ಬಿಎಸ್ಎನ್ಎಲ್ನ ಈ ಅಗ್ಗದ ರೀಚಾರ್ಜ್‌ನಲ್ಲಿ ಬಿಗ್ ವ್ಯಾಲಿಡಿಟಿ ಪಕ್ಕಾ!
ಸರ್ಕಾರಿ ಸ್ವಾಮ್ಯದ ಬಿಎಸ್‌ಎನ್‌ಎಲ್ ಟೆಲಿಕಾಂ ಸಂಸ್ಥೆಯು ಕೆಲವು ಆಕರ್ಷಕ ಪ್ಲ್ಯಾನ್‌ಗಳ ಮೂಲಕ ಮಾರುಕಟ್ಟೆಯಲ್ಲಿ ಸ್ಥಾನ ಉಳಿಸಿಕೊಂಡಿದೆ. ಇದಲ್ಲದೇ ಬಿಎಸ್‌ಎನ್‌ಎಲ್ ಸಂಸ್ಥೆಯು ಕೆಲವು ಡೇಟಾ ಮತ್ತು ವ್ಯಾಲಿಡಿಟಿ ಯೋಜನೆಗಳ ಮೂಲಕ ಖಾಸಗಿ ಟೆಲಿಕಾಂಗಳಿಗೆ ನೇರ ಪೈಪೋಟಿ ನಡೆಸುತ್ತಾ ಮುಂದೆ ಸಾಗಿದೆ. ಇನ್ನು ಬಿಎಸ್‌ಎನ್‌ಎಲ್ ಈ ಒಂದು ಅಗ್ಗದ ಪ್ಲ್ಯಾನ್ ಭರ್ಜರಿ ಸೌಲಭ್ಯ ಪಡೆದಿದೆ.
ಹೌದು, ಬಿಎಸ್‌ಎನ್‌ಎಲ್ ಟೆಲಿಕಾಂನ 197 ರೂ. ಪ್ರೀಪೇಯ್ಡ್ ಯೋಜನೆಯು ಅಧಿಕ ವ್ಯಾಲಿಡಿಟಿ ಎರಡನ್ನು ಬಯಸುವ ಗ್ರಾಹಕರಿಗೆ ಹೇಳಿ ಮಾಡಿಸಿದಂತಹ ಪ್ಲ್ಯಾನ್ ಆಗಿ ಕಾಣಿಸಿಕೊಂಡಿದೆ. ಈ ಬಿಎಸ್ಎನ್‌ಎಲ್‌ನ ಯೋಜನೆಯಲ್ಲಿ ಗ್ರಾಹಕರಿಗೆ ಡೇಟಾ, ಅನಿಯಮಿತ ವಾಯಿಸ್ ಕರೆ ಹಾಗೂ ಬಿಗ್ ವ್ಯಾಲಿಡಿಟಿ ಸೌಲಭ್ಯ ದೊರೆಯುತ್ತದೆ. ಹಾಗಾದರೆ ಬಿಎಸ್‌ಎನ್‌ಎಲ್ ಟೆಲಿಕಾಂನ 197 ರೂ. ಯೋಜನೆ ಇತರೆ ಪ್ರಯೋಜನಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಬಿಎಸ್‌ಎನ್‌ಎಲ್ 197ರೂ. ಪ್ರೀಪೇಯ್ಡ್ ಪ್ಲ್ಯಾನ್ : ಬಿಎಸ್‌ಎನ್‌ಎಲ್ 197ರೂ. ಬೆಲೆಯ ಹೊಸ ಯೋಜನೆಯು ಒಟ್ಟು 70 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ ಎಂದು ಕಂಪನಿಯು ತಿಳಿಸಿದೆ. ಆದರೆ ಮೊದಲ 15 ದಿನಗಳು ಬಳಕೆದಾರರಿಗೆ ಡೈಲಿ 2GB ಡೇಟಾ ಪ್ರಯೋಜನ ಸಿಗಲಿದೆ. ಇದರೊಂದಿಗೆ ಅನಿಯಮಿತ ವಾಯಿಸ್ ಕರೆ ಹಾಗೂ 100 ಉಚಿತ ಎಸ್‌ಎಮ್‌ಎಸ್ ಪ್ರಯೋಜನಗಳು ಲಭ್ಯವಾಗಲಿವೆ. ಆರಂಭಿಕ 15 ದಿನಗಳ ಉಚಿತ ಸೌಲಭ್ಯಗಳ ಮುಗಿದ ಬಳಿಕ ಟಾಪ್‌ಅಪ್ ರೀಚಾರ್ಜ್ ಮಾಡಿಸಬಹುದಾಗಿದೆ.
ಬಿಎಸ್‌ಎನ್‌ಎಲ್ 269ರೂ. ಪ್ರಿಪೇಯ್ಡ್ ಪ್ಲ್ಯಾನ್ : ಬಿಎಸ್‌ಎನ್‌ಎಲ್ ಟೆಲಿಕಾಂನ 269 ರೂ. ಪ್ಲ್ಯಾನ್ ಅಲ್ಪಾವಧಿಯ ಯೋಜನೆ ಆಗಿದ್ದು, ಒಟ್ಟು 30 ದಿನಗಳ ವ್ಯಾಲಿಡಿಟಿ ಯನ್ನು ಒಳಗೊಂಡಿದೆ. ಪ್ರತಿದಿನ 2 GB ಡೇಟಾ ಸೌಲಭ್ಯ ದೊರೆಯುತ್ತದೆ. ಇದರೊಂದಿಗೆ ಪ್ರತಿದಿನ 100 ಎಸ್‌ಎಮ್‌ಎಸ್ ಹಾಗೂ ಅನಿಯಮಿತ ವಾಯಿಸ್ ಕರೆಯ ಸೌಲಭ್ಯಗಳು ಲಭ್ಯವಾಗುತ್ತವೆ. ಹೆಚ್ಚುವರಿ ಯಾಗಿ ಎರೋಸ್ ನೌ ಎಂಟರ್‌ಟೈನ್‌ಮೆಂಟ್, ಲಿಸ್ಟ್ನ್ ಪಾಡ್‌ಕ್ಯಾಸ್ಟ್ ಸೇವೆಗಳು ಲಭ್ಯ.

ಬಿಎಸ್‌ಎನ್‌ಎಲ್ 599ರೂ. ಪ್ರೀಪೇಯ್ಡ್ ಪ್ಲ್ಯಾನ್ : ಬಿಎಸ್‌ಎನ್‌ಎಲ್ ಟೆಲಿಕಾಂನ 599ರೂ. ಪ್ರೀಪೇಯ್ಡ್ ಯೋಜನೆಯಲ್ಲಿ ಪ್ರತಿದಿನ 5 GB ಡೇಟಾ ಸೌಲಭ್ಯ ದೊರೆಯುತ್ತದೆ. ಇದರೊಂದಿಗೆ ಪ್ರತಿದಿನ 100 ಎಸ್‌ಎಮ್‌ಎಸ್ ಹಾಗೂ ಅನಿಯಮಿತ ವಾಯಿಸ್ ಕರೆಯ ಸೌಲಭ್ಯಗಳು ಲಭ್ಯವಾಗುತ್ತವೆ. ಇನ್ನು ಈ ಯೋಜನೆಯು ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿಯನ್ನು ಹೊಂದಿದೆ. ಒಟ್ಟು ಪೂರ್ಣ ಅವಧಿಯ ವ್ಯಾಲಿಡಿಟಿಯಲ್ಲಿ ಒಟ್ಟು 450 GB ಡೇಟಾ ಪ್ರಯೋಜನ ದೊರೆಯುತ್ತದೆ. ಹೆಚ್ಚುವರಿಯಾಗಿ ಜಿಂಗ್ ಸೇವೆ ಲಭ್ಯವಾಗಲಿದೆ.
ಬಿಎಸ್‌ಎನ್‌ಎಲ್ 769ರೂ. ಪ್ರಿಪೇಯ್ಡ್ ಪ್ಲ್ಯಾನ್ : ಬಿಎಸ್‌ಎನ್‌ಎಲ್ ಟೆಲಿಕಾಂನ 769 ರೂ. ಪ್ಲ್ಯಾನ್, ಒಟ್ಟು 90 ದಿನಗಳ ವ್ಯಾಲಿಡಿಟಿಯನ್ನು ಒಳಗೊಂಡಿದೆ. ಪ್ರತಿದಿನ 2 GB ಡೇಟಾ ಸೌಲಭ್ಯ ದೊರೆಯುತ್ತದೆ. ಇದರೊಂದಿಗೆ ಪ್ರತಿದಿನ 100 ಎಸ್‌ಎಮ್‌ಎಸ್ ಹಾಗೂ ಅನಿಯಮಿತ ವಾಯಿಸ್ ಕರೆಯ ಸೌಲಭ್ಯಗಳು ಲಭ್ಯವಾಗುತ್ತವೆ. ಹೆಚ್ಚುವರಿಯಾಗಿ ಎರೋಸ್ ನೌ ಎಂಟರ್‌ಟೈನ್‌ಮೆಂಟ್ ಸೇವೆ ಗಳು ಲಭ್ಯ.

ಬಿಎಸ್‌ಎನ್‌ಎಲ್ 1198ರೂ. ರೀಚಾರ್ಜ್ ಪ್ಲ್ಯಾನ್ : ಬಿಎಸ್‌ಎನ್‌ಎಲ್ ಟೆಲಿಕಾಂನ 1198 ರೂ. ರೀಚಾರ್ಜ್ ಯೋಜನೆಯಲ್ಲಿ ಪ್ರತಿ ತಿಂಗಳು 3 GB ಡೇಟಾ, ಇದರೊಂದಿಗೆ ಪ್ರತಿ ತಿಂಗಳು 300 ನಿಮಿಷಗಳ ಉಚಿತ ವಾಯಿಸ್ ಕರೆ ಪ್ರಯೋಜನ ಲಭ್ಯವಿದೆ. ಇನ್ನು ಈ ಯೋಜನೆಯು ಒಟ್ಟು 365 ದಿನಗಳ ವ್ಯಾಲಿಡಿಟಿ ಅವಧಿಯನ್ನು ಹೊಂದಿದೆ. ಪೂರ್ಣ ವ್ಯಾಲಿಡಿಟಿ ಅವಧಿಗೆ 36GB ಡೇಟಾ ಪ್ರಯೋಜನ ಲಭ್ಯವಾಗಲಿದೆ.


Click it and Unblock the Notifications








