ಬಿಎಸ್‌ಎನ್‌ಎಲ್ ಚಂದಾದಾರರೇ, ಈ ಪ್ಲ್ಯಾನ್‌ಗಳಲ್ಲಿ ಒಂದನ್ನು ರೀಚಾರ್ಜ್ ಮಾಡಿ!
ಖಾಸಗಿ ಟೆಲಿಕಾಂಗಳ ಪೈಪೋಟಿ ನಡುವೆಯೂ ಸರ್ಕಾರಿ ಸ್ವಾಮ್ಯದ ಟೆಲಿಕಾಂ ಭಾರತ್ ಸಂಚಾರ್ ನಿಗಮ್ ಲಿಮಿಟೆಡ್ (BSNL) ತನ್ನ ಸ್ಥಾನ ಉಳಿಸಿಕೊಂಡು ಮುನ್ನಡೆದಿದೆ. ಅನೇಕ ಗುಡ್ಡಗಾಡು ಹಾಗೂ ಕೆಲವು ಗ್ರಾಮ್‌ಗಳಲ್ಲಿ ಇಂದಿಗೂ ಬಿಎಸ್‌ಎನ್‌ಎಲ್ ನೆಟ್‌ವರ್ಕ್ ಆಸರೆಯಾಗಿದೆ. ಇನ್ನು ಬಿಎಸ್‌ಎನ್‌ಎಲ್ ಮೊಬೈಲ್ ನೆಟ್‌ವರ್ಕ್ ವೈರ್‌ಲೈನ್ ನೆಟ್‌ವರ್ಕ್ ಮತ್ತು ಬ್ರಾಡ್‌ಬ್ಯಾಂಡ್ ಸೇವೆಗಳನ್ನು ಒಳಗೊಂಡಿದೆ. ಅದಾಗ್ಯೂ ಕೆಲವು ಪ್ಲ್ಯಾನ್‌ಗಳು ಗ್ರಾಹಕರ ಗಮನ ಸೆಳೆದಿವೆ.

ಹೌದು, ಬಿಎಸ್‌ಎನ್‌ಎಲ್ ಟೆಲಿಕಾಂ ಭಿನ್ನ ಶ್ರೇಣಿಯ ಪ್ರೀಪೇಯ್ಡ್ ಯೋಜನೆಗಳನ್ನು ಒಳಗೊಂಡಿದೆ. ಅವುಗಳಲ್ಲಿ ಕೆಲವು ಪ್ರೀಪೇಯ್ಡ್ ಯೋಜನೆಗಳು ಆಕರ್ಷಕ ಪ್ರಯೋಜನ ಪಡೆದಿದ್ದು, ಗ್ರಾಹಕರ ಗಮನ ಸೆಳೆದಿವೆ. ಮುಖ್ಯವಾಗಿ ಅಧಿಕ ಡೇಟಾ, ದೀರ್ಘ ವ್ಯಾಲಿಡಿಟಿ. ಎಸ್‌ಎಮ್‌ಎಸ್ ಸೌಲಭ್ಯಗಳನ್ನು ಪಡೆದ ಯೋಜನೆಗಳು ಹೆಚ್ಚು ಅಟ್ರ್ಯಾಕ್ಟ್ ಎನಿಸಿವೆ. ಹಾಗಾದರೆ ಬಿಎಸ್‌ಎನ್‌ಎಲ್ ಟೆಲಿಕಾಂನ ಕೆಲವು ಯೋಜನೆಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಬಿಎಸ್‌ಎನ್‌ಎಲ್‌ನ 298ರೂ. ಪ್ರಿಪೇಯ್ಡ್ ಯೋಜನೆ
ಬಿಎಸ್‌ಎನ್‌ಎಲ್ ಟೆಲಿಕಾಂನ ಈ ಪ್ರಿಪೇಯ್ಡ್ ಯೋಜನೆಯು 52 ದಿನಗಳವರೆಗೆ ವ್ಯಾಲಿಡಿಟಿ ಸೌಲಭ್ಯ ಪಡೆದಿದ್ದು, ಪ್ರತಿದಿನ 100 ಉಚಿತ ಎಸ್‌ಎಮ್‌ಎಸ್ ಪ್ರಯೋಜನ ಪಡೆದಿದೆ. ಹಾಗೆಯೇ ಅನಿಯಮಿತ ಧ್ವನಿ ಕರೆಯ ಸೌಲಭ್ಯವನ್ನು ಒಳಗೊಂಡಿದೆ.

ಬಿಎಸ್‌ಎನ್‌ಎಲ್‌ನ 319ರೂ. ಪ್ರಿಪೇಯ್ಡ್ ಯೋಜನೆ
ಬಿಎಸ್‌ಎನ್‌ಎಲ್ ಟೆಲಿಕಾಂನ ಈ ಪ್ರಿಪೇಯ್ಡ್ ಯೋಜನೆಯು ಬಳಕೆದಾರರಿಗೆ ಒಟ್ಟು 300 SMS ಮತ್ತು 65 ದಿನಗಳವರೆಗೆ ಅನಿಯಮಿತ ವಾಯಿಸ್ ಕರೆಯೊಂದಿಗೆ 10GB ಲುಂಪ್ಸಮ್ ಡೇಟಾವನ್ನು ನೀಡುತ್ತದೆ. ಇದು ನಿಮಗೆ ಹೆಚ್ಚಿನ ಡೇಟಾ ಮತ್ತು SMS ಅಗತ್ಯತೆಗಳನ್ನು ಹೊಂದಿಲ್ಲದಿದ್ದರೆ ನೀವು ರೀಚಾರ್ಜ್ ಮಾಡಬಹುದಾದ ಪ್ರಿಪೇಯ್ಡ್ ಯೋಜನೆಯಾಗಿದೆ.

ಬಿಎಸ್‌ಎನ್‌ಎಲ್ 347ರೂ. ಯೋಜನೆಯ ಪ್ರಯೋಜನಗಳು
ಬಿಎಸ್‌ಎನ್‌ಎಲ್ ಟೆಲಿಕಾಂನ 347ರೂ. ಯೋಜನೆಯು 54 ದಿನಗಳ ವ್ಯಾಲಿಡಿಟಿ ಪ್ರಯೋಜನ ಪಡೆದಿದೆ. ಈ ಯೋಜನೆಯು 2GB ದೈನಂದಿನ ಡೇಟಾ, 100 ಎಸ್‌ಎಮ್‌ಎಸ್ ಸೌಲಭ್ಯ ಪಡೆದಿದೆ. ಇದರೊಂದಿಗೆ ಅನಿಯಮಿತ ವಾಯಿಸ್ ಕರೆಯ ಪ್ರಯೋಜನ ಸಹ ಒಳಗೊಂಡಿದೆ. ನಿಗದಿತ ಡೇಟಾ ಮುಗಿದ ಬಳಿಕ ಇಂಟರ್ನೆಟ್ ವೇಗವು 80 Kbps ಇಳಿಯಲಿದೆ.

ಬಿಎಸ್‌ಎನ್‌ಎಲ್ 395ರೂ. ಯೋಜನೆಯ ಪ್ರಯೋಜನಗಳು
ಈ ಪ್ರಿಪೇಯ್ಡ್ ಪ್ಲಾನ್‌ನಲ್ಲಿ ಮೊದಲ 71 ದಿನಗಳವರೆಗೆ ದೈನಂದಿನ 2GB ಡೇಟಾ, ಅನ್‌ಲಿಮಿಟೆಡ್ ವಾಯಿಸ್ ಕಾಲ್ ಮತ್ತು ಡೈಲಿ 100 SMS ಅನ್ನು ಪಡೆದುಕೊಳ್ಳಬಹುದಾಗಿದೆ. ಆದರೆ 60 ದಿನಗಳ ನಂತರ ಡೇಟಾ ವೇಗವು 40 Kbps ಗೆ ಕಡಿಮೆಯಾಗುತ್ತದೆ.

ಬಿಎಸ್‌ಎನ್‌ಎಲ್ 499ರೂ. ಪ್ಲ್ಯಾನ್ ಪ್ರಯೋಜನಗಳು
ಬಿಎಸ್‌ಎನ್‌ಎಲ್‌ನ ಈ SVT 499 ರೂ. ಪ್ಲ್ಯಾನ್ ದೀರ್ಘಾವಧಿಯ ಯೋಜನೆ ಆಗಿದ್ದು, ಒಟ್ಟು 90 ದಿನಗಳ ವ್ಯಾಲಿಡಿಟಿಯನ್ನು ಒಳಗೊಂಡಿದೆ. ಈ ಅವಧಿಯಲ್ಲಿ ಪ್ರತಿದಿನ 2 GB ಡೇಟಾ ಪ್ರಯೋಜನ ಲಭ್ಯವಿದ್ದು, ಒಟ್ಟು ಪೂರ್ಣ ಅವಧಿಗೆ 180 GB ಡೇಟಾ ಸಿಗಲಿದೆ. ಇದರೊಂದಿಗೆ ಅನಿಯಮಿತ ವಾಯಿಸ್ ಕರೆಗಳ ಸೌಲಭ್ಯ ಸಹ ದೊರೆಯಲಿದೆ. ಹಾಗೆಯೇ ಡೈಲಿ 100 ಎಸ್‌ಎಮ್‌ಎಸ್ ಸಹ ಸಿಗುತ್ತದೆ. ಹೆಚ್ಚುವರಿಯಾಗಿ ಬಿಎಸ್‌ಎನ್‌ಎಲ್ ಟ್ಯೂನ್ ಮತ್ತು Zing ಪ್ರಯೋಜನ ಲಭ್ಯ.

ಬಿಎಸ್‌ಎನ್‌ಎಲ್ 599ರೂ. ಪ್ರೀಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು
ಬಿಎಸ್‌ಎನ್‌ಎಲ್ 599 ರೂ. ಪ್ರೀಪೇಯ್ಡ್ ಯೋಜನೆಯಲ್ಲಿ ಪ್ರತಿದಿನ 5 GB ಡೇಟಾ ಸೌಲಭ್ಯ ದೊರೆಯುತ್ತದೆ. ಇದರೊಂದಿಗೆ ಪ್ರತಿದಿನ 100 ಎಸ್‌ಎಮ್‌ಎಸ್ ಹಾಗೂ ಅನಿಯಮಿತ ವಾಯಿಸ್ ಕರೆಯ ಸೌಲಭ್ಯಗಳು ಲಭ್ಯವಾಗುತ್ತವೆ. ಇನ್ನು ಈ ಯೋಜನೆಯು ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿಯನ್ನು ಹೊಂದಿದೆ.


Click it and Unblock the Notifications








