Home
ಸುದ್ದಿಜಾಲ

ಜಿಯೋ, ಏರ್‌ಟೆಲ್‌ ಪ್ಲ್ಯಾನ್‌ಗೆ ಹೋಲಿಸಿದರೆ, BSNL ಸಂಸ್ಥೆಯ ಈ ಪ್ಲ್ಯಾನ್‌ ಎಷ್ಟೋ ಉತ್ತಮ!

ದೇಶದ ಬಿಎಸ್‌ಎನ್‌ಎಲ್‌, ಜಿಯೋ, ಭಾರ್ತಿ ಏರ್‌ಟೆಲ್‌ ಮತ್ತು ವಿ ಟೆಲಿಕಾಂ ಸಂಸ್ಥೆಗಳು ಆಕರ್ಷಕ ರೀಚಾರ್ಜ್‌ ಪ್ಲ್ಯಾನ್‌ಗಳ ಆಯ್ಕೆ ಒಳಗೊಂಡಿವೆ. ಹಾಗೆಯೇ ಈ ಟೆಲಿಕಾಂ ಸಂಸ್ಥೆಗಳು ತಮ್ಮ ಗ್ರಾಹಕರಿಗೆ ವಾರ್ಷಿಕ ಪ್ರೀಪೇಯ್ಡ್‌ ಯೋಜನೆಗಳ ಆಯ್ಕೆಗಳನ್ನು ನೀಡಿವೆ. ಆದರೆ ಜಿಯೋ, ಭಾರ್ತಿ ಏರ್‌ಟೆಲ್‌ ಮತ್ತು ವಿ ಟೆಲಿಕಾಂಗಳ ವಾರ್ಷಿಕ ಪ್ರೀಪೇಯ್ಡ್‌ ಪ್ಲ್ಯಾನ್‌ಗಳಿಗೆ ಹೋಲಿಸಿದರೆ, ಬಿಎಸ್‌ಎನ್‌ಎಲ್‌ (BSNL) ಟೆಲಿಕಾಂನ ವಾರ್ಷಿಕ ಯೋಜನೆ ಭಾರೀ ಉಳಿತಾಯ ಎನಿಸುತ್ತದೆ.

ಹೌದು, ಸರ್ಕಾರಿ ಸ್ವಾಮ್ಯದ ಬಿಎಸ್‌ಎನ್‌ಎಲ್‌ (Bharat Sanchar Nigam Limited) ಟೆಲಿಕಾಂ ಭಿನ್ನ ಶ್ರೇಣಿಯ ಯೋಜನೆಗಳ ಮೂಲಕ ಗ್ರಾಹಕರನ್ನು ಸೆಳೆದಿದೆ. ಅವುಗಳ ಪೈಕಿ ಸಂಸ್ಥೆಯು ಕೆಲವು ವಾರ್ಷಿಕ ವ್ಯಾಲಿಡಿಟಿಯ ರೀಚಾರ್ಜ್‌ ಪ್ಲ್ಯಾನ್‌ಗಳನ್ನು ಒಳಗೊಂಡಿದ್ದು, ಅದರಲ್ಲಿ 2399ರೂ. ಬೆಲೆಯ ಯೋಜನೆಯು ಭಾರೀ ಆಕರ್ಷಕ ಪ್ರಯೋಜನಗಳನ್ನು ಪಡೆದಿದೆ. ಅಲ್ಲದೇ ಇದು ಇತರೆ ಟೆಲಿಕಾಂಗಳ ವಾರ್ಷಿಕ ಪ್ಲ್ಯಾನ್‌ಗಳಿಗಿಂತ ಉತ್ತಮ ಎನಿಸುತ್ತದೆ. ಹಾಗಾದರೇ ಈ ಪ್ಲ್ಯಾನಿನ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ನೋಡೋಣ ಬನ್ನಿರಿ.

ಜಿಯೋ, ಏರ್‌ಟೆಲ್‌ ಪ್ಲ್ಯಾನ್‌ಗೆ ಹೋಲಿಸಿದರೆ, BSNL ಸಂಸ್ಥೆಯ ಈ ಪ್ಲ್ಯಾನ್‌ ಉತ್ತಮ!

ಬಿಎಸ್‌ಎನ್‌ಎಲ್‌ 2399ರೂ. ರೀಚಾರ್ಜ್‌ ಪ್ಲ್ಯಾನ್‌

ಬಿಎಸ್‌ಎನ್‌ಎಲ್‌ ಸಂಸ್ಥೆಯ 2399 ರೂ. ಪ್ರೀಪೇಯ್ಡ್‌ ರೀಚಾರ್ಜ್‌ ಪ್ಲ್ಯಾನ್‌ ವಾರ್ಷಿಕ ಅವಧಿಯ ಯೋಜನೆ ಆಗಿದ್ದು, ಸದ್ಯ 395 ದಿನಗಳ ವ್ಯಾಲಿಡಿಟಿ ಅನ್ನು ಒಳಗೊಂಡಿದೆ. ಈ ಅವಧಿಯಲ್ಲಿ ಪ್ರತಿದಿನ 2GB ಡೇಟಾ ಪ್ರಯೋಜನ ಲಭ್ಯ ಆಗಲಿದೆ. ಇದರ ಜೊತೆಗೆ ಪ್ರತಿದಿನ 100 ಎಸ್‌ಎಮ್‌ಎಸ್‌ ಸೌಲಭ್ಯ ಸಹ ಸಿಗಲಿದೆ. ಇದರೊಂದಿಗೆ ಅನಿಯಮಿತ ವಾಯಿಸ್‌ ಕರೆಗಳ ಸೌಲಭ್ಯವು ದೊರೆಯಲಿದೆ. ಹಾಗೆಯೇ ಹೆಚ್ಚುವರಿಯಾಗಿ ಬಳಕೆದಾರರಿಗೆ ಹಾರ್ಡಿ ಗೇಮ್ಸ್, ಚಾಲೆಂಜರ್ ಅರೆನಾ ಗೇಮ್ಸ್, ಗೇಮನ್ ಆಸ್ಟ್ರೋಟೆಲ್, ಗೇಮಿಯಂ, ಲಿಸ್ಟ್ನ್ ಪಾಡ್‌ಕಾಸ್ಟ್, ಜಿಂಗ್ ಮ್ಯೂಸಿಕ್ ಹಾಗೂ ಬಿಎಸ್‌ಎನ್‌ಎಲ್ ಟ್ಯೂನ್ಸ್ ಸೇರಿದಂತೆ ಇತರೆ ಪ್ರಯೋಜನಗಳು ದೊರೆಯಲಿವೆ.

ಬಿಎಸ್‌ಎನ್‌ಎಲ್‌ 2999ರೂ. ರೀಚಾರ್ಜ್‌ ಪ್ಲ್ಯಾನ್‌

ಬಿಎಸ್‌ಎನ್‌ಎಲ್‌ (BSNL) ಸಂಸ್ಥೆಯ 2999 ರೂ. ಪ್ರೀಪೇಯ್ಡ್‌ ರೀಚಾರ್ಜ್‌ ಪ್ಲ್ಯಾನ್‌ ವಾರ್ಷಿಕ ಅವಧಿಯ ಯೋಜನೆ ಆಗಿದ್ದು, ಇದು 365 ದಿನಗಳ ವ್ಯಾಲಿಡಿಟಿ ಸೌಲಭ್ಯ ಅನ್ನು ಪಡೆದುಕೊಂಡಿದೆ. ಈ ಅವಧಿಯಲ್ಲಿ ಪ್ರತಿದಿನ 3 GB ಡೇಟಾ ಪ್ರಯೋಜನ ಲಭ್ಯ ಆಗಲಿದೆ. ಇದರ ಜೊತೆಗೆ ಪ್ರತಿದಿನ 100 ಎಸ್‌ಎಮ್‌ಎಸ್‌ ಸೌಲಭ್ಯ ಸಹ ಸಿಗಲಿದೆ. ಇದರೊಂದಿಗೆ ಅನಿಯಮಿತ ವಾಯಿಸ್‌ ಕರೆಗಳ ಸೌಲಭ್ಯವು ದೊರೆಯಲಿದೆ.

ಜಿಯೋ 3999ರೂ. ರೀಚಾರ್ಜ್‌ ಪ್ಲ್ಯಾನ್‌

ಜಿಯೋ (Jio) ಟೆಲಿಕಾಂನ 3999 ರೂ. ಪ್ರೀಪೇಯ್ಡ್‌ ರೀಚಾರ್ಜ್‌ ಪ್ಲ್ಯಾನ್‌ ವಾರ್ಷಿಕ ಅವಧಿಯ ಯೋಜನೆ ಆಗಿದ್ದು, ಇದು 365 ದಿನಗಳ ವ್ಯಾಲಿಡಿಟಿ ಒಳಗೊಂಡಿದೆ. ಈ ಪ್ಲ್ಯಾನಿನಲ್ಲಿ ಗ್ರಾಹಕರಿಗೆ ಪ್ರತಿದಿನ 2.5 GB ಡೇಟಾ ಪ್ರಯೋಜನಗಳು ಸಿಗಲಿದ್ದು, ಇದರ ಜೊತೆಗೆ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ ಹಾಗೂ ಪ್ರತಿದಿನ 100 ಎಸ್ಎಮ್ಎಸ್ ಪ್ರಯೋಜನ ದೊರೆಯುತ್ತದೆ. ಹಾಗೆಯೇ ಈ ರೀಚಾರ್ಜ್‌ ಯೋಜನೆಯಲ್ಲಿ ಹೆಚ್ಚುವರಿ ಯಾಗಿ ಫ್ಯಾನ್‌ಕೋಡ್‌ ಚಂದಾದಾರಿಕೆ, ಜಿಯೋ ಟಿವಿ, ಜಿಯೋ ಸಿನಿಮಾ ಸೇವೆಗಳು ಲಭ್ಯ.

ಜಿಯೋ 3599ರೂ. ರೀಚಾರ್ಜ್‌ ಪ್ಲ್ಯಾನ್‌

ಜಿಯೋ (Jio) ಟೆಲಿಕಾಂನ 3599 ರೂ. ಪ್ರೀಪೇಯ್ಡ್‌ ರೀಚಾರ್ಜ್‌ ಪ್ಲ್ಯಾನ್‌ ಸಹ ವಾರ್ಷಿಕ ಅವಧಿಯ ಯೋಜನೆ ಆಗಿದ್ದು, 365 ದಿನಗಳ ವ್ಯಾಲಿಡಿಟಿ ಅವಧಿಯ ಸೌಲಭ್ಯ ಪಡೆದುಕೊಂಡಿದೆ. ಈ ರೀಚಾರ್ಜ್‌ ಯೋಜನೆಯಲ್ಲಿ ಗ್ರಾಹಕರಿಗೆ ಪ್ರತಿದಿನ 2.5 GB ಡೇಟಾ ಪ್ರಯೋಜನಗಳು ಗ್ರಾಹಕರಿಗೆ ದೊರೆಯುತ್ತದೆ. ಇದರ ಜೊತೆಗೆ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ ಹಾಗೂ ಪ್ರತಿದಿನ 100 ಎಸ್ಎಮ್ಎಸ್ ಪ್ರಯೋಜನ ಕೂಡಾ ದೊರೆಯುತ್ತದೆ.

Best Mobiles in India

English summary
BSNL Offers More Value for Money with Its Annual Plan Compared to Jio, Airtel, and Vi. Check bsnl annual plans and more details.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+