BSNLನ ಈ ಅಗ್ಗದ ಪ್ಲ್ಯಾನ್‌ನಲ್ಲಿ ಭರ್ಜರಿ ಡೇಟಾ!..ಥಂಡಾ ಹೊಡೆದ ಖಾಸಗಿ ಟೆಲಿಕಾಂ!
ಸರ್ಕಾರಿ ಸ್ವಾಮ್ಯದ ಬಿಎಸ್‌ಎನ್‌ಎಲ್ ಟೆಲಿಕಾಂ ಒಳಗೊಂಡಂತೆ ರಿಲಯನ್ಸ್ ಜಿಯೋ, ವೊಡಾಫೋನ್-ಐಡಿಯಾ ಮತ್ತು ಭಾರ್ತಿ ಏರ್‌ಟೆಲ್ ಟೆಲಿಕಾಂಗಳು ಆಕರ್ಷಕ ಪ್ರೀಪೇಯ್ಡ್ ಯೋಜನೆ ಪರಿಚಯಿಸುತ್ತಾ ಮುನ್ನಡೆದಿವೆ. ಖಾಸಗಿ ಟೆಲಿಕಾಂಗಳಿಗೆ ಟಾಂಗ್ ಕೊಡುವಂತಹ ಕೆಲವು ಅಗ್ಗದ ಯೋಜನೆಗಳನ್ನು ಸರ್ಕಾರಿ ಸ್ವಾಮ್ಯದ ಬಿಎಸ್‌ಎನ್‌ಎಲ್ ಟೆಲಿಕಾಂ ಮಾಡಿದೆ. ಆ ಪೈಕಿ ಆಕರ್ಷಕ ವ್ಯಾಲಿಡಿಟಿ, ವಾಯಿಸ್ ಕರೆ ಹಾಗೂ ಡೇಟಾ ಪ್ರಯೋಜನಗಳನ್ನು ಒಳಗೊಂಡಿದೆ. ಬಿಎಸ್‌ಎನ್‌ಎಲ್ ಟೆಲಿಕಾಂನ 200ರೂ. ಒಳಗಿನ ಪ್ರೀಪೇಯ್ಡ್ ಪ್ಲ್ಯಾನ್ ಸಹ ಗ್ರಾಹಕರ ಗಮನ ಸೆಳೆದಿದೆ.

ಹೌದು, ಬಿಎಸ್‌ಎನ್‌ಎಲ್ ಟೆಲಿಕಾಂ ಕೆಲವು ಯೋಜನೆಗಳು ಆಕರ್ಷಕ ಅನಿಸಿವೆ. ಆ ಪೈಕಿ ಬಿಎಸ್‌ಎನ್‌ಎಲ್ 187ರೂ. ಪ್ರೀಪೇಯ್ಡ್ ಪ್ಲ್ಯಾನ್ ಸಹ ಒಂದಾಗಿದೆ. ಕಡಿಮೆ ದರದಲ್ಲಿ ದೈನಂದಿನ ಡೇಟಾ ಬಯಸುವ ಚಂದಾದಾರರಿಗೆ ಈ ಯೋಜನೆಯು ಸೂಕ್ತ ಎನಿಸಲಿದೆ. ಈ ಪ್ಲ್ಯಾನಿನಲ್ಲಿ ಚಂದಾದಾರರಿಗೆ ಪ್ರತಿದಿನ 2GB ಡೇಟಾ ಪ್ರಯೋಜನ ದೊರೆಯಲಿದೆ ಹಾಗೂ ಪೂರ್ಣ ವ್ಯಾಲಿಡಿಟಿ ಅವಧಿಗೆ ಒಟ್ಟು 56GB ಡೇಟಾ ಪ್ರಯೋಜನ ದೊರೆಯಲಿದೆ. ಹಾಗಾದರೇ ಬಿಎಸ್‌ಎನ್‌ಎಲ್‌ನ 187ರೂ. ಪ್ರೀಪೇಯ್ಡ್ ಯೋಜನೆ ಇತರೆ ಪ್ರಯೋಜನಗಳೇನು? ಇತರೆ ಯೋಜನೆಗಳ ಬಗ್ಗೆ ಮಾಹಿತಿ ಮುಂದೆ ತಿಳಿಯೋಣ ಬನ್ನಿರಿ.

ಬಿಎಸ್‌ಎನ್‌ಎಲ್ 187 ಪ್ರೀಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು
ಬಿಎಸ್‌ಎನ್‌ಎಲ್ 187 ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 28 ದಿನಗಳ ವ್ಯಾಲಿಡಿಟಿ ಪ್ರಯೋಜನ ಪಡೆದಿದೆ. ಈ ಯೋಜನೆಯಡಿಯಲ್ಲಿ ಗ್ರಾಹಕರಿಗೆ ಪ್ರತಿದಿನ 2GB ದೈನಂದಿನ ಡೇಟಾ ಪ್ರಯೋಜನ ಸಿಗಲಿದೆ. ಇದರೊಂದಿಗೆ 100 ದೈನಂದಿನ ಪೂರಕ ಎಸ್‌ಎಮ್‌ಎಸ್‌ಗಳನ್ನು ಮತ್ತು ಅನಿಯಮಿತ ಕರೆ ಪ್ರಯೋಜನಗಳು ಸಹ ದೊರೆಯಲಿವೆ. ರಿಂಗ್ ಟ್ಯೂನ್ ಸೌಲಭ್ಯವನ್ನು ಸಹ ಒಳಗೊಂಡಿದೆ.

ಬಿಎಸ್‌ಎನ್‌ಎಲ್ 666ರೂ. ಪ್ರೀಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು
ಬಿಎಸ್‌ಎನ್‌ಎಲ್ ಈ ಯೋಜನೆಯಲ್ಲಿ ಪ್ರತಿದಿನ 2GB ಡೇಟಾ ಸೌಲಭ್ಯ ದೊರೆಯುತ್ತದೆ. ಇದರೊಂದಿಗೆ ಪ್ರತಿದಿನ 100 ಎಸ್‌ಎಮ್‌ಎಸ್ ಹಾಗೂ ಪ್ರತಿದಿನ ಅನಿಯಮಿತ ವಾಯಿಸ್ ಕರೆಯ ಸೌಲಭ್ಯಗಳು ಲಭ್ಯವಾಗುತ್ತವೆ. ಇನ್ನು ಈ ಯೋಜನೆಯು ಒಟ್ಟು 120 ದಿನಗಳ ವ್ಯಾಲಿಡಿಟಿ ಅವಧಿಯನ್ನು ಹೊಂದಿದೆ. ಒಟ್ಟು ಪೂರ್ಣ ಅವಧಿಯ ವ್ಯಾಲಿಡಿಟಿಯಲ್ಲಿ ಒಟ್ಟು 240GB ಡೇಟಾ ಪ್ರಯೋಜನ ದೊರೆಯುತ್ತದೆ.

ಬಿಎಸ್‌ಎನ್‌ಎಲ್ 599ರೂ. ಪ್ರೀಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು
ಬಿಎಸ್‌ಎನ್‌ಎಲ್ 599ರೂ. ಪ್ರೀಪೇಯ್ಡ್ ಯೋಜನೆಯಲ್ಲಿ ಪ್ರತಿದಿನ 5GB ಡೇಟಾ ಸೌಲಭ್ಯ ದೊರೆಯುತ್ತದೆ. ಇದರೊಂದಿಗೆ ಪ್ರತಿದಿನ 100 ಎಸ್‌ಎಮ್‌ಎಸ್ ಹಾಗೂ ಅನಿಯಮಿತ ವಾಯಿಸ್ ಕರೆಯ ಸೌಲಭ್ಯಗಳು ಲಭ್ಯವಾಗುತ್ತವೆ. ಇನ್ನು ಈ ಯೋಜನೆಯು ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿಯನ್ನು ಹೊಂದಿದೆ. ಒಟ್ಟು ಪೂರ್ಣ ಅವಧಿಯ ವ್ಯಾಲಿಡಿಟಿಯಲ್ಲಿ ಒಟ್ಟು 450 GB ಡೇಟಾ ಪ್ರಯೋಜನ ದೊರೆಯುತ್ತದೆ. ಹೆಚ್ಚುವರಿಯಾಗಿ ಜಿಂಗ್ ಸೇವೆ ಲಭ್ಯವಾಗಲಿದೆ.

ಬಿಎಸ್‌ಎನ್‌ಎಲ್ 499ರೂ. ಪ್ರಿಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು
ಬಿಎಸ್‌ಎನ್‌ಎಲ್‌ನ ಈ SVT 499ರೂ. ಪ್ಲ್ಯಾನ್ ದೀರ್ಘಾವಧಿಯ ಯೋಜನೆ ಆಗಿದ್ದು, ಒಟ್ಟು 90 ದಿನಗಳ ವ್ಯಾಲಿಡಿಟಿಯನ್ನು ಒಳಗೊಂಡಿದೆ. ಈ ಅವಧಿಯಲ್ಲಿ ಪ್ರತಿದಿನ 2GB ಡೇಟಾ ಪ್ರಯೋಜನ ಲಭ್ಯವಿದ್ದು, ಒಟ್ಟು ಪೂರ್ಣ ಅವಧಿಗೆ 180GB ಡೇಟಾ ಸಿಗಲಿದೆ. ಇದರೊಂದಿಗೆ ಅನಿಯಮಿತ ವಾಯಿಸ್ ಕರೆಗಳ ಸೌಲಭ್ಯ ಸಹ ದೊರೆಯಲಿದೆ. ಹಾಗೆಯೇ ಡೈಲಿ 100 ಎಸ್‌ಎಮ್‌ಎಸ್ ಸಹ ಸಿಗುತ್ತದೆ. ಹೆಚ್ಚುವರಿಯಾಗಿ ಬಿಎಸ್‌ಎನ್‌ಎಲ್ ಟ್ಯೂನ್ ಮತ್ತು Zing ಪ್ರಯೋಜನ ಲಭ್ಯ.

ಬಿಎಸ್‌ಎನ್‌ಎಲ್ 997ರೂ. ಪ್ರೀಪೇಯ್ಡ್ ಪ್ಲ್ಯಾನ್
ಬಿಎಸ್‌ಎನ್‌ಎಲ್ ಈ ಯೋಜನೆಯಲ್ಲಿ ಪ್ರತಿದಿನ 3GB ಡೇಟಾ ಸೌಲಭ್ಯ ದೊರೆಯುತ್ತದೆ. ಇದರೊಂದಿಗೆ ಪ್ರತಿದಿನ 100 ಎಸ್‌ಎಮ್‌ಎಸ್ ಹಾಗೂ ಪ್ರತಿದಿನ ಅನಿಯಮಿತ ವಾಯಿಸ್ ಕರೆಯ ಸೌಲಭ್ಯಗಳು ಲಭ್ಯವಾಗುತ್ತವೆ. ಇನ್ನು ಈ ಯೋಜನೆಯು ಒಟ್ಟು 180 ದಿನಗಳ ವ್ಯಾಲಿಡಿಟಿ ಅವಧಿಯನ್ನು ಹೊಂದಿದೆ. ಒಟ್ಟು ಪೂರ್ಣ ಅವಧಿಯ ವ್ಯಾಲಿಡಿಟಿಯಲ್ಲಿ ಒಟ್ಟು 540GB ಡೇಟಾ ಪ್ರಯೋಜನ ದೊರೆಯುತ್ತದೆ.

ಬಿಎಸ್‌ಎನ್‌ಎಲ್ 2399ರೂ. ಪ್ರೀಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು
ಬಿಎಸ್‌ಎನ್‌ಎಲ್ 2399ರೂ. ಯೋಜನೆಯು ವಾರ್ಷಿಕ ಅವಧಿಯ ಪ್ಲ್ಯಾನ್ ಆಗಿದೆ. ಈ ಯೋಜನೆಯು ಒಟ್ಟು 425 ದಿನಗಳ ವ್ಯಾಲಿಡಿಟಿ ಪಡೆದಿದೆ. ಈ ಅವಧಿಯಲ್ಲಿ ಪ್ರತಿದಿನ 3GB ಡೇಟಾ ಪ್ರಯೋಜನ ಲಭ್ಯ ಆಗಲಿದೆ. ಜೊತೆಗೆ ಪ್ರತಿದಿನ 100 ಎಸ್‌ಎಮ್‌ಎಸ್ ಸೌಲಭ್ಯ ಸಹ ಸಿಗಲಿದೆ. ಇದರೊಂದಿಗೆ ಅನಿಯಮಿತ ವಾಯಿಸ್ ಕರೆಗಳ ಸೌಲಭ್ಯವು ದೊರೆಯಲಿದೆ. ಹಾಗೆಯೇ ಮುಂಬೈ ಮತ್ತು ದೆಹಲಿ ಎಮ್‌ಟಿಎನ್‌ಎಲ್ ಬಳಕೆದಾರರಗೆ ಅನಿಯಮಿತ ಸಾಂಗ್ ಚೇಂಜ್ ಹಾಗೂ EROS ಚಂದಾದಾರಿಕೆ ಸಹ ಲಭ್ಯ ಆಗಲಿದೆ.


Click it and Unblock the Notifications








