Home
ಸುದ್ದಿಜಾಲ

BSNLನ ಈ ಜನಪ್ರಿಯ ಪ್ಲ್ಯಾನಿನಲ್ಲಿ ಭಾರೀ ಬದಲಾವಣೆ; ದಂಗಾದ ಖಾಸಗಿ ಟೆಲಿಕಾಂಗಳು!

ಸರ್ಕಾರಿ ಸ್ವಾಮ್ಯದ ಬಿಎಸ್‌ಎನ್‌ಎಲ್‌ ಟೆಲಿಕಾಂ ಚಂದಾದಾರರಿಗಾಗಿ ಹಲವು ಅಪ್‌ಡೇಟ್‌ ಮಾಡಿಕೊಂಡಿದ್ದು, ಆಕರ್ಷಕ ಯೋಜನೆಗಳನ್ನು ಜಾರಿ ಮಾಡಿದೆ. ಅವುಗಳಲ್ಲಿ ಬಹುತೇಕ ಯೋಜನೆಗಳು ಅಧಿಕ ಡೇಟಾ ಹಾಗೂ ವ್ಯಾಲಿಡಿಟಿ ಸೌಲಭ್ಯಗಳನ್ನು ಪಡೆದುಕೊಂಡಿವೆ. ಅಲ್ಪಾವಧಿಯ ಯೋಜನೆಗಳೊಂದಿಗೆ ವಾರ್ಷಿಕ ವ್ಯಾಲಿಡಿಟಿಯ ಪ್ಲ್ಯಾನ್‌ಗಳ ಆಯ್ಕೆಯನ್ನು ಒಳಗೊಂಡಿದೆ. ಆದ್ರೆ ಅವುಗಳಲ್ಲಿ ಬಜೆಟ್ ದರದಲ್ಲಿನ ಪ್ರಿಪೇಯ್ಡ್‌ ಯೋಜನೆಗಳು ಹೆಚ್ಚು ಆಕರ್ಷಕ ಅನಿಸಿದ್ದು, ಬಿಎಸ್‌ಎನ್‌ಎಲ್‌ ತನ್ನ ಪ್ಲ್ಯಾನ್‌ವೊಂದರಲ್ಲಿಗ ಬದಲಾವಣೆ ಮಾಡಿದೆ.

ಟೆಲಿಕಾಂ

ಹೌದು, ಬಿಎಸ್‌ಎನ್‌ಎಲ್‌ ಟೆಲಿಕಾಂ ತನ್ನ 499ರೂ. ಯೋಜನೆಯನ್ನು ಪರಿಷ್ಕರಿಸಿದ್ದು, ಮತ್ತಷ್ಟು ಪ್ರಯೋಜನಗಳನ್ನ ಸೇರಿಸಿದೆ. ಹೊಸ ಚಂದಾದಾರರನ್ನು ಸೆಳೆಯಲು ಹಾಗೂ ಇರುವ ಚಂದಾದಾರರನ್ನು ಉಳಿಸಿಕೊಳ್ಳಲು ಸಂಸ್ಥೆಯು ಪ್ಲ್ಯಾನ್‌ಗಳಲ್ಲಿ ಕೆಲವು ಬದಲಾವಣೆಗಳನ್ನು ಮಾಡುತ್ತಲೇ ಸಾಗಿ ಬಂದಿದೆ. ಸದ್ಯ ಚೆನ್ನೈನ ಸುತ್ತೋಲೆಯ ಪ್ರಕಾರ ಬಿಎಸ್‌ಎನ್‌ಎಲ್ 499ರೂ. ಯೋಜನೆಯನ್ನು ಪರಿಷ್ಕರಿಸಿ ಹೆಚ್ಚುವರಿ ಡೇಟಾ ಪ್ರಯೋಜನವನ್ನು ಒದಗಿಸಿದೆ. ಹಾಗಾದರೆ ಬಿಎಸ್‌ಎನ್‌ಎಲ್‌ನ ಈ 499ರೂ. ಯೋಜನೆ ಪ್ರಯೋಜನಗಳೇನು ಎಂಬುದನ್ನು ಮುಂದೆ ತಿಳಿಯೋಣ ಬನ್ನಿರಿ.

ಬಿಎಸ್‌ಎನ್‌ಎಲ್‌ 499ರೂ. ಪ್ರಿಪೇಯ್ಡ್‌ ಯೋಜನೆ:

ಬಿಎಸ್‌ಎನ್‌ಎಲ್‌ 499ರೂ. ಪ್ರಿಪೇಯ್ಡ್‌ ಯೋಜನೆ:

ಬಿಎಸ್‌ಎನ್‌ಎಲ್‌ನ ಈ SVT 499ರೂ. ಪ್ಲ್ಯಾನ್ ದೀರ್ಘಾವಧಿಯ ಯೋಜನೆ ಆಗಿದ್ದು, ಒಟ್ಟು 90 ದಿನಗಳ ವ್ಯಾಲಿಡಿಟಿಯನ್ನು ಒಳಗೊಂಡಿದೆ. ಈ ಅವಧಿಯಲ್ಲಿ ಪ್ರತಿದಿನ 1GB ಡೇಟಾ ಪ್ರಯೋಜನ ಲಭ್ಯ. ಇದರೊಂದಿಗೆ ಅನಿಯಮಿತ ವಾಯಿಸ್ ಕರೆಗಳ ಸೌಲಭ್ಯ ಸಹ ದೊರೆಯಲಿದೆ. ಹಾಗೆಯೇ ಡೈಲಿ 100 ಎಸ್‌ಎಮ್‌ಎಸ್‌ ಸಹ ಸಿಗುತ್ತದೆ. ಹೆಚ್ಚುವರಿಯಾಗಿ ಬಿಎಸ್‌ಎನ್‌ಎಲ್‌ ಟ್ಯೂನ್ ಮತ್ತು Zing ಪ್ರಯೋಜನ ಲಭ್ಯ.

ಡೇಟಾಗೆ

ಆದರೆ ಪರಿಷ್ಕರಣೆಯಿಂದಾಗಿ ಈ ಯೋಜನೆಯಲ್ಲಿ ಬಳಕೆದಾರರಿಗೆ ಪ್ರತಿದಿನ 1GB ಬದಲಾಗಿ 2GB ಡೇಟಾಗೆ ಲಭ್ಯವಾಗಲಿದೆ. ಅಂದರೇ ಪೂರ್ಣ ವ್ಯಾಲಿಡಿಟಿ ಅವಧಿಗೆ ಒಟ್ಟು 90GB ಡೇಟಾಗೆ ಬದಲಾಗಿ 180GB ಡೇಟಾ ಪ್ರಯೋಜನ ಸಿಗಲಿದೆ.

ಬಿಎಸ್‌ಎನ್‌ಎಲ್‌ 599ರೂ. ಪ್ರೀಪೇಯ್ಡ್‌ ಯೋಜನೆ

ಬಿಎಸ್‌ಎನ್‌ಎಲ್‌ 599ರೂ. ಪ್ರೀಪೇಯ್ಡ್‌ ಯೋಜನೆ

ಬಿಎಸ್‌ಎನ್‌ಎಲ್‌ ಈ ಪ್ರೀಪೇಯ್ಡ್‌ ಪ್ಲ್ಯಾನಿನಲ್ಲಿ ಪ್ರತಿದಿನ 5GB ಡೇಟಾ ಸೌಲಭ್ಯ ದೊರೆಯುತ್ತದೆ. ಇದರೊಂದಿಗೆ ಪ್ರತಿದಿನ 100 ಎಸ್‌ಎಮ್‌ಎಸ್‌ ಹಾಗೂ ಪ್ರತಿದಿನ 250 ನಿಮಿಷಗಳ ಕರೆಯ ಸೌಲಭ್ಯಗಳು ಲಭ್ಯವಾಗುತ್ತವೆ. ಇನ್ನು ಈ ಯೋಜನೆಯು ಒಟ್ಟು 90 ದಿನಗಳ ವ್ಯಾಲಿಡಿಟಿ ಅವಧಿಯನ್ನು ಹೊಂದಿದೆ. ಒಟ್ಟು ಪೂರ್ಣ ಅವಧಿಯ ವ್ಯಾಲಿಡಿಟಿಯಲ್ಲಿ ಒಟ್ಟು 450GB ಡೇಟಾ ಪ್ರಯೋಜನ ದೊರೆಯುತ್ತದೆ.

ಬಿಎಸ್‌ಎನ್‌ಎಲ್‌ 1212ರೂ. ಯೋಜನೆ

ಬಿಎಸ್‌ಎನ್‌ಎಲ್‌ 1212ರೂ. ಯೋಜನೆ

ಬಿಎಸ್‌ಎನ್‌ಎಲ್‌ 1,212ರೂ. ಯೋಜನೆಯಲ್ಲಿ ಬಳಕೆದಾರರಿಗೆ ಒಟ್ಟು 365 ದಿನಗಳ ವ್ಯಾಲಿಡಿಟಿ ಅವಧಿಯನ್ನು ಹೊಂದಿದೆ. ಈ ಪ್ಲ್ಯಾನಿನಲ್ಲಿ ಪೂರ್ಣ ವ್ಯಾಲಿಡಿಟಿ ಅವಧಿಗೆ ಒಟ್ಟು 500GB ಡೇಟಾ ಪ್ರಯೋಜನೆ ದೊರೆಯುತ್ತದೆ. ಈ ಯೋಜನೆಯಲ್ಲಿ ಗ್ರಾಹಕರಿಗೆ ಯಾವುದೇ ವಾಯಿಸ್‌ ಕರೆ ಹಾಗೂ ಎಸ್‌ಎಮ್‌ಎಸ್‌ ಸೌಲಭ್ಯಗಳು ದೊರೆಯುವುದಿಲ್ಲ. ಇದೊಂದು ಡೇಟಾ ಪ್ಲ್ಯಾನ್ ಆಗಿದೆ.

ಬಿಎಸ್‌ಎನ್‌ಎಲ್‌ 2399ರೂ. ಪ್ರಿಪೇಯ್ಡ್‌ ಯೋಜನೆ

ಬಿಎಸ್‌ಎನ್‌ಎಲ್‌ 2399ರೂ. ಪ್ರಿಪೇಯ್ಡ್‌ ಯೋಜನೆ

ಬಿಎಸ್‌ಎನ್‌ಎಲ್‌ನ ಈ ಪ್ಲ್ಯಾನ್ ಒಟ್ಟು 600 ದಿನಗಳ ವ್ಯಾಲಿಡಿಟಿ ಅವಧಿಯನ್ನು ಒಳಗೊಂಡಿದ್ದು, ಈ ಅವಧಿಯಲ್ಲಿ ಪ್ರತಿದಿನ 250 FUP ನಿಮಿಷಗಳ ಮಿತಿಯಲ್ಲಿ ಉಚಿತ ವಾಯಿಸ್‌ ಕರೆಗಳ ಪ್ರಯೋಜನವನ್ನು ಒದಗಿಸಲಿದೆ. ಇದರೊಂದಿಗೆ ಪ್ರತಿದಿನ 100 ಎಸ್‌ಎಮ್‌ಎಸ್‌ಗಳ ಸೌಲಭ್ಯ ದೊರೆಯಲಿದ್ದು, 60 ದಿನಗಳಿಗೆ ಬಿಎಸ್‌ಎನ್‌ಎಲ್‌ ಟ್ಯೂನ್‌ ಸೌಲಭ್ಯವು ಸಿಗಲಿದೆ. ಆದರೆ ಯಾವುದೇ ಡೇಟಾ ಪ್ರಯೋಜನ ಲಭ್ಯ ಇರುವುದಿಲ್ಲ. ಡೇಟಾ ಅಗತ್ಯ ಇರದ ಹಾಗೂ ವಾಯಿಸ್ ಕರೆ ಮತ್ತು ಹೆಚ್ಚಿನ ವ್ಯಾಲಿಡಿಟಿ ಬಯಸುವ ಗ್ರಾಹಕರಿಗೆ ಈ ಪ್ಲ್ಯಾನ್ ಉತ್ತಮ ಆಯ್ಕೆ ಆಗಿದೆ.

Best Mobiles in India

English summary
As per a circular from BSNL Chennai, the telco has rationalised two of its prepaid plans.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+