ಬಿಎಸ್‌ಎನ್‌ಎಲ್‌ ಪ್ಲ್ಯಾನ್‌ ಜೊತೆಗೆ ಅಮೆಜಾನ್ ಪ್ರೈಮ್‌ ಸದಸ್ಯತ್ವ ಉಚಿತ!

|

ಇತ್ತೀಚಿಗೆ ದೇಶದ ಟೆಲಿಕಾಂ ಕ್ಷೇತ್ರದಲ್ಲಿ ಮಹತ್ತರ ಬದಲಾವಣೆಗಳು ಆಗಿದ್ದು, ಟೆಲಿಕಾಂ ಸಂಸ್ಥೆಗಳಿಗೂ ಲಾಕ್‌ಡೌನ್‌ ಬಿಸಿ ತಟ್ಟಿದೆ. ಸಂಸ್ಥೆಗಳು ಲಾಕ್‌ಡೌನ್‌ ಅವಧಿಯಲ್ಲಿ ಚಂದಾದಾರಿರಿಗೆ ಅನುಕೂಲಕರ ರೀಚಾರ್ಜ್ ಹೊಸ ಮಾರ್ಗಗಳನ್ನು ಪರಿಚಯಿಸಿವೆ. ಅವುಗಳಲ್ಲಿ ಸರ್ಕಾರಿ ಸ್ವಾಮ್ಯದ ಬಿಎಸ್‌ಎನ್‌ಎಲ್ ಟೆಲಿಕಾಂ ಖಾಸಗಿ ಸಂಸ್ಥೆಗಳಿಗೆ ನೇರವಾಗಿ ಪೈಪೋಟಿ ನೀಡುತ್ತಾ ಮುನ್ನಡೆದಿದೆ. ಇದೀಗ ಈ ಲಾಕ್‌ಡೌನ್ ಸಂದರ್ಭದಲ್ಲಿ ತನ್ನ ಚಂದಾದಾರರಿಗೆ ಖುಷಿ ಸುದ್ದಿ ನೀಡಿದೆ.

ಬಿಎಸ್‌ಎನ್‌ಎಲ್‌

ಹೌದು, ಬಿಎಸ್‌ಎನ್‌ಎಲ್‌ ಈಗ ತನ್ನ ಪೋಸ್ಟ್‌ಪೇಯ್ಡ್‌ ಬಳಕೆದಾರರಿಗೆ ಉಚಿತ 999ರೂ. ಬೆಲೆಯ ಅಮೆಜಾನ್ ಪ್ರೈಮ್ ಸದಸ್ಯತ್ವ ನೀಡುವುದಾಗಿ ಹೇಳಿದೆ. ಬಿಎಸ್‌ಎನ್‌ಎಲ್‌ 399ರೂ. ಮೇಲ್ಪಟ್ಟ ಪೋಸ್ಟ್‌ಪೇಯ್ಡ್ ಚಂದಾದಾರರಿಗೆ ಯಾವುದೇ ಹೆಚ್ಚುವರಿ ಶುಲ್ಕವಿಲ್ಲದೇ ಈ ಪ್ರಯೋಜನವು ಲಭ್ಯವಾಗಲಿದೆ. ಹಾಗೆಯೇ ಆಯ್ದ ಬಿಎಸ್‌ಎನ್‌ಎಲ್‌ ಬ್ರಾಡ್‌ಬ್ಯಾಂಡ್‌ ರೀಚಾರ್ಜ್‌ನಲ್ಲಿಯು ಅಮೆಜಾನ್ ಪ್ರೈಮ್ ಪ್ರಯೋಜನ ಲಭ್ಯವಾಗುತ್ತದೆ.

ಅಮೆಜಾನ್ ಪ್ರೈಮ್‌ ಕೊಡುಗೆ

ಅಮೆಜಾನ್ ಪ್ರೈಮ್‌ ಕೊಡುಗೆ

ಬಿಎಸ್‌ಎನ್‌ಎಲ್‌ ಪೋಸ್ಟ್‌ಪೇಯ್ಡ್‌ ಚಂದಾದಾರಿಗೆ 999ರೂ. ಬೆಲೆಯ ಅಮೆಜಾನ್ ಪ್ರೈಮ್ ಸದಸ್ಯತ್ವ ಲಭ್ಯವಾಗಲಿದೆ. ಲಾಕ್‌ಡೌನ್ ಅವಧಿಯಲ್ಲಿ ಮನರಂಜನೆಗೆ ಇದು ಪೂರಕ ಅನಿಸಲಿದೆ. ಅಂದಹಾಗೆ ಈ ಕೊಡುಗೆಯು ಬಿಎಸ್‌ಎನ್‌ಲ್‌ನ 399ರೂ. ಹಾಗೂ ಅದಕ್ಕೂ ಮೇಲ್ಪಟ್ಟ ಪೋಸ್ಟ್‌ಪೇಯ್ಡ್ ಯೋಜನೆಗಳಿಗೆ ಮಾತ್ರ ಈ ಕೊಡಗೆ ಅನ್ವಯವಾಗಲಿದೆ.

ಬಿಎಸ್‌ಎನ್‌ಎಲ್‌ ಪೋಸ್ಟ್‌ಪೇಯ್ಡ್‌ ಪ್ಲ್ಯಾನ್‌

ಬಿಎಸ್‌ಎನ್‌ಎಲ್‌ ಪೋಸ್ಟ್‌ಪೇಯ್ಡ್‌ ಪ್ಲ್ಯಾನ್‌

ಬಿಎಸ್‌ಎನ್‌ಎಲ್‌ ಹಲವು ಪೋಸ್ಟ್‌ಪೇಯ್ಡ್‌ ಪ್ಲ್ಯಾನ್‌ಗಳನ್ನು ಹೊಂದಿದ್ದು, ಆರಂಭಿಕ ಪ್ರೀಪೇಯ್ಡ್‌ ಬೆಲೆಯು 99ರೂ ಆಗಿದೆ. ಉಳಿದಂತೆ 401ರೂ, 499ರೂ, 525ರೂ, 725ರೂ, 798ರೂ, 799ರೂ, 1,125ರೂ ಮತ್ತು 1,525ರೂ. ಬೆಲೆಯ ಪ್ಲ್ಯಾನ್‌ಗಳು ಇವೆ. ಹಾಗೆಯೇ ಕೆಲವು ಟೆಲಿಕಾಂ ಸರ್ಕಲ್‌ಗಳಲ್ಲಿ 499ರೂ ಮತ್ತು 798ರೂ ಬೆಲೆಯ ಪ್ಲ್ಯಾನ್‌ ಲಭ್ಯ ಇವೆ. ಹಾಗೆಯೇ ಬಿಎಸ್‌ಎನ್‌ಎಲ್‌ ಹಲವು ಬ್ರಾಡ್‌ಬ್ಯಾಂಡ್‌ ಯೋಜನೆ ಹೊಂದಿದೆ. ಅವುಗಳಲ್ಲಿ ಅಗ್ಗದ ಶುಲ್ಕದ ಪ್ಲ್ಯಾನ್ ಆಕರ್ಷಕ ಅನಿಸಿವೆ. ಮುಂದೆ ಓದಿರಿ.

ಬಿಎಸ್‌ಎನ್‌ಎಲ್‌-555ರೂ.ಪ್ಲ್ಯಾನ್

ಬಿಎಸ್‌ಎನ್‌ಎಲ್‌-555ರೂ.ಪ್ಲ್ಯಾನ್

ಬಿಎಸ್‌ಎನ್‌ಎಲ್‌ ಸಂಸ್ಥೆಯ ಬೇಸಿಕ್ ಬ್ರಾಡ್‌ಬ್ಯಾಂಡ್‌ ಪ್ಲ್ಯಾನ್‌ ಇದಾಗಿದ್ದು, ಈ ಪ್ಲ್ಯಾನಿನಲ್ಲಿ ಒಟ್ಟು 100GB ಡೇಟಾ ಸಿಗಲಿದೆ. 20 Mbps ವೇಗದ ಸಾಮರ್ಥ್ಯದಲ್ಲಿರಲಿದ್ದು, ಪ್ರತಿದಿನ ಯಾವುದೇ ಮಿತಿ ಇಲ್ಲದೇ ಡೇಟಾ ಬಳಕೆ ಮಾಡಬಹುದಾಗಿದೆ. ತಿಂಗಳ ಮಿತಿ 100GB ಡೇಟಾ ಮುಗಿದ ಬಳಿಕ 1 Mbps ವೇಗದಲ್ಲಿ ಡೇಟಾ ಸೌಲಭ್ಯವು ಲಭ್ಯವಾಗಲಿದೆ.

ಬಿಎಸ್‌ಎನ್‌ಎಲ್‌-777ರೂ.ಪ್ಲ್ಯಾನ್

ಬಿಎಸ್‌ಎನ್‌ಎಲ್‌-777ರೂ.ಪ್ಲ್ಯಾನ್

ಬಿಎಸ್‌ಎನ್‌ಎಲ್‌ ಸಂಸ್ಥೆಯ ಈ 777ರೂ.ಪ್ಲ್ಯಾನ್‌ ಒಂದು ತಿಂಗಳಿನಲ್ಲಿ 500GB ಡೇಟಾ ಸಿಗಲಿದೆ. ಡೇಟಾ ವೇಗದ ಮಿತಿಯು 50 Mbps ಸಾಮರ್ಥ್ಯದಲ್ಲಿರಲಿದ್ದು, ತಿಂಗಳ ನಿಗದಿತ ಡೇಟಾ ಬಳಕೆ ಮುಗಿದ ಬಳಿಕ 2Mbps ವೇಗದಲ್ಲಿ ಡೇಟಾ ಸೌಲಭ್ಯ ಮುಂದವರೆಯಲಿದೆ. ಈ ಪ್ಲ್ಯಾನಿನಲ್ಲಿಯೂ ಸಹ ಹೆಚ್ಚುವರಿಯಾಗಿ ಒಂದು ವರ್ಷದ ಅಮೆಜಾನ್ ಪ್ರೈಮ್ ಸದಸ್ಯತ್ವ ಸಹ ದೊರೆಯಲಿದೆ.

ಬಿಎಸ್‌ಎನ್‌ಎಲ್‌-849ರೂ.ಪ್ಲ್ಯಾನ್

ಬಿಎಸ್‌ಎನ್‌ಎಲ್‌-849ರೂ.ಪ್ಲ್ಯಾನ್

ಬಿಎಸ್‌ಎನ್‌ಎಲ್‌ನ ಈ ಬ್ರಾಡ್‌ಬಾಂಡ್‌ ಪ್ಲ್ಯಾನಿನಲ್ಲಿ ಒಂದು ತಿಂಗಳಿಗೆ ಒಟ್ಟು 600GB ಡೇಟಾ ಮಿತಿಯನ್ನು ನೀಡಲಾಗಿದ್ದು, ಯಾವುದೇ ದೈನಂದಿನ FUP ಮಿತಿ ಇರುವುದಿಲ್ಲ. ಈ ಪ್ಲ್ಯಾನ್‌ನಲ್ಲಿ ಡೇಟಾ ವೇಗವು 50 Mbps ಸಾಮರ್ಥ್ಯದಲ್ಲಿರಲಿದ್ದು, ಇತರೆ ನೆಟವರ್ಕ್‌ಗಳಿಗೆ ಅನಿಯಮಿತ ಉಚಿತ ಕರೆಗಳ ಸೌಲಬ್ಯವನ್ನು ಪಡೆದಿದೆ. ಇದರೊಂದಿಗೆ ಒಂದು ವರ್ಷದ ಅಮೆಜಾನ್ ಪ್ರೈಮ್ ಸದಸ್ಯತ್ವ ಸಹ ದೊರೆಯಲಿದೆ.

Most Read Articles
Best Mobiles in India

English summary
BSNL postpaid plans above Rs 399 offer Amazon Prime subscription for free.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X