Home
ಸುದ್ದಿಜಾಲ

ಬಿಎಸ್‌ಎನ್‌ಎಲ್‌ನಲ್ಲಿ ಪ್ರತಿದಿನ 3GB ಡೇಟಾ ಪ್ಲ್ಯಾನಿನ ಆರಂಭಿಕ ಬೆಲೆ 78ರೂ.!

ಸ್ಮಾರ್ಟ್‌ಫೋನ್‌ ಬಳಕೆ ಮಾಡುವ ಪ್ರತಿಯೊಬ್ಬ ಬಳಕೆದಾರರು ಅಧಿಕ ಡೇಟಾ ಮತ್ತು ದೀರ್ಘಾವಧಿಯ ವ್ಯಾಲಿಡಿಟಿ ಇರುವ ಪ್ಲ್ಯಾನ್‌ ಆಯ್ಕೆ ಮಾಡಿಕೊಳ್ಳಲು ಮುಂದಾಗುತ್ತಾರೆ. ಈ ನಿಟ್ಟಿನಲ್ಲಿ ಎಲ್ಲಾ ಖಾಸಗಿ ಟೆಲಿಕಾಂ ಸಂಸ್ಥೆಗಳು ಆಕರ್ಷಕ ಡೇಟಾ ಯೋಜನೆಗಳನ್ನು ಘೋಷಿಸಿವೆ. ಆದ್ರೆ ಸರ್ಕಾರಿ ಸ್ವಾಮ್ಯದ ಬಿಎಸ್‌ಎನ್‌ಎಲ್‌ ಟೆಲಿಕಾಂ ಸಹ ಗ್ರಾಹಕರಿಗೆ ಪ್ರತಿದಿನ ಅಧಿಕ ಡೇಟಾ ಸೌಲಭ್ಯದ ಯೋಜನೆಗಳನ್ನು ನೀಡಿದೆ.

ಬಿಎಸ್‌ಎನ್‌ಎಲ್‌

ಹೌದು, ಬಿಎಸ್‌ಎನ್‌ಎಲ್‌ ಟೆಲಿಕಾಂ ಸಹ ಅಧಿಕ ಡೇಟಾದ ಹಲವು ಯೋಜನೆಗಳನ್ನು ಒಳಗೊಂಡಿವೆ. ಅವುಗಳಲ್ಲಿ ಪ್ರತಿದಿನ 3GB ಡೇಟಾ ಪ್ರಯೋಜನ ಒದಗಿಸುವ ಯೋಜನೆಗಳು ಗ್ರಾಹಕರನ್ನು ಹೆಚ್ಚಾಗಿ ಸೆಳೆದಿವೆ. ಹೆಚ್ಚಿನ ಡೇಟಾ ಜೊತೆಗೆ ಉಚಿತ ವಾಯಿಸ್‌ ಕರೆ ಮತ್ತು ಅಧಿಕ ವ್ಯಾಲಿಡಿಟಿ ಸೌಲಭ್ಯಗಳ ಯೋಜನೆಗಳು ಚಂದಾದಾರರಿಗೆ ಉಪಯುಕ್ತ ಅನಿಸಿವೆ. ಈ ನಿಟ್ಟಿನಲ್ಲಿ ಬಹುತೇಕ ಗ್ರಾಹಕರು 3GB ಡೇಟಾ ಸೌಲಭ್ಯದ ಪ್ಲ್ಯಾನ್‌ಗಳನ್ನು ರೀಚಾರ್ಜ್ ಮಾಡಿಸಿಕೊಳ್ಳುತ್ತಾರೆ. ಬಿಎಸ್‌ಎನ್‌ಎಲ್‌ನಲ್ಲಿ ಹೀಗೆ ಪ್ರತಿದಿನ 3GB ಡೇಟಾ ಸೌಲಭ್ಯ ನೀಡುವ ಆರಂಭಿಕ ಪ್ಲ್ಯಾನ್‌ ದರ 78ರೂ. ಆಗಿದೆ. ಈ ಬಗ್ಗೆ ತಿಳಿಯಲು ಮುಂದೆ ಓದಿರಿ.

ಬಿಎಸ್‌ಎನ್‌ಎಲ್‌ 78ರೂ. ಪ್ಲ್ಯಾನ್

ಬಿಎಸ್‌ಎನ್‌ಎಲ್‌ 78ರೂ. ಪ್ಲ್ಯಾನ್

ಬಿಎಸ್‌ಎನ್‌ಎಲ್‌ ಈ ಯೋಜನೆಯಲ್ಲಿ ಪ್ರತಿದಿನ 3GB ಡೇಟಾ, ಪ್ರತಿದಿನ 250 ನಿಮಿಷಗಳ ವಾಯಿಸ್ ಕರೆಯ ಸೌಲಭ್ಯಗಳು ಲಭ್ಯವಾಗುತ್ತವೆ. ಇನ್ನು ಈ ಯೋಜನೆಯು ವ್ಯಾಲಿಡಿಟಿಯ ಅವಧಿಯು 8 ದಿನಗಳು ಮಾತ್ರ. ಇದೊಂದು ಶಾರ್ಟ್‌ಟರ್ಮ್ ರೀಚಾರ್ಜ್ ಪ್ಲ್ಯಾನ್ ಆಗಿದೆ. ಇದರೊಂದಿಗೆ ಹೆಚ್ಚುವರಿಯಾಗಿ Eros now ಚಂದಾದಾರಿಕೆ ಲಭ್ಯ ಇರಲಿದೆ. ಈ ಪ್ಲ್ಯಾನ್ ಆಯ್ದ ಟೆಲಿಕಾಂ ಸರ್ಕಲ್‌ಗಳಲ್ಲಿ ಮಾತ್ರ ಲಭ್ಯ.

ಬಿಎಸ್‌ಎನ್‌ಎಲ್‌ 247ರೂ. ಪ್ಲ್ಯಾನ್

ಬಿಎಸ್‌ಎನ್‌ಎಲ್‌ 247ರೂ. ಪ್ಲ್ಯಾನ್

ಬಿಎಸ್‌ಎನ್‌ಎಲ್‌ 247ರೂ. ಪ್ಲ್ಯಾನಿನಲ್ಲಿ ಪ್ರತಿದಿನ 3GB ಡೇಟಾ ಲಭ್ಯ. ಹಾಗೂ ಪ್ರತಿದಿನ 250 ನಿಮಿಷಗಳ ವಾಯಿಸ್ ಕರೆಯ ಸೌಲಭ್ಯ ಸಹ ದೊರೆಯಲಿದೆ. ಇನ್ನು ಈ ಯೋಜನೆಯು ವ್ಯಾಲಿಡಿಟಿಯ ಅವಧಿಯು 36 ದಿನಗಳು ಮಾತ್ರ. ನಿಗದಿತ ಡೇಟಾ ಮುಗಿದ ಬಳಿಕ 80 Kbps ವೇಗದಲ್ಲಿ ಇಂಟರ್ನೆಟ್ ಮುಂದುವರೆಯಲಿದೆ. ಈ ಯೋಜನೆಯು ಎಲ್ಲ ಟೆಲಿಕಾಂ ಸರ್ಕಲ್‌ನಲ್ಲಿ ಲಭ್ಯ.

ಬಿಎಸ್‌ಎನ್‌ಎಲ್‌ 997ರೂ. ಪ್ಲ್ಯಾನ್‌

ಬಿಎಸ್‌ಎನ್‌ಎಲ್‌ 997ರೂ. ಪ್ಲ್ಯಾನ್‌

ಬಿಎಸ್‌ಎನ್‌ಎಲ್‌ನ 997ರೂ. ಪ್ರೀಪೇಡ್‌ ಪ್ಲ್ಯಾನ್‌ ಮೊದಲ ಬಾರಿ ರೀಚಾರ್ಜ್ ಮಾಡಿಸಿಕೊಳ್ಳುವ ಗ್ರಾಹಕರಿಗೆ ಅನ್ವಯವಾಗಲಿದೆ. ಈ ಯೋಜನೆಯಲ್ಲಿ ಪ್ರತಿದಿನ 250 ನಿಮಿಷಗಳ ವಾಯಿಸ್ ಕರೆಯ ಸೌಲಭ್ಯಗಳು ಲಭ್ಯವಾಗುತ್ತವೆ. ಇದರೊಂದಿಗೆ ಪ್ರತಿದಿನ 3GB ಡೇಟಾ ಸೌಲಭ್ಯವು ದೊರೆಯಲಿದೆ. ಹಾಗೆಯೇ ಗ್ರಾಹಕರು ಬಿಎಸ್‌ಎನ್‌ಎಲ್‌ನಿಂದ ಎರಡು ತಿಂಗಳ ಉಚಿತ ಕಾಲರ್ ಟ್ಯೂನ್‌ಗಳನ್ನು ಸಹ ಪಡೆಯುತ್ತಾರೆ.

Best Mobiles in India

English summary
BSNL 3GB daily data plans with unlimited calling benefit.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+