Home
ಸುದ್ದಿಜಾಲ

ಬಿಎಸ್‌ಎನ್‌ಎಲ್‌ನ ಈ ಅಗ್ಗದ ಪ್ಲ್ಯಾನಿನಲ್ಲಿ ಬದಲಾವಣೆ; ತಿಳಿದ್ರೆ, ಅಚ್ಚರಿ ಪಡ್ತೀರಾ!

ಬಿಎಸ್‌ಎನ್‌ಎಲ್‌ (ಭಾರತ್ ಸಂಚಾರ್ ನಿಗಮ್ ಲಿಮಿಟೆಡ್ - BSNL) ಹಲವು ಅತ್ಯುತ್ತಮ ಪ್ರೀಪೇಯ್ಡ್‌ ಯೋಜನೆಗಳ ಮೂಲಕ ಗ್ರಾಹಕರ ಗಮನ ಸೆಳೆದಿದೆ. ಅವುಗಳಲ್ಲಿ ಬಹುತೇಕ ಯೋಜನೆಗಳು ಡೇಟಾ, ಬೆಸ್ಟ್‌ ವ್ಯಾಲಿಡಿಟಿ ಸೌಲಭ್ಯ, ಎಸ್‌ಎಮ್‌ಎಸ್‌ ಹಾಗೂ ಅನಿಯಮಿತ ಕರೆಯ ಸೌಲಭ್ಯಗಳನ್ನು ಒಳಗೊಂಡಿವೆ. ಆದರೆ ಇದೀಗ ಸಂಸ್ಥೆಯು ತನ್ನ ಅಗ್ಗದ ಯೋಜನೆಯೊಂದರಲ್ಲಿ ಪರಿಷ್ಕರಣೆ ಮಾಡಿದ್ದು, ಗ್ರಾಹಕರಿಗೆ ಶಾಕ್‌ ನೀಡಿದೆ.

ಹೌದು, ಬಿಎಸ್‌ಎನ್‌ಎಸಲ್‌ ಸಂಸ್ಥೆಯು ಬಿಎಸ್‌ಎನ್‌ಎಲ್‌ 99 ರೂ. ಬೆಲೆಯ ಯೋಜನೆಯಲ್ಲಿ ಈಗ ಬದಲಾವಣೆ ಮಾಡಿದೆ. ಈ ಬದಲಾವಣೆ ತಿಳಿದರೆ, ನೀವು ಅಚ್ಚರಿ ಆಗೋದು ಖಚಿತ. ಅಂದಹಾಗೆ ಈ ರೀಚಾರ್ಜ್‌ ಯೋಜನೆಯಲ್ಲಿ ಯಾವುದೇ ಡೇಟಾ ಪ್ರಯೋಜನ ಗ್ರಾಹಕರಿಗೆ ಲಭ್ಯ ಆಗುವುದಿಲ್ಲ. ಹಾಗಾದರೇ ಬಿಎಸ್‌ಎನ್‌ಎಲ್‌ 99 ರೂ. ಯೋಜನೆಯಲ್ಲಿನ ಬದಲಾವಣೆ ಏನು ಹಾಗೂ ಇತರೆ ಜನಪ್ರಿಯ ಪ್ಲ್ಯಾನ್‌ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಬಿಎಸ್‌ಎನ್‌ಎಲ್‌ನ ಈ ಅಗ್ಗದ ಪ್ಲ್ಯಾನಿನಲ್ಲಿ ಬದಲಾವಣೆ; ತಿಳಿದ್ರೆ, ಅಚ್ಚರಿ ಪಡ್ತೀರ

ಬಿಎಸ್‌ಎನ್‌ಎಲ್‌ 99ರೂ. ಪರಿಷ್ಕರಣೆ

ಬಿಎಸ್‌ಎನ್‌ಎಲ್‌ 99ರೂ. ರೀಚಾರ್ಜ್‌ ಯೋಜನೆಯು ಅಗ್ಗದ ಬೆಲೆಯಲ್ಲಿ ಜನಪ್ರಿಯತೆ ಪಡೆದ ಯೋಜನೆಗಳಲ್ಲಿ ಒಂದಾಗಿದೆ. ಈ ಯೋಜನೆಯು ವ್ಯಾಲಿಡಿಟಿಗೆ ಪೂರಕವಾದ ಯೋಜನೆ ಆಗಿದೆ. ಈ ರೀಚಾರ್ಜ್‌ ಪ್ಲ್ಯಾನ್‌ ಒಟ್ಟು 18 ದಿನಗಳ ವ್ಯಾಲಿಡಿಟಿ ಸೌಲಭ್ಯವನ್ನು ಒಳಗೊಂಡಿದೆ. ಆದರೆ ಈಗ ಈ ಪ್ಲ್ಯಾನಿನ ವ್ಯಾಲಿಡಿಟಿಯಲ್ಲಿ ಪರಿಷ್ಕರಣೆ ಮಾಡಿದ್ದು, ಇನ್ನು ಮುಂದೆ 18 ದಿನಗಳ ಬದಲಿಗೆ 17 ದಿನಗಳ ವ್ಯಾಲಿಡಿಟಿ ಲಭ್ಯ ಆಗಲಿದೆ.

ಬಿಎಸ್‌ಎನ್‌ಎಲ್‌ 2399ರೂ. ರೀಚಾರ್ಜ್‌ ಪ್ಲ್ಯಾನ್

ಬಿಎಸ್‌ಎನ್‌ಎಲ್‌ ಟೆಲಿಕಾಂನ 2399ರೂ. ಪ್ರೀಪೇಯ್ಡ್‌ ರೀಚಾರ್ಜ್‌ ಯೋಜನೆಯು ವಾರ್ಷಿಕ ವ್ಯಾಲಿಡಿಟಿ ಸೌಲಭ್ಯ ಹೊಂದಿದೆ. ಈ ಯೋಜನೆಯಲ್ಲಿ ಗ್ರಾಹಕರಿಗೆ ಪ್ರತಿದಿನ 2GB ಡೇಟಾ ಪ್ರಯೋಜನ ಸಿಗಲಿದ್ದು, ಇದರೊಂದಿಗೆ ಡೈಲಿ 100 ಎಸ್‌ಎಮ್‌ಎಸ್‌ ಪ್ರಯೋಜನ ಕೂಡಾ ಲಭ್ಯ ಸಿಗಲಿದೆ. ಹಾಗೆಯೇ ಅನಿಯಮಿತ ವಾಯಿಸ್‌ ಕರೆಯ ಸೌಲಭ್ಯ ಸಹ ಗ್ರಾಹಕರಿಗೆ ದೊರೆಯುತ್ತದೆ.

ಬಿಎಸ್‌ಎನ್‌ಎಲ್‌ 2999ರೂ. ರೀಚಾರ್ಜ್‌ ಪ್ಲ್ಯಾನ್

ಬಿಎಸ್‌ಎನ್‌ಎಲ್‌ ಟೆಲಿಕಾಂನ 2999ರೂ. ಪ್ರೀಪೇಯ್ಡ್‌ ರೀಚಾರ್ಜ್‌ ಪ್ಲ್ಯಾನಿನಲ್ಲಿ ವಾರ್ಷಿಕ ವ್ಯಾಲಿಡಿಟಿ ಪ್ಲ್ಯಾನ್‌ ಆಗಿದ್ದರೂ, ಇದು 395 ದಿನಗಳ ವ್ಯಾಲಿಡಿಟಿ ಸೌಲಭ್ಯ ಹೊಂದಿದೆ. ಈ ಯೋಜನೆಯಲ್ಲಿ ಗ್ರಾಹಕರಿಗೆ ಪ್ರತಿದಿನ 3 GB ಡೇಟಾ ಪ್ರಯೋಜನ ಸಿಗಲಿದ್ದು, ಇದರೊಂದಿಗೆ ನಿತ್ಯ 100 ಎಸ್‌ಎಮ್‌ಎಸ್‌ ಪ್ರಯೋಜನ ಕೂಡಾ ಲಭ್ಯ ಆಗಲಿದೆ. ಹಾಗೆಯೇ ಅನಿಯಮಿತ ವಾಯಿಸ್‌ ಕರೆಯ ಸೌಲಭ್ಯ ಸಹ ಗ್ರಾಹಕರಿಗೆ ದೊರೆಯುತ್ತದೆ.

ಬಿಎಸ್‌ಎನ್‌ಎಲ್‌ 1999ರೂ. ರೀಚಾರ್ಜ್‌ ಪ್ಲ್ಯಾನ್

ಬಿಎಸ್‌ಎನ್‌ಎಲ್‌ ಟೆಲಿಕಾಂನ 1999ರೂ. ಪ್ರೀಪೇಯ್ಡ್‌ ರೀಚಾರ್ಜ್‌ ಯೋಜನೆಯು ಕೂಡಾ ವಾರ್ಷಿಕ ವ್ಯಾಲಿಡಿಟಿ ಪ್ಲ್ಯಾನ್‌ ಆಗಿದ್ದು, ಇದು 365 ದಿನಗಳ ವ್ಯಾಲಿಡಿಟಿ ಸೌಲಭ್ಯ ಹೊಂದಿದೆ. ಈ ಯೋಜನೆಯಲ್ಲಿ ಗ್ರಾಹಕರಿಗೆ ಪೂರ್ಣ ವ್ಯಾಲಿಡಿಟಿ ಅವಧಿಗೆ ಒಟ್ಟು 600GB ಡೇಟಾ ಪ್ರಯೋಜನ ಲಭ್ಯ ಇದ್ದು, ಇದರೊಂದಿಗೆ ನಿತ್ಯ 100 ಎಸ್‌ಎಮ್‌ಎಸ್‌ ಪ್ರಯೋಜನ ಕೂಡಾ ಲಭ್ಯ ಆಗಲಿದೆ. ಹಾಗೆಯೇ ಅನಿಯಮಿತ ವಾಯಿಸ್‌ ಕರೆಯ ಸೌಲಭ್ಯ ಸಹ ಗ್ರಾಹಕರಿಗೆ ದೊರೆಯುತ್ತದೆ.

ಬಿಎಸ್‌ಎನ್‌ಎಲ್‌ 499ರೂ. ರೀಚಾರ್ಜ್‌ ಪ್ಲ್ಯಾನ್

ಬಿಎಸ್‌ಎನ್‌ಎಲ್‌ನ ಟೆಲಿಕಾಂನ ಈ SVT 499 ರೂ. ರೀಚಾರ್ಜ್‌ ಪ್ಲ್ಯಾನ್ ದೀರ್ಘಾವಧಿಯ ಯೋಜನೆ ಆಗಿದ್ದು, ಒಟ್ಟು 75 ದಿನಗಳ ವ್ಯಾಲಿಡಿಟಿಯನ್ನು ಒಳಗೊಂಡಿದೆ. ಈ ಅವಧಿಯಲ್ಲಿ ಪ್ರತಿದಿನ 1 GB ಡೇಟಾ ಸೌಲಭ್ಯ ಸಿಗಲಿದ್ದು, ಒಟ್ಟು ಪೂರ್ಣ ಅವಧಿಗೆ 75 GB ಡೇಟಾ ಲಭ್ಯ. ಇದರೊಂದಿಗೆ ಅನಿಯಮಿತ ವಾಯಿಸ್ ಕರೆಗಳ ಸೌಲಭ್ಯ ಸಹ ಸಿಗಲಿದೆ.

Best Mobiles in India

English summary
BSNL Reduces Validity of This Rs 99 Plan. check all details here.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+