BSNLನ 397ರೂ. ಪ್ಲ್ಯಾನ್ ಪ್ರಯೋಜನಗಳೆನು?..ದಂಗಾದ ಖಾಸಗಿ ಟೆಲಿಕಾಂ!
ಜಿಯೋ, ಏರ್‌ಟೆಲ್ ಮತ್ತು ವಿ ಟೆಲಿಕಾಂ (ವೊಡಾಫೋನ್ ಐಡಿಯಾ) ತಮ್ಮ ಪ್ರಿಪೇಯ್ಡ್ ಯೋಜನೆಗಳ ದರ ಹೆಚ್ಚಳ ಮಾಡಿವೆ. ಸರ್ಕಾರಿ ಸ್ವಾಮ್ಯದ ಬಿಎಸ್‌ಎನ್‌ಎಲ್ ಟೆಲಿಕಾಂ ಖಾಸಗಿ ಟೆಲಿಕಾಂಗಳಿಗೆ ಸೆಡ್ಡು ಹೊಡೆಯುವಂತಹ ಯೋಜನೆಗಳನ್ನು ನೀಡುತ್ತ ಮುನ್ನಡೆದಿದೆ. ಬಿಎಸ್‌ಎನ್‌ಎಲ್‌ನ ಕೆಲವು ಯೋಜನೆಗಳು ಅಧಿಕ ಡೇಟಾ ಮತ್ತು ಅನಿಯಮಿತ ವಾಯಿಸ್ ಕರೆಯ ಪ್ರಯೋಜನ ಜೊತೆಗೆ ಆಕರ್ಷಕ ವ್ಯಾಲಿಡಿಟಿ ಒಳಗೊಂಡಿವೆ.

ಹೌದು, ಬಿಎಸ್‌ಎನ್‌ಎಲ್ ಟೆಲಿಕಾಂ ಭಿನ್ನ ಶ್ರೇಣಿಯ ಪ್ರಿಪೇಯ್ಡ್ ಯೋಜನೆಗಳ ಆಯ್ಕೆ ಪಟ್ಟಿ ಹೊಂದಿದೆ. ಆ ಪೈಕಿ 397ರೂ. ಪ್ರಿಪೇಯ್ಡ್ ಯೋಜನೆಯು ಆಕರ್ಷಕ ಎನಿಸಿದ್ದು, ಗ್ರಾಹಕರನ್ನು ಸೆಳೆದಿದೆ. ಈ ಯೋಜನೆಯಲ್ಲಿ ದೈನಂದಿನ ಡೇಟಾ, ಎಸ್‌ಎಮ್‌ಎಸ್ ಸೌಲಭ್ಯ, ವಾಯಿಸ್ ಕರೆಯ ಪ್ರಯೋಜನ ದೊರೆಯುತ್ತದೆ. ಈ ಯೋಜನೆ ರೀಚಾರ್ಜ್ ಮಾಡಿದರೇ ಭರ್ಜರಿ ವ್ಯಾಲಿಡಿಟಿ ಲಭ್ಯವಾಗಲಿದೆ. ಹಾಗಾದರೇ ಬಿಎಸ್‌ಎನ್‌ಎಲ್‌ನ 397ರೂ. ಪ್ಲ್ಯಾನ್ ಪ್ರಯೋಜನಗಳೆನು ಎಂಬುದನ್ನು ಮುಂದೆ ತಿಳಿಯೋಣ ಬನ್ನಿರಿ.

ಬಿಎಸ್‌ಎನ್‌ಎಲ್ 397ರೂ. ಪ್ರೀಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು
ಬಿಎಸ್‌ಎನ್‌ಎಲ್ 397ರೂ. ಪ್ರೀಪೇಯ್ಡ್ ಯೋಜನೆಯಲ್ಲಿ ಪ್ರತಿದಿನ 2GB ಡೇಟಾ ಸೌಲಭ್ಯ ದೊರೆಯುತ್ತದೆ. ಇದರೊಂದಿಗೆ ಪ್ರತಿದಿನ 100 ಎಸ್‌ಎಮ್‌ಎಸ್ ಹಾಗೂ ಪ್ರತಿದಿನ ಅನಿಯಮಿತ ವಾಯಿಸ್ ಕರೆಯ ಸೌಲಭ್ಯಗಳು ಲಭ್ಯವಾಗುತ್ತವೆ. ಇನ್ನು ಈ ಯೋಜನೆಯು ಒಟ್ಟು 300 ದಿನಗಳ ವ್ಯಾಲಿಡಿಟಿ ಅವಧಿಯನ್ನು ಹೊಂದಿದ್ದು, ಆದರೆ ಡೇಟಾ, ಎಸ್‌ಎಮ್‌ಎಸ್, ಉಚಿತ ಕಾಲರ್ ಟ್ಯೂನ್ ಪ್ರಯೋಜನಗಳು ಆರಂಭಿಕ 60 ದಿನಗಳು ಮಾತ್ರ ಲಭ್ಯವಾಗಲಿವೆ.

ಬಿಎಸ್‌ಎನ್‌ಎಲ್ 499ರೂ. ಪ್ರೀಪೇಯ್ಡ್ ಪ್ಲ್ಯಾನ್
ಬಿಎಸ್‌ಎನ್‌ಎಲ್ 499ರೂ. ಪ್ರೀಪೇಯ್ಡ್ ಯೋಜನೆಯಲ್ಲಿ ಪ್ರತಿದಿನ 2GB ಡೇಟಾ ಸೌಲಭ್ಯ ದೊರೆಯುತ್ತದೆ. ಇದರೊಂದಿಗೆ ಪ್ರತಿದಿನ 100 ಎಸ್‌ಎಮ್‌ಎಸ್ ಹಾಗೂ ಪ್ರತಿದಿನ ಅನಿಯಮಿತ ವಾಯಿಸ್ ಕರೆಯ ಸೌಲಭ್ಯಗಳು ಲಭ್ಯವಾಗುತ್ತವೆ. ಇನ್ನು ಈ ಯೋಜನೆಯು ಒಟ್ಟು 90 ದಿನಗಳ ವ್ಯಾಲಿಡಿಟಿ ಅವಧಿಯನ್ನು ಹೊಂದಿದೆ. ಹೆಚ್ಚುವರಿಯಾಗಿ ಬಿಎಸ್‌ಎನ್‌ಎಲ್ ಟ್ಯೂನ್ ಹಾಗೂ ಜಿಂಗ್ ಆಪ್ ಲಭ್ಯವಾಗಲಿದೆ.

ಬಿಎಸ್‌ಎನ್‌ಎಲ್ 997ರೂ. ಪ್ರೀಪೇಯ್ಡ್ ಪ್ಲ್ಯಾನ್
ಬಿಎಸ್‌ಎನ್‌ಎಲ್ ಈ ಯೋಜನೆಯಲ್ಲಿ ಪ್ರತಿದಿನ 3GB ಡೇಟಾ ಸೌಲಭ್ಯ ದೊರೆಯುತ್ತದೆ. ಇದರೊಂದಿಗೆ ಪ್ರತಿದಿನ 100 ಎಸ್‌ಎಮ್‌ಎಸ್ ಹಾಗೂ ಪ್ರತಿದಿನ ಅನಿಯಮಿತ ವಾಯಿಸ್ ಕರೆಯ ಸೌಲಭ್ಯಗಳು ಲಭ್ಯವಾಗುತ್ತವೆ. ಇನ್ನು ಈ ಯೋಜನೆಯು ಒಟ್ಟು 180 ದಿನಗಳ ವ್ಯಾಲಿಡಿಟಿ ಅವಧಿಯನ್ನು ಹೊಂದಿದೆ. ಒಟ್ಟು ಪೂರ್ಣ ಅವಧಿಯ ವ್ಯಾಲಿಡಿಟಿಯಲ್ಲಿ ಒಟ್ಟು 540GB ಡೇಟಾ ಪ್ರಯೋಜನ ದೊರೆಯುತ್ತದೆ.

ಬಿಎಸ್‌ಎನ್‌ಎಲ್ 599ರೂ. ಪ್ರೀಪೇಯ್ಡ್ ಪ್ಲ್ಯಾನ್
ಬಿಎಸ್‌ಎನ್‌ಎಲ್ ಈ ಯೋಜನೆಯಲ್ಲಿ ಪ್ರತಿದಿನ 5GB ಡೇಟಾ ಸೌಲಭ್ಯ ದೊರೆಯುತ್ತದೆ. ಇದರೊಂದಿಗೆ ಪ್ರತಿದಿನ 100 ಎಸ್‌ಎಮ್‌ಎಸ್ ಹಾಗೂ ಪ್ರತಿದಿನ 250 ನಿಮಿಷಗಳ ಕರೆಯ ಸೌಲಭ್ಯಗಳು ಲಭ್ಯವಾಗುತ್ತವೆ. ಇನ್ನು ಈ ಯೋಜನೆಯು ಒಟ್ಟು 90 ದಿನಗಳ ವ್ಯಾಲಿಡಿಟಿ ಅವಧಿಯನ್ನು ಹೊಂದಿದೆ. ಒಟ್ಟು ಪೂರ್ಣ ಅವಧಿಯ ವ್ಯಾಲಿಡಿಟಿಯಲ್ಲಿ ಒಟ್ಟು 450GB ಡೇಟಾ ಪ್ರಯೋಜನ ದೊರೆಯುತ್ತದೆ.

ಬಿಎಸ್‌ಎನ್‌ಎಲ್ 666ರೂ. ಪ್ರೀಪೇಯ್ಡ್ ಪ್ಲ್ಯಾನ್
ಬಿಎಸ್‌ಎನ್‌ಎಲ್ ಈ ಯೋಜನೆಯಲ್ಲಿ ಪ್ರತಿದಿನ 2GB ಡೇಟಾ ಸೌಲಭ್ಯ ದೊರೆಯುತ್ತದೆ. ಇದರೊಂದಿಗೆ ಪ್ರತಿದಿನ 100 ಎಸ್‌ಎಮ್‌ಎಸ್ ಹಾಗೂ ಪ್ರತಿದಿನ ಅನಿಯಮಿತ ವಾಯಿಸ್ ಕರೆಯ ಸೌಲಭ್ಯಗಳು ಲಭ್ಯವಾಗುತ್ತವೆ. ಇನ್ನು ಈ ಯೋಜನೆಯು ಒಟ್ಟು 120 ದಿನಗಳ ವ್ಯಾಲಿಡಿಟಿ ಅವಧಿಯನ್ನು ಹೊಂದಿದೆ. ಒಟ್ಟು ಪೂರ್ಣ ಅವಧಿಯ ವ್ಯಾಲಿಡಿಟಿಯಲ್ಲಿ ಒಟ್ಟು 240GB ಡೇಟಾ ಪ್ರಯೋಜನ ದೊರೆಯುತ್ತದೆ.

ಬಿಎಸ್‌ಎನ್‌ಎಲ್ 1498ರೂ. ಪ್ರೀಪೇಯ್ಡ್ ಪ್ಲ್ಯಾನ್
ಬಿಎಸ್‌ಎನ್‌ಎಲ್ ಈ ಯೋಜನೆಯಲ್ಲಿ ಪ್ರತಿದಿನ 2GB ಡೇಟಾ ಸೌಲಭ್ಯ ದೊರೆಯುತ್ತದೆ. ಇನ್ನು ಈ ಯೋಜನೆಯು ಒಟ್ಟು 365 ದಿನಗಳ ವ್ಯಾಲಿಡಿಟಿ ಅವಧಿಯನ್ನು ಹೊಂದಿದೆ. ಒಟ್ಟು ಪೂರ್ಣ ಅವಧಿಯ ವ್ಯಾಲಿಡಿಟಿಯಲ್ಲಿ ಒಟ್ಟು 730GB ಡೇಟಾ ಪ್ರಯೋಜನ ದೊರೆಯುತ್ತದೆ. ಈ ಯೋಜನೆಯಲ್ಲಿ ಯಾವುದೇ ವಾಯಿಸ್ ಕರೆ ಹಾಗೂ ಎಸ್‌ಎಮ್‌ಎಸ್ ಸೌಲಭ್ಯ ಲಭ್ಯವಾಗುವುದಿಲ್ಲ.


Click it and Unblock the Notifications








