BSNLನ ಈ ಎರಡು ಪ್ಲ್ಯಾನ್‌ಗಳಿಗೆ ಈಗ ವಿಶೇಷ ಕೊಡುಗೆ; ಬೆದರಿದ ಖಾಸಗಿ ಟೆಲಿಕಾಂಗಳು!

|

ಸರ್ಕಾರಿ ಸ್ವಾಮ್ಯದ ಬಿಎಸ್‌ಎನ್ಎಲ್ ಟೆಲಿಕಾಂ ದೇಶದ ಖಾಸಗಿ ಟೆಲಿಕಾಂ ಸಂಸ್ಥೆಗಳಿಗೆ ನೇರ ಪೈಪೋಟಿ ನೀಡುತ್ತಾ ಸಾಗಿದ್ದು, ಹಲವು ಆಕರ್ಷಕ ಪ್ರೀಪೇಡೆ ಪ್ಲ್ಯಾನ್‌ಗಳನ್ನು ಪರಿಚಯಿಸಿದೆ. ಪ್ರಸ್ತುತ ಬಿಎಸ್ಎನ್ಎಲ್‌ನ ಹಲವು ಪ್ರೀಪೇಯ್ಡ್‌ ಯೋಜನೆಗಳು ಅಧಿಕ ಡೇಟಾ, ದೀರ್ಘಾವಧಿಯ ವ್ಯಾಲಿಡಿಟಿ ಹಾಗೂ ಎಸ್‌ಎಮ್‌ಎಸ್‌ ಸೌಲಭ್ಯಗಳನ್ನು ಪಡೆದಿವೆ. ಗಣರಾಜ್ಯೋತ್ಸವದ ಪ್ರಯುಕ್ತ ಬಿಎಸ್‌ಎನ್‌ಎಲ್‌ ಇದೀಗ ಗ್ರಾಹಕರಿಗೆ ಗುಡ್‌ನ್ಯೂಸ್‌ ನೀಡಿದ್ದು, ಖಾಸಗಿ ಟೆಲಿಕಾಂಗಳು ಬೆದರುವಂತಾಗಿದೆ.

ಬಿಎಸ್ಎನ್ಎಲ್ ಟೆಲಿಕಾಂ

ಬಿಎಸ್ಎನ್ಎಲ್ ಟೆಲಿಕಾಂ

ಹೌದು, ಬಿಎಸ್ಎನ್ಎಲ್ ಟೆಲಿಕಾಂ ಸಂಸ್ಥೆಯು ಅಲ್ಪಾವಧಿಯ ಯೋಜನೆಗಳ ಜೊತೆಗೆ ದೀರ್ಘಾವಧಿಯ ಪ್ರೀಪೇಡ್‌ ಪ್ಲ್ಯಾನ್‌ಗಳ ಆಯ್ಕೆಯನ್ನು ನೀಡಿದೆ. ಮುಖ್ಯವಾಗಿ 1999ರೂ ಮತ್ತು 2399ರೂ. ಬೆಲೆಯ ವಾರ್ಷಿಕ ವ್ಯಾಲಿಡಿಟಿಯ ಯೋಜನೆಗಳು ಹೆಚ್ಚು ಗಮನ ಸೆಳೆದಿವೆ. ಗಣರಾಜ್ಯೋತ್ಸವದ ಅಂಗವಾಗಿ ಟೆಲಿಕಾಂ ಈ ಎರಡು ಪ್ರೀಪೇಯ್ಡ್‌ ಯೋಜನೆಗಳ ವ್ಯಾಲಿಡಿಟಿಯಲ್ಲಿ ಈಗ ಹೆಚ್ಚಳ ಮಾಡಿದೆ. ಈ ಕೊಡುಗೆಯು ಸೀಮಿತ ಅವಧಿಯ ವರೆಗೂ ಮಾತ್ರ ಲಭ್ಯ. ಈ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ನೋಡೋಣ ಬನ್ನಿರಿ.

ವ್ಯಾಲಿಡಿಟಿ ಹೆಚ್ಚಳದ ಕೊಡುಗೆ

ವ್ಯಾಲಿಡಿಟಿ ಹೆಚ್ಚಳದ ಕೊಡುಗೆ

ಬಿಎಸ್ಎನ್ಎಲ್ 'ಗಣರಾಜ್ಯೋತ್ಸವ ದಿನ'ದ ಪ್ರಯುಕ್ತ ತನ್ನ ಜನಪ್ರಿಯ 1999ರೂ ಮತ್ತು 2399ರೂ. ಬೆಲೆಯ ಯೋಜನೆಗಳ ವ್ಯಾಲಿಡಿಟಿ ಅವಧಿಯಲ್ಲಿ ಈಗ ಹೆಚ್ಚಳ ಘೋಷಿಸಿದೆ. ಬಿಎಸ್‌ಎನ್‌ಎಲ್ 1999ರೂ. ಯೋಜನೆಯಲ್ಲಿ ಇದೀಗ 21 ದಿನಗಳನ್ನು ಹೆಚ್ಚುವರಿಯಾಗಿ ಸೇರ್ಪಡೆ ಮಾಡಿದೆ. ಅದೇ ರೀತಿ ಬಿಎಸ್‌ಎನ್‌ಎಲ್‌ 2399ರೂ. ಯೋಜನೆಯಲ್ಲಿ 72 ದಿನಗಳನ್ನು ಹೆಚ್ಚುವರಿಯಾಗಿ ಸೇರಿಸಿದೆ. ಇನ್ನು ಈ ಕೊಡುಗೆಯು ಇದೇ ಜನವರಿ 31ರ ವರೆಗೂ ಮಾತ್ರ ಲಭ್ಯವಾಗಲಿದೆ. ಹಾಗಾದರೇ ಈ ಎರಡು ಯೋಜನೆಗಳ ಒಟ್ಟಾರೆ ಪ್ರಯೋಜನಗಳೆನು ಎಂಬುದನ್ನು ಮುಂದೆ ನೋಡೋಣ ಬನ್ನಿರಿ.

ಬಿಎಸ್‌ಎನ್‌ಎಲ್‌ 1,999ರೂ. ಪ್ಲ್ಯಾನ್ ಪ್ರಯೋಜನಗಳು

ಬಿಎಸ್‌ಎನ್‌ಎಲ್‌ 1,999ರೂ. ಪ್ಲ್ಯಾನ್ ಪ್ರಯೋಜನಗಳು

ಬಿಎಸ್‌ಎನ್‌ಎಲ್‌ನ 1,999ರೂ. ಪ್ಲ್ಯಾನ್ ಇದೀಗ ಆಫರ್‌ನಲ್ಲಿ ಲಭ್ಯ ಇದೆ. ಈ ಪ್ಲ್ಯಾನಿನಲ್ಲಿ ಭಾರತದ ಯಾವುದೇ ನೆಟ್‌ವರ್ಕ್‌ಗೆ ಅನಿಯಮಿತ ವಾಯಿಸ್ ಕರೆಗಳು, ಪ್ರತಿದಿನ 3GB ಡೇಟಾ ಸೌಲಭ್ಯ ಸಹ ದೊರೆಯಲಿದೆ. ಇದರೊಂದಿಗೆ ಪ್ರತಿದಿನ 100 ಎಸ್‌ಎಂಎಸ್ ಜೊತೆಗೆ ಬಿಎಸ್ಎನ್ಎಲ್ ಟ್ಯೂನ್ಸ್ ಮತ್ತು ಬಿಎಸ್ಎನ್ಎಲ್ ಟಿವಿ ಚಂದಾದಾರಿಕೆಯು ಸಹ ಉಚಿತವಾಗಿ ಲಭ್ಯವಾಗಲಿವೆ. ಕೊಡುಗೆಯಲ್ಲಿ ಒಟ್ಟು 386 ದಿನಗಳ ವ್ಯಾಲಿಡಿಟಿ ಸಿಗಲಿದೆ.

ಬಿಎಸ್‌ಎನ್‌ಎಲ್‌ 2399ರೂ. ಪ್ಲ್ಯಾನ್ ಪ್ರಯೋಜನಗಳು

ಬಿಎಸ್‌ಎನ್‌ಎಲ್‌ 2399ರೂ. ಪ್ಲ್ಯಾನ್ ಪ್ರಯೋಜನಗಳು

ಬಿಎಸ್‌ಎನ್‌ಎಲ್‌ನ ಈ ಪ್ಲ್ಯಾನ್ ಸದ್ಯ ಕೊಡುಗೆಯಲ್ಲಿ ಒಟ್ಟು 437 ದಿನಗಳ ವ್ಯಾಲಿಡಿಟಿ ಅವಧಿಯನ್ನು ಒಳಗೊಂಡಿದ್ದು, ಈ ಅವಧಿಯಲ್ಲಿ ಪ್ರತಿದಿನ ಉಚಿತ ವಾಯಿಸ್‌ ಕರೆಗಳ ಪ್ರಯೋಜನವನ್ನು ಒದಗಿಸಲಿದೆ. ಇದರೊಂದಿಗೆ ಪ್ರತಿದಿನ 100 ಎಸ್‌ಎಮ್‌ಎಸ್‌ಗಳ ಸೌಲಭ್ಯ ದೊರೆಯಲಿದ್ದು, 60 ದಿನಗಳಿಗೆ ಬಿಎಸ್‌ಎನ್‌ಎಲ್‌ ಟ್ಯೂನ್‌ ಸೌಲಭ್ಯವು ಸಿಗಲಿದೆ. ಹಾಗೆಯೇ ಪ್ರತಿದಿನ 3GB ಡೇಟಾ ಸೌಲಭ್ಯ ಸಹ ದೊರೆಯಲಿದೆ.

Most Read Articles
Best Mobiles in India

English summary
Here is the full list of BSNL Republic Day 2021 Offers. Let us know which one is your favourite offer.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X