ಒಮ್ಮೆ ಈ ಪ್ಲ್ಯಾನ್ ರೀಚಾರ್ಜ್ ಮಾಡಿದ್ರೆ, 455 ದಿನ ಮತ್ತೆ ರೀಚಾರ್ಜ್ ಬೇಕಿಲ್ಲ!
ಸರ್ಕಾರಿ ಸ್ವಾಮ್ಯದ ಬಿಎಸ್‌ಎನ್‌ಎಲ್ (BSNL) ಟೆಲಿಕಾಂ ಸೇರಿದಂತೆ ಜಿಯೋ, ವಿ ಟೆಲಿಕಾಂ ಮತ್ತು ಏರ್‌ಟೆಲ್ ಟೆಲಿಕಾಂಗಳು ಸದ್ಯ ಆಕರ್ಷಕ ಪ್ಲ್ಯಾನ್ ಪರಿಚಯಿಸುತ್ತಾ ಸಾಗಿವೆ. ಖಾಸಗಿ ಟೆಲಿಕಾಂಗಳಿಗೆ ಪೈಪೋಟಿ ನೀಡುವಂತಹ ಕೆಲವು ಪ್ರೀಪೇಯ್ಡ್ ಪ್ಲ್ಯಾನ್‌ಗಳನ್ನು ಬಿಎಸ್‌ಎನ್‌ಎಲ್ ಸಂಸ್ಥೆ ನೀಡಿದೆ. ಆ ಪೈಕಿ ಸಂಸ್ಥೆಯ ಈ ಪ್ಲ್ಯಾನಿನಲ್ಲಿ ಪ್ರತಿದಿನ 3GB ಡೇಟಾ ಲಭ್ಯ.
ಬಿಎಸ್‌ಎನ್‌ಎಲ್ ಟೆಲಿಕಾಂ ಕೆಲವು ಯೋಜನೆಗಳು ಆಕರ್ಷಕ ಅನಿಸಿವೆ. ಇನ್ನು ಅಧಿಕ ದೈನಂದಿನ ಡೇಟಾ ಹಾಗೂ ದೀರ್ಘ ವ್ಯಾಲಿಡಿಟಿ ಪ್ರಯೋಜನ ಬಯಸುವ ಗ್ರಾಹಕರಿಗೆ ಬಿಎಸ್‌ಎನ್‌ಎಲ್ ಟೆಲಿಕಾಂನ 2998ರೂ. ಪ್ರೀಪೇಯ್ಡ್ ಯೋಜನೆ ಅತ್ಯುತ್ತಮ ಆಯ್ಕೆ ಎನಿಸಿದೆ. ಈ ಪ್ಲ್ಯಾನ್ ಒಟ್ಟು 455 ದಿನಗಳ ವ್ಯಾಲಿಡಿಟಿ ಪಡೆದಿದೆ.

ಭಾರತ್ ಸಂಚಾರ್ ನಿಗಮ್ ಲಿಮಿಟೆಡ್ (BSNL) ಇತರೆ ಕೆಲವು ದೀರ್ಘಾವಧಿಯ ಪ್ಲ್ಯಾನ್‌ಗಳ ಆಯ್ಕೆ ಸಹ ಪಡೆದಿದೆ. ಬಹುತೇಕ ಪ್ಲ್ಯಾನ್‌ಗಳು ಹೆಚ್ಚಿನ ಡೇಟಾ ಸೌಲಭ್ಯ ಪಡೆದಿವೆ. ಇದರೊಂದಿಗೆ ಎಸ್‌ಎಮ್‌ಎಸ್ ಸೌಲಭ್ಯ ಹಾಗೂ ಅನಿಯಮಿತ ಕರೆಯ ಸೌಲಭ್ಯ ಸಹ ಲಭ್ಯ. ಹಾಗಾದರೇ ಬಿಎಸ್‌ಎನ್‌ಎಲ್ 2998ರೂ. ಪ್ಲ್ಯಾನ್ ಹಾಗೂ ಇತರೆ ಜನಪ್ರಿಯ ಯೋಜನೆಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.
ಬಿಎಸ್‌ಎನ್‌ಎಲ್ 2998ರೂ. ಪ್ರೀಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು
ಬಿಎಸ್‌ಎನ್‌ಎಲ್ ಟೆಲಿಕಾಂನ 2998ರೂ. ಪ್ರೀಪೇಯ್ಡ್ ಯೋಜನೆ ದೀರ್ಘಾವಧಿಯ ಪ್ಲ್ಯಾನ್ ಆಗಿದ್ದು, ಪ್ರತಿದಿನ 3 GB ಡೇಟಾ ಸೌಲಭ್ಯ ದೊರೆಯುತ್ತದೆ. ಇದರೊಂದಿಗೆ ಪ್ರತಿದಿನ 100 ಎಸ್‌ಎಮ್‌ಎಸ್ ಹಾಗೂ ಅನಿಯಮಿತ ವಾಯಿಸ್ ಕರೆಯ ಸೌಲಭ್ಯಗಳು ಲಭ್ಯವಾಗುತ್ತವೆ. ಇನ್ನು ಈ ಯೋಜನೆಯು ಒಟ್ಟು 365 ದಿನಗಳ ವ್ಯಾಲಿಡಿಟಿ ಅವಧಿಯನ್ನು ಹೊಂದಿದ್ದು, ಹೆಚ್ಚುವರಿಯಾಗಿ 90 ದಿನಗಳ ವ್ಯಾಲಿಡಿಟಿ ಸಹ ಲಭ್ಯವಾಗಲಿದೆ. ಒಟ್ಟಾರೇ 455 ದಿನಗಳ ವ್ಯಾಲಿಡಿಟಿ ದೊರೆಯಲಿದೆ.

ಬಿಎಸ್‌ಎನ್‌ಎಲ್ 1198ರೂ. ರೀಚಾರ್ಜ್ ಪ್ಲ್ಯಾನ್ ಪ್ರಯೋಜನಗಳು
ಬಿಎಸ್‌ಎನ್‌ಎಲ್ ಟೆಲಿಕಾಂನ 1198ರೂ. ರೀಚಾರ್ಜ್ ಯೋಜನೆಯಲ್ಲಿ ಪ್ರತಿ ತಿಂಗಳು 3 GB ಡೇಟಾ, ಇದರೊಂದಿಗೆ ಪ್ರತಿ ತಿಂಗಳು 300 ನಿಮಿಷಗಳ ಉಚಿತ ವಾಯಿಸ್ ಕರೆ ಪ್ರಯೋಜನ ಲಭ್ಯವಿದೆ. ಇನ್ನು ಈ ಯೋಜನೆಯು ಒಟ್ಟು 365 ದಿನಗಳ ವ್ಯಾಲಿಡಿಟಿ ಅವಧಿಯನ್ನು ಹೊಂದಿದೆ. ಪೂರ್ಣ ವ್ಯಾಲಿಡಿಟಿ ಅವಧಿಗೆ 36GB ಡೇಟಾ ಪ್ರಯೋಜನ ಲಭ್ಯವಾಗಲಿದೆ. ಮುಖ್ಯವಾಗಿ ಅಧಿಕ ವ್ಯಾಲಿಡಿಟಿ ನಿರೀಕ್ಷಿಸುವ ಗ್ರಾಹಕರಿಗೆ ಅತ್ಯುತ್ತಮ ಪ್ಲ್ಯಾನ್ ಎನಿಸುತ್ತದೆ.

ಬಿಎಸ್‌ಎನ್‌ಎಲ್ 599ರೂ. ಪ್ರೀಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು
ಬಿಎಸ್‌ಎನ್‌ಎಲ್ ಟೆಲಿಕಾಂನ 599ರೂ. ಪ್ರೀಪೇಯ್ಡ್ ಯೋಜನೆಯಲ್ಲಿ ಪ್ರತಿದಿನ 5 GB ಡೇಟಾ ಸೌಲಭ್ಯ ದೊರೆಯುತ್ತದೆ. ಇದರೊಂದಿಗೆ ಪ್ರತಿದಿನ 100 ಎಸ್‌ಎಮ್‌ಎಸ್ ಹಾಗೂ ಅನಿಯಮಿತ ವಾಯಿಸ್ ಕರೆಯ ಸೌಲಭ್ಯಗಳು ಲಭ್ಯವಾಗುತ್ತವೆ. ಇನ್ನು ಈ ಯೋಜನೆಯು ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿಯನ್ನು ಹೊಂದಿದೆ. ಒಟ್ಟು ಪೂರ್ಣ ಅವಧಿಯ ವ್ಯಾಲಿಡಿಟಿಯಲ್ಲಿ ಒಟ್ಟು 450 GB ಡೇಟಾ ಪ್ರಯೋಜನ ದೊರೆಯುತ್ತದೆ.

ಬಿಎಸ್‌ಎನ್‌ಎಲ್ 997ರೂ. ಪ್ಲ್ಯಾನ್ ಪ್ರಯೋಜನಗಳು
ಬಿಎಸ್‌ಎನ್‌ಎಲ್ ಟೆಲಿಕಾಂನ ಈ ಯೋಜನೆಯು ಒಟ್ಟು 160 ದಿನಗಳ ವ್ಯಾಲಿಡಿಟಿ ಪ್ರಯೋಜನವನ್ನು ಒಳಗೊಂಡಿದೆ. ಈ ಅವಧಿಯಲ್ಲಿ ಪ್ರತಿದಿನ 2GB ಡೇಟಾ ಪ್ರಯೋಜನ ಗ್ರಾಹಕರಿಗೆ ಲಭ್ಯವಾಗಲಿದೆ. ಇದರೊಂದಿಗೆ ಅನಿಯಮಿತ ವಾಯಿಸ್ ಕರೆಯ ಸೌಲಭ್ಯ ಹಾಗೂ ಪ್ರತಿದಿನ 100 ಎಸ್ಎಮ್‌ಎಸ್ ಪ್ರಯೋಜನ ಸಹ ದೊರೆಯುತ್ತದೆ.
ಬಿಎಸ್‌ಎನ್‌ಎಲ್ 769ರೂ. ಪ್ರಿಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು
ಬಿಎಸ್‌ಎನ್‌ಎಲ್ ಟೆಲಿಕಾಂನ 769 ರೂ. ಪ್ಲ್ಯಾನ್, ಒಟ್ಟು 90 ದಿನಗಳ ವ್ಯಾಲಿಡಿಟಿಯನ್ನು ಒಳಗೊಂಡಿದೆ. ಪ್ರತಿದಿನ 2 GB ಡೇಟಾ ಸೌಲಭ್ಯ ದೊರೆಯುತ್ತದೆ. ಇದರೊಂದಿಗೆ ಪ್ರತಿದಿನ 100 ಎಸ್‌ಎಮ್‌ಎಸ್ ಹಾಗೂ ಅನಿಯಮಿತ ವಾಯಿಸ್ ಕರೆಯ ಸೌಲಭ್ಯಗಳು ಲಭ್ಯವಾಗುತ್ತವೆ.


Click it and Unblock the Notifications








