BSNLನಿಂದ ನಾಲ್ಕು ಅಗ್ಗದ ಪ್ಲ್ಯಾನ್‌ಗಳು ಲಾಂಚ್; ದಂಗಾದ ಖಾಸಗಿ ಟೆಲಿಕಾಂಗಳು!
ದೇಶದ ಟೆಲಿಕಾಂ ಕ್ಷೇತ್ರದಲ್ಲಿ ಸಂಸ್ಥೆಗಳ ನಡುವೆ ಸ್ಪರ್ಧಾತ್ಮಕ ವಾತಾವರಣ ಇದ್ದು, ಆಕರ್ಷಕ ಪ್ಲ್ಯಾನ್‌ಗಳ ಮೂಲಕ ಚಂದಾದಾರರ ಸಂಖ್ಯೆ ಹೆಚ್ಚಿಸಿಕೊಳ್ಳಲು ಟೆಲಿಕಾಂ ಕಂಪನಿಗಳು ಪ್ರಯತ್ನ ನಡೆಸುತ್ತ ಮುನ್ನಡೆದಿವೆ. ಇದಕ್ಕೆ ಸರ್ಕಾರಿ ಸ್ವಾಮ್ಯದ ಬಿಎಸ್‌ಎನ್‌ಎಲ್ ಟೆಲಿಕಾಂ ಸಹ ಹೊರತಾಗಿಲ್ಲ. ಬಿಎಸ್‌ಎನ್‌ಎಲ್ ಖಾಸಗಿ ಟೆಲಿಕಾಂಗಳಿಗೆ ಟಾಂಗ್ ನೀಡುವಂತಹ ಹಲವು ಪ್ರೀಪೇಯ್ಡ್ ಯೋಜನಗಳನ್ನು ಪರಿಚಯಿಸಿ ಗ್ರಾಹಕರ ಗಮನ ಸೆಳೆದಿದೆ. ಇದೀಗ ನಾಲ್ಕು ಹೊಸ ಪ್ರಿಪೇಯ್ಡ್ ಯೋಜನೆಯನ್ನು ಅನಾವರಣ ಮಾಡಿದೆ.

ಹೌದು, ಬಿಎಸ್‌ಎನ್‌ಎಲ್ ಈಗ ತನ್ನ ಪ್ರೀಪೇಯ್ಡ್ ಚಂದಾದಾರರಿಗಾಗಿ ಹೊಸದಾಗಿ 184ರೂ. 185ರೂ. 186ರೂ ಮತ್ತು 347ರೂ. ಬೆಲೆಯ ನೂತನ ಪ್ರಿಪೇಯ್ಡ್ ಯೋಜನೆಗಳನ್ನು ಪರಿಚಯಿಸಿದೆ. ಬಜೆಟ್ ದರದಲ್ಲಿ ಕಾಣಿಸಿಕೊಂಡಿರುವ ಈ ಯೋಜನೆಗಳು ಆಕರ್ಷಕ ಪ್ರಯೋಜನಗಳನ್ನು ಒಳಗೊಂಡಿವೆ. 184ರೂ. 185ರೂ. 186ರೂ ಪ್ರಿಪೇಯ್ಡ್ ಯೋಜನೆಗಳು ಅಲ್ಪಾವಧಿ ವ್ಯಾಲಿಡಿಟಿಯ ಯೋಜನೆಗಳಾಗಿವೆ ಹಾಗೂ 347ರೂ. ಯೋಜನೆಯು 56 ದಿನಗಳ ವ್ಯಾಲಿಡಿಟಿ ಪಡೆದಿದೆ. ಹಾಗಾದರೇ ಬಿಎಸ್‌ಎನ್‌ಎಲ್ ಟೆಲಿಕಾಂನ ಈ ನಾಲ್ಕು ಹೊಸ ಯೋಜನೆಗಳ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ ಬನ್ನಿರಿ.

ಬಿಎಸ್‌ಎನ್‌ಎಲ್ 184ರೂ. ಯೋಜನೆಯ ಪ್ರಯೋಜನಗಳು
ಬಿಎಸ್‌ಎನ್‌ಎಲ್ ಟೆಲಿಕಾಂನ 184ರೂ. ಯೋಜನೆಯು 28 ದಿನಗಳ ವ್ಯಾಲಿಡಿಟಿ ಪ್ರಯೋಜನ ಪಡೆದಿದೆ. ಈ ಯೋಜನೆಯು 1GB ದೈನಂದಿನ ಡೇಟಾ, 100 ಎಸ್‌ಎಮ್‌ಎಸ್ ಸೌಲಭ್ಯ ಪಡೆದಿದೆ. ಇದರೊಂದಿಗೆ ಅನಿಯಮಿತ ವಾಯಿಸ್ ಕರೆಯ ಪ್ರಯೋಜನ ಸಹ ಒಳಗೊಂಡಿದೆ. ನಿಗದಿತ ಡೇಟಾ ಮುಗಿದ ಬಳಿಕ ಇಂಟರ್ನೆಟ್ ವೇಗವು 80 Kbps ಇಳಿಯಲಿದೆ. ಹಾಗೆಯೇ Lystn ಪಾಡ್‌ಕ್ಯಾಸ್ಟ್‌ನ ಹೆಚ್ಚುವರಿ ಸಿಗಲಿದೆ.

ಬಿಎಸ್‌ಎನ್‌ಎಲ್ 185ರೂ. ಯೋಜನೆಯ ಪ್ರಯೋಜನಗಳು
ಬಿಎಸ್‌ಎನ್‌ಎಲ್ ಟೆಲಿಕಾಂನ 185ರೂ. ಯೋಜನೆಯು ಸಹ 28 ದಿನಗಳ ವ್ಯಾಲಿಡಿಟಿ ಪ್ರಯೋಜನ ಪಡೆದಿದೆ. ಈ ಯೋಜನೆಯು 1GB ದೈನಂದಿನ ಡೇಟಾ, 100 ಎಸ್‌ಎಮ್‌ಎಸ್ ಸೌಲಭ್ಯ ಪಡೆದಿದೆ. ಇದರೊಂದಿಗೆ ಅನಿಯಮಿತ ವಾಯಿಸ್ ಕರೆಯ ಪ್ರಯೋಜನ ಸಹ ಒಳಗೊಂಡಿದೆ. ನಿಗದಿತ ಡೇಟಾ ಮುಗಿದ ಬಳಿಕ ಇಂಟರ್ನೆಟ್ ವೇಗವು 80 Kbps ಇಳಿಯಲಿದೆ. ಹಾಗೆಯೇ ಗ್ರಾಹಕರು M/S ಆನ್‌ಮೊಬೈಲ್ ಗ್ಲೋಬಲ್ ಲಿಮಿಟೆಡ್ ಮತ್ತು ಬಿಎಸ್‌ಎನ್‌ಎಲ್ ಟ್ಯೂನ್ಸ್‌ನಿಂದ ಪ್ರೋಗ್ರೆಸ್ಸಿವ್ ವೆಬ್ APP (PWA) ನಲ್ಲಿ ಸವಾಲುಗಳ ಅರೆನಾ ಮೊಬೈಲ್ ಗೇಮಿಂಗ್ ಸೇವೆಯನ್ನು ಪಡೆಯುತ್ತಾರೆ.

ಬಿಎಸ್‌ಎನ್‌ಎಲ್ 186ರೂ. ಯೋಜನೆಯ ಪ್ರಯೋಜನಗಳು
ಬಿಎಸ್‌ಎನ್‌ಎಲ್ ಟೆಲಿಕಾಂನ 186ರೂ. ಯೋಜನೆಯು ಸಹ 28 ದಿನಗಳ ವ್ಯಾಲಿಡಿಟಿ ಪ್ರಯೋಜನ ಪಡೆದಿದೆ. ಈ ಯೋಜನೆಯು 1GB ದೈನಂದಿನ ಡೇಟಾ, 100 ಎಸ್‌ಎಮ್‌ಎಸ್ ಸೌಲಭ್ಯ ಪಡೆದಿದೆ. ಇದರೊಂದಿಗೆ ಅನಿಯಮಿತ ವಾಯಿಸ್ ಕರೆಯ ಪ್ರಯೋಜನ ಸಹ ಒಳಗೊಂಡಿದೆ. ನಿಗದಿತ ಡೇಟಾ ಮುಗಿದ ಬಳಿಕ ಇಂಟರ್ನೆಟ್ ವೇಗವು 80 Kbps ಇಳಿಯಲಿದೆ. ಹಾಗೆಯೇ ಹಾರ್ಡಿ ಗೇಮ್ಸ್ ಮತ್ತು BSNL ಟ್ಯೂನ್‌ಗಳ ಹೆಚ್ಚುವರಿ ಪ್ರಯೋಜನ ಲಭ್ಯ.

ಬಿಎಸ್‌ಎನ್‌ಎಲ್ 347ರೂ. ಯೋಜನೆಯ ಪ್ರಯೋಜನಗಳು
ಬಿಎಸ್‌ಎನ್‌ಎಲ್ ಟೆಲಿಕಾಂನ 347ರೂ. ಯೋಜನೆಯು 56 ದಿನಗಳ ವ್ಯಾಲಿಡಿಟಿ ಪ್ರಯೋಜನ ಪಡೆದಿದೆ. ಈ ಯೋಜನೆಯು 2GB ದೈನಂದಿನ ಡೇಟಾ, 100 ಎಸ್‌ಎಮ್‌ಎಸ್ ಸೌಲಭ್ಯ ಪಡೆದಿದೆ. ಇದರೊಂದಿಗೆ ಅನಿಯಮಿತ ವಾಯಿಸ್ ಕರೆಯ ಪ್ರಯೋಜನ ಸಹ ಒಳಗೊಂಡಿದೆ. ನಿಗದಿತ ಡೇಟಾ ಮುಗಿದ ಬಳಿಕ ಇಂಟರ್ನೆಟ್ ವೇಗವು 80 Kbps ಇಳಿಯಲಿದೆ. ಹಾಗೆಯೇ ಗ್ರಾಹಕರು M/S ಆನ್‌ಮೊಬೈಲ್ ಗ್ಲೋಬಲ್ ಲಿಮಿಟೆಡ್ ಮತ್ತು ಬಿಎಸ್‌ಎನ್‌ಎಲ್ ಟ್ಯೂನ್ಸ್‌ನಿಂದ ಪ್ರೋಗ್ರೆಸ್ಸಿವ್ ವೆಬ್ APP (PWA) ನಲ್ಲಿ ಸವಾಲುಗಳ ಅರೆನಾ ಮೊಬೈಲ್ ಗೇಮಿಂಗ್ ಸೇವೆಯನ್ನು ಪಡೆಯುತ್ತಾರೆ.


Click it and Unblock the Notifications








