ಬಿಎಸ್‌ಎನ್ಎಲ್ 1098ರೂ.ಪ್ಲ್ಯಾನ್ : ಅನಿಯಮಿತ ಉಚಿತ ಕರೆ ಮತ್ತು ಡೇಟಾ!

|

ಸದ್ಯ ದೇಶದ ಟೆಲಿಕಾಂ ವಲಯ ಏಳುಬೀಳಿನ ಪರಿಸ್ಥಿತಿಯಲ್ಲಿದ್ದರು ಸಹ ಸರ್ಕಾರಿ ಸ್ವಾಮ್ಯದ ಬಿಎಸ್‌ಎನ್ಎಲ್ ಹಲವು ಆಕರ್ಷಕ ಪ್ರೀಪೇಡ್ ಪ್ಲ್ಯಾನ್‌ಗಳನ್ನು ಪರಿಚಯಿಸಿತ್ತ ಸಾಗಿದೆ. ಈ ಮೂಲಕ ಚಂದಾದಾರರ ಸಂಖ್ಯೆಯನ್ನು ಹೆಚ್ಚಿಸಿಕೊಳ್ಳುವ ಜತೆಗೆ ಖಾಸಗಿ ಟೆಲಿಕಾಂಗಳ ಆಫರ್‌ಗಳ ಅಬ್ಬರಕ್ಕೆ ಪ್ರತ್ಯುತ್ತರ ನೀಡುವ ಪ್ರಯತ್ನ ನಡೆಸಿದೆ. ಈಗ ಬಿಎಸ್‌ಎನ್ಎಲ್‌ ಮತ್ತೊಂದು ಪ್ರೀಪೇಡ್‌ ಪ್ಲ್ಯಾನ್‌ ಪರಿಚಯಿಸಿದ್ದು, ಈ ಪ್ಲ್ಯಾನಿನಲ್ಲಿ ಅನಿಯಮಿತ ಕರೆ ಮತ್ತು ಡೇಟಾ ಸಿಗಲಿವೆ.

ಬಿಎಸ್‌ಎನ್ಎಲ್

ಹೌದು, ಬಿಎಸ್‌ಎನ್ಎಲ್ ಸಂಸ್ಥೆಯು ಹೊಸದಾಗಿ 1098ರೂ.ಗಳ ಪ್ರೀಪೇಡ್‌ ಪ್ಲ್ಯಾನ್‌ ಅನ್ನು ಪರಿಚಯಿಸಿದ್ದು, ಈ ಪ್ರೀಪೇಡ್‌ ಪ್ಲ್ಯಾನ್ ಒಟ್ಟು 84 ದಿನಗಲ ವ್ಯಾಲಿಡಿಟಿ ಅವಧಿಯನ್ನು ಹೊಂದಿದೆ. ಯಾವುದೇ ಮಿತಿ ಇಲ್ಲದೇ ಅನಿಯಮಿತ ಡೇಟಾ ಸೌಲಭ್ಯದ ಜೊತೆಗೆ ಪ್ರತಿದಿನ ಉಚಿತ 100 ಎಸ್‌ಎಮ್ಎಸ್‌ ಪ್ರಯೋಜನಗಳು ಸಹ ಲಭ್ಯವಾಗಲಿವೆ. ಹಾಗಾದರೇ ಬಿಎಸ್‌ಎನ್ಎಲ್‌ನ 1098ರೂ.ಪ್ಲ್ಯಾನ್‌ ವೈಶಿಷ್ಟಗಳೆನು ಹಾಗೂ ಬಿಎಸ್‌ಎನ್ಎಲ್‌ನ ಇತರೆ ಜನಪ್ರಿಯ ಪ್ಲ್ಯಾನ್‌ಗಳ ಬಗ್ಗೆ ಮುಂದೆ ನೋಡೋಣ ಬನ್ನಿರಿ.

ಬಿಎಸ್‌ಎನ್ಎಲ್ 1098ರೂ.ಪ್ಲ್ಯಾನ್

ಬಿಎಸ್‌ಎನ್ಎಲ್ 1098ರೂ.ಪ್ಲ್ಯಾನ್

ಬಿಎಸ್‌ಎನ್ಎಲ್‌ನ ಹೊಸ 1098ರೂ.ಪ್ಲ್ಯಾನ್ ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ. ಈ ಅವಧಿಯಲ್ಲಿ ದೈನಂದಿನ ಯಾವುದೇ ಮಿತಿಇಲ್ಲದೇ ಅನಿಯಮಿತ ಉಚಿತ ಕರೆಗಳ ಸೌಲಭ್ಯ ಮತ್ತು ಅನಿಯಮಿತ ಡೇಟಾ ಬಳಕೆಯ ಪ್ರಯೋಜನಗಳು ದೊರೆಯಲಿವೆ. ಹಾಗೆಯೇ ಇದರೊಂದಿಗೆ ಪ್ರತಿದಿನ 100 ಉಚಿತ ಎಸ್‌ಎಮ್ಎಸ್‌ಗಳ ಪ್ರಯೋಜನವು ಸಹ ಲಭ್ಯವಾಗಲಿದೆ.

ಬಿಎಸ್‌ಎನ್‌ಎಲ್‌ 1188ರೂ.ಪ್ಲ್ಯಾನ್

ಬಿಎಸ್‌ಎನ್‌ಎಲ್‌ 1188ರೂ.ಪ್ಲ್ಯಾನ್

ಬಿಎಸ್‌ಎನ್‌ಎಲ್‌ನ ಸಂಸ್ಥೆಯ ಹೊಸ 1188ರೂ.ದೀರ್ಘಾವಧಿಯ ಪ್ಲ್ಯಾನಿನಲ್ಲಿ ಒಟ್ಟು 365 ದಿನಗಳ ವ್ಯಾಲಿಡಿಟಿ ಅವಧಿ ಗ್ರಾಹಕರಿಗೆ ಸಿಗಲಿದ್ದು, ಇದರೊಂದಿಗೆ ಪೂರ್ಣ ವ್ಯಾಲಿಡಿಟಿ ಅವಧಿಗೆ 5GB ಡೇಟಾ ಸೌಲಭ್ಯವು ಲಭ್ಯವಾಗಲಿದೆ. ಹಾಗೆಯೇ ಅನಿಯಮಿತ ಉಚಿತ ಕರೆಗಳ ಪ್ರಯೋಜನ ಸಿಗಲಿದ್ದು, ಪೂರ್ಣ ವ್ಯಾಲಿಡಿಟಿ ಅವಧಿಗೆ ಒಟ್ಟು 1200 ಉಚಿತ ಎಸ್‌ಎಮ್ಎಸ್‌ಗಳು ಸಹ ದೊರೆಯಲಿವೆ. ಈ ಪ್ಲ್ಯಾನ್ ಚನ್ನೈ ಮತ್ತು ಆಂಧ್ರಪ್ರದೇಶ ಟೆಲಿಕಾಂ ಸರ್ಕಲ್ ವ್ಯಾಪ್ತಿಯಲ್ಲಿ ಲಭ್ಯ ಇದೆ.

ಬಿಎಸ್‌ಎನ್‌ಎಲ್ 997ರೂ.ಪ್ಲ್ಯಾನ್‌

ಬಿಎಸ್‌ಎನ್‌ಎಲ್ 997ರೂ.ಪ್ಲ್ಯಾನ್‌

ಬಿಎಸ್‌ಎನ್‌ಎಲ್ ಹೊಸದಾಗಿ 997ರೂ. ಪ್ರೀಪೇಡ್‌ ಪ್ಲ್ಯಾನ್‌ ಬಿಡುಗಡೆ ಮಾಡಿದ್ದು, ಈ ಪ್ಲ್ಯಾನ್‌ ಒಟ್ಟು 180 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ. ಈ ಅವಧಿಯಲ್ಲಿ ಅನಿಯಮಿತ ಲೋಕಲ್ ಮತ್ತಯ ನ್ಯಾಶನಲ್ ಕರೆಗಳು ಉಚಿತವಾಗಿ ಲಭ್ಯವಾಗಲಿದ್ದು, ಇದರೊಂದಿಗೆ ಪ್ರತಿದಿನ 3GB ಡೇಟಾ ಸೌಲಭ್ಯವು ದೊರೆಯಲಿದೆ. ಹಾಗೆಯೇ ಪ್ರತಿದಿನ 100 ಉಚಿತ ಎಸ್‌ಎಮ್ಎಸ್‌ಗಳ ಪ್ರಯೋಜನವು ಲಭ್ಯವಾಗಲಿದೆ.

ಬಿಎಸ್‌ಎನ್‌ಎಲ್ 1699ರೂ.ಪ್ಲ್ಯಾನ್

ಬಿಎಸ್‌ಎನ್‌ಎಲ್ 1699ರೂ.ಪ್ಲ್ಯಾನ್

ಬಿಎಸ್‌ಎನ್‌ಎಲ್ ಸಂಸ್ಥೆಯ 1699ರೂ.ಗಳ ವಾರ್ಷಿಕ ಪ್ರೀಪೇಡ್ ರೀಚಾರ್ಜ್ ಪ್ಲ್ಯಾನ್ ಹೊಂದಿದ್ದು, ಈ ಪ್ಲ್ಯಾನ್‌ ಒಟ್ಟು 365 ದಿನಗಳ ವ್ಯಾಲಿಡಿಟಿಯನ್ನು ಹೊಂದಿದೆ. ಈ ಅವಧಿಯಲ್ಲಿ ಅನಿಯಮಿತ ಉಚಿತ ಸ್ಥಳಿಯ ಮತ್ತು ರಾಷ್ಟ್ರಿಯ ವಾಯಿಸ್‌ ಕರೆಗಳು, ಪ್ರತಿದಿನ 100 ಉಚಿತ ಎಸ್‌ಎಮ್‌ಎಸ್‌ ಹಾಗೂ ಪ್ರತಿದಿನ 2GB ಉಚಿತ ಡೇಟಾ ಪ್ರಯೋಜನಗಳು ಗ್ರಾಹಕರಿಗೆ ದೊರೆಯಲಿವೆ. ಇದು ವ್ಯಾಲಿಡಿಟಿ ಮತ್ತು ಡೇಟಾ ಬಯಸುವ ಗ್ರಾಹಕರಿಗೆ ಉತ್ತಮ ಎನ್ನಬಹುದು.

Best Mobiles in India

English summary
There is usually a capping of 250 minutes on every free call from BSNL but the company is applying no such time limitation under this plan. to know more visit to kannada.gizbot.com

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X