ಬಿಎಸ್‌ಎನ್‌ಎಲ್‌ನ ಈ ಅಗ್ಗದ ಪ್ಲ್ಯಾನ್ ಫಸ್ಟ್‌ಟೈಮ್ ರೀಚಾರ್ಜ್‌ಗೆ ಬೆಸ್ಟ್!
ದೇಶದ ಟೆಲಿಕಾಂ ಕ್ಷೇತ್ರದಲ್ಲಿ ಸಂಸ್ಥೆಗಳ ನಡುವೆ ಸ್ಪರ್ಧಾತ್ಮಕ ವಾತಾವರಣ ಇದ್ದು, ಆಕರ್ಷಕ ಯೋಜನೆಗಳ ಮೂಲಕ ಚಂದಾದಾರರ ಸಂಖ್ಯೆ ಹೆಚ್ಚಿಸಿಕೊಳ್ಳಲು ಟೆಲಿಕಾಂ ಸಂಸ್ಥೆಗಳು ಯತ್ನ ನಡೆಸುತ್ತ ಸಾಗಿವೆ. ಇದಕ್ಕೆ ಸರ್ಕಾರಿ ಸ್ವಾಮ್ಯದ ಬಿಎಸ್‌ಎನ್‌ಎಲ್ ಟೆಲಿಕಾಂ ಸಹ ಹೊರತಾಗಿಲ್ಲ. ಬಿಎಸ್‌ಎನ್‌ಎಲ್ ಖಾಸಗಿ ಟೆಲಿಕಾಂಗಳಿಗೆ ಟಾಂಗ್ ನೀಡುವಂತಹ ಹಲವು ಪ್ರೀಪೇಯ್ಡ್ ಯೋಜನಗಳನ್ನು ಪರಿಚಯಿಸಿ ಗ್ರಾಹಕರ ಗಮನ ಸೆಳೆದಿದೆ. ಅದರಲ್ಲಿಯೂ ಅಗ್ಗದ ದರದಲ್ಲಿ ಫಸ್ಟ್ ರೀಚಾರ್ಜ್ ಆಯ್ಕೆಗಳನ್ನು ಹೊಂದಿದೆ.

ಹೌದು, ಬಿಎಸ್‌ಎನ್‌ಎಲ್ ಈಗ ತನ್ನ ಪ್ರೀಪೇಯ್ಡ್ ಚಂದಾದಾರರಿಗಾಗಿ ಭಿನ್ನ ಫಸ್ಟ್ ರೀಚಾರ್ಜ್ (FRC) ಯೋಜನೆಗಳನ್ನು ಪರಿಚಯಿಸಿದೆ. ಮೊದಲ ಬಾರಿ ರೀಚಾರ್ಜ್ ಮಾಡಿಸಿಕೊಳ್ಳುವ ಹೊಸ ಪ್ರೀಪೇಯ್ಡ್ ಗ್ರಾಹಕರಿಗೆ ಮಾತ್ರ ಈ FRC ಪ್ಲ್ಯಾನ್‌ಗಳು ಅನ್ವಯಿಸುತ್ತದೆ. ಆ ಪೈಕಿ FRC 47ರೂ. ಪ್ಲ್ಯಾನ್ ಸಂಸ್ಥೆಯ ಅಗ್ಗದ ಫಸ್ಟ್ ರೀಚಾರ್ಜ್ ಯೋಜನೆಯಾಗಿದೆ. ಈ ಯೋಜನೆಯು 28 ದಿನಗಳ ವ್ಯಾಲಿಡಿಟಿ ಸೌಲಭ್ಯವನ್ನು ಪಡೆದಿದ್ದು, ಜೊತೆಗೆ ಆಕರ್ಷಕ ಡೇಟಾ, ಎಸ್‌ಎಮ್‌ಎಸ್ ಪ್ರಯೋಜನಗಳನ್ನು ಪಡೆದಿದೆ. ಈ ಯೋಜನೆಯ ಇತರೆ ಆಕರ್ಷಕ ಇನ್ನಷ್ಟು ಮಾಹಿತಿಯ ಬಗ್ಗೆ ಮುಂದೆ ನೋಡೋಣ ಬನ್ನಿರಿ.

ಬಿಎಸ್‌ಎನ್‌ಎಲ್ 47ರೂ. ಯೋಜನೆ
ಬಿಎಸ್‌ಎನ್‌ಎಲ್ ಟೆಲಿಕಾಂ FRC 47ರೂ. ಪ್ಲ್ಯಾನ್ ಒಟ್ಟು 28 ದಿನಗಳ ಮಾನ್ಯತೆ ಪಡೆದಿದೆ. ಈ ಯೋಜನೆಯಲ್ಲಿ ಅನಿಯಮಿತ ವಾಯಿಸ್ ಕರೆ ಸೌಲಭ್ಯಗಳು ಲಭ್ಯವಿದೆ. ಹಾಗೆಯೇ 14GB ಡೇಟಾ ಮತ್ತು ಪ್ರತಿದಿನ 100 ಎಸ್‌ಎಂಎಸ್ ಪ್ರಯೋಜನಗಳೊಂದಿಗೆ ಬರುತ್ತದೆ. ಎಂಟಿಎನ್ಎಲ್ ರೋಮಿಂಗ್ ಪ್ರದೇಶಗಳಾದ ಮುಂಬೈ ಮತ್ತು ದೆಹಲಿ ಸೇರಿದಂತೆ ರಾಷ್ಟ್ರೀಯ ರೋಮಿಂಗ್‌ನೊಂದಿಗೆ ಬರುತ್ತದೆ. ಇನ್ನು ಬಿಎಸ್‌ಎನ್‌ಎಲ್ ಆಕರ್ಷಕ ಪ್ರೈಸ್‌ನಲ್ಲಿ ಪೋಸ್ಟ್‌ಪೇಯ್ಡ್ ಯೋಜನೆಗಳ ಆಯ್ಕೆಯನ್ನು ಹೊಂದಿದೆ ಆ ಬಗ್ಗೆ ತಿಳಿಯಲು ಮುಂದೆ ಓದಿರಿ.

ಬಿಎಸ್‌ಎನ್‌ಎಲ್ 199ರೂ. ಪೋಸ್ಟ್‌ಪೇಯ್ಡ್ ಪ್ಲ್ಯಾನ್
ಬಿಎಸ್‌ಎನ್‌ಎಲ್‌ನ ಈ ಯೋಜನೆಯು 300 ನಿಮಿಷಗಳ ಆಫ್-ನೆಟ್ ವಾಯ್ಸ್ ಕರೆಗಳೊಂದಿಗೆ ಬಿಎಸ್ಎನ್ಎಲ್ ಅನಿಯಮಿತ ಆನ್-ನೆಟ್ ವಾಯ್ಸ್ ಕರೆ ನೀಡುತ್ತಿದೆ. ಹಾಗೆಯೇ ಈ ಪೋಸ್ಟ್‌ಪೇಯ್ಡ್ ಪ್ಲ್ಯಾನ್ 75GB ವರೆಗೆ ಡೇಟಾ ರೋಲ್‌ಓವರ್‌ನೊಂದಿಗೆ 25GB ಹೈಸ್ಪೀಡ್ ಡೇಟಾವನ್ನು ನೀಡುತ್ತದೆ.

ಬಿಎಸ್‌ಎನ್‌ಎಲ್ 399ರೂ. ಪೋಸ್ಟ್‌ಪೇಯ್ಡ್ ಪ್ಲ್ಯಾನ್
ಬಿಎಸ್‌ಎನ್‌ಎಲ್‌ನ 399ರೂ. ಪೋಸ್ಟ್‌ಪೇಯ್ಡ್ ಯೋಜನೆಯಲ್ಲಿ ಗ್ರಾಹಕರಿಗೆ ಪ್ರತಿ ತಿಂಗಳು 70GB ಡೇಟಾ ಪ್ರಯೋಜನ ಸಿಗಲಿದೆ. ಇದರೊಂದಿಗೆ 210GB ವರೆಗೂ ಡೇಟಾ ರೋಲ್ ಓವರ್ ಸೌಲಭ್ಯ ಸಹ ದೊರೆಯಲಿದೆ. ಹಾಗೆಯೇ ಯಾವುದೇ ನೆಟ್‌ವರ್ಕ್‌ಗೂ ಅನಿಯಮಿತ ವಾಯಿಸ್ ಕರೆ ಸೌಲಭ್ಯ, ಪ್ರತಿದಿನ 100ಎಸ್‌ಎಮ್‌ಎಸ್‌ಗಳ ಪ್ರಯೋಜನಗಳನ್ನು ಈ ಯೋಜನೆಯು ಒಳಗೊಂಡಿದೆ.

ಬಿಎಸ್‌ಎನ್‌ಎಲ್ 798ರೂ. ಪೋಸ್ಟ್‌ಪೇಯ್ಡ್ ಪ್ಲ್ಯಾನ್
ಈ ಪೋಸ್ಟ್‌ಪೇಯ್ಡ್ ಯೋಜನೆಯು 50GB ಹೈಸ್ಪೀಡ್ ಡೇಟಾವನ್ನು ಡಾಟಾ ರೋಲ್‌ಓವರ್‌ನೊಂದಿಗೆ 150GB ವರೆಗೆ ಅನುಮತಿಸುತ್ತದೆ. ಡೇಟಾ ಮಿತಿಯನ್ನು ತಲುಪಿದ ನಂತರ, ಬಳಕೆದಾರರಿಗೆ ಪ್ರತಿ GBಗೆ 10.24 ರೂ.ಶುಲ್ಕ ವಿಧಿಸುತ್ತದೆ. ಈ ಪೋಸ್ಟ್‌ಪೇಯ್ಡ್ ಯೋಜನೆಯು ಎಂಟಿಎನ್‌ಎಲ್ ನೆಟ್‌ವರ್ಕ್‌ನಲ್ಲಿ ಮುಂಬೈ ಮತ್ತು ದೆಹಲಿ ಸೇರಿದಂತೆ ದಿನಕ್ಕೆ 100 ಎಸ್‌ಎಂಎಸ್ ನೀಡುತ್ತದೆ.


Click it and Unblock the Notifications








