Home
ಸುದ್ದಿಜಾಲ

BSNLನ 201ರೂ. ಪ್ಲ್ಯಾನಿನಲ್ಲಿ 90 ದಿನ ವ್ಯಾಲಿಡಿಟಿ!..ಗ್ರಾಹಕರು ಶಾಕ್‌!

ಸರ್ಕಾರಿ ಸ್ವಾಮ್ಯದ ಬಿಎಸ್‌ಎನ್‌ಎಲ್‌ (BSNL) ಟೆಲಿಕಾಂ ಸಂಸ್ಥೆಯು ಕೆಲವು ಆಕರ್ಷಕ ಯೋಜನೆಗಳ ಮೂಲಕ ಮಾರುಕಟ್ಟೆಯಲ್ಲಿ ಗುರುತಿಸಿಕೊಂಡಿದೆ. ಹಾಗೆಯೇ ಬಿಎಸ್‌ಎನ್‌ಎಲ್‌ ಸಂಸ್ಥೆಯು ದೈನಂದಿನ ಡೇಟಾ ಮತ್ತು ದೀರ್ಘ ವ್ಯಾಲಿಡಿಟಿ ಪ್ಲ್ಯಾನ್‌ಗಳ ಮೂಲಕ ಖಾಸಗಿ ಟೆಲಿಕಾಂಗಳಿಗೆ ನೇರ ಟಾಂಗ್‌ ನೀಡುತ್ತಾ ಮುಂದೆ ಸಾಗಿದೆ. ಆದರೆ ಬಿಎಸ್‌ಎನ್‌ಎಲ್‌ ಈ ಒಂದು ಅಗ್ಗದ ರೀಚಾರ್ಜ್‌ ಯೋಜನೆ ದೀರ್ಘ ವ್ಯಾಲಿಡಿಟಿ ಪ್ರಯೋಜನದೊಂದಿಗೆ ಕಾಣಿಸಿಕೊಂಡಿದೆ.

ಹೌದು, ಬಿಎಸ್‌ಎನ್‌ಎಲ್‌ ಟೆಲಿಕಾಂನ 201ರೂ. ರೀಚಾರ್ಜ್‌ ಯೋಜನೆಯು ಅಧಿಕ ವ್ಯಾಲಿಡಿಟಿ ಬಯಸುವ ಗ್ರಾಹಕರಿಗೆ ಆಕರ್ಷಕ ಪ್ಲ್ಯಾನ್‌ ಆಗಿ ಕಾಣಿಸಿಕೊಂಡಿದೆ. ಬಿಎಸ್ಎನ್‌ಎಲ್‌ನ ಈ ರೀಚಾರ್ಜ್‌ನಲ್ಲಿ ಗ್ರಾಹಕರಿಗೆ ಡೇಟಾ, ವಾಯಿಸ್‌ ಕರೆ ಹಾಗೂ ಅಧಿಕ ವ್ಯಾಲಿಡಿಟಿ ಪ್ರಯೋಜನ ಲಭ್ಯವಾಗಲಿದೆ. ಹಾಗಾದರೆ ಬಿಎಸ್‌ಎನ್‌ಎಲ್‌ ಟೆಲಿಕಾಂನ 201ರೂ. ಯೋಜನೆ ಇತರೆ ಪ್ರಯೋಜನಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

BSNLನ 201ರೂ. ಪ್ಲ್ಯಾನಿನಲ್ಲಿ 90 ದಿನ ವ್ಯಾಲಿಡಿಟಿ!..ಗ್ರಾಹಕರು ಶಾಕ್‌!

ಬಿಎಸ್‌ಎನ್‌ಎಲ್‌ 201ರೂ. ಪ್ರೀಪೇಯ್ಡ್‌ ಪ್ಲ್ಯಾನ್ : ಬಿಎಸ್‌ಎನ್‌ಎಲ್‌ 201 ರೂ. ಬೆಲೆಯ ರೀಚಾರ್ಜ್ ಯೋಜನೆಯು ಒಟ್ಟು 90 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ ಎಂದು ಕಂಪನಿಯು ತಿಳಿಸಿದೆ. ಈ ಯೋನೆಯಲ್ಲಿ ಒಟ್ಟು 6 GB ಡೇಟಾ ಪ್ರಯೋಜನ ಸಿಗಲಿದ್ದು, 300 ನಿಮಿಷಗಳ ಉಚಿತ ವಾಯಿಸ್‌ ಕರೆಯ ಸೌಲಭ್ಯ ಸಹ ದೊರೆಯುತ್ತದೆ. ಇದರೊಂದಿಗೆ 99 ಎಸ್‌ಎಮ್‌ಎಸ್‌ ಪ್ರಯೋಜನ ಸಹ ದೊರೆಯುತ್ತದೆ.

ಬಿಎಸ್‌ಎನ್‌ಎಲ್‌ 1198ರೂ. ರೀಚಾರ್ಜ್ ಪ್ಲ್ಯಾನ್ : ಬಿಎಸ್‌ಎನ್‌ಎಲ್‌ ಟೆಲಿಕಾಂನ 1198 ರೂ. ರೀಚಾರ್ಜ್ ಯೋಜನೆಯಲ್ಲಿ ಪ್ರತಿ ತಿಂಗಳು 3 GB ಡೇಟಾ, ಇದರೊಂದಿಗೆ ಪ್ರತಿ ತಿಂಗಳು 300 ನಿಮಿಷಗಳ ಉಚಿತ ವಾಯಿಸ್‌ ಕರೆ ಪ್ರಯೋಜನ ಲಭ್ಯವಿದೆ. ಇನ್ನು ಈ ಯೋಜನೆಯು ಒಟ್ಟು 365 ದಿನಗಳ ವ್ಯಾಲಿಡಿಟಿ ಅವಧಿಯನ್ನು ಹೊಂದಿದೆ. ಪೂರ್ಣ ವ್ಯಾಲಿಡಿಟಿ ಅವಧಿಗೆ 36 GB ಡೇಟಾ ಪ್ರಯೋಜನ ಲಭ್ಯವಾಗಲಿದೆ.

ಬಿಎಸ್‌ಎನ್‌ಎಲ್‌ 269ರೂ. ಪ್ರಿಪೇಯ್ಡ್‌ ಪ್ಲ್ಯಾನ್ : ಬಿಎಸ್‌ಎನ್‌ಎಲ್ ಟೆಲಿಕಾಂನ 269 ರೂ. ಪ್ಲ್ಯಾನ್ ಅಲ್ಪಾವಧಿಯ ರೀಚಾರ್ಜ್ ಯೋಜನೆ ಆಗಿದ್ದು, ಒಟ್ಟು 30 ದಿನಗಳ ವ್ಯಾಲಿಡಿಟಿ ಯನ್ನು ಒಳಗೊಂಡಿದೆ. ಪ್ರತಿದಿನ 2 GB ಡೇಟಾ ಸೌಲಭ್ಯ ದೊರೆಯುತ್ತದೆ. ಇದರೊಂದಿಗೆ ಪ್ರತಿದಿನ 100 ಎಸ್‌ಎಮ್‌ಎಸ್‌ ಹಾಗೂ ಅನಿಯಮಿತ ವಾಯಿಸ್ ಕರೆಯ ಸೌಲಭ್ಯಗಳು ಲಭ್ಯವಾಗುತ್ತವೆ. ಹೆಚ್ಚುವರಿ ಯಾಗಿ ಎರೋಸ್ ನೌ ಎಂಟರ್‌ಟೈನ್‌ಮೆಂಟ್, ಲಿಸ್ಟ್ನ್ ಪಾಡ್‌ಕ್ಯಾಸ್ಟ್ ಸೇವೆಗಳು ಲಭ್ಯ.

ಬಿಎಸ್‌ಎನ್‌ಎಲ್‌ 599ರೂ. ಪ್ರೀಪೇಯ್ಡ್‌ ಪ್ಲ್ಯಾನ್ : ಬಿಎಸ್‌ಎನ್‌ಎಲ್‌ ಟೆಲಿಕಾಂನ 599ರೂ. ಪ್ರೀಪೇಯ್ಡ್‌ ರೀಚಾರ್ಜ್ ಯೋಜನೆಯಲ್ಲಿ ಪ್ರತಿದಿನ 5 GB ಡೇಟಾ ಸೌಲಭ್ಯ ದೊರೆಯುತ್ತದೆ. ಇದರೊಂದಿಗೆ ಪ್ರತಿದಿನ 100 ಎಸ್‌ಎಮ್‌ಎಸ್‌ ಹಾಗೂ ಅನಿಯಮಿತ ವಾಯಿಸ್ ಕರೆಯ ಸೌಲಭ್ಯಗಳು ಲಭ್ಯವಾಗುತ್ತವೆ. ಇನ್ನು ಈ ರೀಚಾರ್ಜ್ ಯೋಜನೆಯು ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿಯನ್ನು ಹೊಂದಿದೆ. ಒಟ್ಟು ಪೂರ್ಣ ಅವಧಿಯ ವ್ಯಾಲಿಡಿಟಿಯಲ್ಲಿ ಒಟ್ಟು 450 GB ಡೇಟಾ ಪ್ರಯೋಜನ ದೊರೆಯುತ್ತದೆ. ಹೆಚ್ಚುವರಿಯಾಗಿ ಜಿಂಗ್ ಸೇವೆ ಲಭ್ಯವಾಗಲಿದೆ.

ಬಿಎಸ್‌ಎನ್‌ಎಲ್‌ 769 ರೂ. ಪ್ರಿಪೇಯ್ಡ್‌ ಪ್ಲ್ಯಾನ್ : ಬಿಎಸ್‌ಎನ್‌ಎಲ್ ಟೆಲಿಕಾಂನ 769 ರೂ. ರೀಚಾರ್ಜ್ ಪ್ಲ್ಯಾನ್, ಒಟ್ಟು 90 ದಿನಗಳ ವ್ಯಾಲಿಡಿಟಿಯನ್ನು ಒಳಗೊಂಡಿದೆ. ಪ್ರತಿದಿನ 2 GB ಡೇಟಾ ಸೌಲಭ್ಯ ದೊರೆಯುತ್ತದೆ. ಇದರೊಂದಿಗೆ ಪ್ರತಿದಿನ 100 ಉಚಿತ ಎಸ್‌ಎಮ್‌ಎಸ್‌ ಹಾಗೂ ಅನಿಯಮಿತ ವಾಯಿಸ್ ಕರೆ ಸೌಲಭ್ಯ ಸಹ ಲಭ್ಯವಾಗುತ್ತವೆ. ಹೆಚ್ಚುವರಿಯಾಗಿ ಎರೋಸ್ ನೌ ಎಂಟರ್‌ಟೈನ್‌ಮೆಂಟ್ ಸೇವೆ ಗಳು ಲಭ್ಯ.

Best Mobiles in India

English summary
BSNL Rs 201 Recharge Plan Offer 90 Days Validity. check other benefits here.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+