BSNLನಿಂದ ಭರ್ಜರಿ ಪ್ಲ್ಯಾನ್; ಉಚಿತ ಕರೆ ಮತ್ತು 600 ದಿನ ವ್ಯಾಲಿಡಿಟಿ!
ದೇಶದಲ್ಲಿ ಟೆಲಿಕಾಂ ವಲಯದಲ್ಲಿ ಸರ್ಕಾರಿ ಸ್ವಾಮ್ಯದ ಬಿಎಸ್‌ಎನ್‌ಎಲ್ ಆಕರ್ಷಕ ಪ್ರೀಪೇಯ್ಡ್ ಪ್ಲ್ಯಾನ್‌ಗಳನ್ನು ಪರಿಚಯಿಸುವುದರ ಮೂಲಕ ಖಾಸಗಿ ಟೆಲಿಕಾಂ ಸಂಸ್ಥೆಗಳಿಗೆ ಪೈಪೋಟಿ ನೀಡುತ್ತಾ ಸಾಗಿದೆ. ಈಗಾಗಲೇ ಹಲವು ಅತ್ಯುತ್ತಮ ಪ್ರೀಪೇಯ್ಡ್ ಯೋಜನೆಗಳನ್ನು ಪರಿಚಯಿಸಿರುವ ಬಿಎಸ್‌ಎನ್‌ಎಲ್ ಇದೀಗ ವಾರ್ಷಿಕ ವ್ಯಾಲಿಡಿಟಿಗೂ ಅಧಿಕ ದಿನಗಳ ಒಂದು ದೀರ್ಘಾವಧಿಯ ಪ್ರೀಪೇಯ್ಡ್ ಪ್ಲ್ಯಾನ್‌ಯೊಂದನ್ನು ಪರಿಚಯಿಸಿದೆ.

ಹೌದು, ಬಿಎಸ್‌ಎಲ್‌ಎನ್ ಟೆಲಿಕಾಂ ಇದೀಗ ಹೊಸದಾಗಿ 2,399ರೂ. ಪ್ರೀಪೇಯ್ಡ್ ಪ್ಲ್ಯಾನ್ ಅನ್ನು ಲಾಂಚ್ ಮಾಡಿದೆ. ಈ ಯೋಜನೆಯು ದೀರ್ಘಾವಧಿಯ ಪ್ಲ್ಯಾನ್ ಆಗಿದ್ದು, ಒಟ್ಟು 600 ದಿನಗಳ ವ್ಯಾಲಿಡಿಟಿಯನ್ನು ಒಳಗೊಂಡಿದೆ. ಅದರೊಂದಿಗೆ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯವನ್ನು ಪಡೆದುಕೊಂಡಿದೆ. ಹಾಗೂ ಉಚಿತ ಎಸ್‌ಎಮ್‌ಎಸ್ ಪ್ರಯೋಜನವನ್ನು ಸಹ ಒಳಗೊಂಡಿದೆ. ಬಿಎಸ್‌ಎನ್‌ಎಲ್‌ನ 2,399ರೂ. ಪ್ರೀಪೇಯ್ಡ್ ಪ್ಲ್ಯಾನ್ ಪ್ರಯೋಜನಗಳ ಇನ್ನಷ್ಟು ಮಾಹಿತಿಗಾಗಿ ಮುಂದೆ ಓದಿರಿ.

ಬಿಎಸ್‌ಎನ್‌ಎಲ್‌ನ 2,399ರೂ. ಪ್ಲ್ಯಾನ್
ಬಿಎಸ್‌ಎನ್‌ಎಲ್‌ನ ಈ ಪ್ಲ್ಯಾನ್ ಒಟ್ಟು 600 ದಿನಗಳ ವ್ಯಾಲಿಡಿಟಿ ಅವಧಿಯನ್ನು ಒಳಗೊಂಡಿದ್ದು, ಈ ಅವಧಿಯಲ್ಲಿ ಪ್ರತಿದಿನ 250 FUP ನಿಮಿಷಗಳ ಮಿತಿಯಲ್ಲಿ ಉಚಿತ ವಾಯಿಸ್ ಕರೆಗಳ ಪ್ರಯೋಜನವನ್ನು ಒದಗಿಸಲಿದೆ. ಇದರೊಂದಿಗೆ ಪ್ರತಿದಿನ 100 ಎಸ್‌ಎಮ್‌ಎಸ್‌ಗಳ ಸೌಲಭ್ಯ ದೊರೆಯಲಿದ್ದು, 60 ದಿನಗಳಿಗೆ ಬಿಎಸ್‌ಎನ್‌ಎಲ್ ಟ್ಯೂನ್ ಸೌಲಭ್ಯವು ಸಿಗಲಿದೆ. ಆದರೆ ಯಾವುದೇ ಡೇಟಾ ಪ್ರಯೋಜನ ಲಭ್ಯ ಇರುವುದಿಲ್ಲ. ಡೇಟಾ ಅಗತ್ಯ ಇರದ ಹಾಗೂ ವಾಯಿಸ್ ಕರೆ ಮತ್ತು ಹೆಚ್ಚಿನ ವ್ಯಾಲಿಡಿಟಿ ಬಯಸುವ ಗ್ರಾಹಕರಿಗೆ ಈ ಪ್ಲ್ಯಾನ್ ಉತ್ತಮ ಆಯ್ಕೆ ಆಗಿದೆ.

ಇತರೆ ಪ್ಲ್ಯಾನ್‌ಗಳೊಂದಿಗೆ ಹೋಲಿಕೆ
ಬಿಎಸ್‌ಎನ್‌ಎಲ್‌ನ ಹೊಸ 2,399ರೂ. ಪ್ಲ್ಯಾನ್ ಒಟ್ಟು 600 ದಿನಗಳ ವ್ಯಾಲಿಡಿಟಿ ಸೌಲಭ್ಯ ತಿಳಿಸಿದೆ. ಆದರೆ ಹೆಚ್ಚು ಕಡಿಮೆ ಇದೇ ಬೆಲೆಯನ್ನು ಹೊಂದಿರುವ ಜಿಯೋ, ಏರ್‌ಟೆಲ್, ವೊಡಾಫೋನ್ ಟೆಲಿಕಾಂಗಳ ಪ್ಲ್ಯಾನ್‌ಗಳು ಕೇವಲ 365 ದಿನಗಳ ವ್ಯಾಲಿಡಿಟಿ ಒದಗಿಸುತ್ತವೆ. ವ್ಯಾಲಿಡಿಟಿ ಪಾಯಿಂಟ್ ವ್ಯೂವ್‌ನಲ್ಲಿ ಬಿಎಸ್‌ಎನ್‌ಎಲ್‌ನ ಈ ಪ್ಲ್ಯಾನ್ ಬೆಸ್ಟ್ ಅನಿಸುತ್ತದೆ. ಇನ್ನು ವಾಯಿಸ್ ಕರೆ ಪ್ರಯೋಜನವು ಹೊಂದಿದೆ. ಆದರೆ ಬಿಎಸ್‌ಎನ್‌ಎಲ್ ಯಾವುದೇ ಡೇಟಾ ಸೌಲಭ್ಯ ನೀಡಿಲ್ಲ. ಇದು ಗ್ರಾಹಕರಿಗೆ ಮೈನಸ್ ಪಾಯಿಂಟ್ ಆಗಿ ಕಾಣಿಸುತ್ತದೆ. ಆದರೆ ವಾಯಿಸ್ ಕರೆ ಹಾಗೂ ವ್ಯಾಲಿಡಿಟಿ ಪ್ರಿಯರಿಗೆ ಈ ಪ್ಲ್ಯಾನ್ ಬೆಸ್ಟ್ ಆಗಿದೆ. ಬೇಕಿದ್ದರೇ ಹೆಚ್ಚುವರಿ ಡೇಟಾ ಪ್ಯಾಕ್ ರೀಚಾರ್ಜ್ ಮಾಡಿಕೊಳ್ಳಬಹುದಾಗಿದೆ.

ಬಿಎಸ್‌ಎನ್‌ಎಲ್ 693ರೂ.ಪ್ಲ್ಯಾನ್
ಹಾಗೆಯೇ ಬಿಎಸ್‌ಎನ್‌ಎಲ್ 693ರೂ. ಡೇಟಾ ಎಸ್‌ಟಿವಿ ಯೋಜನೆಯು ಒಟ್ಟು 365 ದಿನಗಳ ವ್ಯಾಲಿಡಿಟಿ ಅವಧಿಯನ್ನು ಹೊಂದಿದೆ. ಈ ಪ್ಲ್ಯಾನಿನಲ್ಲಿ ಪೂರ್ಣ ವ್ಯಾಲಿಡಿಟಿ ಅವಧಿಗೆ ಒಟ್ಟು 300GB ಡೇಟಾ ಸೌಲಭ್ಯ ಲಭ್ಯವಾಗಲಿದೆ. ಇದು ಡೇಟಾ ಪ್ರೀಪೇಯ್ಡ್ ಯೋಜನೆ ಆಗಿರುವುದರಿಂದ ಯಾವುದೇ ವಾಯಿಸ್ ಕರೆ ಹಾಗೂ ಎಸ್‌ಎಮ್‌ಎಸ್ ಸೌಲಭ್ಯಗಳು ದೊರೆಯುವುದಿಲ್ಲ.

ಬಿಎಸ್‌ಎನ್‌ಎಲ್ 1,212ರೂ.ಪ್ಲ್ಯಾನ್
ಬಿಎಸ್‌ಎನ್‌ಎಲ್ 1,212ರೂ. ಡೇಟಾ ಎಸ್‌ಟಿವಿ ಡೇಟಾ ಯೋಜನೆಯು ಒಟ್ಟು 365 ದಿನಗಳ ವ್ಯಾಲಿಡಿಟಿ ಅವಧಿಯನ್ನು ಹೊಂದಿದೆ. ಈ ಪ್ಲ್ಯಾನಿನಲ್ಲಿ ಪೂರ್ಣ ವ್ಯಾಲಿಡಿಟಿ ಅವಧಿಗೆ ಒಟ್ಟು 500GB ಡೇಟಾ ಪ್ರಯೋಜನೆ ದೊರೆಯುತ್ತದೆ. ಈ ಯೋಜನೆಯಲ್ಲಿ ಗ್ರಾಹಕರಿಗೆ ಯಾವುದೇ ವಾಯಿಸ್ ಕರೆ ಹಾಗೂ ಎಸ್‌ಎಮ್‌ಎಸ್ ಸೌಲಭ್ಯಗಳು ದೊರೆಯುವುದಿಲ್ಲ. ಇದೊಂದು ಡೇಟಾ ಪ್ಲ್ಯಾನ್ ಆಗಿದೆ.


Click it and Unblock the Notifications








