BSNLನ 499ರೂ. ಪ್ರೀಪೇಯ್ಡ್ ಪ್ಲ್ಯಾನ್ ರೀಚಾರ್ಜ್‌ಗೆ ಯೋಗ್ಯವೇ?
ಭಾರತೀಯ ಟೆಲಿಕಾಂ ವಲಯದಲ್ಲಿ ಬಿಎಸ್‌ಎನ್‌ಎಲ್ ಸೇರಿದಂತೆ ಖಾಸಗಿ ಟೆಲಿಕಾಂಗಳು ಗ್ರಾಹಕರನ್ನು ಆಕರ್ಷಿಸಲು ಹಲವು ನೂತನ ಪ್ಲ್ಯಾನ್ ಗಳನ್ನು ಪರಿಚಯಿಸುತ್ತ ಸಾಗಿವೆ. ಇದರೊಂದಿಗೆ ಕೆಲವು ಜನಪ್ರಿಯ ಯೋಜನೆಗಳಲ್ಲಿ ಹೆಚ್ಚುವರಿ ಪ್ರಯೋಜನಗಳನ್ನು ಸೇರಿಸುತ್ತಿವೆ. ಸರ್ಕಾರಿ ಸ್ವಾಮ್ಯದ ಬಿಎಸ್‌ಎನ್‌ಎಲ್ ಸಂಸ್ಥೆಯು ಸಹ ಅಧಿಕ ವ್ಯಾಲಿಡಿಟಿ ಹಾಗೂ ಡೇಟಾ ಪ್ರಯೋಜನಗಳ ಪ್ಲ್ಯಾನ್‌ಗಳನ್ನು ಹೊಂದಿದ್ದು, ಅವುಗಳಲ್ಲಿ ಕೆಲವು ಹೆಚ್ಚು ಗಮನ ಸೆಳೆದಿವೆ.

ಹೌದು, ಬಿಎಸ್‌ಎನ್‌ಎಲ್ ಟೆಲಿಕಾಂ ಕೆಲವು ಯೋಜನೆಗಳು ಆಕರ್ಷಕ ಅನಿಸಿವೆ. ಆ ಪೈಕಿ ಬಿಎಸ್‌ಎನ್‌ಎಲ್ 499ರೂ. ಪ್ರೀಪೇಯ್ಡ್ ಪ್ಲ್ಯಾನ್ ಸಹ ಒಂದಾಗಿದೆ. ಅಧಿಕ ಡೇಟಾ ಬಯಸುವ ಚಂದಾದಾರರಿಗೆ ಈ ಯೋಜನೆಯು ನೆರವಾಗಲಿದೆ. ಇನ್ನು ಕಂಪನಿಯು ಇತ್ತೀಚಿಗಷ್ಟೆ ಈ ಪ್ಲ್ಯಾನ್ ಅನ್ನು ಪರಿಷ್ಕರಣ ಮಾಡಿದ್ದು, ಹೆಚ್ಚುವರಿ ಸೌಲಭ್ಯಗಳನ್ನು ಸೇರ್ಪಡೆ ಮಾಡಿದೆ. ವ್ಯಾಲಿಡಿಟಿಯನ್ನು ಅಧಿಕ ಗೊಳಿಸಿದೆ. ಹಾಗಾದರೇ ಬಿಎಸ್‌ಎನ್‌ಎಲ್‌ನ ಈ ಯೋಜನೆ ಇತರೆ ಪ್ರಯೋಜನಗಳೇನು?..ರೀಚಾರ್ಜ್ ಮಾಡಿಸಲು ಯೋಗ್ಯವೇ?

ಬಿಎಸ್‌ಎನ್‌ಎಲ್ 499ರೂ.ಯೋಜನೆ
ಬಿಎಸ್‌ಎನ್‌ಎಲ್‌ನ ಈ SVT 499ರೂ. ಪ್ಲ್ಯಾನ್ ದೀರ್ಘಾವಧಿಯ ಯೋಜನೆ ಆಗಿದ್ದು, ಒಟ್ಟು 90 ದಿನಗಳ ವ್ಯಾಲಿಡಿಟಿಯನ್ನು ಒಳಗೊಂಡಿದೆ. ಈ ಅವಧಿಯಲ್ಲಿ ಪ್ರತಿದಿನ 1GB ಡೇಟಾ ಪ್ರಯೋಜನ ಲಭ್ಯ. ಇದರೊಂದಿಗೆ ಅನಿಯಮಿತ ವಾಯಿಸ್ ಕರೆಗಳ ಸೌಲಭ್ಯ ಸಹ ದೊರೆಯಲಿದೆ. ಹಾಗೆಯೇ ಡೈಲಿ 100 ಎಸ್‌ಎಮ್‌ಎಸ್ ಸಹ ಸಿಗುತ್ತದೆ. ಹೆಚ್ಚುವರಿಯಾಗಿ ಬಿಎಸ್‌ಎನ್‌ಎಲ್ ಟ್ಯೂನ್ ಮತ್ತು Zing ಪ್ರಯೋಜನ ಲಭ್ಯ. ಆದರೆ ಪರಿಷ್ಕರಣೆಯಿಂದಾಗಿ ಈ ಯೋಜನೆಯಲ್ಲಿ ಬಳಕೆದಾರರಿಗೆ ಪ್ರತಿದಿನ 1GB ಬದಲಾಗಿ 2GB ಡೇಟಾಗೆ ಲಭ್ಯವಾಗಲಿದೆ. ಅಂದರೇ ಪೂರ್ಣ ವ್ಯಾಲಿಡಿಟಿ ಅವಧಿಗೆ ಒಟ್ಟು 90GB ಡೇಟಾಗೆ ಬದಲಾಗಿ 180GB ಡೇಟಾ ಪ್ರಯೋಜನ ಸಿಗಲಿದೆ.

ಬಿಎಸ್‌ಎನ್‌ಎಲ್ 599ರೂ. ಯೋಜನೆ
ಬಿಎಸ್‌ಎನ್‌ಎಲ್ ಈ ಯೋಜನೆಯಲ್ಲಿ ಪ್ರತಿದಿನ 5GB ಡೇಟಾ ಸೌಲಭ್ಯ ದೊರೆಯುತ್ತದೆ. ಇದರೊಂದಿಗೆ ಪ್ರತಿದಿನ 100 ಎಸ್‌ಎಮ್‌ಎಸ್ ಹಾಗೂ ಪ್ರತಿದಿನ 250 ನಿಮಿಷಗಳ ಕರೆಯ ಸೌಲಭ್ಯಗಳು ಲಭ್ಯವಾಗುತ್ತವೆ. ಇನ್ನು ಈ ಯೋಜನೆಯು ಒಟ್ಟು 90 ದಿನಗಳ ವ್ಯಾಲಿಡಿಟಿ ಅವಧಿಯನ್ನು ಹೊಂದಿದೆ. ಒಟ್ಟು ಪೂರ್ಣ ಅವಧಿಯ ವ್ಯಾಲಿಡಿಟಿಯಲ್ಲಿ ಒಟ್ಟು 450GB ಡೇಟಾ ಪ್ರಯೋಜನ ದೊರೆಯುತ್ತದೆ.
ಬಿಎಸ್‌ಎನ್‌ಎಲ್ 2399ರೂ. ಯೋಜನೆ
ಬಿಎಸ್‌ಎನ್‌ಎಲ್‌ನ ಈ ಪ್ಲ್ಯಾನ್ ಒಟ್ಟು 600 ದಿನಗಳ ವ್ಯಾಲಿಡಿಟಿ ಅವಧಿಯನ್ನು ಒಳಗೊಂಡಿದ್ದು, ಈ ಅವಧಿಯಲ್ಲಿ ಪ್ರತಿದಿನ 250 FUP ನಿಮಿಷಗಳ ಮಿತಿಯಲ್ಲಿ ಉಚಿತ ವಾಯಿಸ್ ಕರೆಗಳ ಪ್ರಯೋಜನವನ್ನು ಒದಗಿಸಲಿದೆ. ಇದರೊಂದಿಗೆ ಪ್ರತಿದಿನ 100 ಎಸ್‌ಎಮ್‌ಎಸ್‌ಗಳ ಸೌಲಭ್ಯ ದೊರೆಯಲಿದ್ದು, 60 ದಿನಗಳಿಗೆ ಬಿಎಸ್‌ಎನ್‌ಎಲ್ ಟ್ಯೂನ್ ಸೌಲಭ್ಯವು ಸಿಗಲಿದೆ. ಆದರೆ ಯಾವುದೇ ಡೇಟಾ ಪ್ರಯೋಜನ ಲಭ್ಯ ಇರುವುದಿಲ್ಲ. ಡೇಟಾ ಅಗತ್ಯ ಇರದ ಹಾಗೂ ವಾಯಿಸ್ ಕರೆ ಮತ್ತು ಹೆಚ್ಚಿನ ವ್ಯಾಲಿಡಿಟಿ ಬಯಸುವ ಗ್ರಾಹಕರಿಗೆ ಈ ಪ್ಲ್ಯಾನ್ ಉತ್ತಮ ಆಯ್ಕೆ ಆಗಿದೆ.


Click it and Unblock the Notifications