ಬಿಎಸ್‌ಎನ್‌ಎಲ್ 199ರೂ. ಪ್ಲ್ಯಾನಿನ ಪ್ರಯೋಜನಗಳೆನು?..ರೀಚಾರ್ಜ್ ಮಾಡಿಸಬಹುದೇ?
ದೇಶದ ಟೆಲಿಕಾಂ ಕ್ಷೇತ್ರದಲ್ಲಿ ಖಾಸಗಿ ಟೆಲಿಕಾಂ ಸಂಸ್ಥೆಗಳಿಗೆ ಪೈಪೋಟಿ ನೀಡುತ್ತಾ ಸಾಗಿರುವ ಸರ್ಕಾರಿ ಸ್ವಾಮ್ಯದ ಬಿಎಸ್‌ಎನ್‌ಎಲ್ ಹಲವು ಆಕರ್ಷಕ ಯೋಜನೆಗಳನ್ನು ಪರಿಚಯಸಿದೆ. ಈ ನಿಟ್ಟಿನಲ್ಲಿ ಬಿಎಸ್‌ಎನ್‌ಎಲ್ ಹೊಸದಾಗಿ ಪರಿಚಯಿಸಿರುವ ಬಿಎಸ್‌ಎನ್‌ಎಲ್ 199ರೂ. ಪ್ಲ್ಯಾನ್ ಬಜೆಟ್ ಹಾಗೂ ವಿಶೇಷ ಪ್ರಯೋಜನಗಳಿಂದ ಚಂದಾದಾರರ ಗಮನ ಸೆಳೆದಿದೆ. ಈ ಯೋಜನೆ ರೀಚಾರ್ಜ್ ಮಾಡಲು ಉತ್ತಮವೇ?

ಹೌದು, ಬಿಎಸ್‌ಎನ್‌ಎಲ್ ಟೆಲಿಕಾಂ ಹೊಸದಾಗಿ ಪರಿಚಯಿಸಿರುವ ಬಿಎಸ್‌ಎನ್‌ಎಲ್ 199ರೂ. ಪ್ಲ್ಯಾನ್ ಅಗ್ಗದ ಪ್ರೈಸ್‌ಟ್ಯಾಗ್ ಪ್ಲ್ಯಾನ್ ಆಗಿದೆ. ಈ ಯೋಜನೆಯಲ್ಲಿ ಪ್ರತಿದಿನ ಡೇಟಾ ಹಾಗೂ ವ್ಯಾಲಿಡಿಟಿ ಸೌಲಭ್ಯ ಇದರೊಂದಿಗೆ ವಾಯಿಸ್ ಕರೆಗಳ ಪ್ರಯೋಜನವನ್ನು ಪಡೆದಿದೆ. ಹಾಗೂ ಎಸ್‌ಎಮ್‌ಎಸ್ ಸೌಲಭ್ಯವು ಗ್ರಾಹಕರಿಗೆ ಲಭ್ಯವಾಗಲಿದೆ. ಹಾಗಾದರೇ ಬಿಎಸ್‌ಎನ್‌ಎಲ್‌ನ 199ರೂ. ಯೋಜನೆ ರೀಚಾರ್ಜ್ ಮಾಡಿಸಲು ಯೋಗ್ಯವೇ? ತಿಳಿಯಲು ಮುಂದೆ ಓದಿರಿ.

ಬಿಎಸ್‌ಎನ್‌ಎಲ್ 199ರೂ. ಯೋಜನೆಯ ಪ್ರಯೋಜನಗಳು
ಬಿಎಸ್‌ಎನ್‌ಎಲ್ ಈ ಹೊಸ ಯೋಜನೆಯಲ್ಲಿ ಚಂದಾದಾರರಿಗೆ ಪ್ರತಿದಿನ 2GB ಡೇಟಾ ಪ್ರಯೋಜನ ದೊರೆಯಲಿದೆ. ಇದರೊಂದಿಗೆ ಪ್ರತಿದಿನ 100 ಎಸ್‌ಎಮ್‌ಎಸ್ ಸೌಲಭ್ಯ ಸಿಗಲಿವೆ ಹಾಗೂ ಯಾವುದೇ ನೆಟವರ್ಕ್‌ಗೆ ಅನಿಯಮಿತ (250 ನಿಮಿಷಗಳ) ವಾಯಿಸ್ ಕರೆ ಮಾಡುವ ಪ್ರಯೋಜನ ಸಹ ಲಭ್ಯವಾಗುತ್ತವೆ. ಇನ್ನು ಈ ಯೋಜನೆಯು ಒಟ್ಟು 30 ದಿನಗಳ ವ್ಯಾಲಿಡಿಟಿ ಅವಧಿಯನ್ನು ಹೊಂದಿರುವುದು ವಿಶೇಷ ಅನಿಸಲಿದೆ.

ಬಿಎಸ್‌ಎನ್‌ಎಲ್ 2,399ರೂ. ಯೋಜನೆಯ ಪ್ರಯೋಜನಗಳು
ಬಿಎಸ್‌ಎನ್‌ಎಲ್‌ನ ಈ ಪ್ಲ್ಯಾನ್ ಒಟ್ಟು 600 ದಿನಗಳ ವ್ಯಾಲಿಡಿಟಿ ಅವಧಿಯನ್ನು ಒಳಗೊಂಡಿದ್ದು, ಈ ಅವಧಿಯಲ್ಲಿ ಪ್ರತಿದಿನ 250 FUP ನಿಮಿಷಗಳ ಮಿತಿಯಲ್ಲಿ ಉಚಿತ ವಾಯಿಸ್ ಕರೆಗಳ ಪ್ರಯೋಜನವನ್ನು ಒದಗಿಸಲಿದೆ. ಇದರೊಂದಿಗೆ ಪ್ರತಿದಿನ 100 ಎಸ್‌ಎಮ್‌ಎಸ್‌ಗಳ ಸೌಲಭ್ಯ ದೊರೆಯಲಿದ್ದು, 60 ದಿನಗಳಿಗೆ ಬಿಎಸ್‌ಎನ್‌ಎಲ್ ಟ್ಯೂನ್ ಸೌಲಭ್ಯವು ಸಿಗಲಿದೆ. ಆದರೆ ಯಾವುದೇ ಡೇಟಾ ಪ್ರಯೋಜನ ಲಭ್ಯ ಇರುವುದಿಲ್ಲ. ಡೇಟಾ ಅಗತ್ಯ ಇರದ ಹಾಗೂ ವಾಯಿಸ್ ಕರೆ ಮತ್ತು ಹೆಚ್ಚಿನ ವ್ಯಾಲಿಡಿಟಿ ಬಯಸುವ ಗ್ರಾಹಕರಿಗೆ ಈ ಪ್ಲ್ಯಾನ್ ಉತ್ತಮ ಆಯ್ಕೆ ಆಗಿದೆ.

ಬಿಎಸ್‌ಎನ್‌ಎಲ್ 1,212ರೂ. ಯೋಜನೆಯ ಪ್ರಯೋಜನಗಳು
ಬಿಎಸ್‌ಎನ್‌ಎಲ್ 1,212ರೂ. ಡೇಟಾ ಎಸ್‌ಟಿವಿ ಡೇಟಾ ಯೋಜನೆಯು ಒಟ್ಟು 365 ದಿನಗಳ ವ್ಯಾಲಿಡಿಟಿ ಅವಧಿಯನ್ನು ಹೊಂದಿದೆ. ಈ ಪ್ಲ್ಯಾನಿನಲ್ಲಿ ಪೂರ್ಣ ವ್ಯಾಲಿಡಿಟಿ ಅವಧಿಗೆ ಒಟ್ಟು 500GB ಡೇಟಾ ಪ್ರಯೋಜನೆ ದೊರೆಯುತ್ತದೆ. ಈ ಯೋಜನೆಯಲ್ಲಿ ಗ್ರಾಹಕರಿಗೆ ಯಾವುದೇ ವಾಯಿಸ್ ಕರೆ ಹಾಗೂ ಎಸ್‌ಎಮ್‌ಎಸ್ ಸೌಲಭ್ಯಗಳು ದೊರೆಯುವುದಿಲ್ಲ. ಇದೊಂದು ಡೇಟಾ ಪ್ಲ್ಯಾನ್ ಆಗಿದೆ.


Click it and Unblock the Notifications








