ಯೋಜನೆಯು ಕೆಲವು ಇತರೆ ಸೌಲಭ್ಯಗಳನ್ನು ಒಳಗೊಂಡಿರುವುದು ಗ್ರಾಹಕರಿಗೆ ಉಪಯುಕ್ತ ಆಗಿವೆ.

ವಾರ್ಷಿಕ ವ್ಯಾಲಿಡಿಟಿ ಪ್ರಯೋಜನ
ಸರ್ಕಾರಿ ಸ್ವಾಮ್ಯದ ಬಿಎಸ್‌ಎನ್‌ಎಲ್‌ ಟೆಲಿಕಾಂನ ಜನಪ್ರಿಯ 797ರೂ. ಗಳ ಪ್ರೀಪೇಯ್ಡ್‌ ಯೋಜನೆ ಈಗ ಗಮನ ಸೆಳೆದಿದೆ. ಈ ಯೋಜನೆ ರೀಚಾರ್ಜ್ ಮಾಡಿದ ಗ್ರಾಹಕರಿಗೆ 365 ದಿನಗಳ ವ್ಯಾಲಿಡಿಟಿ ಪ್ರಯೋಜನ ಲಭ್ಯವಾಗಲಿದೆ. ಇದರೊಂದಿಗೆ ಹೆಚ್ಚುವರಿ ಸೌಲಭ್ಯಗಳು ಲಭ್ಯ.

ಬಿಎಸ್‌ಎನ್‌ಎಲ್‌ 797ರೂ. ಪ್ಲ್ಯಾನ್ ಪ್ರಯೋಜನಗಳು
ಬಿಎಸ್‌ಎನ್‌ಎಲ್‌ ಸಂಸ್ಥೆಯ ಹೊಸ 797ರೂ ರೂ. ಪ್ರಿಪೇಯ್ಡ್ ಯೋಜನೆಯಲ್ಲಿ ಪ್ರತಿದಿನ 2GB ಡೇಟಾ ಲಭ್ಯವಾಗಲಿದ್ದು, ಇದರೊಂದಿಗೆ ಅನಿಯಮಿತ ವಾಯಿಸ್‌ ಕರೆಯ ಪ್ರಯೋಜನ ಸಿಗಲಿದೆ. ಇದಲ್ಲದೇ ಪ್ರತಿದಿನ 100 ಉಚಿತ ಎಸ್‌ಎಮ್ಎಸ್‌ಗಳ ಪ್ರಯೋಜನ ಸಹ ದೊರೆಯುತ್ತದೆ. ಪ್ರತಿದಿನ ನಿಗದಿತ ಡೇಟಾ ಮುಗಿದ ಬಳಿಕ, ಇಂಟರ್ನೆಟ್‌ ವೇಗವು 40kpbs ಗೆ ಇಳಿಕೆಯಾಗುತ್ತದೆ.

ಇನ್ನು ನೂತನ ಪ್ರೀಪೇಯ್ಡ್‌ ಯೋಜನೆಯು 365 ದಿನಗಳ ವ್ಯಾಲಿಡಿಟಿ ಪಡೆದಿದ್ದು, ಆದರೆ ರೀಚಾರ್ಜ್‌ ಮಾಡಿದ ಮೊದಲ 60 ದಿನಗಳಿಗೆ ಮಾತ್ರ ಡೇಟಾ ಸೌಲಭ್ಯ, ಎಸ್‌ಎಮ್‌ಎಸ್‌ ಹಾಗೂ ವಾಯಿಸ್ ಕರೆಯ ಪ್ರಯೋಜನ ದೊರೆಯುತ್ತದೆ. ಚಾರ್ಷಿಕ ಅವಧಿವರೆಗೂ ಸಿಮ್ ಆಕ್ಟಿವ್ ಇಡಲು ಬಯಸುವ ಹಾಗೂ ಬಜೆಟ್‌ ದರದಲ್ಲಿ ಅಧಿಕ ವ್ಯಾಲಿಡಿಟಿ ಬಯಸೋರಿಗೆ ಈ ಯೋಜನೆಯು ಹೆಚ್ಚು ಆಕರ್ಷಕ ಎನಿಸುತ್ತದೆ.

BSNLನಿಂದ ಗ್ರಾಹಕರಿಗೆ ಅಚ್ಚರಿಯ ಪ್ಲ್ಯಾನ್‌; ದಂಗಾದ ಖಾಸಗಿ ಟೆಲಿಕಾಂಗಳು!

ಬಿಎಸ್‌ಎನ್‌ಎಲ್‌ 299ರೂ. ಪ್ರಿಪೇಯ್ಡ್‌ ಪ್ಲ್ಯಾನ್ ಪ್ರಯೋಜನಗಳು
ಬಿಎಸ್‌ಎನ್‌ಎಲ್ ಟೆಲಿಕಾಂನ 299ರೂ. ಪ್ಲ್ಯಾನ್ ಅಲ್ಪಾವಧಿಯ ಯೋಜನೆ ಆಗಿದ್ದು, ಒಟ್ಟು 30 ದಿನಗಳ ವ್ಯಾಲಿಡಿಟಿಯನ್ನು ಒಳಗೊಂಡಿದೆ. ಪ್ರತಿದಿನ 3 GB ಡೇಟಾ ಸೌಲಭ್ಯ ದೊರೆಯುತ್ತದೆ. ಇದರೊಂದಿಗೆ ಪ್ರತಿದಿನ 100 ಎಸ್‌ಎಮ್‌ಎಸ್‌ ಹಾಗೂ ಅನಿಯಮಿತ ವಾಯಿಸ್ ಕರೆಯ ಸೌಲಭ್ಯಗಳು ಲಭ್ಯವಾಗುತ್ತವೆ. ನಿಗದಿತ ಡೇಟಾ ಮುಗಿದ ಬಳಿಕ ಇಂಟರ್ನೆಟ್ ವೇಗವು 80 Kbps ಗೆ ಕಡಿಮೆಯಾಗುತ್ತದೆ.

ಬಿಎಸ್‌ಎನ್‌ಎಲ್‌ 347ರೂ. ಪ್ರಿಪೇಯ್ಡ್‌ ಪ್ಲ್ಯಾನ್ ಪ್ರಯೋಜನಗಳು
ಬಿಎಸ್‌ಎನ್‌ಎಲ್‌ ಟೆಲಿಕಾಂನ 347ರೂ. ಯೋಜನೆಯು 56 ದಿನಗಳ ವ್ಯಾಲಿಡಿಟಿ ಪ್ರಯೋಜನ ಪಡೆದಿದೆ. ಈ ಯೋಜನೆಯು 2 GB ದೈನಂದಿನ ಡೇಟಾ, 100 ಎಸ್‌ಎಮ್‌ಎಸ್‌ ಸೌಲಭ್ಯ ಪಡೆದಿದೆ. ಇದರೊಂದಿಗೆ ಅನಿಯಮಿತ ವಾಯಿಸ್ ಕರೆಯ ಪ್ರಯೋಜನ ಸಹ ಒಳಗೊಂಡಿದೆ. ನಿಗದಿತ ಡೇಟಾ ಮುಗಿದ ಬಳಿಕ ಇಂಟರ್ನೆಟ್ ವೇಗವು 80 Kbps ಇಳಿಯಲಿದೆ.

BSNLನಿಂದ ಗ್ರಾಹಕರಿಗೆ ಅಚ್ಚರಿಯ ಪ್ಲ್ಯಾನ್‌; ದಂಗಾದ ಖಾಸಗಿ ಟೆಲಿಕಾಂಗಳು!

ಬಿಎಸ್‌ಎನ್‌ಎಲ್‌ 599ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಪ್ರಯೋಜನಗಳು
ಬಿಎಸ್‌ಎನ್‌ಎಲ್‌ ಟೆಲಿಕಾಂನ 599ರೂ. ಪ್ರೀಪೇಯ್ಡ್‌ ಯೋಜನೆಯಲ್ಲಿ ಪ್ರತಿದಿನ 5 GB ಡೇಟಾ ಸೌಲಭ್ಯ ದೊರೆಯುತ್ತದೆ. ಇದರೊಂದಿಗೆ ಪ್ರತಿದಿನ 100 ಎಸ್‌ಎಮ್‌ಎಸ್‌ ಹಾಗೂ ಅನಿಯಮಿತ ವಾಯಿಸ್ ಕರೆಯ ಸೌಲಭ್ಯಗಳು ಲಭ್ಯವಾಗುತ್ತವೆ. ಇನ್ನು ಈ ಯೋಜನೆಯು ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿಯನ್ನು ಹೊಂದಿದೆ. ಒಟ್ಟು ಪೂರ್ಣ ಅವಧಿಯ ವ್ಯಾಲಿಡಿಟಿಯಲ್ಲಿ ಒಟ್ಟು 450 GB ಡೇಟಾ ಪ್ರಯೋಜನ ದೊರೆಯುತ್ತದೆ. ಹೆಚ್ಚುವರಿಯಾಗಿ ಜಿಂಗ್ ಸೇವೆ ಲಭ್ಯವಾಗಲಿದೆ.

ಬಿಎಸ್‌ಎನ್‌ಎಲ್‌ 2399ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಪ್ರಯೋಜನಗಳು
ಬಿಎಸ್‌ಎನ್‌ಎಲ್‌ 2399ರೂ. ಯೋಜನೆಯು ವಾರ್ಷಿಕ ಅವಧಿಯ ಪ್ಲ್ಯಾನ್ ಆಗಿದೆ. ಈ ಯೋಜನೆಯು ಇದೀಗ ಹೆಚ್ಚುವರಿಯಾಗಿ 60 ದಿನಗಳ ವ್ಯಾಲಿಡಿಟಿಯನ್ನು ಪಡೆದಿದೆ. ಹೀಗಾಗಿ ಒಟ್ಟು 425 ದಿನಗಳ ವ್ಯಾಲಿಡಿಟಿ ಸಿಗಲಿದೆ. ಈ ಅವಧಿಯಲ್ಲಿ ಪ್ರತಿದಿನ 3 GB ಡೇಟಾ ಪ್ರಯೋಜನ ಲಭ್ಯ ಆಗಲಿದೆ. ಜೊತೆಗೆ ಪ್ರತಿದಿನ 100 ಎಸ್‌ಎಮ್‌ಎಸ್‌ ಸೌಲಭ್ಯ ಸಹ ಸಿಗಲಿದೆ. ಇದರೊಂದಿಗೆ ಅನಿಯಮಿತ ವಾಯಿಸ್‌ ಕರೆಗಳ ಸೌಲಭ್ಯವು ದೊರೆಯಲಿದೆ.

Best Mobiles in India

English summary
BSNL Rs 797 prepaid plan offers 365 days validity with unlimited Voice calls, 100 SMS per day, and 2 GB data per day. more details in kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+