BSNLನ 499ರೂ. ಪ್ಲ್ಯಾನ್ ರೀಚಾರ್ಜ್‌ಗೆ ಉತ್ತಮವೇ?..ಪ್ರಯೋಜನಗಳೆನು?
ದೇಶದ ಟೆಲಿಕಾಂ ಕ್ಷೇತ್ರದಲ್ಲಿ ಬಿಎಸ್‌ಎನ್‌ಎಲ್ ಸೇರಿದಂತೆ ಜಿಯೋ, ವೊಡಾಫೋನ್-ಐಡಿಯಾ ಮತ್ತು ಏರ್‌ಟೆಲ್ ಟೆಲಿಕಾಂಗಳು ಆಕರ್ಷಕ ಪ್ಲ್ಯಾನ್ ಪರಿಚಯಿಸಿವೆ. ಖಾಸಗಿ ಟೆಲಿಕಾಂಗಳಿಗೆ ಪೂಪೋಟಿ ನೀಡುವಂತಹ ಕೆಲವು ಯೋಜನೆಗಳನ್ನು ಸರ್ಕಾರಿ ಸ್ವಾಮ್ಯದ ಬಿಎಸ್‌ಎನ್‌ಎಲ್ ಸಂಸ್ಥೆ ನೀಡಿದೆ. ಅವುಗಳು ಅಧಿಕ ವ್ಯಾಲಿಡಿಟಿ, ವಾಯಿಸ್ ಕರೆ ಹಾಗೂ ಡೇಟಾ ಪ್ರಯೋಜನಗಳನ್ನು ಒಳಗೊಂಡಿದೆ. ಬಜೆಟ್ ದರದಲ್ಲಿ ಬಿಎಸ್‌ಎನ್‌ಎಲ್ 499ರೂ. ಪ್ರೀಪೇಯ್ಡ್ ಪ್ಲ್ಯಾನ್ ಗ್ರಾಹಕರ ಗಮನ ಸೆಳೆದಿದ್ದು, ಈ ಯೋಜನೆ ರೀಚಾರ್ಜ್ ಸೂಕ್ತವೇ?

ಹೌದು, ಬಿಎಸ್‌ಎನ್‌ಎಲ್ ಟೆಲಿಕಾಂ ಕೆಲವು ಯೋಜನೆಗಳು ಆಕರ್ಷಕ ಅನಿಸಿವೆ. ಆ ಪೈಕಿ ಬಿಎಸ್‌ಎನ್‌ಎಲ್ 499ರೂ. ಪ್ರೀಪೇಯ್ಡ್ ಪ್ಲ್ಯಾನ್ ಸಹ ಒಂದಾಗಿದೆ. ಅಧಿಕ ಡೇಟಾ ಬಯಸುವ ಚಂದಾದಾರರಿಗೆ ಈ ಯೋಜನೆಯು ನೆರವಾಗಲಿದೆ. ಈ ಪ್ಲ್ಯಾನಿನಲ್ಲಿ ಚಂದಾದಾರರಿಗೆ ಪ್ರತಿದಿನ 2GB ಡೇಟಾ ಪ್ರಯೋಜನ ದೊರೆಯಲಿದೆ ಹಾಗೂ ಅಧಿಕ ವ್ಯಾಲಿಡಿಟಿಯ ಸೌಲಭ್ಯವು ಲಭ್ಯವಾಗಲಿದೆ. ಹಾಗಾದರೇ ಬಿಎಸ್‌ಎನ್‌ಎಲ್‌ನ ಈ ಯೋಜನೆ ಇತರೆ ಪ್ರಯೋಜನಗಳೇನು?..ರೀಚಾರ್ಜ್ ಮಾಡಿಸಲು ಯೋಗ್ಯವೇ?

ಬಿಎಸ್‌ಎನ್‌ಎಲ್ 499ರೂ. ಪ್ರಿಪೇಯ್ಡ್ ಪ್ಲ್ಯಾನ್
ಬಿಎಸ್‌ಎನ್‌ಎಲ್‌ನ ಈ SVT 499ರೂ. ಪ್ಲ್ಯಾನ್ ದೀರ್ಘಾವಧಿಯ ಯೋಜನೆ ಆಗಿದ್ದು, ಒಟ್ಟು 90 ದಿನಗಳ ವ್ಯಾಲಿಡಿಟಿಯನ್ನು ಒಳಗೊಂಡಿದೆ. ಈ ಅವಧಿಯಲ್ಲಿ ಪ್ರತಿದಿನ 2GB ಡೇಟಾ ಪ್ರಯೋಜನ ಲಭ್ಯವಿದ್ದು, ಒಟ್ಟು ಪೂರ್ಣ ಅವಧಿಗೆ 180GB ಡೇಟಾ ಸಿಗಲಿದೆ. ಇದರೊಂದಿಗೆ ಅನಿಯಮಿತ ವಾಯಿಸ್ ಕರೆಗಳ ಸೌಲಭ್ಯ ಸಹ ದೊರೆಯಲಿದೆ. ಹಾಗೆಯೇ ಡೈಲಿ 100 ಎಸ್‌ಎಮ್‌ಎಸ್ ಸಹ ಸಿಗುತ್ತದೆ. ಹೆಚ್ಚುವರಿಯಾಗಿ ಬಿಎಸ್‌ಎನ್‌ಎಲ್ ಟ್ಯೂನ್ ಮತ್ತು Zing ಪ್ರಯೋಜನ ಲಭ್ಯ.

ಬಿಎಸ್‌ಎನ್‌ಎಲ್ 599ರೂ. ಪ್ರೀಪೇಯ್ಡ್ ಪ್ಲ್ಯಾನ್
ಬಿಎಸ್‌ಎನ್‌ಎಲ್ ಈ ಯೋಜನೆಯಲ್ಲಿ ಪ್ರತಿದಿನ 5GB ಡೇಟಾ ಸೌಲಭ್ಯ ದೊರೆಯುತ್ತದೆ. ಇದರೊಂದಿಗೆ ಪ್ರತಿದಿನ 100 ಎಸ್‌ಎಮ್‌ಎಸ್ ಹಾಗೂ ಪ್ರತಿದಿನ 250 ನಿಮಿಷಗಳ ಕರೆಯ ಸೌಲಭ್ಯಗಳು ಲಭ್ಯವಾಗುತ್ತವೆ. ಇನ್ನು ಈ ಯೋಜನೆಯು ಒಟ್ಟು 90 ದಿನಗಳ ವ್ಯಾಲಿಡಿಟಿ ಅವಧಿಯನ್ನು ಹೊಂದಿದೆ. ಒಟ್ಟು ಪೂರ್ಣ ಅವಧಿಯ ವ್ಯಾಲಿಡಿಟಿಯಲ್ಲಿ ಒಟ್ಟು 450GB ಡೇಟಾ ಪ್ರಯೋಜನ ದೊರೆಯುತ್ತದೆ.

ಬಿಎಸ್‌ಎನ್‌ಎಲ್ 2399ರೂ. ಪ್ಲ್ಯಾನ್
ಬಿಎಸ್‌ಎನ್‌ಎಲ್‌ನ ಈ ಪ್ಲ್ಯಾನ್ ಒಟ್ಟು 600 ದಿನಗಳ ವ್ಯಾಲಿಡಿಟಿ ಅವಧಿಯನ್ನು ಒಳಗೊಂಡಿದ್ದು, ಈ ಅವಧಿಯಲ್ಲಿ ಪ್ರತಿದಿನ 250 FUP ನಿಮಿಷಗಳ ಮಿತಿಯಲ್ಲಿ ಉಚಿತ ವಾಯಿಸ್ ಕರೆಗಳ ಪ್ರಯೋಜನವನ್ನು ಒದಗಿಸಲಿದೆ. ಇದರೊಂದಿಗೆ ಪ್ರತಿದಿನ 100 ಎಸ್‌ಎಮ್‌ಎಸ್‌ಗಳ ಸೌಲಭ್ಯ ದೊರೆಯಲಿದ್ದು, 60 ದಿನಗಳಿಗೆ ಬಿಎಸ್‌ಎನ್‌ಎಲ್ ಟ್ಯೂನ್ ಸೌಲಭ್ಯವು ಸಿಗಲಿದೆ. ಆದರೆ ಯಾವುದೇ ಡೇಟಾ ಪ್ರಯೋಜನ ಲಭ್ಯ ಇರುವುದಿಲ್ಲ. ಡೇಟಾ ಅಗತ್ಯ ಇರದ ಹಾಗೂ ವಾಯಿಸ್ ಕರೆ ಮತ್ತು ಹೆಚ್ಚಿನ ವ್ಯಾಲಿಡಿಟಿ ಬಯಸುವ ಗ್ರಾಹಕರಿಗೆ ಈ ಪ್ಲ್ಯಾನ್ ಉತ್ತಮ ಆಯ್ಕೆ ಆಗಿದೆ.

ಬಿಎಸ್‌ಎನ್‌ಎಲ್ 1212ರೂ. ಪ್ರೀಪೇಯ್ಡ್ ಪ್ಲ್ಯಾನ್
ಬಿಎಸ್‌ಎನ್‌ಎಲ್ 1212ರೂ. ಪ್ರೀಪೇಯ್ಡ್ ಪ್ಲ್ಯಾನ್ ಡೇಟಾ ಎಸ್‌ಟಿವಿ ಡೇಟಾ ಯೋಜನೆಯು ಒಟ್ಟು 365 ದಿನಗಳ ವ್ಯಾಲಿಡಿಟಿ ಅವಧಿಯನ್ನು ಹೊಂದಿದೆ. ಈ ಪ್ಲ್ಯಾನಿನಲ್ಲಿ ಪೂರ್ಣ ವ್ಯಾಲಿಡಿಟಿ ಅವಧಿಗೆ ಒಟ್ಟು 500GB ಡೇಟಾ ಪ್ರಯೋಜನೆ ದೊರೆಯುತ್ತದೆ. ಈ ಯೋಜನೆಯಲ್ಲಿ ಗ್ರಾಹಕರಿಗೆ ಯಾವುದೇ ವಾಯಿಸ್ ಕರೆ ಹಾಗೂ ಎಸ್‌ಎಮ್‌ಎಸ್ ಸೌಲಭ್ಯಗಳು ದೊರೆಯುವುದಿಲ್ಲ. ಇದೊಂದು ಡೇಟಾ ಪ್ಲ್ಯಾನ್ ಆಗಿದೆ.


Click it and Unblock the Notifications



