BSNLನಿಂದ ಹೊಸ ಪ್ಲ್ಯಾನ್: ಪ್ರತಿದಿನ 2GB ಡೇಟಾ ಮತ್ತು 365 ದಿನಗಳ ವ್ಯಾಲಿಡಿಟಿ!
ದೇಶದ ಟೆಲಿಕಾಂ ವಲಯದಲ್ಲಿ ಬಿಎಸ್‌ಎನ್‌ಎಲ್ ಸೇರಿದಂತೆ ಖಾಸಗಿ ಟೆಲಿಕಾಂಗಳು ಆಕರ್ಷಕ ಪ್ಲ್ಯಾನ್ ಪರಿಚಯಿಸಿವೆ. ಇತ್ತೀಚಿಗೆ ಸರ್ಕಾರಿ ಸ್ವಾಮ್ಯದ ಬಿಎಸ್‌ಎನ್‌ಎಲ್ ಸಂಸ್ಥೆಯು ಅಧಿಕ ವ್ಯಾಲಿಡಿಟಿ ಹಾಗೂ ಡೇಟಾ ಪ್ರಯೋಜನಗಳ ಪ್ರೀಪೇಯ್ಡ್ ಪ್ಲ್ಯಾನ್‌ಗಳನ್ನು ಬಿಡುಗಡೆ ಮಾಡಿದೆ. ಅದೇ ಹಾದಿಯಲ್ಲಿ ಬಿಎಸ್‌ಎನ್‌ಎಲ್ ಇದೀಗ ಹೊಸದೊಂದು ಪ್ರೀಪೇಯ್ಡ್ ಪ್ಲ್ಯಾನ್ ಪರಿಚಯಿದ್ದು, ಖಾಸಗಿ ಟೆಲಿಕಾಂಗಳು ಕಕ್ಕಾಬಿಕ್ಕಿ ಆಗಿವೆ.

ಹೌದು, ಬಿಎಸ್‌ಎನ್‌ಎಲ್ ಈಗ PV 365ರೂ. ಪ್ರೀಪೇಯ್ಡ್ ಪ್ಲ್ಯಾನ್ ಪರಿಚಯಿಸಿದೆ. ಬಿಎಸ್‌ಎನ್‌ಎಲ್‌ನ ಈ ಪ್ಲ್ಯಾನ್ ವಾರ್ಷಿಕ ವ್ಯಾಲಿಡಿಟಿ ಅವಧಿಯನ್ನು ಒಳಗೊಂಡಿದ್ದು, ಡೇಟಾ ಹಾಗೂ ವಾಯಿಸ್ ಕರೆಗಳ ಪ್ರಯೋಜನಗಳನ್ನು ಹೊಂದಿದೆ. ಕೇರಳ ಟೆಲಿಕಾಂ ಸರ್ಕಲ್ ವ್ಯಾಪ್ತಿಯಲ್ಲಿ ಈ ಪ್ಲ್ಯಾನ್ ಚಾಲ್ತಿಯಲ್ಲಿದ್ದು, ಮೊದಲ ರೀಚಾರ್ಜ್‌ನಲ್ಲಿ ಈ ಪ್ರಯೋಜನಗಳು ಲಭ್ಯವಾಗುತ್ತದೆ. ಈ ಯೋಜನೆ ಇನ್ನಷ್ಟು ಪ್ರಯೋಜನಗಳ ಬಗ್ಗೆ ತಿಳಿಯಲು ಮುಂದಿನ ಸ್ಲೈಡ್‌ಗಳನ್ನು ಓದಿರಿ.

ಬಿಎಸ್‌ಎನ್‌ಎಲ್ 365ರೂ.
ಬಿಎಸ್‌ಎನ್‌ಎಲ್ ಈ ಹೊಸ ಯೋಜನೆಯಲ್ಲಿ ಪ್ರತಿದಿನ 2GB ಡೇಟಾ, ಪ್ರತಿದಿನ 100 ಎಸ್‌ಎಮ್‌ಎಸ್ ಹಾಗೂ ಪ್ರತಿದಿನ 250 ನಿಮಿಷಗಳ ಕರೆಯ ಸೌಲಭ್ಯಗಳು ಲಭ್ಯವಾಗುತ್ತವೆ. ಇನ್ನು ಈ ಯೋಜನೆಯು ಒಟ್ಟು 365 ದಿನಗಳ ವ್ಯಾಲಿಡಿಟಿ ಅವಧಿಯನ್ನು ಹೊಂದಿದೆ. ಆದರೆ ಡೇಟಾ, ಎಸ್‌ಎಮ್‌ಎಸ್ ಹಾಗೂ ವಾಯಿಸ್ ಕರೆಗಳ ಪ್ರಯೋಜನಗಳು ಮೊದಲ 60 ದಿನಗಳ ವರೆಗೆ ಲಭ್ಯವಾಗಲಿವೆ.

ಪ್ಲ್ಯಾನ್ ಲಭ್ಯತೆ
ಆಂಧ್ರಪ್ರದೇಶ, ಅಸ್ಸಾಂ, ಬಿಹಾರ-ಜಾರ್ಖಂಡ್, ಗುಜರಾತ್, ಹರಿಯಾಣ, ಹಿಮಾಚಲ ಪ್ರದೇಶ, ಕರ್ನಾಟಕ, ಕೇರಳ, ಪಶ್ಚಿಮ ಬಂಗಾಳ, ಮಹಾರಾಷ್ಟ್ರ, ಮಧ್ಯಪ್ರದೇಶ, ಒರಿಸ್ಸಾ, ಪಂಜಾಬ್, ರಾಜಸ್ಥಾನ, ತಮಿಳುನಾಡು ಟೆಲಿಕಾಂ ಪ್ರದೇಶಗಳಲ್ಲಿಯೂ ಈ ಯೋಜನೆ ಲಭ್ಯವಾಗಲಿದೆ ಎನ್ನಲಾಗಿದೆ. ಹಾಗೆಯೇ ಬಿಎಸ್‌ಎನ್‌ಎಲ್‌ನ ಇತರೆ ಬಿಗ್ ವ್ಯಾಲಿಡಿಟಿಯ ಪ್ಲ್ಯಾನ್‌ಗಳ ಬಗ್ಗೆ ಮುಂದೆ ತಿಳಿಯಿರಿ.

ಬಿಎಸ್‌ಎನ್‌ಎಲ್ 2,399ರೂ. ಪ್ಲ್ಯಾನ್
ಬಿಎಸ್‌ಎನ್‌ಎಲ್‌ನ ಈ ಪ್ಲ್ಯಾನ್ ಒಟ್ಟು 600 ದಿನಗಳ ವ್ಯಾಲಿಡಿಟಿ ಅವಧಿಯನ್ನು ಒಳಗೊಂಡಿದ್ದು, ಈ ಅವಧಿಯಲ್ಲಿ ಪ್ರತಿದಿನ 250 FUP ನಿಮಿಷಗಳ ಮಿತಿಯಲ್ಲಿ ಉಚಿತ ವಾಯಿಸ್ ಕರೆಗಳ ಪ್ರಯೋಜನವನ್ನು ಒದಗಿಸಲಿದೆ. ಇದರೊಂದಿಗೆ ಪ್ರತಿದಿನ 100 ಎಸ್‌ಎಮ್‌ಎಸ್‌ಗಳ ಸೌಲಭ್ಯ ದೊರೆಯಲಿದ್ದು, 60 ದಿನಗಳಿಗೆ ಬಿಎಸ್‌ಎನ್‌ಎಲ್ ಟ್ಯೂನ್ ಸೌಲಭ್ಯವು ಸಿಗಲಿದೆ. ಆದರೆ ಯಾವುದೇ ಡೇಟಾ ಪ್ರಯೋಜನ ಲಭ್ಯ ಇರುವುದಿಲ್ಲ. ಡೇಟಾ ಅಗತ್ಯ ಇರದ ಹಾಗೂ ವಾಯಿಸ್ ಕರೆ ಮತ್ತು ಹೆಚ್ಚಿನ ವ್ಯಾಲಿಡಿಟಿ ಬಯಸುವ ಗ್ರಾಹಕರಿಗೆ ಈ ಪ್ಲ್ಯಾನ್ ಉತ್ತಮ ಆಯ್ಕೆ ಆಗಿದೆ.

ಬಿಎಸ್‌ಎನ್‌ಎಲ್ 693ರೂ.ಪ್ಲ್ಯಾನ್
ಹಾಗೆಯೇ ಬಿಎಸ್‌ಎನ್‌ಎಲ್ 693ರೂ. ಡೇಟಾ ಎಸ್‌ಟಿವಿ ಯೋಜನೆಯು ಒಟ್ಟು 365 ದಿನಗಳ ವ್ಯಾಲಿಡಿಟಿ ಅವಧಿಯನ್ನು ಹೊಂದಿದೆ. ಈ ಪ್ಲ್ಯಾನಿನಲ್ಲಿ ಪೂರ್ಣ ವ್ಯಾಲಿಡಿಟಿ ಅವಧಿಗೆ ಒಟ್ಟು 300GB ಡೇಟಾ ಸೌಲಭ್ಯ ಲಭ್ಯವಾಗಲಿದೆ. ಇದು ಡೇಟಾ ಪ್ರೀಪೇಯ್ಡ್ ಯೋಜನೆ ಆಗಿರುವುದರಿಂದ ಯಾವುದೇ ವಾಯಿಸ್ ಕರೆ ಹಾಗೂ ಎಸ್‌ಎಮ್‌ಎಸ್ ಸೌಲಭ್ಯಗಳು ದೊರೆಯುವುದಿಲ್ಲ.

ಬಿಎಸ್‌ಎನ್‌ಎಲ್ 1,212ರೂ.ಪ್ಲ್ಯಾನ್
ಬಿಎಸ್‌ಎನ್‌ಎಲ್ 1,212ರೂ. ಡೇಟಾ ಎಸ್‌ಟಿವಿ ಡೇಟಾ ಯೋಜನೆಯು ಒಟ್ಟು 365 ದಿನಗಳ ವ್ಯಾಲಿಡಿಟಿ ಅವಧಿಯನ್ನು ಹೊಂದಿದೆ. ಈ ಪ್ಲ್ಯಾನಿನಲ್ಲಿ ಪೂರ್ಣ ವ್ಯಾಲಿಡಿಟಿ ಅವಧಿಗೆ ಒಟ್ಟು 500GB ಡೇಟಾ ಪ್ರಯೋಜನೆ ದೊರೆಯುತ್ತದೆ. ಈ ಯೋಜನೆಯಲ್ಲಿ ಗ್ರಾಹಕರಿಗೆ ಯಾವುದೇ ವಾಯಿಸ್ ಕರೆ ಹಾಗೂ ಎಸ್‌ಎಮ್‌ಎಸ್ ಸೌಲಭ್ಯಗಳು ದೊರೆಯುವುದಿಲ್ಲ. ಇದೊಂದು ಡೇಟಾ ಪ್ಲ್ಯಾನ್ ಆಗಿದೆ.


Click it and Unblock the Notifications




